ಛಠ್ ಹಬ್ಬದ ಆಚರಣೆಗೆ ದೇಶ ಸಜ್ಜಾಗುತ್ತಿದ್ದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಛಠೀ ಮೈಯಾಗೆ ಸಮರ್ಪಿತವಾದ ಹಾಡುಗಳನ್ನು ಹಂಚಿಕೊಳ್ಳುವ ಮೂಲಕ ಭಕ್ತಿ ಮತ್ತು ಸಾಂಸ್ಕೃತಿಕ ಏಕತೆಯ ಚೈತನ್ಯದಲ್ಲಿ ಭಾಗಿಯಾಗುವಂತೆ ನಾಗರಿಕರಿಗೆ ಕರೆ ನೀಡಿದ್ದಾರೆ. ಪ್ರಕೃತಿ ಮತ್ತು ಸಂಸ್ಕೃತಿಯೊಂದಿಗೆ ಛಠ್ ಉತ್ಸವದ ಗಾಢ ಸಂಬಂಧವನ್ನು ಹಾಗೂ ಬಿಹಾರ ಸೇರಿದಂತೆ ದೇಶಾದ್ಯಂತ ನಡೆಯುತ್ತಿರುವ ಭರದ ಸಿದ್ಧತೆಗಳ ಬಗ್ಗೆ ಎಕ್ಸ್ ಪೋಸ್ಟ್ ನಲ್ಲಿ ಪ್ರಧಾನಮಂತ್ರಿ ವಿವರಿಸಿದ್ದಾರೆ.
ಹಾಡುಗಳ ಮೂಲಕ ಛಠ್ ನ ಚೈತನ್ಯವನ್ನು ಪ್ರತಿಬಿಂಬಿಸುವಂತೆ ಶ್ರೀ ಮೋದಿ ಅವರು ನಾಗರಿಕರಿಗೆ ಮನವಿ ಮಾಡಿದ್ದಾರೆ.
ಶ್ರೀ ಮೋದಿ ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:
"ಪ್ರಕೃತಿ ಮತ್ತು ಸಂಸ್ಕೃತಿಯನ್ನು ಸಂಭ್ರಮಿಸುವ ಭವ್ಯ ಛಠ್ ಉತ್ಸವ ಸಮೀಪಿಸುತ್ತಿದೆ. ಬಿಹಾರ ಸೇರಿದಂತೆ ದೇಶಾದ್ಯಂತ ಭಕ್ತರು ಈಗಾಗಲೇ ಸಂಪೂರ್ಣ ಭಕ್ತಿ ಶ್ರದ್ಧೆಯಿಂದ ಹಬ್ಬದ ಸಿದ್ಧತೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಛಠೀ ಮೈಯಾಗೆ ಸಮರ್ಪಿತವಾದ ಹಾಡುಗಳು ಈ ಪವಿತ್ರ ಸಂದರ್ಭದ ಭವ್ಯತೆ ಮತ್ತು ದೈವಿಕತೆಯನ್ನು ಮತ್ತಷ್ಟು ಹೆಚ್ಚಿಸಲಿವೆ. ಛಠ್ ಪೂಜೆಗೆ ಸಂಬಂಧಿಸಿದ ಹಾಡುಗಳನ್ನು ನನ್ನೊಂದಿಗೆ ಹಂಚಿಕೊಳ್ಳುವಂತೆ ನಿಮ್ಮಲ್ಲಿ ವಿನಂತಿಸುತ್ತೇನೆ. ಮುಂದಿನ ಕೆಲವು ದಿನಗಳಲ್ಲಿ ನಾನು ಅವುಗಳನ್ನು ಎಲ್ಲಾ ದೇಶವಾಸಿಗಳೊಂದಿಗೆ ಹಂಚಿಕೊಳ್ಳುತ್ತೇನೆ."
प्रकृति और संस्कृति को समर्पित महापर्व छठ आने वाला है। बिहार सहित देशभर में इसकी तैयारियों में श्रद्धालु पूरे भक्ति-भाव से जुट चुके हैं। छठी मइया के गीत इस पावन अवसर की भव्यता और दिव्यता को और बढ़ाने वाले होते हैं। आपसे आग्रह है कि आप भी छठ पूजा से जुड़े गीत मेरे साथ शेयर करें।…
— Narendra Modi (@narendramodi) October 24, 2025


