ನಮ್ಮ ಭಾಷೆ ನಮ್ಮ ಸಂಸ್ಕೃತಿಯ ವಾಹಕ: ಪ್ರಧಾನಮಂತ್ರಿ
ಮರಾಠಿ ಒಂದು ಪರಿಪೂರ್ಣ ಭಾಷೆ: ಪ್ರಧಾನಮಂತ್ರಿ
ಮಹಾರಾಷ್ಟ್ರದ ಹಲವಾರು ಸಂತರು ಮರಾಠಿ ಭಾಷೆಯಲ್ಲಿ ಭಕ್ತಿ ಚಳುವಳಿಯ ಮೂಲಕ ಸಮಾಜಕ್ಕೆ ಹೊಸ ದಿಕ್ಕನ್ನು ತೋರಿಸಿದರು: ಪ್ರಧಾನಮಂತ್ರಿ
ಭಾರತೀಯ ಭಾಷೆಗಳ ನಡುವೆ ಯಾವತ್ತೂ ಹಗೆತನವಿರಲಿಲ್ಲ, ಬದಲಾಗಿ ಅವು ಯಾವಾಗಲೂ ಪರಸ್ಪರ ಅಳವಡಿಸಿಕೊಂಡಿವೆ ಮತ್ತು ಶ್ರೀಮಂತವಾಗಿವೆ: ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ 98ನೇ ಅಖಿಲ ಭಾರತೀಯ ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನವದೆಹಲಿಯಲ್ಲಿ ಆಯೋಜಿಸಲಾಗುತ್ತಿರುವ ಮರಾಠಿ ಭಾಷೆಯ ಭವ್ಯ ಕಾರ್ಯಕ್ರಮಕ್ಕೆ ಎಲ್ಲಾ ಮರಾಠಿಗರನ್ನು ಸ್ವಾಗತಿಸಿದರು. ಅಖಿಲ ಭಾರತೀಯ ಮರಾಠಿ ಸಾಹಿತ್ಯ ಸಮ್ಮೇಳನವು ಒಂದು ಭಾಷೆ ಅಥವಾ ಪ್ರದೇಶಕ್ಕೆ ಸೀಮಿತವಾಗಿಲ್ಲ ಎಂದು ಹೇಳಿದ ಅವರು, ಸಮ್ಮೇಳನವು ಸ್ವಾತಂತ್ರ್ಯ ಹೋರಾಟದ ಸಾರ ಮತ್ತು ಮಹಾರಾಷ್ಟ್ರ ಮತ್ತು ರಾಷ್ಟ್ರದ ಸಾಂಸ್ಕೃತಿಕ ಪರಂಪರೆಯನ್ನು ಒಳಗೊಂಡಿದೆ ಎಂದು ಹೇಳಿದರು.

 

1878ರಲ್ಲಿ ಮೊದಲ ಆವೃತ್ತಿಯಿಂದ ಇಲ್ಲಿಯವರೆಗೆ, ಅಖಿಲ ಭಾರತೀಯ ಮರಾಠಿ ಸಾಹಿತ್ಯ ಸಮ್ಮೇಳನವು 147 ವರ್ಷಗಳ ಭಾರತದ ಪ್ರಯಾಣಕ್ಕೆ ಸಾಕ್ಷಿಯಾಗಿದೆ ಎಂದು ಶ್ರೀ ಮೋದಿ ಹೇಳಿದರು. ಶ್ರೀ ಮಹಾದೇವ್ ಗೋವಿಂದ ರಾನಡೆ, ಶ್ರೀ ಹರಿ ನಾರಾಯಣ್ ಆಪ್ಟೆ, ಶ್ರೀ ಮಾಧವ ಶ್ರೀಹರಿ ಆನೆ, ಶ್ರೀ ಶಿವರಾಮ ಪರಾಂಜಪೆ, ಶ್ರೀ ವೀರ ಸಾವರ್ಕರ್ ಅವರಂತಹ ಅನೇಕ ದಿಗ್ಗಜರು ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು ಎಂದು ಅವರು ಹೇಳಿದರು. ಈ ಹೆಮ್ಮೆಯ ಸಂಪ್ರದಾಯದ ಭಾಗವಾಗಲು ತಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಶ್ರೀ ಶರದ್ ಪವಾರ್ ಅವರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಿದರು ಮತ್ತು ಈ ಕಾರ್ಯಕ್ರಮಕ್ಕಾಗಿ ದೇಶದ ಮತ್ತು ಪ್ರಪಂಚದಾದ್ಯಂತದ ಎಲ್ಲಾ ಮರಾಠಿ ಪ್ರೇಮಿಗಳನ್ನು ಅಭಿನಂದಿಸಿದರು.

ಇಂದು ಅಂತಾರಾಷ್ಟ್ರೀಯ ಮಾತೃಭಾಷಾ ದಿನ ಎಂದು ತಿಳಿಸಿದ ಪ್ರಧಾನಮಂತ್ರಿಯವರು, ಮರಾಠಿ ಭಾಷೆಯ ಬಗ್ಗೆ ಯೋಚಿಸುವಾಗ ಸಂತ ಜ್ಞಾನೇಶ್ವರರ ಪದ್ಯಗಳು ನೆನಪಾಗುವುದು ಸಹಜ ಎಂದು ಹೇಳಿದರು. ಸಂತ ಜ್ಞಾನೇಶ್ವರರ ಪದ್ಯವನ್ನು ಓದಿದ ಶ್ರೀ ಮೋದಿ ಅವರು ಮರಾಠಿ ಭಾಷೆ  ಅಮೃತಕ್ಕಿಂತ ಮಧುರವಾಗಿದೆ, ಆದ್ದರಿಂದ ಮರಾಠಿ ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ತಮ್ಮ ಪ್ರೀತಿ ಮತ್ತು ವಾತ್ಸಲ್ಯ ಅಪಾರವಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಮರಾಠಿ ವಿದ್ವಾಂಸರಷ್ಟು ಪ್ರವೀಣರಲ್ಲದಿದ್ದರೂ ಮರಾಠಿ ಕಲಿಯಲು ಸದಾ ನಿರಂತರ ಪ್ರಯತ್ನ ಮಾಡುತ್ತಿರುವುದಾಗಿ ಪ್ರಧಾನಿ ವಿನಮ್ರವಾಗಿ ಹೇಳಿದರು.

ಛತ್ರಪತಿ ಶಿವಾಜಿ ಮಹಾರಾಜರ ಪಟ್ಟಾಭಿಷೇಕದ 350ನೇ ವಾರ್ಷಿಕೋತ್ಸವ, ಪುಣ್ಯಶ್ಲೋಕ್ ಅಹಲ್ಯಾಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರಯತ್ನದಿಂದ ರಚಿಸಲಾದ ನಮ್ಮ ಸಂವಿಧಾನದ 75ನೇ ವಾರ್ಷಿಕೋತ್ಸವವನ್ನು ದೇಶವು ಆಚರಿಸುತ್ತಿರುವ ಮಹತ್ವದ ಸಂದರ್ಭದಲ್ಲಿ ಈ ಸಮ್ಮೇಳನ ನಡೆಯುತ್ತಿದೆ ಎಂದು ಶ್ರೀ ಮೋದಿ ಅವರು ಹೇಳಿದರು. ಒಂದು ಶತಮಾನದ ಹಿಂದೆ, ಒಬ್ಬ ವಿಶಿಷ್ಟ ಮರಾಠಿ ವ್ಯಕ್ತಿ ಮಹಾರಾಷ್ಟ್ರದ ಮಣ್ಣಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ ಎಸ್‌ ಎಸ್) ಬೀಜವನ್ನು ನೆಟ್ಟಿದ್ದರು ಎಂದು ಹೆಮ್ಮೆ ವ್ಯಕ್ತಪಡಿಸಿದ ಶ್ರೀ ಮೋದಿ, ಇಂದು ಅದು ವಿಶಾಲವಾದ ಮರವಾಗಿ ಬೆಳೆದು ಶತಮಾನೋತ್ಸವವನ್ನು ಆಚರಿಸುತ್ತಿದೆ ಎಂದು ಹೇಳಿದರು. ಕಳೆದ 100 ವರ್ಷಗಳಿಂದ, ಆರ್‌ ಎಸ್‌ ಎಸ್ ತನ್ನ ಸಾಂಸ್ಕೃತಿಕ ಪ್ರಯತ್ನಗಳ ಮೂಲಕ ವೇದಗಳಿಂದ ವಿವೇಕಾನಂದರವರೆಗೆ ಭಾರತದ ಶ್ರೇಷ್ಠ ಸಂಪ್ರದಾಯ ಮತ್ತು ಸಂಸ್ಕೃತಿಯನ್ನು ಹೊಸ ಪೀಳಿಗೆಗೆ ರವಾನಿಸಿದೆ ಎಂದು ಅವರು ಒತ್ತಿ ಹೇಳಿದರು. ದೇಶಕ್ಕಾಗಿ ಬದುಕಲು ಆರ್‌ ಎಸ್‌ ಎಸ್‌ ನಿಂದ ಪ್ರೇರಿತರಾಗುವುದು ಲಕ್ಷಾಂತರ ಮಂದಿಯಂತೆ ತಮಗೂ ದೊರೆತ ಸೌಭಾಗ್ಯ ಎಂದು ಅವರು ಹೇಳಿದರು. ಆರ್‌ ಎಸ್‌ ಎಸ್ ಮೂಲಕವೇ ಮರಾಠಿ ಭಾಷೆ ಮತ್ತು ಸಂಪ್ರದಾಯದೊಂದಿಗೆ ಸಂಪರ್ಕ ಸಾಧಿಸಲು ಅವಕಾಶ ಸಿಕ್ಕಿತು ಎಂದು ಪ್ರಧಾನಿಯವರು ಹೇಳಿರು. ಕೆಲವು ತಿಂಗಳುಗಳ ಹಿಂದೆ ಮರಾಠಿಗೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ನೀಡಲಾಯಿತು, ಇದಕ್ಕಾಗಿ ಭಾರತ ಮತ್ತು ಪ್ರಪಂಚದಾದ್ಯಂತ 12 ಕೋಟಿಗೂ ಹೆಚ್ಚು ಮರಾಠಿ ಭಾಷಿಕರು ದಶಕಗಳಿಂದ ಕಾಯುತ್ತಿದ್ದರು ಎಂದು ಅವರು ಒತ್ತಿ ಹೇಳಿದರು. ಈ ಕಾರ್ಯವನ್ನು ಸಾಧಿಸಲು ಅವಕಾಶ ಸಿಕ್ಕಿದ್ದು ತಮ್ಮ ಜೀವನದ ದೊಡ್ಡ ಸೌಭಾಗ್ಯ ಎಂದು ಅವರು ಬಣ್ಣಿಸಿದರು.

 

"ಭಾಷೆ ಕೇವಲ ಸಂವಹನ ಮಾಧ್ಯಮವಲ್ಲ, ನಮ್ಮ ಸಂಸ್ಕೃತಿಯ ವಾಹಕ" ಎಂದು ಪ್ರಧಾನಿ ಹೇಳಿದರು. ಭಾಷೆಗಳು ಸಮಾಜದಲ್ಲಿ ಹುಟ್ಟಿದ್ದರೂ, ಅದನ್ನು ರೂಪಿಸುವಲ್ಲಿ ಅವು ನಿರ್ಣಾಯಕ ಪಾತ್ರ ವಹಿಸುತ್ತವೆ ಎಂದು ಅವರು ಹೇಳಿದರು. ಮರಾಠಿಯು ಮಹಾರಾಷ್ಟ್ರ ಮತ್ತು ರಾಷ್ಟ್ರದ ಅನೇಕ ವ್ಯಕ್ತಿಗಳ ಚಿಂತನೆಗಳಿಗೆ ಅಭಿವ್ಯಕ್ತಿಯನ್ನು ನೀಡಿದೆ ಮತ್ತು ನಮ್ಮ ಸಾಂಸ್ಕೃತಿಕ ಅಭಿವೃದ್ಧಿಗೆ ಕೊಡುಗೆ ನೀಡಿದೆ ಎಂದು ಅವರು ಒತ್ತಿ ಹೇಳಿದರು. ಮರಾಠಿ ಭಾಷೆಯ ಮಹತ್ವದ ಕುರಿತು ಸಮರ್ಥ ರಾಮದಾಸ್ ಜಿ ಅವರ ಮಾತುಗಳನ್ನು ಉಲ್ಲೇಖಿಸಿದ ಪ್ರಧಾನಿ, "ಮರಾಠಿ ಒಂದು ಪರಿಪೂರ್ಣ ಭಾಷೆಯಾಗಿದ್ದು, ಶೌರ್ಯ, ಸೌಂದರ್ಯ, ಸೂಕ್ಷ್ಮತೆ, ಸಮಾನತೆ, ಸಾಮರಸ್ಯ, ಆಧ್ಯಾತ್ಮಿಕತೆ ಮತ್ತು ಆಧುನಿಕತೆಯನ್ನು ಒಳಗೊಂಡಿದೆ" ಎಂದು ಹೇಳಿದರು. ಮರಾಠಿಯು ಭಕ್ತಿ, ಶಕ್ತಿ ಮತ್ತು ಬುದ್ಧಿಶಕ್ತಿಯನ್ನು ಒಳಗೊಂಡಿದೆ ಎಂದು ಅವರು ಹೇಳಿದರು. ಭಾರತಕ್ಕೆ ಆಧ್ಯಾತ್ಮಿಕ ಶಕ್ತಿಯ ಅಗತ್ಯವಿದ್ದಾಗ, ಮಹಾರಾಷ್ಟ್ರದ ಮಹಾನ್ ಸಂತರು ಋಷಿಮುನಿಗಳ ಜ್ಞಾನವನ್ನು ಮರಾಠಿಯಲ್ಲಿ ಲಭ್ಯವಾಗುವಂತೆ ಮಾಡಿದರು ಎಂದು ಶ್ರೀ ಮೋದಿ ಹೇಳಿದರು. ಭಕ್ತಿ ಚಳುವಳಿಯ ಮೂಲಕ ಸಮಾಜಕ್ಕೆ ಹೊಸ ದಿಕ್ಕನ್ನು ತೋರಿಸಿದ ಸಂತ ಜ್ಞಾನೇಶ್ವರ, ಸಂತ ತುಕಾರಾಂ, ಸಂತ ರಾಮದಾಸ್, ಸಂತ ನಾಮದೇವ, ಸಂತ ತುಕ್ಡೋಜಿ ಮಹಾರಾಜ್, ಗಡ್ಗೆ ಬಾಬಾ, ಗೋರಾ ಕುಂಭರ್ ಮತ್ತು ಬಹಿನಾಬಾಯಿ ಅವರ ಕೊಡುಗೆಗಳನ್ನು ಅವರು ಸ್ಮರಿಸಿದರು. ಆಧುನಿಕ ಕಾಲದಲ್ಲಿ, ಶ್ರೀ ಗಜಾನನ ದಿಗಂಬರ ಮದ್ಗುಲ್ಕರ್ ಮತ್ತು ಶ್ರೀ ಸುಧೀರ್ ಫಡ್ಕೆಯವರ ಗೀತ ರಾಮಾಯಣದ ಪ್ರಭಾವವನ್ನು ಪ್ರಧಾನಮಂತ್ರಿಯವರು ಎತ್ತಿ ತೋರಿಸಿದರು.

ಶತಮಾನಗಳ ದಬ್ಬಾಳಿಕೆಯ ಸಂದರ್ಭದಲ್ಲಿ ಮರಾಠಿ ಭಾಷೆಯು ಆಕ್ರಮಣಕಾರರಿಂದ ವಿಮೋಚನೆಯ ಕೂಗು ಆಗಿ ಮಾರ್ಪಟ್ಟಿತು ಎಂದು ಪ್ರಧಾನಮಂತ್ರಿಯವರು ಹೇಳಿದರು. ಶತ್ರುಗಳ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜ್, ಸಂಭಾಜಿ ಮಹಾರಾಜ್ ಮತ್ತು ಬಾಜಿರಾವ್ ಪೇಶ್ವೆಯಂತಹ ಮರಾಠ ಯೋಧರ ಶೌರ್ಯವನ್ನು ಅವರು ಉಲ್ಲೇಖಿಸಿದರು. ಸ್ವಾತಂತ್ರ್ಯ ಹೋರಾಟದಲ್ಲಿ ವಾಸುದೇವ ಬಲವಂತ ಫಡಕೆ, ಲೋಕಮಾನ್ಯ ತಿಲಕ್, ವೀರ ಸಾವರ್ಕರ್ ಅವರಂತಹ ಹೋರಾಟಗಾರರು ಬ್ರಿಟಿಷರನ್ನು ಎದುರಿಸಿದ್ದರು ಎಂದು ಅವರು ಹೇಳಿದರು. ಅವರ ಕೊಡುಗೆಯಲ್ಲಿ ಮರಾಠಿ ಭಾಷೆ ಮತ್ತು ಸಾಹಿತ್ಯದ ಪ್ರಮುಖ ಪಾತ್ರವನ್ನು ಒತ್ತಿ ಹೇಳಿದರು. ಕೇಸರಿ ಮತ್ತು ಮರಾಠಾದಂತಹ ಪತ್ರಿಕೆಗಳು, ಕವಿ ಗೋವಿಂದಗ್ರಜ ಅವರ ಶಕ್ತಿಶಾಲಿ ಕವಿತೆಗಳು ಮತ್ತು ರಾಮ್ ಗಣೇಶ್ ಗಡ್ಕರಿ ಅವರ ನಾಟಕಗಳು ರಾಷ್ಟ್ರೀಯತೆಯ ಮನೋಭಾವವನ್ನು ಪೋಷಿಸಿದವು ಎಂದು ಶ್ರೀ ಮೋದಿ ಅವರು ಎತ್ತಿ ತೋರಿಸಿದರು. ಲೋಕಮಾನ್ಯ ತಿಲಕರು ಮರಾಠಿಯಲ್ಲಿ ಗೀತಾ ರಹಸ್ಯವನ್ನು ಬರೆದರು, ಅದು ದೇಶಾದ್ಯಂತ ಹೊಸ ಶಕ್ತಿಯನ್ನು ತುಂಬಿತು ಎಂದು ಅವರು ಹೇಳಿದರು.

"ಮರಾಠಿ ಭಾಷೆ ಮತ್ತು ಸಾಹಿತ್ಯವು ಸಮಾಜದ ತುಳಿತಕ್ಕೊಳಗಾದ ಮತ್ತು ವಂಚಿತ ವರ್ಗಗಳಿಗೆ ಸಾಮಾಜಿಕ ವಿಮೋಚನೆಯ ಬಾಗಿಲುಗಳನ್ನು ತೆರೆಯಿತು" ಎಂದು ಶ್ರೀ ಮೋದಿ ಅವರು ಒತ್ತಿ ಹೇಳಿದರು. ಜ್ಯೋತಿಬಾ ಫುಲೆ, ಸಾವಿತ್ರಿಬಾಯಿ ಫುಲೆ, ಮಹರ್ಷಿ ಕರ್ವೆ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರಂತಹ ಮಹಾನ್ ಸಮಾಜ ಸುಧಾರಕರ ಕೊಡುಗೆಗಳನ್ನು ಅವರು ಉಲ್ಲೇಖಿಸಿದರು, ಅವರು ಮರಾಠಿಯಲ್ಲಿ ಹೊಸ ಯುಗದ ಚಿಂತನೆಯನ್ನು ಉತ್ತೇಜಿಸಿದರು ಎಂದು ಹೇಳಿದರು. ಮರಾಠಿ ಭಾಷೆ ದೇಶಕ್ಕೆ ಶ್ರೀಮಂತ ದಲಿತ ಸಾಹಿತ್ಯವನ್ನು ನೀಡಿದೆ ಎಂದು ಅವರು ಹೇಳಿದರು. ತನ್ನ ಆಧುನಿಕ ಚಿಂತನೆಯಿಂದಾಗಿ, ಮರಾಠಿ ಸಾಹಿತ್ಯವು ವಿಜ್ಞಾನ ಸಾಹಿತ್ಯವನ್ನು ಸಹ ನೀಡಿದೆ ಎಂದು ಅವರು ಒತ್ತಿ ಹೇಳಿದರು. ಆಯುರ್ವೇದ, ವಿಜ್ಞಾನ ಮತ್ತು ತರ್ಕಶಾಸ್ತ್ರದಲ್ಲಿ ಮಹಾರಾಷ್ಟ್ರದ ಜನರ ಅಸಾಧಾರಣ ಕೊಡುಗೆಗಳನ್ನು ಉಲ್ಲೇಖಿಸಿದ ಶ್ರೀ ಮೋದಿ, ಈ ಸಂಸ್ಕೃತಿಯು ಯಾವಾಗಲೂ ಹೊಸ ಆಲೋಚನೆಗಳು ಮತ್ತು ಪ್ರತಿಭೆಗಳನ್ನು ಆಹ್ವಾನಿಸಿದೆ, ಇದು ಮಹಾರಾಷ್ಟ್ರದ ಪ್ರಗತಿಗೆ ಕಾರಣವಾಗುತ್ತಿದೆ ಎಂದು ಹೇಳಿಸಿದರು. ಮುಂಬೈ ಮಹಾರಾಷ್ಟ್ರಕ್ಕೆ ಮಾತ್ರವಲ್ಲದೆ ಇಡೀ ದೇಶದ ಆರ್ಥಿಕ ರಾಜಧಾನಿಯಾಗಿ ಹೊರಹೊಮ್ಮಿದೆ ಎಂದು ಅವರು ಹೇಳಿದರು. ಮುಂಬೈ ಬಗ್ಗೆ  ಮಾತನಾಡುವಾಗ, ಚಲನಚಿತ್ರಗಳನ್ನು ಉಲ್ಲೇಖಿಸದೆ ಸಾಹಿತ್ಯದ ಚರ್ಚೆಯನ್ನು ಪೂರ್ಣಗೊಳಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ಹೇಳಿದರು. ಮರಾಠಿ ಚಲನಚಿತ್ರಗಳು ಮತ್ತು ಹಿಂದಿ ಸಿನೆಮಾ  ಎರಡನ್ನೂ ಉನ್ನತೀಕರಿಸಿದ್ದು ಮಹಾರಾಷ್ಟ್ರ ಮತ್ತು ಮುಂಬೈ ಎಂದು ಅವರು ಹೇಳಿದರು. ಶಿವಾಜಿ ಸಾವಂತ್ ಅವರ ಮರಾಠಿ ಕಾದಂಬರಿಯ ಮೂಲಕ ಸಂಭಾಜಿ ಮಹಾರಾಜರ ಶೌರ್ಯವನ್ನು ಪರಿಚಯಿಸಿದ 'ಛಾವಾ' ಚಿತ್ರದ ಪ್ರಸ್ತುತ ಜನಪ್ರಿಯತೆಯ ಬಗ್ಗೆ ಅವರು ಗಮನ ಸೆಳೆದರು.

 

ಕವಿ ಕೇಶವಸುತ ಅವರನ್ನು ಉಲ್ಲೇಖಿಸಿದ ಶ್ರೀ ಮೋದಿ, ನಾವು ಹಳೆಯ ವಿಚಾರಗಳಲ್ಲಿ ಜಡವಾಗಿ ಉಳಿಯಲು ಸಾಧ್ಯವಿಲ್ಲ ಮತ್ತು ಮಾನವ ನಾಗರಿಕತೆ, ಚಿಂತನೆ ಮತ್ತು ಭಾಷೆ ನಿರಂತರವಾಗಿ ವಿಕಸನಗೊಳ್ಳುತ್ತಲೇ ಇರುತ್ತವೆ ಎಂದು ಒತ್ತಿ ಹೇಳಿದರು. ಭಾರತವು ನಿರಂತರವಾಗಿ ವಿಕಸನಗೊಂಡು, ಹೊಸ ವಿಚಾರಗಳನ್ನು ಅಳವಡಿಸಿಕೊಂಡು, ಬದಲಾವಣೆಗಳನ್ನು ಸ್ವಾಗತಿಸಿರುವುದರಿಂದ ವಿಶ್ವದ ಅತ್ಯಂತ ಹಳೆಯ ನಾಗರಿಕತೆಗಳಲ್ಲಿ ಒಂದಾಗಿದೆ ಎಂದು ಅವರು ಒತ್ತಿ ಹೇಳಿದರು. ಭಾರತದ ಅಗಾಧ ಭಾಷಾ ವೈವಿಧ್ಯತೆಯು ಈ ಬೆಳವಣಿಗೆಗೆ ಸಾಕ್ಷಿಯಾಗಿದೆ ಮತ್ತು ಏಕತೆಗೆ ಅಡಿಪಾಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದ ಪ್ರಧಾನಿ, ಮರಾಠಿ ಈ ವೈವಿಧ್ಯತೆಗೆ ಉದಾಹರಣೆಯಾಗಿದೆ ಎಂದು ಹೇಳಿದರು, ಪ್ರಧಾನಿಯವರು ಭಾಷೆಯನ್ನು ಯಾವುದೇ ತಾರತಮ್ಯವಿಲ್ಲದೆ ತನ್ನ ಮಕ್ಕಳಿಗೆ ಹೊಸ ಮತ್ತು ವಿಶಾಲವಾದ ಜ್ಞಾನವನ್ನು ನೀಡುವ ತಾಯಿಗೆ ಹೋಲಿಸಿದರು. ಭಾಷೆ ಪ್ರತಿಯೊಂದು ಆಲೋಚನೆ ಮತ್ತು ಪ್ರತಿಯೊಂದು ಬೆಳವಣಿಗೆಯನ್ನು ಒಳಗೊಳ್ಳುತ್ತದೆ ಎಂದು ಹೇಳಿದರು. ಮರಾಠಿಯು ಸಂಸ್ಕೃತದಿಂದ ಹುಟ್ಟಿಕೊಂಡಿದೆ ಮತ್ತು ಪ್ರಾಕೃತದ ಗಮನಾರ್ಹ ಪ್ರಭಾವವನ್ನು ಹೊಂದಿದೆ ಎಂದು ಶ್ರೀ ಮೋದಿ ಹೇಳಿದರು. ಮಾನವ ಚಿಂತನೆಯನ್ನು ವಿಶಾಲಗೊಳಿಸಿದ ಮಹಾನ್ ಚಿಂತಕರು ಮತ್ತು ಬರಹಗಾರರ ಕೊಡುಗೆಗಳನ್ನು ಅವರು ಎತ್ತಿ ತೋರಿಸಿದರು. ಅವರು ಲೋಕಮಾನ್ಯ ತಿಲಕರ ಗೀತಾ ರಹಸ್ಯವನ್ನು ಪ್ರಸ್ತಾಪಿಸಿದರು, ಇದು ಸಂಸ್ಕೃತದ ಗೀತಾವನ್ನು ಅರ್ಥೈಸುತ್ತದೆ ಮತ್ತು ಮರಾಠಿ ಮಾಧ್ಯಮದ ಮೂಲಕ ಅದನ್ನು ಹೆಚ್ಚು ಪ್ರವೇಶಿಸುವಂತೆ ಮಾಡಿದೆ ಎಂದು ಅವರು ಹೇಳಿದರು.. ಸಂಸ್ಕೃತದ ಜ್ಞಾನೇಶ್ವರಿ ಗೀತೆಯು ಮರಾಠಿ ವ್ಯಾಖ್ಯಾನದೊಂದಿಗೆ ವಿದ್ವಾಂಸರು ಮತ್ತು ಸಂತರಿಗೆ ಗೀತೆಯನ್ನು ಅರ್ಥಮಾಡಿಕೊಳ್ಳಲು ಮಾನದಂಡವಾಗಿದೆ ಎಂದು ಅವರು ಹೇಳಿದರು. ಮರಾಠಿ ಇತರ ಭಾರತೀಯ ಭಾಷೆಗಳಿಂದ ವಿಕಸನಗೊಂಡಿದೆ ಮತ್ತು ಶ್ರೀಮಂತಗೊಂಡಿದೆ ಎಂದು ಪ್ರಧಾನಿ ಹೇಳಿದರು. ‘ಆನಂದಮಠʼದಂತಹ ಕೃತಿಗಳನ್ನು ಮರಾಠಿಗೆ ಅನುವಾದಿಸಿದ ಭಾರ್ಗವರಾಮ ವಿಠ್ಠಲ್ ವರೆಕರ್ ಮತ್ತು ಪನ್ನಾ ಧಾಯ್, ದುರ್ಗಾವತಿ ಮತ್ತು ರಾಣಿ ಪದ್ಮಿನಿಯ ಜೀವನ ಆಧಾರಿತ ಕೃತಿಗಳನ್ನು ರಚಿಸಿದ ವಿಂದಾ ಕರಂಡಿಕರ್ ಅವರ ಕೃತಿಗಳನ್ನು ಅನೇಕ ಭಾಷೆಗಳಿಗೆ ಅನುವಾದಿಸಲಾಗಿದೆ ಎಂದು ಅವರು ಉದಾಹರಣೆಗಳನ್ನು ನೀಡಿದರು. "ಭಾರತೀಯ ಭಾಷೆಗಳ ನಡುವೆ ಎಂದಿಗೂ ಪರಸ್ಪರ ಹಗೆತನ ಇರಲಿಲ್ಲ; ಬದಲಿಗೆ, ಅವು ಯಾವಾಗಲೂ ಪರಸ್ಪರ ಅಳವಡಿಸಿಕೊಂಡಿವೆ ಮತ್ತು ಶ್ರೀಮಂತವಾಗಿವೆ" ಎಂದು ಅವರು ಹೇಳಿದರು.

ಭಾಷೆಯ ಹೆಸರಿನಲ್ಲಿ ವಿಭಜನೆಯನ್ನು ಸೃಷ್ಟಿಸುವ ಪ್ರಯತ್ನಗಳನ್ನು ನಮ್ಮ ಭಾಷೆಗಳ ಸಾಮಾನ್ಯ ಪರಂಪರೆಯಿಂದ ಎದುರಿಸಲಾಗುತ್ತದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಭಾಷೆಗಳನ್ನು ಪುಷ್ಟೀಕರಿಸುವ ಮತ್ತು ಅಳವಡಿಸಿಕೊಳ್ಳುವ ಜವಾಬ್ದಾರಿಯನ್ನು ಒತ್ತಿ ಹೇಳಿದ ಅವರು ಇಂತಹ ತಪ್ಪು ಕಲ್ಪನೆಗಳಿಂದ ದೂರವಿರಬೇಕು ಎಂದು ಕರೆ ನೀಡಿದರು. ಇಂದು ದೇಶದ ಎಲ್ಲಾ ಭಾಷೆಗಳನ್ನು ಮುಖ್ಯವಾಹಿನಿಯ ಭಾಷೆಗಳಾಗಿ ನೋಡಲಾಗುತ್ತಿದೆ ಎಂದು ಅವರು ತಿಳಿಸಿದರು. ಮರಾಠಿ ಸೇರಿದಂತೆ ಎಲ್ಲಾ ಪ್ರಮುಖ ಭಾಷೆಗಳಲ್ಲಿ ಶಿಕ್ಷಣವನ್ನು ಉತ್ತೇಜಿಸುವ ಪ್ರಯತ್ನಗಳ ಬಗ್ಗೆ ಅವರು ಗಮನ ಸೆಳೆದರು. ಈಗ ಮಹಾರಾಷ್ಟ್ರದ ಯುವಜನರು ಮರಾಠಿಯಲ್ಲಿ ಉನ್ನತ ಶಿಕ್ಷಣ, ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಶಿಕ್ಷಣವನ್ನು ಪಡೆಯಬಹುದು ಎಂದು ಮೋದಿ ಹೇಳಿದರು. ಇಂಗ್ಲಿಷ್ ಪ್ರಾವೀಣ್ಯತೆಯ ಕೊರತೆಯಿಂದ ಪ್ರತಿಭೆಗಳನ್ನು ಕಡೆಗಣಿಸುವ ಮನಸ್ಥಿತಿ ಬದಲಾಗಿದೆ ಎಂದು ಅವರು ಒತ್ತಿ ಹೇಳಿದರು.

 

"ಸಾಹಿತ್ಯವು ಸಮಾಜದ ಕನ್ನಡಿ ಮಾತ್ರವಲ್ಲ, ಮಾರ್ಗದರ್ಶಿಯೂ ಹೌದು" ಎಂದು ಶ್ರೀ ಮೋದಿ ಹೇಳಿದರು. ನಾಡಿನಲ್ಲಿ ಸಾಹಿತ್ಯ ಸಮ್ಮೇಳನಗಳು ಹಾಗೂ ಅದಕ್ಕೆ ಸಂಬಂಧಿಸಿದ ಸಂಸ್ಥೆಗಳ ಮಹತ್ವದ ಪಾತ್ರದ ಬಗ್ಗೆ ಅವರು ಹೇಳಿದರು. ಅಖಿಲ ಭಾರತೀಯ ಮರಾಠಿ ಸಾಹಿತ್ಯ ಮಹಾಮಂಡಲವು ಗೋವಿಂದ ರಾನಡೆ, ಹರಿನಾರಾಯಣ ಆಪ್ಟೆ, ಆಚಾರ್ಯ ಅತ್ರೆ ಮತ್ತು ವೀರ ಸಾವರ್ಕರ್ ಅವರಂತಹ ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಮುನ್ನಡೆಸುತ್ತದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು. ಸಾಹಿತ್ಯ ಸಮ್ಮೇಳನದ ಸಂಪ್ರದಾಯವು 2027 ರಲ್ಲಿ 150 ವರ್ಷಗಳನ್ನು ಪೂರೈಸುತ್ತದೆ, ಅದು 100 ನೇ ಸಾಹಿತ್ಯ ಸಮ್ಮೇಳನವಾಗಲಿದೆ ಎಂದು ಪ್ರಧಾನಮಂತ್ರಿಯವರು ಹೇಳಿದರು. ಪ್ರತಿಯೊಬ್ಬರೂ ಈ ಸಂದರ್ಭವನ್ನು ವಿಶೇಷವಾಗಿಸಿಕೊಳ್ಳಬೇಕು ಮತ್ತು ಈಗಿನಿಂದಲೇ ಸಿದ್ಧತೆಗಳನ್ನು ಪ್ರಾರಂಭಿಸಬೇಕು ಎಂದು ಅವರು ಕೋರಿದರು. ಸಾಮಾಜಿಕ ಜಾಲತಾಣಗಳ ಮೂಲಕ ಮರಾಠಿ ಸಾಹಿತ್ಯಕ್ಕೆ ಸೇವೆ ಸಲ್ಲಿಸುತ್ತಿರುವ ಅನೇಕ ಯುವಕರ ಪ್ರಯತ್ನವನ್ನು ಶ್ಲಾಘಿಸಿದ ಅವರು, ಅವರ ಪ್ರತಿಭೆ ಗುರುತಿಸಲು ವೇದಿಕೆ ಕಲ್ಪಿಸಿಕೊಡುವಂತೆ ಕರೆ ನೀಡಿದರು. ಆನ್‌ಲೈನ್ ಪ್ಲಾಟ್‌ಫಾರ್ಮ್‌ ಗಳು ಮತ್ತು ಭಾಷಿನಿಯಂತಹ ಉಪಕ್ರಮಗಳ ಮೂಲಕ ಮರಾಠಿ ಕಲಿಕೆಯನ್ನು ಉತ್ತೇಜಿಸುವ ಮಹತ್ವವನ್ನು ಪ್ರಧಾನಮಂತ್ರಿ ಒತ್ತಿ ಹೇಳಿದರು. ಯುವಕರಲ್ಲಿ ಮರಾಠಿ ಭಾಷೆ ಮತ್ತು ಸಾಹಿತ್ಯಕ್ಕೆ ಸಂಬಂಧಿಸಿದ ಸ್ಪರ್ಧೆಗಳನ್ನು ಆಯೋಜಿಸುವಂತೆ ಸಲಹೆ ನೀಡಿದರು. ಮರಾಠಿ ಸಾಹಿತ್ಯದ ಈ ಪ್ರಯತ್ನಗಳು ಮತ್ತು ಸ್ಫೂರ್ತಿಗಳು ವಿಕಸಿತ ಭಾರತಕ್ಕಾಗಿ 140 ಕೋಟಿ ನಾಗರಿಕರಿಗೆ ಸ್ಫೂರ್ತಿ ನೀಡುತ್ತವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಮಹಾದೇವ ಗೋವಿಂದ ರಾನಡೆ, ಹರಿನಾರಾಯಣ ಆಪ್ಟೆ, ಮಾಧವ ಶ್ರೀಹರಿ ಆನೆ ಮತ್ತು ಶಿವರಾಮ ಪರಾಂಜಪೆ ಅವರಂತಹ ಗಣ್ಯ ವ್ಯಕ್ತಿಗಳ ಶ್ರೇಷ್ಠ ಪರಂಪರೆಯನ್ನು ಮುಂದುವರಿಸುವಂತೆ ಕರೆ ನೀಡಿದ ಅವರು ತಮ್ಮ ಭಾಷಣವನ್ನು ಮುಕ್ತಾಯಗೊಳಿಸಿದರು ಮತ್ತು ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸಿದರು.

ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್; ರಾಜ್ಯಸಭಾ ಸದಸ್ಯ ಶ್ರೀ ಶರದ್ ಪವಾರ್; 98ನೇ ಸಮ್ಮೇಳನದ ಅಧ್ಯಕ್ಷೆ ಡಾ. ತಾರಾ ಭಾವಲ್ಕರ್ ಸೇರಿದಂತೆ ಇತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 

ಹಿನ್ನೆಲೆ

98ನೇ ಅಖಿಲ ಭಾರತ ಮರಾಠಿ ಸಾಹಿತ್ಯ ಸಮ್ಮೇಳನವು ಫೆಬ್ರವರಿ 21 ರಿಂದ 23 ರವರೆಗೆ ನಡೆಯುತ್ತಿದ್ದು, ವೈವಿಧ್ಯಮಯ ಚರ್ಚೆಗಳು, ಪುಸ್ತಕ ಪ್ರದರ್ಶನ, ಸಾಂಸ್ಕೃತಿಕ ಪ್ರದರ್ಶನಗಳು ಮತ್ತು ಖ್ಯಾತ ಸಾಹಿತಿಗಳೊಂದಿಗೆ ಸಂವಾದಾತ್ಮಕ ಅಧಿವೇಶನಗಳನ್ನು ಒಳಗೊಂಡಿರುತ್ತದೆ. ಈ ಸಮ್ಮೇಳನವು ಮರಾಠಿ ಸಾಹಿತ್ಯದ ಕಾಲಾತೀತ ಪ್ರಸ್ತುತತೆಯನ್ನು ಆಚರಿಸುತ್ತದೆ ಮತ್ತು ಭಾಷಾ ಸಂರಕ್ಷಣೆ, ಅನುವಾದ ಮತ್ತು ಸಾಹಿತ್ಯ ಕೃತಿಗಳ ಮೇಲೆ ಡಿಜಿಟಲೀಕರಣದ ಪ್ರಭಾವ ಸೇರಿದಂತೆ ಪ್ರಸ್ತುತ ಅದರ ಪಾತ್ರವನ್ನು ಅನ್ವೇಷಿಸುತ್ತದೆ.

 

71 ವರ್ಷಗಳ ನಂತರ ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಮರಾಠಿ ಸಾಹಿತ್ಯ ಸಮ್ಮೇಳನವು ಪುಣೆಯಿಂದ ದೆಹಲಿಗೆ ಸಾಂಕೇತಿಕ ಸಾಹಿತ್ಯಿಕ ರೈಲು ಪ್ರಯಾಣವನ್ನು ಸಹ ಒಳಗೊಂಡಿದೆ, ಇದರಲ್ಲಿ 1,200 ಮಂದಿ ಭಾಗವಹಿಸುವವರು ಸಾಹಿತ್ಯದ ಏಕೀಕೃತ ಮನೋಭಾವವನ್ನು ಪ್ರದರ್ಶಿಸುತ್ತಾರೆ. 2,600 ಕ್ಕೂ ಹೆಚ್ಚು ಕವನಗಳ ಪ್ರಸ್ತುತಿ, 50 ಪುಸ್ತಕಗಳ ಬಿಡುಗಡೆ ಮತ್ತು 100 ಪುಸ್ತಕ ಮಳಿಗೆಗಳನ್ನು ಒಳಗೊಂಡಿರುತ್ತದೆ. ನಾಡಿನ ಖ್ಯಾತ ವಿದ್ವಾಂಸರು, ಸಾಹಿತಿಗಳು, ಕವಿಗಳು ಮತ್ತು ಸಾಹಿತ್ಯಾಭಿಮಾನಿಗಳು ಇದರಲ್ಲಿ ಭಾಗವಹಿಸುತ್ತಿದ್ದಾರೆ.

 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
MSME exports touch Rs 9.52 lakh crore in April–September FY26: Govt tells Parliament

Media Coverage

MSME exports touch Rs 9.52 lakh crore in April–September FY26: Govt tells Parliament
NM on the go

Nm on the go

Always be the first to hear from the PM. Get the App Now!
...
Assam has picked up a new momentum of development: PM Modi at the foundation stone laying of Ammonia-Urea Fertilizer Project in Namrup
December 21, 2025
Assam has picked up a new momentum of development: PM
Our government is placing farmers' welfare at the centre of all its efforts: PM
Initiatives like PM Dhan Dhanya Krishi Yojana and the Dalhan Atmanirbharta Mission are launched to promote farming and support farmers: PM
Guided by the vision of Sabka Saath, Sabka Vikas, our efforts have transformed the lives of poor: PM

उज्जनिर रायज केने आसे? आपुनालुकोलोई मुर अंतोरिक मोरोम आरु स्रद्धा जासिसु।

असम के गवर्नर लक्ष्मण प्रसाद आचार्य जी, मुख्यमंत्री हिमंता बिस्वा शर्मा जी, केंद्र में मेरे सहयोगी और यहीं के आपके प्रतिनिधि, असम के पूर्व मुख्यमंत्री, सर्बानंद सोनोवाल जी, असम सरकार के मंत्रीगण, सांसद, विधायक, अन्य महानुभाव, और विशाल संख्या में आए हुए, हम सबको आशीर्वाद देने के लिए आए हुए, मेरे सभी भाइयों और बहनों, जितने लोग पंडाल में हैं, उससे ज्यादा मुझे वहां बाहर दिखते हैं।

सौलुंग सुकाफा और महावीर लसित बोरफुकन जैसे वीरों की ये धरती, भीमबर देउरी, शहीद कुसल कुवर, मोरान राजा बोडौसा, मालती मेम, इंदिरा मिरी, स्वर्गदेव सर्वानंद सिंह और वीरांगना सती साध`नी की ये भूमि, मैं उजनी असम की इस महान मिट्टी को श्रद्धापूर्वक नमन करता हूँ।

साथियों,

मैं देख रहा हूँ, सामने दूर-दूर तक आप सब इतनी बड़ी संख्या में अपना उत्साह, अपना उमंग, अपना स्नेह बरसा रहे हैं। और खासकर, मेरी माताएँ बहनें, इतनी विशाल संख्या में आप जो प्यार और आशीर्वाद लेकर आईं हैं, ये हमारी सबसे बड़ी शक्ति है, सबसे बड़ी ऊर्जा है, एक अद्भुत अनुभूति है। मेरी बहुत सी बहनें असम के चाय बगानों की खुशबू लेकर यहां उपस्थित हैं। चाय की ये खुशबू मेरे और असम के रिश्तों में एक अलग ही ऐहसास पैदा करती है। मैं आप सभी को प्रणाम करता हूँ। इस स्नेह और प्यार के लिए मैं हृदय से आप सबका आभार करता हूँ।

साथियों,

आज असम और पूरे नॉर्थ ईस्ट के लिए बहुत बड़ा दिन है। नामरूप और डिब्रुगढ़ को लंबे समय से जिसका इंतज़ार था, वो सपना भी आज पूरा हो रहा है, आज इस पूरे इलाके में औद्योगिक प्रगति का नया अध्याय शुरू हो रहा है। अभी थोड़ी देर पहले मैंने यहां अमोनिया–यूरिया फर्टिलाइज़र प्लांट का भूमि पूजन किया है। डिब्रुगढ़ आने से पहले गुवाहाटी में एयरपोर्ट के एक टर्मिनल का उद्घाटन भी हुआ है। आज हर कोई कह रहा है, असम विकास की एक नई रफ्तार पकड़ चुका है। मैं आपको बताना चाहता हूँ, अभी आप जो देख रहे हैं, जो अनुभव कर रहे हैं, ये तो एक शुरुआत है। हमें तो असम को बहुत आगे लेकर के जाना है, आप सबको साथ लेकर के आगे बढ़ना है। असम की जो ताकत और असम की भूमिका ओहोम साम्राज्य के दौर में थी, विकसित भारत में असम वैसी ही ताकतवर भूमि बनाएंगे। नए उद्योगों की शुरुआत, आधुनिक इनफ्रास्ट्रक्चर का निर्माण, Semiconductors, उसकी manufacturing, कृषि के क्षेत्र में नए अवसर, टी-गार्डेन्स और उनके वर्कर्स की उन्नति, पर्यटन में बढ़ती संभावनाएं, असम हर क्षेत्र में आगे बढ़ रहा है। मैं आप सभी को और देश के सभी किसान भाई-बहनों को इस आधुनिक फर्टिलाइज़र प्लांट के लिए बहुत-बहुत शुभकामनाएँ देता हूँ। मैं आपको गुवाहटी एयरपोर्ट के नए टर्मिनल के लिए भी बधाई देता हूँ। बीजेपी की डबल इंजन सरकार में, उद्योग और कनेक्टिविटी की ये जुगलबंदी, असम के सपनों को पूरा कर रही है, और साथ ही हमारे युवाओं को नए सपने देखने का हौसला भी दे रही है।

साथियों,

विकसित भारत के निर्माण में देश के किसानों की, यहां के अन्नदाताओं की बहुत बड़ी भूमिका है। इसलिए हमारी सरकार किसानों के हितों को सर्वोपरि रखते हुए दिन-रात काम कर रही है। यहां आप सभी को किसान हितैषी योजनाओं का लाभ दिया जा रहा है। कृषि कल्याण की योजनाओं के बीच, ये भी जरूरी है कि हमारे किसानों को खाद की निरंतर सप्लाई मिलती रहे। आने वाले समय में ये यूरिया कारख़ाना यह सुनिश्चित करेगा। इस फर्टिलाइज़र प्रोजेक्ट पर करीब 11 हजार करोड़ रुपए खर्च किए जाएंगे। यहां हर साल 12 लाख मीट्रिक टन से ज्यादा खाद बनेगी। जब उत्पादन यहीं होगा, तो सप्लाई तेज होगी। लॉजिस्टिक खर्च घटेगा।

साथियों,

नामरूप की ये यूनिट रोजगार-स्वरोजगार के हजारों नए अवसर भी बनाएगी। प्लांट के शुरू होते ही अनेकों लोगों को यहीं पर स्थायी नौकरी भी मिलेगी। इसके अलावा जो काम प्लांट के साथ जुड़ा होता है, मरम्मत हो, सप्लाई हो, कंस्ट्रक्शन का बहुत बड़ी मात्रा में काम होगा, यानी अनेक काम होते हैं, इन सबमें भी यहां के स्थानीय लोगों को और खासकर के मेरे नौजवानों को रोजगार मिलेगा।

लेकिन भाइयों बहनों,

आप सोचिए, किसानों के कल्याण के लिए काम बीजेपी सरकार आने के बाद ही क्यों हो रहा है? हमारा नामरूप तो दशकों से खाद उत्पादन का केंद्र था। एक समय था, जब यहां बनी खाद से नॉर्थ ईस्ट के खेतों को ताकत मिलती थी। किसानों की फसलों को सहारा मिलता था। जब देश के कई हिस्सों में खाद की आपूर्ति चुनौती बनी, तब भी नामरूप किसानों के लिए उम्मीद बना रहा। लेकिन, पुराने कारखानों की टेक्नालजी समय के साथ पुरानी होती गई, और काँग्रेस की सरकारों ने कोई ध्यान नहीं दिया। नतीजा ये हुआ कि, नामरूप प्लांट की कई यूनिट्स इसी वजह से बंद होती गईं। पूरे नॉर्थ ईस्ट के किसान परेशान होते रहे, देश के किसानों को भी तकलीफ हुई, उनकी आमदनी पर चोट पड़ती रही, खेती में तकलीफ़ें बढ़ती गईं, लेकिन, काँग्रेस वालों ने इस समस्या का कोई हल ही नहीं निकाला, वो अपनी मस्ती में ही रहे। आज हमारी डबल इंजन सरकार, काँग्रेस द्वारा पैदा की गई उन समस्याओं का समाधान भी कर रही है।

साथियों,

असम की तरह ही, देश के दूसरे राज्यों में भी खाद की कितनी ही फ़ैक्टरियां बंद हो गईं थीं। आप याद करिए, तब किसानों के क्या हालात थे? यूरिया के लिए किसानों को लाइनों में लगना पड़ता था। यूरिया की दुकानों पर पुलिस लगानी पड़ती थी। पुलिस किसानों पर लाठी बरसाती थी।

भाइयों बहनों,

काँग्रेस ने जिन हालातों को बिगाड़ा था, हमारी सरकार उन्हें सुधारने के लिए एडी-चोटी की ताकत लगा रही है। और इन्होंने इतना बुरा किया,इतना बुरा किया कि, 11 साल से मेहनत करने के बाद भी, अभी मुझे और बहुत कुछ करना बाकी है। काँग्रेस के दौर में फर्टिलाइज़र्स फ़ैक्टरियां बंद होती थीं। जबकि हमारी सरकार ने गोरखपुर, सिंदरी, बरौनी, रामागुंडम जैसे अनेक प्लांट्स शुरू किए हैं। इस क्षेत्र में प्राइवेट सेक्टर को भी बढ़ावा दिया जा रहा है। आज इसी का नतीजा है, हम यूरिया के क्षेत्र में आने वाले कुछ समय में आत्मनिर्भर हो सके, उस दिशा में मजबूती से कदम रख रहे हैं।

साथियों,

2014 में देश में सिर्फ 225 लाख मीट्रिक टन यूरिया का ही उत्पादन होता था। आपको आंकड़ा याद रहेगा? आंकड़ा याद रहेगा? मैं आपने मुझे काम दिया 10-11 साल पहले, तब उत्पादन होता था 225 लाख मीट्रिक टन। ये आंकड़ा याद रखिए। पिछले 10-11 साल की मेहनत में हमने उत्पादन बढ़ाकर के करीब 306 लाख मीट्रिक टन तक पहुंच चुका है। लेकिन हमें यहां रूकना नहीं है, क्योंकि अभी भी बहुत करने की जरूरत है। जो काम उनको उस समय करना था, नहीं किया, और इसलिए मुझे थोड़ा एक्स्ट्रा मेहनत करनी पड़ रही है। और अभी हमें हर साल करीब 380 लाख मीट्रिक टन यूरिया की जरूरत पड़ती है। हम 306 पर पहुंचे हैं, 70-80 और करना है। लेकिन मैं देशवासियों को विश्वास दिलाता हूं, हम जिस प्रकार से मेहनत कर रहे हैं, जिस प्रकार से योजना बना रहे हैं और जिस प्रकार से मेरे किसान भाई-बहन हमें आशीर्वाद दे रहे हैं, हम हो सके उतना जल्दी इस गैप को भरने में कोई कमी नहीं रखेंगे।

और भाइयों और बहनों,

मैं आपको एक और बात बताना चाहता हूं, आपके हितों को लेकर हमारी सरकार बहुत ज्यादा संवेदनशील है। जो यूरिया हमें महंगे दामों पर विदेशों से मंगाना पड़ता है, हम उसकी भी चोट अपने किसानों पर नहीं पड़ने देते। बीजेपी सरकार सब्सिडी देकर वो भार सरकार खुद उठाती है। भारत के किसानों को सिर्फ 300 रुपए में यूरिया की बोरी मिलती है, उस एक बोरी के बदले भारत सरकार को दूसरे देशों को, जहां से हम बोरी लाते हैं, करीब-करीब 3 हजार रुपए देने पड़ते हैं। अब आप सोचिए, हम लाते हैं 3000 में, और देते हैं 300 में। यह सारा बोझ देश के किसानों पर हम नहीं पड़ने देते। ये सारा बोझ सरकार खुद भरती है। ताकि मेरे देश के किसान भाई बहनों पर बोझ ना आए। लेकिन मैं किसान भाई बहनों को भी कहूंगा, कि आपको भी मेरी मदद करनी होगी और वह मेरी मदद है इतना ही नहीं, मेरे किसान भाई-बहन आपकी भी मदद है, और वो है यह धरती माता को बचाना। हम धरती माता को अगर नहीं बचाएंगे तो यूरिया की कितने ही थैले डाल दें, यह धरती मां हमें कुछ नहीं देगी और इसलिए जैसे शरीर में बीमारी हो जाए, तो दवाई भी हिसाब से लेनी पड़ती है, दो गोली की जरूरत है, चार गोली खा लें, तो शरीर को फायदा नहीं नुकसान हो जाता है। वैसा ही इस धरती मां को भी अगर हम जरूरत से ज्यादा पड़ोस वाला ज्यादा बोरी डालता है, इसलिए मैं भी बोरी डाल दूं। इस प्रकार से अगर करते रहेंगे तो यह धरती मां हमसे रूठ जाएगी। यूरिया खिला खिलाकर के हमें धरती माता को मारने का कोई हक नहीं है। यह हमारी मां है, हमें उस मां को भी बचाना है।

साथियों,

आज बीज से बाजार तक भाजपा सरकार किसानों के साथ खड़ी है। खेत के काम के लिए सीधे खाते में पैसे पहुंचाए जा रहे हैं, ताकि किसान को उधार के लिए भटकना न पड़े। अब तक पीएम किसान सम्मान निधि के लगभग 4 लाख करोड़ रुपए किसानों के खाते में भेजे गए हैं। आंकड़ा याद रहेगा? भूल जाएंगे? 4 लाख करोड़ रूपया मेरे देश के किसानों के खाते में सीधे जमा किए हैं। इसी साल, किसानों की मदद के लिए 35 हजार करोड़ रुपए की दो योजनाएं नई योजनाएं शुरू की हैं 35 हजार करोड़। पीएम धन धान्य कृषि योजना और दलहन आत्मनिर्भरता मिशन, इससे खेती को बढ़ावा मिलेगा।

साथियों,

हम किसानों की हर जरूरत को ध्यान रखते हुए काम कर रहे हैं। खराब मौसम की वजह से फसल नुकसान होने पर किसान को फसल बीमा योजना का सहारा मिल रहा है। फसल का सही दाम मिले, इसके लिए खरीद की व्यवस्था सुधारी गई है। हमारी सरकार का साफ मानना है कि देश तभी आगे बढ़ेगा, जब मेरा किसान मजबूत होगा। और इसके लिए हर संभव प्रयास किए जा रहे हैं।

साथियों,

केंद्र में हमारी सरकार बनने के बाद हमने किसान क्रेडिट कार्ड की सुविधा से पशुपालकों और मछलीपालकों को भी जोड़ दिया था। किसान क्रेडिट कार्ड, KCC, ये KCC की सुविधा मिलने के बाद हमारे पशुपालक, हमारे मछली पालन करने वाले इन सबको खूब लाभ उठा रहा है। KCC से इस साल किसानों को, ये आंकड़ा भी याद रखो, KCC से इस साल किसानों को 10 लाख करोड़ रुपये से ज्यादा की मदद दी गई है। 10 लाख करोड़ रुपया। बायो-फर्टिलाइजर पर GST कम होने से भी किसानों को बहुत फायदा हुआ है। भाजपा सरकार भारत के किसानों को नैचुरल फार्मिंग के लिए भी बहुत प्रोत्साहन दे रही है। और मैं तो चाहूंगा असम के अंदर कुछ तहसील ऐसे आने चाहिए आगे, जो शत प्रतिशत नेचुरल फार्मिंग करते हैं। आप देखिए हिंदुस्तान को असम दिशा दिखा सकता है। असम का किसान देश को दिशा दिखा सकता है। हमने National Mission On Natural Farming शुरू की, आज लाखों किसान इससे जुड़ चुके हैं। बीते कुछ सालों में देश में 10 हजार किसान उत्पाद संघ- FPO’s बने हैं। नॉर्थ ईस्ट को विशेष ध्यान में रखते हुए हमारी सरकार ने खाद्य तेलों- पाम ऑयल से जुड़ा मिशन भी शुरू किया। ये मिशन भारत को खाद्य तेल के मामले में आत्मनिर्भर तो बनाएगा ही, यहां के किसानों की आय भी बढ़ाएगा।

साथियों,

यहां इस क्षेत्र में बड़ी संख्या में हमारे टी-गार्डन वर्कर्स भी हैं। ये भाजपा की ही सरकार है जिसने असम के साढ़े सात लाख टी-गार्डन वर्कर्स के जनधन बैंक खाते खुलवाए। अब बैंकिंग व्यवस्था से जुड़ने की वजह से इन वर्कर्स के बैंक खातों में सीधे पैसे भेजे जाने की सुविधा मिली है। हमारी सरकार टी-गार्डन वाले क्षेत्रों में स्कूल, रोड, बिजली, पानी, अस्पताल की सुविधाएं बढ़ा रही है।

साथियों,

हमारी सरकार सबका साथ सबका विकास के मंत्र के साथ आगे बढ़ रही है। हमारा ये विजन, देश के गरीब वर्ग के जीवन में बहुत बड़ा बदलाव लेकर आया है। पिछले 11 वर्षों में हमारे प्रयासों से, योजनाओं से, योजनाओं को धरती पर उतारने के कारण 25 करोड़ लोग, ये आंकड़ा भी याद रखना, 25 करोड़ लोग गरीबी से बाहर निकले हैं। देश में एक नियो मिडिल क्लास तैयार हुआ है। ये इसलिए हुआ है, क्योंकि बीते वर्षों में भारत के गरीब परिवारों के जीवन-स्तर में निरंतर सुधार हुआ है। कुछ ताजा आंकड़े आए हैं, जो भारत में हो रहे बदलावों के प्रतीक हैं।

साथियों,

और मैं मीडिया में ये सारी चीजें बहुत काम आती हैं, और इसलिए मैं आपसे आग्रह करता हूं मैं जो बातें बताता हूं जरा याद रख के औरों को बताना।

साथियों,

पहले गांवों के सबसे गरीब परिवारों में, 10 परिवारों में से 1 के पास बाइक तक होती नहीं थी। 10 में से 1 के पास भी नहीं होती थी। अभी जो सर्वे आए हैं, अब गांव में रहने वाले करीब–करीब आधे परिवारों के पास बाइक या कार होती है। इतना ही नहीं मोबाइल फोन तो लगभग हर घर में पहुंच चुके हैं। फ्रिज जैसी चीज़ें, जो पहले “लग्ज़री” मानी जाती थीं, अब ये हमारे नियो मिडल क्लास के घरों में भी नजर आने लगी है। आज गांवों की रसोई में भी वो जगह बना चुका है। नए आंकड़े बता रहे हैं कि स्मार्टफोन के बावजूद, गांव में टीवी रखने का चलन भी बढ़ रहा है। ये बदलाव अपने आप नहीं हुआ। ये बदलाव इसलिए हुआ है क्योंकि आज देश का गरीब सशक्त हो रहा है, दूर-दराज के क्षेत्रों में रहने वाले गरीब तक भी विकास का लाभ पहुंचने लगा है।

साथियों,

भाजपा की डबल इंजन सरकार गरीबों, आदिवासियों, युवाओं और महिलाओं की सरकार है। इसीलिए, हमारी सरकार असम और नॉर्थ ईस्ट में दशकों की हिंसा खत्म करने में जुटी है। हमारी सरकार ने हमेशा असम की पहचान और असम की संस्कृति को सर्वोपरि रखा है। भाजपा सरकार असमिया गौरव के प्रतीकों को हर मंच पर हाइलाइट करती है। इसलिए, हम गर्व से महावीर लसित बोरफुकन की 125 फीट की प्रतिमा बनाते हैं, हम असम के गौरव भूपेन हजारिका की जन्म शताब्दी का वर्ष मनाते हैं। हम असम की कला और शिल्प को, असम के गोमोशा को दुनिया में पहचान दिलाते हैं, अभी कुछ दिन पहले ही Russia के राष्ट्रपति श्रीमान पुतिन यहां आए थे, जब दिल्ली में आए, तो मैंने बड़े गर्व के साथ उनको असम की ब्लैक-टी गिफ्ट किया था। हम असम की मान-मर्यादा बढ़ाने वाले हर काम को प्राथमिकता देते हैं।

लेकिन भाइयों बहनों,

भाजपा जब ये काम करती है तो सबसे ज्यादा तकलीफ काँग्रेस को होती है। आपको याद होगा, जब हमारी सरकार ने भूपेन दा को भारत रत्न दिया था, तो काँग्रेस ने खुलकर उसका विरोध किया था। काँग्रेस के राष्ट्रीय अध्यक्ष ने कहा था कि, मोदी नाचने-गाने वालों को भारत रत्न दे रहा है। मुझे बताइए, ये भूपेन दा का अपमान है कि नहीं है? कला संस्कृति का अपमान है कि नहीं है? असम का अपमान है कि नहीं है? ये कांग्रेस दिन रात करती है, अपमान करना। हमने असम में सेमीकंडक्टर यूनिट लगवाई, तो भी कांग्रेस ने इसका विरोध किया। आप मत भूलिए, यही काँग्रेस सरकार थी, जिसने इतने दशकों तक टी कम्यूनिटी के भाई-बहनों को जमीन के अधिकार नहीं मिलने दिये! बीजेपी की सरकार ने उन्हें जमीन के अधिकार भी दिये और गरिमापूर्ण जीवन भी दिया। और मैं तो चाय वाला हूं, मैं नहीं करूंगा तो कौन करेगा? ये कांग्रेस अब भी देशविरोधी सोच को आगे बढ़ा रही है। ये लोग असम के जंगल जमीन पर उन बांग्लादेशी घुसपैठियों को बसाना चाहते हैं। जिनसे इनका वोट बैंक मजबूत होता है, आप बर्बाद हो जाए, उनको इनकी परवाह नहीं है, उनको अपनी वोट बैंक मजबूत करनी है।

भाइयों बहनों,

काँग्रेस को असम और असम के लोगों से, आप लोगों की पहचान से कोई लेना देना नहीं है। इनको केवल सत्ता,सरकार और फिर जो काम पहले करते थे, वो करने में इंटरेस्ट है। इसीलिए, इन्हें अवैध बांग्लादेशी घुसपैठिए ज्यादा अच्छे लगते हैं। अवैध घुसपैठियों को काँग्रेस ने ही बसाया, और काँग्रेस ही उन्हें बचा रही है। इसीलिए, काँग्रेस पार्टी वोटर लिस्ट के शुद्धिकरण का विरोध कर रही है। तुष्टीकरण और वोटबैंक के इस काँग्रेसी जहर से हमें असम को बचाकर रखना है। मैं आज आपको एक गारंटी देता हूं, असम की पहचान, और असम के सम्मान की रक्षा के लिए भाजपा, बीजेपी फौलाद बनकर आपके साथ खड़ी है।

साथियों,

विकसित भारत के निर्माण में, आपके ये आशीर्वाद यही मेरी ताकत है। आपका ये प्यार यही मेरी पूंजी है। और इसीलिए पल-पल आपके लिए जीने का मुझे आनंद आता है। विकसित भारत के निर्माण में पूर्वी भारत की, हमारे नॉर्थ ईस्ट की भूमिका लगातार बढ़ रही है। मैंने पहले भी कहा है कि पूर्वी भारत, भारत के विकास का ग्रोथ इंजन बनेगा। नामरूप की ये नई यूनिट इसी बदलाव की मिसाल है। यहां जो खाद बनेगी, वो सिर्फ असम के खेतों तक नहीं रुकेगी। ये बिहार, झारखंड, पश्चिम बंगाल और पूर्वी उत्तर प्रदेश तक पहुंचेगी। ये कोई छोटी बात नहीं है। ये देश की खाद जरूरत में नॉर्थ ईस्ट की भागीदारी है। नामरूप जैसे प्रोजेक्ट, ये दिखाते हैं कि, आने वाले समय में नॉर्थ ईस्ट, आत्मनिर्भर भारत का बहुत बड़ा केंद्र बनकर उभरेगा। सच्चे अर्थ में अष्टलक्ष्मी बन के रहेगा। मैं एक बार फिर आप सभी को नए फर्टिलाइजर प्लांट की बधाई देता हूं। मेरे साथ बोलिए-

भारत माता की जय।

भारत माता की जय।

और इस वर्ष तो वंदे मातरम के 150 साल हमारे गौरवपूर्ण पल, आइए हम सब बोलें-

वंदे मातरम्।

वंदे मातरम्।

वंदे मातरम्।

वंदे मातरम्।

वंदे मातरम्।

वंदे मातरम्।

वंदे मातरम्।

वंदे मातरम्।

वंदे मातरम्।