ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಮನ್‌ನಲ್ಲಿ ನಮೋ ಆಸ್ಪತ್ರೆಯನ್ನು ಉದ್ಘಾಟಿಸಿದರು. ಜನರಿಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ನಡೆಯುತ್ತಿರುವ ಪ್ರಯತ್ನಗಳ ಭಾಗವಾಗಿ ಈ ಆಸ್ಪತ್ರೆಯನ್ನು ಆರಂಭಿಸಲಾಗಿದೆ ಎಂದು ಅವರು ತಿಳಿಸಿದರು. ಆಧುನಿಕ ಸೌಲಭ್ಯಗಳನ್ನು ಹೊಂದಿರುವ ಈ ಆಸ್ಪತ್ರೆ ಕೇಂದ್ರಾಡಳಿತ ಪ್ರದೇಶವಾದ ದಮನ್ ನ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ ಆರೋಗ್ಯ ಸೇವೆಗಳ ಅಗತ್ಯಗಳನ್ನು ಪೂರೈಸುವಲ್ಲಿ ಮಹತ್ತರ ಪಾತ್ರ ವಹಿಸಲಿದೆ ಎಂದು ಅವರು ಹೇಳಿದರು.
ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
"ಜನರಿಗೆ ಗುಣಮಟ್ಟದ ಆರೋಗ್ಯ ಚಿಕಿತ್ಸೆಯನ್ನು ಒದಗಿಸುವ ನಮ್ಮ ಪ್ರಯತ್ನಗಳ ಭಾಗವಾಗಿ ದಮನ್‌ನ ನಮೋ ಆಸ್ಪತ್ರೆಯನ್ನು ಉದ್ಘಾಟಿಸಲಾಗಿದೆ. ಇದು ಆಧುನಿಕ ಸೌಲಭ್ಯಗಳನ್ನು ಹೊಂದಿದ್ದು, ಕೇಂದ್ರಾಡಳಿತ ಪ್ರದೇಶ ದಮನ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ ಆರೋಗ್ಯ ಸೇವೆಗಳ ಅಗತ್ಯಗಳನ್ನು ಪೂರೈಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ."
In line with our efforts towards providing quality health treatment to the people, the Namo Hospital at Daman was inaugurated. It has modern facilities and will go a long way in addressing the healthcare needs of the Union Territory and surrounding areas. pic.twitter.com/5lQV5xpEIj
— Narendra Modi (@narendramodi) June 5, 2026


