ಲಸಿಕಾ ಕೇಂದ್ರಗಳು ಮತ್ತು ಆರ್‌ಟಿ-ಪಿಸಿಆರ್ ಪರೀಕ್ಷೆಗಳನ್ನು ಹೆಚ್ಚಿಸಿ: ಪ್ರಧಾನಿ
ಲಸಿಕೆಯು ವ್ಯರ್ಥವಾಗದಂತೆ ಎಚ್ಚರ ವಹಿಸಲು ಕರೆ
ಸೂಕ್ಷ್ಮ ನಿಗ್ರಹ ವಲಯಗಳು ಹಾಗೂ 'ಪರೀಕ್ಷೆ, ಪತ್ತೆ ಮತ್ತು ಚಿಕಿತ್ಸೆ'ಗೆ ಒತ್ತು ನೀಡಲು ಕರೆ

ದೇಶದ ಕೋವಿಡ್-19 ಪರಿಸ್ಥಿತಿಯ ಬಗ್ಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು.

ಕೋವಿಡ್ ವಿರುದ್ಧದ ಸಮರದಲ್ಲಿ ಪ್ರಧಾನಮಂತ್ರಿಯವರ ನಾಯಕತ್ವವನ್ನು ಮುಖ್ಯಮಂತ್ರಿಗಳು ಶ್ಲಾಘಿಸಿದರು. ಲಸಿಕಾ ಅಭಿಯಾನವನ್ನು ದೇಶಾದ್ಯಂತ ಸುಗಮವಾಗಿ ಅನುಷ್ಠಾನಗೊಳಿಸಿದ್ದಕ್ಕಾಗಿ ಅವರು ಪ್ರಧಾನಿಯವರಿಗೆ ಧನ್ಯವಾದ ತಿಳಿಸಿದರು. ಲಸಿಕೆಯ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸುವ ಕುರಿತು ತಮ್ಮ ಅಭಿಪ್ರಾಯ ಮತ್ತು ಸಲಹೆಗಳನ್ನು ನೀಡಿದರು.

ಇತ್ತೀಚೆಗೆ ಕೆಲವು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಕೋವಿಡ್ ಸೂಕ್ತ ನಡವಳಿಕೆಯನ್ನು ಕಾಪಾಡಿಕೊಳ್ಳಬೇಕಾದ ಸವಾಲಿನ ಬಗ್ಗೆಯೂ ಚರ್ಚಿಸಲಾಯಿತು. ಹೆಚ್ಚಿನ ಜಾಗರೂಕತೆ ಮತ್ತು ಪರಿಸ್ಥಿತಿಯ ಮೇಲ್ವಿಚಾರಣೆಯ ಅಗತ್ಯದ ಬಗ್ಗೆ ಮುಖ್ಯಮಂತ್ರಿಗಳು ಸಹಮತ ಸೂಚಿಸಿದರು.

ವೈರಾಣು ಹರಡುವುದನ್ನು ತಡೆಗಟ್ಟಲು ಮುಖ್ಯಮಂತ್ರಿಗಳು ವಿಶೇಷ ಗಮನ ಹರಿಸಬೇಕಾದ ಜಿಲ್ಲೆಗಳನ್ನು ಗೃಹ ಸಚಿವರು ಪಟ್ಟಿ ಮಾಡಿದರು. ದೇಶದ ಪ್ರಸ್ತುತ ಕೋವಿಡ್ ಪರಿಸ್ಥಿತಿ ಮತ್ತು ಲಸಿಕಾ ತಂತ್ರದ ಬಗ್ಗೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ಪ್ರಾತ್ಯಕ್ಷಿಕೆ ನೀಡಿದರು.

ಮುಖ್ಯಮಂತ್ರಿಗಳನ್ನುದ್ದೇಶಿಸಿ ಮಾತನಾಡಿದ ಪ್ರಧಾನಿಯವರು, ಭಾರತದಲ್ಲಿ ಶೇ.96 ಕ್ಕೂ ಹೆಚ್ಚು ಕೋವಿಡ್ ರೋಗಿಗಳು ಗುಣಮುಖರಾಗಿದ್ದಾರೆ ಮತ್ತು ಭಾರತವು ವಿಶ್ವದ ಅತಿ ಕಡಿಮೆ ಸಾವಿನ ಪ್ರಮಾಣವನ್ನು ಹೊಂದಿರುವ ರಾಷ್ಟ್ರಗಳಲ್ಲೊಂದಾಗಿದೆ ಎಂದರು. ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿ ಹೆಚ್ಚಿನ ಸಕಾರಾತ್ಮಕ ಪ್ರಕರಣಗಳ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿದರು. ಕಳೆದ ಕೆಲವು ವಾರಗಳಲ್ಲಿ ದೇಶದ 70 ಜಿಲ್ಲೆಗಳಲ್ಲಿ ಶೇಕಡಾ 150 ರಷ್ಟು ಪ್ರಕರಣಗಳು ಏರಿಕೆಯಾಗಿವೆ. ಕೊರೋನಾದ ಈ "ಎರಡನೇ ಉತ್ತುಂಗವನ್ನು" ಕೂಡಲೇ ತಡೆಯಬೇಕು ಎಂದು ಆಗ್ರಹಿಸಿದ ಅವರು, ಹೆಚ್ಚುತ್ತಿರುವ ಈ ಸಾಂಕ್ರಾಮಿಕ ರೋಗವನ್ನು ನಾವು ಈಗಲೇ ನಿಗ್ರಹಿಸದಿದ್ದರೆ, ದೇಶಾದ್ಯಂತ ತೀವ್ರವಾಗಿ ಹರಡಬಹುದು ಎಂದು ಎಚ್ಚರಿಸಿದರು.

ಕೊರೋನಾದ ಈ "ಎರಡನೇ ಉತ್ತುಂಗವನ್ನು" ತಡೆಯಲು ತ್ವರಿತ ಮತ್ತು ನಿರ್ಣಾಯಕ ಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯವನ್ನು ಪ್ರಧಾನಿ ಒತ್ತಿ ಹೇಳಿದರು. ಮುಖಗವಸುಗಳ ಬಳಕೆಯ ಬಗ್ಗೆ ಸ್ಥಳೀಯ ಆಡಳಿತಗಳ ಗಂಭೀರತೆ ಕಡಿಮೆಯಾಗುತ್ತಿದೆ ಎಂದ ಪ್ರಧಾನಿ, ಪ್ರಾದೇಶಿಕ ಮಟ್ಟದಲ್ಲಿ ಆಡಳಿತ ಸಮಸ್ಯೆಗಳನ್ನು ತಕ್ಷಣವೇ ಬಗೆಹರಿಸಬೇಕೆಂದು ಕರೆ ನೀಡಿದರು. ಕೊರೋನಾ ವಿರುದ್ಧದ ಸಮರದಲ್ಲಿ ಸಾಧನೆಗಳಿಂದ ಗಳಿಸಿದ ವಿಶ್ವಾಸವು ನಿರ್ಲಕ್ಷ್ಯಕ್ಕೆ ತಿರುಗಬಾರದು ಎಂದು ಅವರು ಎಚ್ಚರಿಕೆ ನೀಡಿದರು. ಸಾರ್ವಜನಿಕರನ್ನು ಭಯಭೀತರನ್ನಾಗಿಸಬಾರದು ಮತ್ತು ಅದೇ ಸಮಯದಲ್ಲಿ ಸಮಸ್ಯೆಯಿಂದಲೂ ಮುಕ್ತರಾಗಬೇಕು ಎಂದು ಅವರು ಒತ್ತಿ ಹೇಳಿದರು. ನಮ್ಮ ಹಿಂದಿನ ಅನುಭವಗಳನ್ನು, ಸದ್ಯದ ಪ್ರಯತ್ನಗಳಲ್ಲಿ ಸೇರಿಸಿಕೊಳ್ಳುವ ಮೂಲಕ ಕಾರ್ಯತಂತ್ರ ರೂಪಿಸುವ ಅಗತ್ಯದ ಬಗ್ಗೆ ಅವರು ಒತ್ತಿ ಹೇಳಿದರು.

ಸೂಕ್ಷ್ಮ ನಿಗ್ರಹ ವಲಯಗಳ ಅಗತ್ಯದ ಬಗ್ಗೆ ಪ್ರಧಾನಿ ಮಾತನಾಡಿದರು. ಕಳೆದ ಒಂದು ವರ್ಷದಿಂದ ಮಾಡುತ್ತಿರುವಂತೆ 'ಪರೀಕ್ಷೆ, ಪತ್ತೆ ಮತ್ತು ಚಿಕಿತ್ಸೆ' ಯನ್ನು ನಾವು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಅವರು ಒತ್ತಿ ಹೇಳಿದರು. ಪ್ರತಿ ಸೋಂಕಿತ ವ್ಯಕ್ತಿಯ ಸಂಪರ್ಕಗಳನ್ನು ಶೀಘ್ರವಾಗಿ ಪತ್ತೆಹಚ್ಚುವುದು ಮತ್ತು ಆರ್‌ಟಿ-ಪಿಸಿಆರ್ ಪರೀಕ್ಷೆಗಳ ಪ್ರಮಾಣವನ್ನು ಶೇಕಡಾ 70 ಕ್ಕಿಂತ ಹೆಚ್ಚಿಸುವುದು ಬಹಳ ಮುಖ್ಯವಾಗಿದೆ ಎಂದು ಅವರು ಹೇಳಿದರು. ಆ್ಯಂಟಿಜನ್ ಪರೀಕ್ಷೆಗಳಿಗೆ ಹೆಚ್ಚಿನ ಒತ್ತು ನೀಡುತ್ತಿರುವ ಕೇರಳ, ಒಡಿಶಾ, ಚತ್ತೀಸ್‌ಗಢ ಮತ್ತು ಉತ್ತರ ಪ್ರದೇಶದಂತಹ ರಾಜ್ಯಗಳಲ್ಲಿ ಹೆಚ್ಚಿನ ಆರ್‌ಟಿ-ಪಿಸಿಆರ್ ಪರೀಕ್ಷೆಗಳನ್ನು ನಡೆಸಬೇಕು ಎಂದು ಅವರು ಹೇಳಿದರು.

ಈಗ ಇಡೀ ದೇಶವು ಪ್ರಯಾಣಕ್ಕೆ ಮುಕ್ತವಾಗಿದೆ ಮತ್ತು ಪ್ರಯಾಣಿಸುವವರ ಸಂಖ್ಯೆಯೂ ಹೆಚ್ಚಾಗಿರುವುದರಿಂದ ಸಣ್ಣ ನಗರಗಳಲ್ಲಿ ಪರೀಕ್ಷೆಗಳನ್ನು ಹೆಚ್ಚಿಸಬೇಕು ಹಾಗೂ "ರೆಫರಲ್ ಸಿಸ್ಟಮ್" ಮತ್ತು "ಆಂಬ್ಯುಲೆನ್ಸ್ ನೆಟ್ವರ್ಕ್" ಬಗ್ಗೆ ವಿಶೇಷ ಗಮನ ಹರಿಸಬೇಕೆಂದು ಪ್ರಧಾನಿ ಆಗ್ರಹಿಸಿದರು. ಪರಸ್ಪರ ಮಾಹಿತಿಯನ್ನು ಹಂಚಿಕೊಳ್ಳಲು ಹೊಸ ಕಾರ್ಯವಿಧಾನದ ಅಗತ್ಯವನ್ನು ಅವರು ಒತ್ತಿ ಹೇಳಿದರು. ಹಾಗೆಯೇ, ವಿದೇಶಗಳಿಂದ ಬರುವ ಪ್ರಯಾಣಿಕರ ಸಂಪರ್ಕಗಳ ಮೇಲೆ ನಿಗಾ ಇಡಲು ಎಸ್‌ಒಪಿ ಅನುಸರಿಸುವ ಜವಾಬ್ದಾರಿಯೂ ಹೆಚ್ಚಾಗಿದೆ ಎಂದು ಪ್ರಧಾನಿ ತಿಳೀಸಿದರು.

ರೂಪಾಂತರಿ ಕೊರೋನಾ ವೈರಾಣುಗಳನ್ನು ನಾವು ಗುರುತಿಸಬೇಕು ಮತ್ತು ಅವುಗಳ ಪರಿಣಾಮಗಳನ್ನು ನಿರ್ಣಯಿಸಬೇಕು ಎಂದು ಪ್ರಧಾನಿ ಹೇಳಿದರು. ದೇಶದಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಲಸಿಕಾ ವೇಗ ಮತ್ತು ಲಸಿಕೆಯ ಪ್ರಮಾಣಗಳು ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿಯವರು, ಒಂದೇ ದಿನದಲ್ಲಿ 3 ಮಿಲಿಯನ್‌ಗಿಂತಲೂ ಹೆಚ್ಚು ಲಸಿಕೆಗಳನ್ನು ನೀಡಲಾಗಿದೆ ಎಂದರು. ಆದರೆ ಲಸಿಕೆಯು ವ್ಯರ್ಥವಾಗುತ್ತಿವ ಸಮಸ್ಯೆಯನ್ನು ಸಹ ಬಹಳ ಗಂಭೀರವಾಗಿ ತೆಗೆದುಕೊಳ್ಳುವಂತೆ ಎಚ್ಚರಿಸಿದರು. ತೆಲಂಗಾಣ, ಆಂಧ್ರಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ಶೇ.10 ರಷ್ಟು ಲಸಿಕೆಯು ವ್ಯರ್ಥವಾಗುತ್ತಿದೆ ಎಂದು ಅವರು ಹೇಳಿದರು. ಲಸಿಕೆಯ ವ್ಯರ್ಥವನ್ನು ಕಡಿಮೆ ಮಾಡಲು ಸ್ಥಳೀಯ ಮಟ್ಟದಲ್ಲಿ ಯೋಜನೆ ರೂಪಿಸಬೇಕು ಮತ್ತು ಆಡಳಿತದ ನ್ಯೂನತೆಗಳನ್ನು ತಕ್ಷಣ ಸರಿಪಡಿಸಬೇಕು ಎಂದು ಅವರು ಕರೆ ಕೊಟ್ಟರು.

ಸೋಂಕಿನ ಹರಡುವಿಕೆಯನ್ನು ತಡೆಗಟ್ಟಲು ಮೇಲಿನ ಕ್ರಮಗಳ ಜೊತೆಗೆ ಮೂಲಭೂತ ಕ್ರಮಗಳಾದ ಮುಖಗವಸುಗಳನ್ನು ಧರಿಸುವುದು, ದೈಹಿಕ ಅಂತರವನ್ನು ಕಾಪಾಡಿಕೊಳ್ಳುವುದು, ಸ್ವಚ್ಛತೆಯ ಬಗ್ಗೆ ಕಾಳಜಿ ವಹಿಸುವುದು ಮುಖ್ಯ ಎಂದು ಪ್ರಧಾನಿ ತಿಳಿಸಿದರು. ಈ ಕ್ರಮಗಳಲ್ಲಿ ಯಾವುದೇ ನಿರ್ಲಕ್ಷ್ಯ ಇರಬಾರದು ಮತ್ತು ಈ ಕುರಿತು ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದರು. ಲಸಿಕಾ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ಕರೆ ನೀಡಿದ ಅವರು, ಲಸಿಕೆಯ ಅವಧಿ ಮುಗಿಯುವ ದಿನಾಂಕದ ಬಗ್ಗೆ ಜಾಗರೂಕರಾಗಿರಬೇಕು ಎಂದರು. ‘ಔಷಧಿ ಮತ್ತು ಎಚ್ಚರಿಕೆ’ ಎರಡೂ ಇರಬೇಕು ಎಂದು ಪ್ರಧಾನ ಮಂತ್ರಿಯವರು ತಿಳಿಸಿದರು.

 

 

 

 

 

 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
'Wed in India’ Initiative Fuels The Rise Of NRI And Expat Destination Weddings In India

Media Coverage

'Wed in India’ Initiative Fuels The Rise Of NRI And Expat Destination Weddings In India
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 15 ಡಿಸೆಂಬರ್ 2025
December 15, 2025

Visionary Leadership: PM Modi's Era of Railways, AI, and Cultural Renaissance