ತ್ವರಿತ ತಾಂತ್ರಿಕ ಪರಿಹಾರ ಒದಗಿಸುತ್ತಿರುವ ಯುವ ನಾವೀನ್ಯ ವಲಯದ ಪ್ರಯತ್ನವನ್ನು ಅಭಿನಂದಿಸಿದ ಪ್ರಧಾನಮಂತ್ರಿ
ಕಲಿಯುವವರ ಅವಶ್ಯಕತೆಗಳಿಗೆ ಅನುಗುಣವಾಗಿ ಹೊಂದಿಕೊಳ್ಳುವ, ತಡೆರಹಿತ ಮತ್ತು ಕಲಿಕೆ ಅವಕಾಶಗಳನ್ನು ಒದಗಿಸಲು ಸಮರ್ಥವಾಗಿರುವ ಶಿಕ್ಷಣ ಮಾದರಿಯಲ್ಲಿ ಪ್ರಗತಿ ಅತ್ಯಗತ್ಯ: ಪ್ರಧಾನಮಂತ್ರಿ
ಮುಂದಿನ ದಶಕದಲ್ಲಿ ನಮ್ಮ ತಾಂತ್ರಿಕ ಮತ್ತು ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆಗಳು “ಭಾರತದ ತಾಂತ್ರಿಕ ದಶಕ” ದಡಿ ಪ್ರಮುಖ ಪಾತ್ರ ವಹಿಸಲಿವೆ – ಪ್ರಧಾನಮಂತ್ರಿ
ಪ್ರಸ್ತುತ ನಡೆಯುತ್ತಿರುವ, ಅದರಲ್ಲೂ ವಿಶೇಷವಾಗಿ ಕೋವಿಡ್ ಸಂಬಂಧಿತ ಸಂಶೋಧನೆ ಮತ್ತು ಅಭಿವೃದ್ಧಿ ಕೆಲಸ ಶ್ಲಾಘನೀಯ – ಪ್ರಧಾನಮಂತ್ರಿ

ಕೇಂದ್ರೀಯ ನೆರವಿನ ತಾಂತ್ರಿಕ ಸಂಸ್ಥೆಗಳೊಂದಿಗೆ 2021, ಜುಲೈ 8 ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ವಿಡಿಯೋ ಕಾನ್ಪರೆನ್ಸ್ ಮೂಲಕ ವಿಡಿಯೋ ಸಂವಾದ ನಡೆಸಿದರು. ಪ್ರಧಾನಮಂತ್ರಿ ಅವರ ಸಂವಾದದಲ್ಲಿ 100 ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಪಾಲ್ಗೊಂಡಿದ್ದರು.

ಕೋವಿಡ್ ಸೃಷ್ಟಿಸಿರುವ ಸವಾಲುಗಳನ್ನು ಎದುರಿಸಲು ಸಂಸ್ಥೆಗಳು ನಡೆಸುತ್ತಿರುವ ಸಂಶೋಧನೆ ಮತ್ತು ಅಭಿವೃದ್ಧಿ ಕೆಲಸಗಳು ಶ್ಲಾಘನೀಯ. ತ್ವರಿತ ತಾಂತ್ರಿಕ ಪರಿಹಾರ ಒದಗಿಸುತ್ತಿರುವ ಯುವ ನಾವೀನ್ಯ ವಲಯದ ಪ್ರಯತ್ನವನ್ನು ಪ್ರಧಾನಮಂತ್ರಿ ಅವರು ಅಭಿನಂದಿಸಿದರು.

ಬದಲಾಗುತ್ತಿರುವ ಸನ್ನಿವೇಶ ಮತ್ತು ಎದುರಾಗುತ್ತಿರುವ ಸವಾಲುಗಳಿಗೆ ಅನುಗುಣವಾಗಿ ಉನ್ನತ ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣವನ್ನು ಅಳವಡಿಸಿಕೊಳ್ಳುವ ಅವಶ್ಯಕತೆಯಿದೆ ಎಂದು ಹೇಳಿದ ಪ್ರಧಾನಮಂತ್ರಿ ಅವರು, ದೇಶ ಮತ್ತು ಸಮಾಜದ ಪ್ರಸ್ತುತ ಹಾಗೂ ಭವಿಷ್ಯದ ಅಗತ್ಯಗಳಿಗೆ ಅನುಗುಣವಾಗಿ ಸಂಸ್ಥೆಗಳು ತಮ್ಮನ್ನು ಮರುಶೋಧಿಸಿಕೊಳ್ಳಲು ಮತ್ತು ಮರು ಮೌಲ್ಯ ಮಾಪನ ಮಾಡಲು ಪರ್ಯಾಯ ಮತ್ತು ನವೀನ ಮಾದರಿಗಳನ್ನು ಅಭಿವೃದ್ಧಿಪಡಿಸಲು ಇಂತಹ ಕ್ರಮ ಅಗತ್ಯವಾಗಿದೆ ಎಂದು ಹೇಳಿದರು. ನಾಲ್ಕನೇ ಕೈಗಾರಿಕಾ ಕ್ರಾಂತಿಯನ್ನು ಗಮನದಲ್ಲಿಟ್ಟುಕೊಂಡು ನಮ್ಮ ಉನ್ನತ ಶಿಕ್ಷಣ ಸಂಸ್ಥೆಗಳು, ನಮ್ಮ ಯುವ ಸಮೂಹವನ್ನು ನಿರಂತರ ಅಡೆತಡೆಗಳು ಮತ್ತು ಬದಲಾವಣೆಗಳಿಗೆ ಸನ್ನದ್ಧಗೊಳಿಸಲು ಸಮರ್ಥವಾಗಿರುವ ಶಿಕ್ಷಣ ಮಾದರಿಯಲ್ಲಿ ಪ್ರಗತಿ ಅತ್ಯಗತ್ಯ. ಶಿಕ್ಷಣ ಮಾದರಿಗಳಲ್ಲಿ ಪ್ರವೇಶಿಸುವ, ಕೈಗೆಟುಕುವ, ನೀತಿ ಮತ್ತು ಗುಣಮಟ್ಟ ಶಿಕ್ಷಣ ಮಾದರಿಯ ಪ್ರಮುಖ ಮೌಲ್ಯಗಳಾಗಿರಬೇಕು ಎಂದು ಪ್ರಧಾನಮಂತ್ರಿ ಅವರು ಹೇಳಿದರು.

ಕಳೆದ ಕೆಲವು ವರ್ಷಗಳಲ್ಲಿ ಉನ್ನತ ಶಿಕ್ಷಣದಲ್ಲಿ ಒಟ್ಟು ದಾಖಲಾತಿ ಅನುಪಾತ [ಜಿ.ಆರ್.ಇ]ದಲ್ಲಿ ಸುಧಾರಣೆಯಾಗುತ್ತಿರುವುದನ್ನು ಪ್ರಧಾನಮಂತ್ರಿ ಅವರು ಶ್ಲಾಘಿಸಿದರು. ಉನ್ನತ ಶಿಕ್ಷಣದಲ್ಲಿ ಡಿಜಿಟಲೀಕರಣದಿಂದ ಜಿ.ಇ.ಆರ್ ಅನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ವಿದ್ಯಾರ್ಥಿಗಳು ಉನ್ನತ ಶಿಕ್ಷಣದಲ್ಲಿ ಉತ್ತಮ ಗುಣಮಟ್ಟದ ಮತ್ತು ಕೈಗೆಟುಕುವ ಶಿಕ್ಷಣವನ್ನು ಸುಲಭವಾಗಿ ಪಡೆಯಬಹುದು ಎಂದರು. ಶಿಕ್ಷಣ ಸಂಸ್ಥೆಗಳು ಆನ್ ಲೈನ್ ಮೂಲಕ ಬ್ಯಾಚುಲರ್ ಮತ್ತು ಮಾಸ್ಟರ್ ಪದವಿ ಕಾರ್ಯಕ್ರಮಗಳಂತಹ ಡಿಜಿಟಲೀಕರಣ ಕಾರ್ಯಕ್ರಮಗಳನ್ನು ಸಂಸ್ಥೆಗಳು ಕೈಗೊಂಡಿರುವುದನ್ನು ಪ್ರಧಾನಮಂತ್ರಿ ಅವರು ಶ್ಲಾಘಿಸಿದರು.

ಭಾರತೀಯ ಭಾಷೆಗಳಲ್ಲಿ ತಾಂತ್ರಿಕ ಶಿಕ್ಷಣದ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಬೇಕು ಮತ್ತು ಜಾಗತಿಕ ನಿಯತಕಾಲಿಕಗಳನ್ನು ಪ್ರಾದೇಶಿಕ ಭಾಷೆಗಳಿಗೆ ತರ್ಜುಮೆ ಮಾಡಬೇಕಾಗಿದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು.

ಸ್ವಾತಂತ್ರ್ಯೋತ್ಸವದ 100 ನೇ ವರ್ಷಾಚರಣೆ ಆಚರಿಸುವಾಗ ಅಂದರೆ ಮುಂದಿನ 25 ವರ್ಷಗಳಲ್ಲಿ ಭಾರತದ ಕನಸುಗಳು ಮತ್ತು ಆಕಾಂಕ್ಷೆಗಳ ಆಧಾರವನ್ನು ಆತ್ಮನಿರ್ಭರ್ ಭಾರತ್ ಅಭಿಯಾನ ರೂಪಿಸುತ್ತದೆ. ನಮ್ಮ ತಾಂತ್ರಿಕ ಮತ್ತು ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆಗಳು ಮುಂದಿನ ದಶಕದಲ್ಲಿ ಪ್ರಮುಖ ಪಾತ್ರ ವಹಿಸಲಿದ್ದು, ಇದನ್ನು “ಭಾರತದ ತಾಂತ್ರಿಕ ದಶಕ” ಎಂದು ಸಹ ಕರೆಯಲಾಗುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು.

ಸೈಬರ್ ತಂತ್ರಜ್ಞಾನ, ರಕ್ಷಣೆ, ಕೃಷಿ, ಆರೋಗ್ಯ ವಲಯ, ಶಿಕ್ಷಣ ಕ್ಷೇತ್ರಗಳಲ್ಲಿ ಭವಿಷ್ಯದ ಪರಿಹಾರಗಳನ್ನು ಅಭಿವೃದ್ಧಿಪಡಿಸುವತ್ತ ನಾವು ಗಮನಹರಿಸಬೇಕಾಗಿದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು.

ಕೃತಕ ಬುದ್ದಿಮತ್ತೆ, ಸ್ಮಾರ್ಟ್ ಆಗಿ ಧರಿಸಬಲ್ಲ ವಸ್ತುಗಳು, ವರ್ಧಿತ ವಾಸ್ತವಿಕ ವ್ಯವಸ್ಥೆಗಳು, ಡಿಜಿಟಲ್ ನೆರವು ಸಾಮಾನ್ಯ ಜನರಿಗೆ ತಲುಪುವುದನ್ನು ಖಚಿತಪಡಿಸಿಕೊಳ್ಳಲು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಉತ್ತಮ ಗುಣಮಟ್ಟದ ಮೂಲ ಸೌಕರ್ಯಗಳಿವೆ ಎಂಬುದನ್ನು ನಾವು ಖಚಿತಪಡಿಸಿಕೊಳ್ಳಬೇಕು. ನಾವು ಕೈಗೆಟುವ, ವ್ಯಕ್ತಿಗತವಲ್ಲದ ಮತ್ತು  ಎಐ – ಚಾಲಿತ ಶಿಕ್ಷಣದತ್ತ ಗಮನಹರಿಸಬೇಕು ಎಂದರು. 

ಸಂವಾದ ಸಂದರ್ಭದಲ್ಲಿ ಬೆಂಗಳೂರಿನ ಐಐಎಸ್ಸಿಯ ಫ್ರೊಫೆಸರ್ ಗೋವಿಂದನ್ ರಂಗರಾಜನ್, ಬಾಂಬೆ ಐಐಟಿಯ ಪ್ರೊಫೆಸರ್ ಸುಬಾಸಿಸ್ ಚೌಧರಿ, ಮದ್ರಾಸ್ ಐಐಟಿಯ ಪ್ರೊಫೆಸರ್ ಭಾಸ್ಕರ್ ರಾಮಮೂರ್ತಿ ಮತ್ತು ಕಾನ್ಪುರದ ಐಐಟಿಯ ಪ್ರೊಫೆಸರ್ ಅಭಯ್ ಕರಂದಿಕರ್ ಅವರು ಪ್ರಧಾನಮಂತ್ರಿ ಅವರಿಗೆ ಪ್ರಾತ್ಯಕ್ಷಿಕೆ ನೀಡಿದರು ಮತ್ತು ಹಲವಾರು ಚಾಲ್ತಿಯಲ್ಲಿರುವ ಯೋಜನೆಗಳು, ಶೈಕ್ಷಣಿಕ ಕೆಲಸ ಮತ್ತು ದೇಶದಲ್ಲಿನ ಹೊಸ ಸಂಶೋಧನೆಗಳ ಕುರಿತು ಮಾಹಿತಿ ನೀಡಿದರು.

ಕೋವಿಡ್ ಸಂಬಂಧಿತ ಸಂಶೋಧನೆಗಳನ್ನು ಪ್ರಧಾನಮಂತ್ರಿ ಅವರು ಅಭಿನಂದಿಸಿದರು. ಅಲ್ಲದೇ ಹೊಸ ಪರೀಕ್ಷಾ ತಾಂತ್ರಜ್ಞಾನ, ಕೋವಿಡ್ ಲಸಿಕೆ ಅಭಿವೃದ್ಧಿ ಪ್ರಯತ್ನಗಳು, ಪರೀಕ್ಷಾ ತಂತ್ರಗಳು, ದೇಶೀಯ ಆಮ್ಲಜನಕ ಸಾಂದ್ರಕಗಳು, ಆಮ್ಲಜನಕ ಉತ್ಪಾದನೆ, ಕ್ಯಾನ್ಸರ್ ಸೆಲ್ ಚಿಕಿತ್ಸೆ, ಆಸ್ಪತ್ರೆ ಮಾದರಿಗಳು, ಹಾಟ್ ಸ್ಪಾಟ್ ಪ್ರಿಡಿಕ್ಷನ್, ವೆಂಟಿಲೇಟರ್ ಉತ್ಪಾದನಾ ವಲಯದ ಕ್ರಮಗಳು. ರೊಬೊಟಿಕ್ಸ್, ಡ್ರೋನ್ ಗಳು, ಆನ್ ಲೈನ್ ಶಿಕ್ಷಣ, ಬ್ಯಾಟರಿ ತಂತ್ರಜ್ಞಾನ ಪ್ರಯತ್ನಗಳ ಬಗ್ಗೆ ಪ್ರಧಾನಮಂತ್ರಿ ಅವರಿಗೆ ವಿವರ ನೀಡಲಾಯಿತು. ಆರ್ಥಿಕತೆ ಮತ್ತು ತಂತ್ರಜ್ಞಾನದ ಬದಲಾಗುತ್ತಿರುವ ಸ್ವರೂಪಕ್ಕೆ ಅನುಗುಣವಾಗಿ ಹೊಸ ಶೈಕ್ಷಣಿಕ ಕೋರ್ಸ್ ಗಳ ಬಗ್ಗೆ ವಿಶೇಷವಾಗಿ ಆನ್ ಲೈನ್ ಕೋರ್ಸ್ ಗಳ ಬಗ್ಗೆಯೂ ಪ್ರಧಾನಮಂತ್ರಿ ಅವರಿಗೆ ಮಾಹಿತಿ ನೀಡಲಾಯಿತು.

ಈ ಸಂದರ್ಭದಲ್ಲಿ ಕೇಂದ್ರ ಶಿಕ್ಷಣ ಸಚಿವರು ಮತ್ತು ಶೈಕ್ಷಣಿಕ ಖಾತೆ ರಾಜ್ಯ ಸಚಿವರು ಸಂವಾದಲ್ಲಿ ಪಾಲ್ಗೊಂಡಿದ್ದರು.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Portraits of PVC recipients replace British officers at Rashtrapati Bhavan

Media Coverage

Portraits of PVC recipients replace British officers at Rashtrapati Bhavan
NM on the go

Nm on the go

Always be the first to hear from the PM. Get the App Now!
...
ಪ್ರಧಾನಿ ಮೋದಿಯವರಿಗೆ ಅತ್ಯುನ್ನತ ನಾಗರಿಕ ಗೌರವಗಳು
December 18, 2025

ಪ್ರಧಾನಿ ನರೇಂದ್ರ ಮೋದಿಯವರಿಗೆ ಹಲವಾರು ರಾಷ್ಟ್ರಗಳು ಅತ್ಯುನ್ನತ ನಾಗರಿಕ ಗೌರವಗಳನ್ನು ನೀಡಿ ಗೌರವಿಸಿವೆ. ಈ ಮನ್ನಣೆಗಳು ಪ್ರಧಾನಿ ಮೋದಿಯವರ ನಾಯಕತ್ವ ಮತ್ತು ದೃಷ್ಟಿಯ ಪ್ರತಿಬಿಂಬವಾಗಿದ್ದು, ಜಾಗತಿಕ ವೇದಿಕೆಯಲ್ಲಿ ಭಾರತದ ಹೊರಹೊಮ್ಮುವಿಕೆಯನ್ನು ಬಲಪಡಿಸಿದೆ. ಇದು ಪ್ರಪಂಚದಾದ್ಯಂತದ ದೇಶಗಳೊಂದಿಗೆ ಭಾರತದ ಬೆಳೆಯುತ್ತಿರುವ ಬಾಂಧವ್ಯವನ್ನು ಪ್ರತಿಬಿಂಬಿಸುತ್ತದೆ.

ಕಳೆದ ಏಳು ವರ್ಷಗಳಲ್ಲಿ ಪ್ರಧಾನಿ ಮೋದಿಯವರಿಗೆ ನೀಡಿದ ಪ್ರಶಸ್ತಿಗಳನ್ನು ನೋಡೋಣ.

ದೇಶಗಳು ನೀಡುವ ಪ್ರಶಸ್ತಿಗಳು:

1. ಏಪ್ರಿಲ್ 2016 ರಲ್ಲಿ, ಸೌದಿ ಅರೇಬಿಯಾಕ್ಕೆ ಭೇಟಿ ನೀಡಿದಾಗ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೌದಿ ಅರೇಬಿಯಾದ ಅತ್ಯುನ್ನತ ನಾಗರಿಕ ಗೌರವ- ಕಿಂಗ್ ಅಬ್ದುಲ್ ಅಜೀಜ್ ಸಾಶ್ ಅನ್ನು ನೀಡಲಾಯಿತು. ದೊರೆ ಸಲ್ಮಾನ್ ಬಿನ್ ಅಬ್ದುಲಜೀಜ್ ಅವರು ಪ್ರಧಾನಿಗೆ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

2. ಅದೇ ವರ್ಷ, ಪ್ರಧಾನಿ  ಮೋದಿಯವರಿಗೆ ಅಫ್ಘಾನಿಸ್ತಾನದ ಅತ್ಯುನ್ನತ ನಾಗರಿಕ ಗೌರವವಾದ ಘಾಜಿ ಅಮೀರ್ ಅಮಾನುಲ್ಲಾ ಖಾನ್ ಅವರ ರಾಜ್ಯ ಆದೇಶವನ್ನು ನೀಡಲಾಯಿತು.

3. 2018 ರಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾಲೆಸ್ತೀನ್‌ಗೆ ಐತಿಹಾಸಿಕ ಭೇಟಿ ನೀಡಿದಾಗ, ಅವರಿಗೆ ಗ್ರ್ಯಾಂಡ್ ಕಾಲರ್ ಆಫ್ ಸ್ಟೇಟ್ ಆಫ್ ಪ್ಯಾಲೆಸ್ಟೈನ್ ಪ್ರಶಸ್ತಿಯನ್ನು ನೀಡಲಾಯಿತು. ಇದು ವಿದೇಶಿ ಗಣ್ಯರಿಗೆ ನೀಡುವ ಪ್ಯಾಲೆಸ್ತೀನ್‌ನ ಅತ್ಯುನ್ನತ ಗೌರವವಾಗಿದೆ.

4. 2019 ರಲ್ಲಿ, ಪ್ರಧಾನ ಮಂತ್ರಿಗೆ ಆರ್ಡರ್ ಆಫ್ ಜಾಯೆದ್ ಪ್ರಶಸ್ತಿಯನ್ನು ನೀಡಲಾಯಿತು. ಇದು ಯುನೈಟೆಡ್ ಅರಬ್ ಎಮಿರೇಟ್ಸ್‌ನ ಅತ್ಯುನ್ನತ ನಾಗರಿಕ ಗೌರವವಾಗಿದೆ.

5. ರಷ್ಯಾವು ಪ್ರಧಾನಿ ಮೋದಿಯವರಿಗೆ ತಮ್ಮ ಅತ್ಯುನ್ನತ ನಾಗರಿಕ ಗೌರವ - 2019 ರಲ್ಲಿ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ಪ್ರಶಸ್ತಿಯನ್ನು ನೀಡಿತು.

6. ಆರ್ಡರ್ ಆಫ್ ದಿ ಡಿಸ್ಟಿಂಗ್ವಿಶ್ಡ್ ರೂಲ್ ಆಫ್ ನಿಶಾನ್ ಇಝುದ್ದೀನ್- ವಿದೇಶಿ ಗಣ್ಯರಿಗೆ ನೀಡಲಾಗುವ ಮಾಲ್ಡೀವ್ಸ್‌ನ ಅತ್ಯುನ್ನತ ಗೌರವವನ್ನು 2019 ರಲ್ಲಿ ಪ್ರಧಾನಿ ಮೋದಿಯವರಿಗೆ ನೀಡಲಾಯಿತು.

7. ಪ್ರಧಾನಿ ಮೋದಿ ಅವರು 2019 ರಲ್ಲಿ ಪ್ರತಿಷ್ಠಿತ ಕಿಂಗ್ ಹಮದ್ ಆರ್ಡರ್ ಆಫ್ ರಿನೈಸಾನ್ಸ್ ಅನ್ನು ಪಡೆದರು. ಈ ಗೌರವವನ್ನು ಬಹ್ರೇನ್ ನೀಡಿತು.

8. ಯುಎಸ್ ಸರ್ಕಾರದಿಂದ ಲೀಜನ್ ಆಫ್ ಮೆರಿಟ್, ಅತ್ಯುತ್ತಮ ಸೇವೆಗಳು ಮತ್ತು ಸಾಧನೆಗಳ ಕಾರ್ಯಕ್ಷಮತೆಯಲ್ಲಿ ಅಸಾಧಾರಣವಾದ ಅರ್ಹತೆಯ ನಡವಳಿಕೆಗಾಗಿ ನೀಡಲಾಗುವ ಯುನೈಟೆಡ್ ಸ್ಟೇಟ್ಸ್ ಸಶಸ್ತ್ರ ಪಡೆಗಳ ಪ್ರಶಸ್ತಿಯನ್ನು 2020 ರಲ್ಲಿ ಪಿಎಂ ಮೋದಿಯವರಿಗೆ ನೀಡಲಾಯಿತು.

9. ಡಿಸೆಂಬರ್ 2021 ರಲ್ಲಿ ಭೂತಾನ್ ಪ್ರಧಾನಿ ಮೋದಿಯವರಿಗೆ ಅತ್ಯುನ್ನತ ನಾಗರಿಕ ಅಲಂಕಾರ, ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋ ನೀಡಿ ಗೌರವಿಸಿದೆ
 
ಅತ್ಯುನ್ನತ ನಾಗರಿಕ ಗೌರವಗಳ ಹೊರತಾಗಿ,  ಪ್ರಧಾನಿ   ಮೋದಿಯವರಿಗೆ ಪ್ರಪಂಚದಾದ್ಯಂತದ ಪ್ರತಿಷ್ಠಿತ ಸಂಸ್ಥೆಗಳಿಂದ ಹಲವಾರು ಪ್ರಶಸ್ತಿಗಳನ್ನು ನೀಡಲಾಗಿದೆ.

1. ಸಿಯೋಲ್ ಶಾಂತಿ ಪ್ರಶಸ್ತಿ: ಮನುಕುಲದ ಸಾಮರಸ್ಯ, ರಾಷ್ಟ್ರಗಳ ನಡುವಿನ ಸಮನ್ವಯ ಮತ್ತು ವಿಶ್ವ ಶಾಂತಿಗೆ ಕೊಡುಗೆಗಳ ಮೂಲಕ ತಮ್ಮ ಛಾಪು ಮೂಡಿಸಿದ ವ್ಯಕ್ತಿಗಳಿಗೆ ಸಿಯೋಲ್ ಶಾಂತಿ ಪ್ರಶಸ್ತಿ ಸಾಂಸ್ಕೃತಿಕ ಪ್ರತಿಷ್ಠಾನದಿಂದ ದ್ವೈವಾರ್ಷಿಕವಾಗಿ ನೀಡಲಾಗುತ್ತದೆ. ಪ್ರಧಾನಿ ಮೋದಿ ಅವರಿಗೆ 2018 ರಲ್ಲಿ ಪ್ರತಿಷ್ಠಿತ ಪ್ರಶಸ್ತಿ ನೀಡಲಾಯಿತು.

2. ಯುಎನ್ ಚಾಂಪಿಯನ್ಸ್ ಆಫ್ ದಿ ಅರ್ಥ್ ಪ್ರಶಸ್ತಿ: ಇದು ವಿಶ್ವಸಂಸ್ಥೆಯ ಅತ್ಯುನ್ನತ ಪರಿಸರ ಗೌರವವಾಗಿದೆ. 2018 ರಲ್ಲಿ, ಜಾಗತಿಕ ವೇದಿಕೆಯಲ್ಲಿ ಅವರ ದಿಟ್ಟ ಪರಿಸರ ನಾಯಕತ್ವಕ್ಕಾಗಿ ಯುಎನ್ ಪ್ರಧಾನಿ ಮೋದಿಯನ್ನು ಗುರುತಿಸಿತು.

3. ಮೊದಲ ಬಾರಿಗೆ ಫಿಲಿಪ್ ಕೋಟ್ಲರ್ ಅಧ್ಯಕ್ಷೀಯ ಪ್ರಶಸ್ತಿಯನ್ನು 2019 ರಲ್ಲಿ ಪ್ರಧಾನಿ ಮೋದಿ ಅವರಿಗೆ ನೀಡಲಾಯಿತು. ಈ ಪ್ರಶಸ್ತಿಯನ್ನು ವಾರ್ಷಿಕವಾಗಿ ರಾಷ್ಟ್ರದ ನಾಯಕನಿಗೆ ನೀಡಲಾಗುತ್ತದೆ. ಪ್ರಧಾನಿ ಮೋದಿಯವರು "ರಾಷ್ಟ್ರಕ್ಕೆ ಅತ್ಯುತ್ತಮ ನಾಯಕತ್ವ" ಕ್ಕಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಶಸ್ತಿಯ ಉಲ್ಲೇಖವು ಹೇಳಿದೆ.

4. 2019 ರಲ್ಲಿ, ಪ್ರಧಾನಿ ಮೋದಿಯವರಿಗೆ ಸ್ವಚ್ಛ ಭಾರತ ಅಭಿಯಾನಕ್ಕಾಗಿ ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್‌ನಿಂದ 'ಗ್ಲೋಬಲ್ ಗೋಲ್‌ಕೀಪರ್' ಪ್ರಶಸ್ತಿಯನ್ನು ನೀಡಲಾಯಿತು. ಸ್ವಚ್ಛ ಭಾರತ ಅಭಿಯಾನವನ್ನು "ಜನರ ಆಂದೋಲನ" ಆಗಿ ಪರಿವರ್ತಿಸಿದ ಮತ್ತು ತಮ್ಮ ದೈನಂದಿನ ಜೀವನದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿದ ಭಾರತೀಯರಿಗೆ ಪ್ರಧಾನಿ ಮೋದಿ ಈ ಪ್ರಶಸ್ತಿಯನ್ನು ಅರ್ಪಿಸಿದರು.

5. 2021 ರಲ್ಲಿ, ಪ್ರಧಾನಿ ಮೋದಿಯವರಿಗೆ ಸ್ವಚ್ಛ ಭಾರತ ಅಭಿಯಾನಕ್ಕಾಗಿ ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್‌ನಿಂದ 'ಗ್ಲೋಬಲ್ ಗೋಲ್‌ಕೀಪರ್' ಪ್ರಶಸ್ತಿಯನ್ನು ನೀಡಲಾಯಿತು. ಸ್ವಚ್ಛ ಭಾರತ ಅಭಿಯಾನವನ್ನು "ಜನರ ಆಂದೋಲನ" ಆಗಿ ಪರಿವರ್ತಿಸಿದ ಮತ್ತು ತಮ್ಮ ದೈನಂದಿನ ಜೀವನದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿದ ಭಾರತೀಯರಿಗೆ ಪ್ರಧಾನಿ ಮೋದಿ ಈ ಪ್ರಶಸ್ತಿಯನ್ನು ಅರ್ಪಿಸಿದರು.