1.25 ಲಕ್ಷಕ್ಕೂ ಅಧಿಕ ಪಿಎಂ ಕಿಸಾನ್ ಸಂಮೃದ್ಧಿ ಕೇಂದ್ರಗಳ ಲೋಕಾರ್ಪಣೆ
ಪಿಎಂ-ಕಿಸಾನ್ ಯೋಜನೆಯಡಿ 17,000 ಕೋಟಿ ರೂ. ಗಳ 14ನೇ ಕಂತು ಬಿಡುಗಡೆ
1600 ರೈತ ಉತ್ಪನ್ನಗಳ ಸಂಸ್ಥೆಗಳನ್ನು ಡಿಜಿಟಲ್ ವಹಿವಾಟಿನ ಮುಕ್ತ ಜಾಲ (ಒಎನ್ ಡಿಸಿ) ವೇದಿಕೆಗೆ ತರುವುದಕ್ಕೆ ಚಾಲನೆ
ಸಲ್ಫರ್ ಲೇಪಿತ ಯೂರಿಯಾ- ಯೂರಿಯಾ ಗೋಲ್ಡ್ ಬಿಡುಗಡೆ
5 ಹೊಸ ವೈದ್ಯಕೀಯ ಕಾಲೇಜುಗಳ ಉದ್ಘಾಟನೆ ಮತ್ತು 7 ಹೊಸ ವೈದ್ಯಕೀಯ ಕಾಲೇಜುಗಳಿಗೆ ಶಂಕುಸ್ಥಾಪನೆ
“ರೈತರ ನೋವು ಮತ್ತು ಅಗತ್ಯಗಳನ್ನು ಅರ್ಥಮಾಡಿಕೊಳ್ಳುವ ಸರ್ಕಾರ ಕೇಂದ್ರದಲ್ಲಿದೆ’’
“ಯೂರಿಯಾ ಬೆಲೆಗಳಿಂದ ನಮ್ಮ ರೈತರಿಂದ ತೊಂದರೆಗಳಾಗಲು ಸರ್ಕಾರ ಬಿಡುವುದಿಲ್ಲ. ರೈತರು ಯೂರಿಯಾ ಖರೀದಿಗೆ ಹೋದರೆ ಮೋದಿ ಅವರ ಗ್ಯಾರಂಟಿ ಇದೆ ಎಂಬ ನಂಬಿಕೆ ಅವರಲ್ಲಿರಬೇಕು’’
“ಗ್ರಾಮಗಳು ವಿಕಾಸವಾದರೆ ಮಾತ್ರ ಭಾರತ ವಿಕಸಿತವಾಗುತ್ತದೆ’’
“ರಾಜಸ್ಥಾನದಲ್ಲಿ ಆಧುನಿಕ ಮೂಲಸೌಕರ್ಯ ಸೃಷ್ಟಿಸುವುದು ನಮ್ಮ ಆದ್ಯತೆಯಾಗಿದೆ’’
“ನಾವೆಲ್ಲರೂ ಸೇರಿ ರಾಜಸ್ಥಾನದ ಪರಂಪರೆ ಮತ್ತು ಹೆಮ್ಮೆಗೆ ಇಡೀ ವಿಶ್ವದಲ್ಲಿಯೇ ಹೊಸ ಹೆಗ್ಗುರುತು ನೀಡೋಣ’’

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನದ ಸಿಕಾರ್ ನಲ್ಲಿಂದು ಹಲವು ಅಭಿವೃದ್ಧಿ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಿದರು. ರಾಷ್ಟ್ರಕ್ಕೆ ಸಮರ್ಪಿಸಲಾದ ಈ ಯೋಜನೆಗಳಲ್ಲಿ 1.25 ಲಕ್ಷಕ್ಕೂ ಅಧಿಕ ಪಿಎಂ ಕಿಸಾನ್ ಸಮೃದ್ಧಿ ಕೇಂದ್ರಗಳು(ಪಿಎಂಕೆಎಸ್ ಕೆ)ಗಳ ಲೋಕಾರ್ಪಣೆ, ಸಲ್ಫರ್ ಲೇಪಿತ ಹೊಸ ಬಗೆಯ ಯೂರಿಯಾ – ಯೂರಿಯಾ ಗೋಲ್ಡ್ ಬಿಡುಗಡೆ, 1600ರೈತ ಉತ್ಪನ್ನ ಸಂಸ್ಥೆಗಳು(ಎಫ್ ಪಿಒ)ಗಳನ್ನು ಡಿಜಿಟಲ್ ವ್ಯವಹಾರಕ್ಕೆ ಮುಕ್ತ ಜಾಲ(ಒಎನ್ ಡಿಸಿ) ವೇದಿಕೆಗೆ ತರುವುದು, ಪಿಎಂ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್)ಅಡಿ 8.5 ಕೋಟಿ ಫಲಾನುಭವಿಗಳಿಗೆ 14ನೇ ಕಂತಿನ 17,000 ಕೋಟಿ ರೂ. ಬಿಡುಗಡೆ, ಚಿತ್ತೋರ್ ಗಢ, ಧೋಲಾಪುರ್, ಸಿರೋಹಿ, ಸಿಕಾರ್ ಮತ್ತು  ಶ್ರೀಗಂಗಾನಗರಗಳಲ್ಲಿ 5 ಹೊಸ ವೈದ್ಯಕೀಯ ಕಾಲೇಜುಗಳ ಉದ್ಘಾಟನೆ, ಬರಾನ್, ಬುಂಡಿ, ಕರೌಲಿ, ಜುನ್ ಜಹುನು, ಸವಾಯಿ ಮಾಧೋಪುರ್, ಜೈಸಲ್ಮೇರ್, ಟೋಂಕ್ ನಲ್ಲಿ 7 ಹೊಸ ವೈದ್ಯಕೀಯ ಕಾಲೇಜುಗಳಿಗೆ ಶಂಕುಸ್ಥಾಪನೆ, ಉದಯ್ ಪುರ, ಬನ್ಸವಾರ್, ಪ್ರತಾಪ್ ಗಡ್ ಮತ್ತು ಡುಂಗಾರ್ಪುರ ಜಿಲ್ಲೆಗಳಲ್ಲಿ ಮತ್ತು ಜೋಧ್ ಪುರ್ ನ ಕೇಂದ್ರೀಯ ವಿದ್ಯಾಲಯ ತಿವರಿಯಲ್ಲಿ 6 ಏಕಲವ್ಯ ಮಾದರಿ ವಸತಿ ಶಾಲೆಗಳ ಉದ್ಘಾಟನೆಯೂ ಸೇರಿದೆ.   

ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಪ್ರಧಾನಿ ಅವರು, ಪಿಎಂ-ಕಿಸಾನ್ ಸಮೃದ್ಧಿ ಕೇಂದ್ರದ ಮಾದರಿ ಮೂಲಕ ಹಾದು ಹೋದರು. ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ದೇಶದ ನಾನಾ ಭಾಗಗಳಿಂದ ಇಂದಿನ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಕೋಟ್ಯಾಂತರ ರೈತರಿಗೆ ನಮನ ಸಲ್ಲಿಸಿದರು ಮತ್ತು ಕತುಶಾಮ್ ಜಿ ಅವರ ಈ ಭೂಮಿ ಭಾರತದ ಮೂಲೆ ಮೂಲೆಯ ಜನರಿಗೆ ಯಾತ್ರೆಯ ಅನುಭವವನ್ನು ನೀಡಿದೆ ಎಂದರು. ಶೆಖಾವತಿ ಅವರ ಧೀರೋದ್ದಾತ ನೆಲದಿಂದ ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಲು ತಮಗೆ ಈ ಅವಕಾಶ ದೊರೆತಿದ್ದಕ್ಕಾಗಿ ಕೃತಜ್ಞತೆಗಳನ್ನು ಸಲ್ಲಿಸಿದರು ಮತ್ತು ಕೋಟ್ಯಾಂತರ ರೈತ ಫಲಾನುಭವಿಗಳಿಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್) ಅಡಿ ಕಂತಿನ ಹಣ ನೇರ ಬಿಡುಗಡೆಯಾಗಿದೆ ಎಂದು ಹೇಳಿದರು. ದೇಶಕ್ಕೆ 1.25 ಲಕ್ಷಕ್ಕೂ ಅಧಿಕ ಪಿಎಂ-ಕಿಸಾನ್ ಸಮೃದ್ಧಿ ಕೇಂದ್ರಗಳನ್ನು ಸಮರ್ಪಿಸಿದ ಬಗ್ಗೆ ಮಾತನಾಡಿದ ಪ್ರಧಾನಮಂತ್ರಿ ಅವರು, ಇವು ಗ್ರಾಮಗಳು ಹಾಗೂ ಬ್ಲಾಕ್ ಮಟ್ಟದಲ್ಲಿ ಕೋಟ್ಯಾಂತರ ರೈತರಿಗೆ ನೇರ ಅನುಕೂಲಗಳನ್ನು ಒದಗಿಸುತ್ತದೆ ಎಂದರು. ಅಲ್ಲದೆ ರೈತ ಉತ್ಪನ್ನ ಸಂಸ್ಥೆಗಳು(ಎಫ್ ಪಿಒ)ಗಳನ್ನು ಡಿಜಿಟಲ್ ವಹಿವಾಟಿನ ಮುಕ್ತ ಜಾಲಕ್ಕೆ(ಒಎನ್ ಡಿಸಿ) ವ್ಯಾಪ್ತಿಗೆ ತಂದಿರುವುದನ್ನು ಉಲ್ಲೇಖಿಸಿದರು ಮತ್ತು ಇದರಿಂದ ರೈತರು ತಮ್ಮ ಉತ್ಪನ್ನಗಳನ್ನು ದೇಶದ ಯಾವುದೇ ಮೂಲೆಯ ಮಾರುಕಟ್ಟೆಗೆ ಬೇಕಾದರೂ ಕೊಂಡೊಯ್ಯಲು ಸುಲಭವಾಗುತ್ತದೆ ಎಂದರು. ಅಲ್ಲದೆ ಹೊಸ ಬಗೆಯ ಯೂರಿಯಾ ಗೋಲ್ಡ್ ಬಿಡುಗಡೆ, ಹೊಸ ವೈದ್ಯಕೀಯ ಕಾಲೇಜುಗಳು ಮತ್ತು ಏಕಲವ್ಯ ಮಾದರಿ ಕಾಲೇಜುಗಳ ಉದ್ಘಾಟನೆಯನ್ನು ಅವರು ಉಲ್ಲೇಖಿಸಿದರು. ಪ್ರಧಾನಮಂತ್ರಿ ಅವರು, ಇಂದಿನ ಅಭಿವೃದ್ಧಿ ಕಾರ್ಯಕ್ರಮಗಳಿಗಾಗಿ ದೇಶದ ಜನತೆಗೆ ಮತ್ತು ಕೋಟ್ಯಾಂತರ ರೈತರಿಗೆ ಅಭಿನಂದನೆ ಸಲ್ಲಿಸಿದರು.  

 

ಸಿಕಾರ್ ಮತ್ತು ಶೇಖಾವತಿ ಪ್ರಾಂತ್ಯದ ರೈತರ ಪ್ರಾಮುಖ್ಯತೆಯನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ ಅವರು, ಅವರ ಪರಿಶ್ರಮಕ್ಕಾಗಿ ಗೌರವವನ್ನು ಸಲ್ಲಿಸಿದರು. ಸದ್ಯ ಕೇಂದ್ರದಲ್ಲಿರುವ ಸರ್ಕಾರ ರೈತರ ನೋವು ಮತ್ತು ಅಗತ್ಯತೆಗಳನ್ನು ಅರ್ಥಮಾಡಿಕೊಳ್ಳುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. ಕಳೆದ 9 ವರ್ಷಗಳ್ಲಲಿ ಬೀಜದಿಂದ ಮಾರುಕಟ್ಟೆವರೆಗೆ(ಬೀಜ್ ಸೆ ಬಜಾರ್ ತಕ್) ವರೆಗೆ ಹೊಸ ವ್ಯವಸ್ಥೆಯನ್ನು ಸೃಷ್ಟಿಸಿರುವ ಬಗ್ಗೆ ಪ್ರಧಾನಮಂತ್ರಿ ವಿವರಿಸಿದರು. 2015ರಲ್ಲಿ ಸೂರತ್ ಗರ್ ನಲ್ಲಿ ಮಣ್ಣಿನ ಆರೋಗ್ಯ ಕಾರ್ಡ್ ಯೋಜನೆಗೆ ಚಾಲನೆ ನೀಡಿದ್ದನ್ನು ಪ್ರಧಾನಮಂತ್ರಿ ಸ್ಮರಿಸಿದರು. ಈ ಯೋಜನೆಯ ಮೂಲಕ ಮಣ್ಣಿನ ಆರೋಗ್ಯದ ಬಗ್ಗೆ ತಿಳಿದುಕೊಂಡು, ಕೋಟ್ಯಾಂತರ ರೈತರು ಸಕಾರಾತ್ಮಕ ನಿರ್ಧಾರಗಳನ್ನು ಕೈಗೊಂಡಿದ್ದಾರೆ ಎಂದರು. 125ಲಕ್ಷ ಪಿಎಂ – ಕಿಸಾನ್ ಸಮೃದ್ಧಿ ಕೇಂದ್ರಗಳು(ಪಿಎಂಕೆಎಸ್ ಕೆ)ಗಳು ರೈತರ ಅಭ್ಯುದಯಕ್ಕೆ ದಾರಿಮಾಡಿಕೊಡಲಿವೆ ಎಂದು ಅವರು ಹೇಳಿದರು. ಈ ಕೇಂದ್ರಗಳನ್ನು ರೈತರ ಎಲ್ಲ ಅಗತ್ಯತೆಗಳನ್ನು ಪೂರೈಸುವ ಏಕೈಕ ತಾಣವನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಈ ಕೇಂದ್ರಗಳು ಕೃಷಿಗೆ ಸಂಬಂಧಿಸಿದಂತೆ ರೈತರಿಗೆ ಎಲ್ಲಾ ಅತ್ಯಾಧುನಿಕ ಮತ್ತು ಇತ್ತೀಚಿನ ಮಾಹಿತಿಯನ್ನು ಒದಗಿಸಲಿವೆ ಎಂದರು. ಅಲ್ಲದೆ ಈ ಕೇಂದ್ರಗಳು ಸರ್ಕಾರದ ಕೃಷಿ ಯೋಜನೆಗಳ ಬಗ್ಗೆ ಸಕಾಲದಲ್ಲಿ ಸೂಕ್ತ ಮಾಹಿತಿಯನ್ನು ಒದಗಿಸುತ್ತವೆ. ರೈತರು ಈ ಕೇಂದ್ರಗಳಿಗೆ ಆಗಾಗ್ಗೆ ಭೇಟಿ ನೀಡುತ್ತಿರಬೇಕು ಮತ್ತು ಅಲ್ಲಿ ಲಭ್ಯವಿರುವ ಜ್ಞಾನದ ಪ್ರಯೋಜನ ಪಡೆಯಬೇಕು ಎಂದು ಪ್ರಧಾನಿ ರೈತರಿಗೆ ಸಲಹೆ ನೀಡಿದರು. ಈ ವರ್ಷಾಂತ್ಯಕ್ಕೂ ಮುನ್ನ ದೇಶಾದ್ಯಂತ ಇನ್ನೂ 1.75 ಲಕ್ಷ ಪಿಎಂ-ಕಿಸಾನ್ ಸಮೃದ್ಧಿ ಕೇಂದ್ರ(ಪಿಎಂಕೆಎಸ್ ಕೆ)ಗಳನ್ನು ಹೆಚ್ಚುವರಿಯಾಗಿ ಆರಂಭಿಸಲಾಗುವುದು ಎಂದು ಅವರು ಹೇಳಿದರು.

ಸದ್ಯದ ಕೇಂದ್ರ ಸರ್ಕಾರ ರೈತರ ವೆಚ್ಚವನ್ನು ತಗ್ಗಿಸಲು ಎಲ್ಲಾ ಹಂತದಲ್ಲೂ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಮತ್ತು ಅವರ ಅಗತ್ಯಕ್ಕೆ ಸ್ಪಂದಿಸುವ ಎಲ್ಲ ನೆರವು ನೀಡಲಾಗುತ್ತಿದೆ ಎಂದರು. ಪಿಎಂ ಕಿಸಾನ್ ಸಮ್ಮಾನ್ ನಿಧಿಯನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ ಅವರು, ರೈತರು ಬ್ಯಾಂಕ್ ಖಾತೆಗಳಿಗೆ ನೇರ ಹಣ ವರ್ಗಾಯಿಸುವ ಈ ಯೋಜನೆ ವಿಶ್ವದ ಅತ್ಯಂತ ಅತಿದೊಡ್ಡ ಯೋಜನೆಯಾಗಿದೆ ಎಂದರು. ರೈತರ ಬ್ಯಾಂಕ್ ಖಾತೆಗಳಿಗೆ 14ನೇ ಕಂತನ್ನು ಬಿಡುಗಡೆ ಮಾಡಲಾಗಿದೆ. ಈವರೆಗೆ 2 ಲಕ್ಷ 60 ಸಾವಿರ ಕೋಟಿ ರೂಪಾಯಿಗೂ ಅಧಿಕ ಹಣವನ್ನು ರೈತರ ಖಾತೆಗಳಿಗೆ ವರ್ಗಾಯಿಸಲಾಗಿದೆ. ಇದು ರೈತರಿಗೆ ಅವರಿಗೆ ಇತರೆ ವೆಚ್ಚವನ್ನು ಸರಿದೂಗಿಸಿಕೊಳ್ಳಲು ನೆರವಾಗಲಿದೆ ಎಂದರು. ಸರ್ಕಾರ ರೈತರ ವೆಚ್ಚವನ್ನು ಉಳಿತಾಯ ಮಾಡುತ್ತಿದೆ ಎಂಬುದಕ್ಕೆ ದೇಶದಲ್ಲಿನ ಯೂರಿಯಾ ಬೆಲೆಯೇ ಸಾಕ್ಷಿ ಎಂದು ಅವರು ಹೇಳಿದರು. ಕೊರೊನಾ ಸಾಂಕ್ರಾಮಿಕ ಮತ್ತು ರಷ್ಯಾ ಉಕ್ರೇನ್ ಯುದ್ಧವನ್ನು ಉಲ್ಲೇಖಿಸಿದ ಅವರು, ಇದರಿಂದ ರಸಗೊಬ್ಬರ ವಲಯದಲ್ಲಿ ಭಾರೀ ವ್ಯತ್ಯಯವಾಗಿದೆ. ಆದರೆ ಪ್ರಸಕ್ತ ಸರ್ಕಾರ ಇದರಿಂದ ದೇಶದ ರೈತರಿಗೆ ಯಾವುದೇ ತೊಂದೆಯಾಗದಂತೆ ನೋಡಿಕೊಂಡಿದೆ ಎಂದು ಪ್ರಧಾನಮಂತ್ರಿ ಹೇಳಿದರು.  ರಸಗೊಬ್ಬರಗಳ ಬೆಲೆ ಕುರಿತಂತೆ ಮಾತನಾಡಿದ ಪ್ರಧಾನಮಂತ್ರಿ, ಒಂದು ಚೀಲ ಯೂರಿಯಾ ಬೆಲೆ ಭಾರತದಲ್ಲಿ 266 ರೂ. ಇದ್ದರೆ, ಪಾಕಿಸ್ತಾನದಲ್ಲಿ 800 ರೂ, ಬಾಂಗ್ಲಾದೇಶದಲ್ಲಿ 720 ರೂ, ಚೀನಾದಲ್ಲಿ 2100 ರೂ. ಮತ್ತು ಅಮೆರಿಕದಲ್ಲ 3000 ರೂ.ಗಳಿಗೂ ಅಧಿಕ ದರವಿದೆ ಎಂದರು. “ಯೂರಿಯಾ ಬೆಲೆ ನಮ್ಮ ರೈತರನ್ನು ಬಾಧಿಸಲು ಸರ್ಕಾರ ಬಿಡುವುದಿಲ್ಲ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು” “ನಮ್ಮ ರೈತರು ಯೂರಿಯಾ ಖರೀದಿಸಲು ಹೋದರೆ ಅವರಿಗೆ ಮೋದಿ ಅವರ ಗ್ಯಾರಂಟಿ ಇದೆ ಎನ್ನುವ ನಂಬಿಕೆ ಇರಬೇಕಾಗಿದೆ” ಎಂದು ಹೇಳಿದರು. ಸಿರಿಧಾನ್ಯಗಳ ಉತ್ತೇಜನ ಮತ್ತು ಅವುಗಳ ಬ್ಯಾಂಡಿಂಗ್ ಅನ್ನು ಶ್ರೀ ಅನ್ನ ಯೋಜನೆಯಡಿಯಲ್ಲಿ ಮಾಡುವಂತೆ ಪ್ರಧಾನಮಂತ್ರಿ ಹೇಳಿದರು. ಶ್ರೀ ಅನ್ನ ಯೋಜನೆಯನ್ನು ಉತ್ತೇಜಿಸುವ ಮೂಲಕ ಸಿರಿಧಾನ್ಯಗಳ ಉತ್ಪಾದನೆ, ಸಂಸ್ಕರಣೆ ಮತ್ತು ರಫ್ತು ಹೆಚ್ಚಳವಾಗಿದೆ ಎಂದು ಅವರು ಹೇಳಿದರು. ತಮ್ಮ ಇತ್ತೀಚಿನ ಅಮೆರಿಕ ಭೇಟಿ ವೇಳೆ ಶ್ವೇತಭವನದ ಅಧಿಕೃತ ಔತಣಕೂಟದಲ್ಲಿ ಸಿರಿಧಾನ್ಯಗಳ ಖಾದ್ಯಗಳಿದ್ದವು ಎಂದು ಪ್ರಧಾನಮಂತ್ರಿ ಸ್ಮರಿಸಿದರು.

 

“ಗ್ರಾಮಗಳ ಅಭಿವೃದ್ಧಿಯಾಗದ ಹೊರತು ಭಾರತದ ಅಭಿವೃದ್ಧಿಯಾಗುವುದಿಲ್ಲ. ಗ್ರಾಮಗಳು ಅಭಿವೃದ್ಧಿ ಹೊಂದಿದರೆ ಮಾತ್ರ ಭಾರತ ವಿಕಸಿತವಾಗುತ್ತದೆ. ಅದಕ್ಕಾಗಿಯೇ ಕೇಂದ್ರ ಸರ್ಕಾರ ಕೆಲವೇ ಕೆಲವು ನಗರಗಳಲ್ಲಿರುವ ಎಲ್ಲಾ ಸೌಕರ್ಯಗಳನ್ನು ಗ್ರಾಮಗಳಿಗೂ ಒದಗಿಸುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ” ಎಂದು ಪ್ರಧಾನಮಂತ್ರಿ ಹೇಳಿದರು. ಆರೋಗ್ಯ ಮೂಲಸೌಕರ್ಯ ವಿಸ್ತರಣೆಯನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ, ಕಳೆದ 9 ವರ್ಷಗಳ ವರೆಗೆ ರಾಜಸ್ಥಾನದಲ್ಲಿ ಕೇವಲ 10 ವೈದ್ಯಕೀಯ ಕಾಲೇಜುಗಳಿದ್ದವು. ಇಂದು ಅವುಗಳ ಸಂಖ್ಯೆ 35 ತಲುಪಿದೆ. ಇದರಿಂದ ಸಮೀಪದ ಪ್ರದೇಶಗಳಲ್ಲಿ ವೈದ್ಯಕೀಯ ಸೌಕರ್ಯಗಳು ಸುಧಾರಿಸಿವೆ ಮತ್ತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶಗಳು ದೊರೆಯುತ್ತಿವೆ ಎಂದರು.

ಇಂದು ಉದ್ಘಾಟಿಸಲಾದ ವೈದ್ಯಕೀಯ ಕಾಲೇಜುಗಳು ಮತ್ತು ಇಂದು ಶಂಕುಸ್ಥಾಪನೆ ನೆರವೇರಿಸಲಾದ ವೈದ್ಯಕೀಯ ಕಾಲೇಜುಗಳಿಂದಾಗಿ ರಾಜ್ಯದ ಹಲವು ಪ್ರದೇಶಗಳಲ್ಲಿ ವೈದ್ಯಕೀಯ ಮೂಲಸೌಕರ್ಯ ವೃದ್ಧಿಯಾಗಲಿದೆ ಎಂದರು. ವೈದ್ಯಕೀಯ ಶಿಕ್ಷಣವನ್ನು ಕೈಗೆಟಕುವಂತೆ ಮಾಡಲಾಗಿದೆ ಎಂದ ಪ್ರಧಾನಮಂತ್ರಿ ಅವರು, ಮಾತೃಭಾಷೆಯಲ್ಲಿಯೇ ವೈದ್ಯಕೀಯ ಶಿಕ್ಷಣವನ್ನು ಒದಗಿಸುವ ನಿಟ್ಟಿನಲ್ಲಿ ಹೆಜ್ಜೆ ಇಡಲಾಗಿದೆ ಎಂದು ಉಲ್ಲೇಖಿಸಿದರು. ಇದರಿಂದ ದುರ್ಬಲ ವರ್ಗದವರಿಗೆ ಮತ್ತಷ್ಟು ಅವಕಾಶಗಳನ್ನು ಒದಗಿಸಲಾಗುತ್ತಿದೆ ಎಂದರು. “ಆಂಗ್ಲಭಾಷೆ ತಿಳಿದಿಲ್ಲದಿದ್ದರೂ, ಯಾವುದೇ ಬಡವ್ಯಕ್ತಿಯ ಪುತ್ರ ಅಥವಾ ಪುತ್ರಿ ವೈದ್ಯಕೀಯ ಶಿಕ್ಷಣದಿಂದ ವಂಚಿತವಾಗಲು ಅವಕಾಶವಿಲ್ಲ, ಇದು ನರೇಂದ್ರ ಮೋದಿ ಸರ್ಕಾರದ ಗ್ಯಾರಂಟಿಯಾಗಿದೆ” ಎಂದು ಪ್ರಧಾನಿ ಹೇಳಿದರು.

 

ದಶಕಗಳವರೆಗೆ ಹಲವು ಗ್ರಾಮಗಳಲ್ಲಿ ಉತ್ತಮ ಶಾಲೆಗಳು ಮತ್ತು ಶಿಕ್ಷಣವಿಲ್ಲದೆ, ಹಿಂದುಳಿದಿದ್ದೆವು. ಬಡವರು ಮತ್ತು ಗ್ರಾಮಗಳಿಗೆ ಹಿನ್ನೆಡೆಯಾಗಿತ್ತು. ಹಿಂದುಳಿದ ಮತ್ತು ಬುಡಕಟ್ಟು ಸಮಾಜದ ಮಕ್ಕಳು ತಮ್ಮ ಕನಸುಗಳನ್ನು ಸಾಕಾರ ಮಾಡಿಕೊಳ್ಳಲು ಅವಕಾಶಗಳೇ ಇರಲಿಲ್ಲ ಎಂದು ಹೇಳಿದರು. ಪ್ರಸಕ್ತ ಸರ್ಕಾರ ಶಿಕ್ಷಣದ ಸಂಪನ್ಮೂಲಕ್ಕೆ ಬಜೆಟ್ ನಲ್ಲಿ ಹೆಚ್ಚಳ ಮಾಡಿರುವುದೇ ಅಲ್ಲದೆ, ಏಕಲವ್ಯ ವಸತಿ ಶಾಲೆಗಳ ಆರಂಭ, ಬುಡಕಟ್ಟು ಯುವಜನರಿಗೆ ಭಾರೀ ಅನುಕೂಲಗಳನ್ನು ಸೃಷ್ಟಿಸಿದೆ ಎಂದು ಹೇಳಿದರು.

“ಕನಸುಗಳು ದೊಡ್ಡದಾದಾಗ ಮಾತ್ರ ಯಶಸ್ಸು ದೊಡ್ಡದಾಗುತ್ತದೆ’’ ಎಂದು ಪ್ರಧಾನಿ ಹೇಳಿದರು. ರಾಜಸ್ಥಾನವು ಶತಮಾನಗಳಿಂದ ಜಗತ್ತನ್ನು ಮಂತ್ರಮುಗ್ಧಗೊಳಿಸಿರುವ ರಾಜ್ಯವಾಗಿದೆ ಎಂದ ಪ್ರಧಾನಿ, ರಾಜಸ್ಥಾನವನ್ನು ಆಧುನಿಕ ಅಭಿವೃದ್ಧಿಯ ಉತ್ತುಂಗಕ್ಕೆ ಕೊಂಡೊಯ್ಯುವ ಸಂದರ್ಭದಲ್ಲಿ ನೆಲದ ಪರಂಪರೆಯನ್ನು ಸಂರಕ್ಷಿಸಲು ಒತ್ತು ನೀಡಿದರು. ಅದಕ್ಕಾಗಿಯೇ ರಾಜಸ್ಥಾನದಲ್ಲಿ ಆಧುನಿಕ ಮೂಲಸೌಕರ್ಯಗಳನ್ನು ಸೃಷ್ಟಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಪ್ರಧಾನಮಂತ್ರಿ  ಹೇಳಿದರು. ಕಳೆದ ಕೆಲವು ತಿಂಗಳುಗಳಲ್ಲಿ ಎರಡು ಹೈಟೆಕ್ ಎಕ್ಸ್‌ಪ್ರೆಸ್‌ವೇಗಳ ಉದ್ಘಾಟನೆ ನೆರವೇರಿಸಿದ್ದನ್ನು ಅವರು ಪ್ರಸ್ತಾಪಿಸಿದರು ಮತ್ತು ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ ಮತ್ತು ಅಮೃತಸರ-ಜಾಮ್‌ನಗರ ಎಕ್ಸ್‌ಪ್ರೆಸ್‌ವೇಯ ಪ್ರಮುಖ ವಿಭಾಗದ ಮೂಲಕ ರಾಜಸ್ಥಾನವು ಅಭಿವೃದ್ಧಿಯ ಹೊಸ ಗಾಥೆಯನ್ನು ಬರೆಯುತ್ತಿದೆ ಎಂದು ಹೇಳಿದರು. ರಾಜ್ಯದಿಂದ ಓಡುತ್ತಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಬಗ್ಗೆಯೂ ಅವರು ಪ್ರಸ್ತಾಪಿಸಿದರು. ಸರ್ಕಾರವು ಮೂಲಸೌಕರ್ಯದಲ್ಲಿ ಹೂಡಿಕೆ ಮಾಡುತ್ತಿದೆ ಮತ್ತು ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುತ್ತಿದೆ. ಇದು ರಾಜಸ್ಥಾನಕ್ಕೂ ಹೊಸ ಅವಕಾಶಗಳನ್ನು ತೆರೆಯುತ್ತದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. “ಎಕ್ಸ್‌ಪ್ರೆಸ್‌ವೇಗಳು ಮತ್ತು ಉತ್ತಮ ರೈಲು ಸೌಲಭ್ಯಗಳು ರಾಜಸ್ಥಾನವು 'ಪಧರೋ ಮಹಾರೆ ದೇಶ್' ಎಂದು ಕರೆದಾಗ ಪ್ರವಾಸಿಗರನ್ನು ಸ್ವಾಗತಿಸುತ್ತದೆ" ಎಂದು ಅವರು ಹೇಳಿದರು. ಸ್ವದೇಶ್ ದರ್ಶನ್ ಯೋಜನೆಯಡಿ ಖಾತು ಶ್ಯಾಮ್ ಜಿ ದೇವಸ್ಥಾನದಲ್ಲಿ ಸೌಲಭ್ಯಗಳ ವಿಸ್ತರಣೆಯ ಬಗ್ಗೆಯೂ ಪ್ರಧಾನಿ ಪ್ರಸ್ತಾಪಿಸಿದರು ಮತ್ತು ಶ್ರೀ ಖಾತು ಶ್ಯಾಮ್ ಅವರ ಆಶೀರ್ವಾದದಿಂದ ರಾಜಸ್ಥಾನದ ಅಭಿವೃದ್ಧಿಯು ಹೆಚ್ಚಿನ ವೇಗವನ್ನು ಪಡೆಯುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. "ನಾವೆಲ್ಲರೂ ಇಡೀ ವಿಶ್ವದಲ್ಲಿ ರಾಜಸ್ಥಾನದ ಹೆಮ್ಮೆ ಮತ್ತು ಪರಂಪರೆಗೆ ಹೊಸ ಗುರುತನ್ನು ನೀಡುತ್ತೇವೆ" ಎಂದು ಶ್ರೀ ನರೇಂದ್ರ  ಮೋದಿ ಹೇಳಿದರು.

 

ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ರಾಜಸ್ಥಾನದ ಮುಖ್ಯಮಂತ್ರಿ ಶ್ರೀ ಅಶೋಕ್ ಗೆಹ್ಲೋಟ್ ಅವರು ಕಾರ್ಯಕ್ರಮಕ್ಕೆ ಬರಲು ಸಾಧ್ಯವಾಗದೆ ಇರುವುದಕ್ಕಾಗಿ ಅವರಿಗೆ ಉತ್ತಮ ಆರೋಗ್ಯ ನೀಡಲಿ ಎಂದು ಹಾರೈಸುವ ಮೂಲಕ ಪ್ರಧಾನಮಂತ್ರಿ ತಮ್ಮ ಭಾಷಣವನ್ನು ಮುಕ್ತಾಯಗೊಳಿಸಿದರು.

ರಾಜಸ್ಥಾನದ ರಾಜ್ಯಪಾಲರಾದ ಶ್ರೀ ಕಲ್ರಾಜ್ ಮಿಶ್ರಾ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ, ಶ್ರೀ ನರೇಂದ್ರ ಸಿಂಗ್ ತೋಮರ್, ಕೇಂದ್ರ ಜಲ ಶಕ್ತಿ ಸಚಿವ, ಶ್ರೀ ಗಜೇಂದ್ರ ಸಿಂಗ್ ಶೇಖಾವತ್,  ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ, ಶ್ರೀ ಮನ್ಸುಖ್ ಮಾಂಡವಿಯಾ, ಕೇಂದ್ರ ಕಾನೂನು ಸಚಿವ ಮತ್ತು ನ್ಯಾಯ ಸಚಿವ ಶ್ರೀ ಅರ್ಜುನ್ ರಾಮ್ ಮೇಘವಾಲ್ ಮತ್ತು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಶ್ರೀ ಕೈಲಾಶ್ ಚೌಧರಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹಿನ್ನೆಲೆ

ರೈತರಿಗೆ ಪ್ರಯೋಜನಕಾರಿಯಾದ ಮಹತ್ವದ ಕ್ರಮದಲ್ಲಿ, ಪ್ರಧಾನಮಂತ್ರಿ ಅವರು 1.25 ಲಕ್ಷಕ್ಕೂ ಅಧಿಕ ಪಿಎಂ ಕಿಸಾನ್ ಸಮೃದ್ಧಿ ಕೇಂದ್ರಗಳನ್ನು (ಪಿಎಂಕೆಎಸ್‌ಕೆ) ರಾಷ್ಟ್ರಕ್ಕೆ ಸಮರ್ಪಿಸಿದರು. ಎಲ್ಲಾ ರೈತರ ಅಗತ್ಯಗಳಿಗೆ ಒಂದು ಸ್ಥಳದಲ್ಲಿ ಪರಿಹಾರವನ್ನು ಒದಗಿಸಲು ಪಿಎಂಕೆಎಸ್ ಕೆ  ಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಕೃಷಿ-ಇನ್‌ಪುಟ್‌ (ಗೊಬ್ಬರಗಳು, ಬೀಜಗಳು, ಉಪಕರಣಗಳು)ಗಳ ಮಾಹಿತಿಯಿಂದ ಮಣ್ಣು, ಬೀಜಗಳು ಮತ್ತು ರಸಗೊಬ್ಬರಗಳ ಪರೀಕ್ಷಾ ಸೌಲಭ್ಯಗಳು, ವಿವಿಧ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ, ಪಿಎಂಕೆಎಸ್ ಕೆ ಗಳು ದೇಶದ ರೈತರಿಗೆ ವಿಶ್ವಾಸಾರ್ಹ ಬೆಂಬಲ ವ್ಯವಸ್ಥೆ ಕಲ್ಪಿಸಲು ಉದ್ದೇಶಿಸಲಾಗಿದೆ. ಬ್ಲಾಕ್/ಜಿಲ್ಲಾ ಮಟ್ಟದ ಮಳಿಗೆಗಳಲ್ಲಿ ರಸಗೊಬ್ಬರ ಚಿಲ್ಲರೆ ವ್ಯಾಪಾರಿಗಳ ನಿಗದಿತ ಸಾಮರ್ಥ್ಯದ ನಿರ್ಮಾಣವನ್ನು ಇದು ಖಾತ್ರಿಪಡಿಸುತ್ತವೆ..

ಪ್ರಧಾನಿ ಮಂತ್ರಿ-ಸಲ್ಫರ್ ಲೇಪಿತ ಯೂರಿಯಾದ ಹೊಸ ಬಗೆಯ-ಯೂರಿಯಾ ಗೋಲ್ಡ್ ಅನ್ನು ಬಿಡುಗಡೆ ಮಾಡಿದರು. ಸಲ್ಫರ್ ಲೇಪಿತ ಯೂರಿಯಾದ ಪರಿಚಯವು ಮಣ್ಣಿನಲ್ಲಿ ಗಂಧಕದ ಕೊರತೆಯನ್ನು ಪರಿಹರಿಸುತ್ತದೆ. ಈ ನವೀನ ರಸಗೊಬ್ಬರವು ಬೇವಿನ ಲೇಪಿತ ಯೂರಿಯಾಕ್ಕಿಂತ ಹೆಚ್ಚು ಆರ್ಥಿಕ ಮತ್ತು ಪರಿಣಾಮಕಾರಿಯಾಗಿದೆ, ಸಸ್ಯಗಳಲ್ಲಿ ಸಾರಜನಕದ ಬಳಕೆಯ ದಕ್ಷತೆಯನ್ನು ಸುಧಾರಿಸುತ್ತದೆ, ರಸಗೊಬ್ಬರದ ಬಳಕೆಯನ್ನು ಕಡಿಮೆ ಮಾಡುತ್ತದೆ ಮತ್ತು ಬೆಳೆ ಗುಣಮಟ್ಟವನ್ನು ಹೆಚ್ಚಿಸುತ್ತದೆ.

ಕಾರ್ಯಕ್ರಮದ ವೇಳೆ, ಡಿಜಿಟಲ್ ವಹಿವಾಟಿಗಾಗಿ ಮುಕ್ತ ಜಾಲ (ಒಎನ್ ಡಿಸಿ)ಯಡಿ  1600 ರೈತ ಉತ್ಪಾದಕ ಸಂಸ್ಥೆಗಳ (ಎಫ್ ಪಿಒ)ಗಳನ್ನು ವೇದಿಕೆಗೆ ತರುವುದಕ್ಕೆ ಪ್ರಧಾನಿ ಚಾಲನೆ ನೀಡಿದರು. ಒಎನ್ ಡಿಸಿ-ಡಿಜಿಟಲ್ ಮಾರ್ಕೆಟಿಂಗ್, ಆನ್‌ಲೈನ್ ಪಾವತಿ, ವ್ಯಾಪಾರ-ವ್ಯವಹಾರ (ಬಿ2ಬಿ) ಮತ್ತು ವ್ಯಾಪಾರದಿಂದ ಗ್ರಾಹಕ ವಹಿವಾಟುಗಳಿಗೆ ನೇರ ಪ್ರವೇಶದೊಂದಿಗೆ ಎಫ್ ಪಿಒ ಗಳಿಗೆ ಅಧಿಕಾರ ನೀಡುತ್ತದೆ ಮತ್ತು ಸ್ಥಳೀಯ ಮೌಲ್ಯವರ್ಧನೆಯನ್ನು ಉತ್ತೇಜಿಸುತ್ತದೆ, ಗ್ರಾಮೀಣ ಪ್ರದೇಶಗಳಲ್ಲಿ ಸರಕು ಸಾಗಾಣೆ ವ್ಯವಸ್ಥೆಯ ಅಭಿವೃದ್ಧಿಯನ್ನು ವೇಗಗೊಳಿಸುತ್ತದೆ.

ರೈತರ ಕಲ್ಯಾಣಕ್ಕಾಗಿ ಪ್ರಧಾನಿ ಅವರ ಬದ್ಧತೆಯ ಮತ್ತೊಂದು ಉದಾಹರಣೆಯನ್ನು ಪ್ರದರ್ಶಿಸುವ ಒಂದು ಭಾಗವಾಗಿ, . ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ  (ಪಿಎಂ-ಕಿಸಾನ್) ಅಡಿಯಲ್ಲಿ 14ನೇ ಕಂತಿನ ಮೊತ್ತದ ಸುಮಾರು ರೂ 17,000 ಕೋಟಿಗಳನ್ನು 8.5 ಕೋಟಿಗೂ ಅಧಿಕ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಯ ಮೂಲಕ ಬಿಡುಗಡೆ ಮಾಡಲಾಗಿದೆ.

ಚಿತ್ತೋರ್‌ಗಡ್, ಧೋಲ್‌ಪುರ್, ಸಿರೋಹಿ, ಸಿಕಾರ್ ಮತ್ತು ಶ್ರೀಗಂಗಾನಗರದಲ್ಲಿ ಐದು ಹೊಸ ವೈದ್ಯಕೀಯ ಕಾಲೇಜುಗಳನ್ನು ಉದ್ಘಾಟಿಸಿದ ಪ್ರಧಾನಿ ಮತ್ತು ಬರನ್, ಬುಂಡಿ, ಕರೌಲಿ, ಜುಂಜುನು, ಸವಾಯಿ ಮಾಧೋಪುರ್, ಜೈಸಲ್ಮೇರ್‌ ಮತ್ತು ಟೋಂಕ್ ನಲ್ಲಿ ಏಳು ವೈದ್ಯಕೀಯ ಕಾಲೇಜುಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿರುವುದರಿಂದ ರಾಜಸ್ಥಾನವು ಆರೋಗ್ಯ ಮೂಲಸೌಕರ್ಯದಲ್ಲಿ ಪ್ರಮುಖ ವಿಸ್ತರಣೆಗೆ ಸಾಕ್ಷಿಯಾಗಲಿದೆ. ವೈದ್ಯಕೀಯ ಕಾಲೇಜುಗಳನ್ನು ಕೇಂದ್ರ ಪ್ರಾಯೋಜಿತ ಯೋಜನೆಯಡಿಯಲ್ಲಿ "ಹಾಲಿ ಅಸ್ತಿತ್ವದಲ್ಲಿರುವ ಜಿಲ್ಲಾ/ರೆಫರಲ್ ಆಸ್ಪತ್ರೆಗಳೊಂದಿಗೆ ಹೊಸ ವೈದ್ಯಕೀಯ ಕಾಲೇಜುಗಳ ಸ್ಥಾಪನೆಯನ್ನು ಸಂಯೋಜಿಸಲಾಗುತ್ತಿದೆ’’. ಪ್ರಧಾನಮಂತ್ರಿ ಅವರು ಉದ್ಘಾಟಿಸಿದ ಐದು ವೈದ್ಯಕೀಯ ಕಾಲೇಜುಗಳನ್ನು 1400 ಕೋಟಿ ರೂ.ಗೂ ಹೆಚ್ಚು ಸಂಚಿತ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ, ಶಂಕುಸ್ಥಾಪನೆ ನೆರವೇರಿಸಿದ ಏಳು ವೈದ್ಯಕೀಯ ಕಾಲೇಜುಗಳನ್ನು 2275 ಕೋಟಿ ರೂ.ಗಳ ಒಟ್ಟು ವೆಚ್ಚದಲ್ಲಿ ನಿರ್ಮಿಸಲಾಗುವುದು. 2014 ರವರೆಗೆ ರಾಜಸ್ಥಾನ ರಾಜ್ಯದಲ್ಲಿ ಕೇವಲ 10 ವೈದ್ಯಕೀಯ ಕಾಲೇಜುಗಳು ಇದ್ದವು. ಕೇಂದ್ರ ಸರ್ಕಾರದ ನಿರಂತರ ಪ್ರಯತ್ನದಿಂದ ರಾಜ್ಯದಲ್ಲಿ ವೈದ್ಯಕೀಯ ಕಾಲೇಜುಗಳ ಸಂಖ್ಯೆ 35 ಕ್ಕೆ ಏರಿದೆ, ಇದು ಶೇ. 250ರಷ್ಟು ಹೆಚ್ಚಳವಾಗಿದೆ. ಈ 12 ಹೊಸ ವೈದ್ಯಕೀಯ ಕಾಲೇಜುಗಳ ಸ್ಥಾಪನೆಯಿಂದ ರಾಜ್ಯದಲ್ಲಿ ಎಂಬಿಬಿಎಸ್ ಸೀಟುಗಳ ಸಂಖ್ಯೆ 2013-14ರಲ್ಲಿ 1750 ಸೀಟುಗಳಿಂದ 6275ಕ್ಕೆ  ಏರಿಕೆಯಾಗಲಿದೆ, ಇದು ಶೇ. 258ರಷ್ಟು ಹೆಚ್ಚಳವಾಗಲಿದೆ.

ಅಲ್ಲದೆ, ಉದಯ್‌ ಪುರ, ಬನ್ಸಾವಾರ, ಪ್ರತಾಪ್ ಗಢ ಮತ್ತು ದುಂಗಾರ್ ಪುರ್ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯ ಬುಡಕಟ್ಟು ಜನಸಂಖ್ಯೆ ವಾಸಿಸುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಆರಂಭಿಸಿರುವ ಆರು ಏಕಲವ್ಯ ಮಾದರಿ ಶಾಲೆಗಳನ್ನು ಪ್ರಧಾನಮಂತ್ರಿ ಉದ್ಘಾಟಿಸಿದರು. ಜೋಧ್ ಪುರದ ತಿವ್ರಿಯಲ್ಲಿ ಕೇಂದ್ರೀಯ ವಿದ್ಯಾಲಯವನ್ನೂ ಸಹ ಅವರು ಉದ್ಘಾಟಿಸಿದರು.

 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯ ಕೊತ್ತಲದಿಂದ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಪಠ್ಯಾಂತರ

ಜನಪ್ರಿಯ ಭಾಷಣಗಳು

77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯ ಕೊತ್ತಲದಿಂದ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಪಠ್ಯಾಂತರ
Equity euphoria boosts mutual fund investor additions by 70% in FY24

Media Coverage

Equity euphoria boosts mutual fund investor additions by 70% in FY24
NM on the go

Nm on the go

Always be the first to hear from the PM. Get the App Now!
...
Text of PM Modi's speech at public rally in Udhampur, Jammu & Kashmir
April 12, 2024
After several decades, it is the first time that Terrorism, Bandhs, stone pelting, border skirmishes are not the issues for the upcoming Lok Sabha elections in the state of JandK
For a Viksit Bharat, a Viksit JandK is imminent. The NC, PDP and the Congress parties are dynastic parties who do not wish for the holistic development of JandK
Abrogation of Article 370 has enabled equal constitutional rights for all, record increase in tourism and establishment of I.I.M. and I.I.T. for quality educational prospects in JandK
The I.N.D.I alliance have disregarded the culture as well as the development of India, and a direct example of this is the opposition and boycott of the Pran-Pratishtha of Shri Ram
In the advent of continuing their politics of appeasement, the leaders of I.N.D.I alliance lived in big bungalows but forced Ram Lalla to live in a tent

भारत माता की जय...भारत माता की जय...भारत माता की जय...सारे डुग्गरदेस दे लोकें गी मेरा नमस्कार! ज़ोर कन्ने बोलो...जय माता दी! जोर से बोलो...जय माता दी ! सारे बोलो…जय माता दी !

मैं उधमपुर, पिछले कई दशकों से आ रहा हूं। जम्मू कश्मीर की धरती पर आना-जाना पीछले पांच दशक से चल रहा है। मुझे याद है 1992 में एकता यात्रा के दौरान यहां जो आपने भव्य स्वागत किया था। जो सम्मान किया था। एक प्रकार से पूरा क्षेत्र रोड पर आ गया था। और आप भी जानते हैं। तब हमारा मिशन, कश्मीर के लाल चौक पर तिरंगा फहराने का था। तब यहां माताओं-बहनों ने बहुत आशीर्वाद दिया था।

2014 में माता वैष्णों देवी के दर्शन करके आया था। इसी मैदान पर मैंने आपको गारंटी दी थी कि जम्मू कश्मीर की अनेक पीढ़ियों ने जो कुछ सहा है, उससे मुक्ति दिलाऊंगा। आज आपके आशीर्वाद से मोदी ने वो गारंटी पूरी की है। दशकों बाद ये पहला चुनाव है, जब आतंकवाद, अलगाववाद, पत्थरबाज़ी, बंद-हड़ताल, सीमापार से गोलीबारी, ये चुनाव के मुद्दे ही नहीं हैं। तब माता वैष्णो देवी यात्रा हो या अमरनाथ यात्रा, ये सुरक्षित तरीके से कैसे हों, इसको लेकर ही चिंताएं होती थीं। अगर एक दिन शांति से गया तो अखबार में बड़ी खबर बन जाती थी। आज स्थिति एकदम बदल गई है। आज जम्मू- कश्मीर में विकास भी हो रहा है और विश्वास भी बढ़ रहा है। इसलिए, आज जम्मू-कश्मीर के चप्पे-चप्पे में भी एक ही गूंज सुनाई दे रही है-फिर एक बार...मोदी सरकार ! फिर एक बार...मोदी सरकार ! फिर एक बार...मोदी सरकार !

भाइयों और बहनों,

ये चुनाव सिर्फ सांसद चुनने भर का नहीं है, बल्कि ये देश में एक मजबूत सरकार बनाने का चुनाव है। सरकार मजबूत होती है तो जमीन पर चुनौतियों के बीच भी चुनौतियों को चुनौती देते हुए काम करके दिखाती है। दिखता है कि नहीं दिखता है...दिखता है कि नहीं दिखता है। यहां जो पुराने लोग हैं, उनको 10 साल पहले का मेरा भाषण याद होगा। यहीं मैंने आपसे कहा था कि आप मुझपर भरोसा कीजिए, याद है ना मैंने कहा था कि मुझ पर भरोसा कीजिए। मैं 60 वर्षों की समस्याओं का समाधान करके दिखाउंगा। तब मैंने यहां माताओं-बहनों के सम्मान देने की गारंटी दी थी। गरीब को 2 वक्त के खाने की चिंता न करनी पड़े, इसकी गारंटी दी थी। आज जम्मू-कश्मीर के लाखों परिवारों के पास अगले 5 साल तक मुफ्त राशन की गारंटी है। आज जम्मू कश्मीर के लाखों परिवारों के पास 5 लाख रुपए के मुफ्त इलाज की गारंटी है। 10 वर्ष पहले तक जम्मू कश्मीर के कितने ही गांव थे, जहां बिजली-पानी और सड़क तक नहीं थी। आज गांव-गांव तक बिजली पहुंच चुकी है। आज जम्मू-कश्मीर के 75 प्रतिशत से ज्यादा घरों को पाइप से पानी की सुविधा मिल रही है। इतना ही नहीं ये डिजिटल का जमाना है, डिजिटल कनेक्टिविटी चाहिए, मोबाइल टावर दूर-सुदूर पहाड़ों में लगाने का अभियान चलाया है। 

भाइयों और बहनों,

मोदी की गारंटी यानि गारंटी पूरा होने की गारंटी। आप याद कीजिए, कांग्रेस की कमज़ोर सरकारों ने शाहपुर कंडी डैम को कैसे दशकों तक लटकाए रखा था। जम्मू के किसानों के खेत सूखे थे, गांव अंधेरे में थे, लेकिन हमारे हक का रावी का पानी पाकिस्तान जा रहा था। मोदी ने किसानों को गारंटी दी थी और इसे पूरा भी कर दिखाया है। इससे कठुआ और सांबा के हजारों किसानों को फायदा हुआ है। यही नहीं, इस डैम से जो बिजली पैदा होगी, वो जम्मू कश्मीर के घरों को रोशन करेगी।

भाइयों और बहनों,

मोदी विकसित भारत के लिए विकसित जम्मू-कश्मीर के निर्माण की गारंटी दे रहा है। लेकिन कांग्रेस, नेशनल कॉन्फ्रेंस और पीडीपी और बाकी सारे दल जम्मू-कश्मीर को फिर उन पुराने दिनों की तरफ ले जाना चाहते हैं। इन ‘परिवार-चलित’ पार्टियों ने, परिवार के द्वारा ही चलने वाली पार्टियों ने जम्मू कश्मीर का जितना नुकसान किया, उतना किसी ने नहीं किया है। यहां तो पॉलिटिकल पार्टी मतलब ऑफ द फैमिली, बाई द फैमिली, फॉर द फैमिली। सत्ता के लिए इन्होंने जम्मू कश्मीर में 370 की दीवार बना दी थी। जम्मू-कश्मीर के लोग बाहर नहीं झांक सकते थे और बाहर वाले जम्मू-कश्मीर की तरफ नहीं झांक सकते थे। ऐसा भ्रम बनाकर रखा था कि उनकी जिंदगी 370 है तभी बचेगी। ऐसा झूठ चलाया। ऐसा झूठ चलाया। आपके आशीर्वाद से मोदी ने 370 की दीवार गिरा दी। दीवार गिरा दी इतना ही नहीं, उसके मलबे को भी जमीन में गाड़ दिया है मैंने। 

मैं चुनौती देता हूं हिंदुस्तान की कोई पॉलीटिकल पार्टी हिम्मत करके आ जाए। विशेष कर मैं कांग्रेस को चुनौती देता हूं। वह घोषणा करें कि 370 को वापस लाएंगे। यह देश उनका मुंह तक देखने को तैयार नहीं होगा। यह कैसे-कैसे भ्रम फैलाते हैँ। कैसे-कैसे लोगों को डरा कर रखते हैं। यह कहते थे, 370 हटी तो आग लग जाएगी। जम्मू-कश्मीर हमें छोड़ कर चला जाएगा। लेकिन जम्मू कश्मीर के नौजवानों ने इनको आइना दिखा दिया। अब देखिए, जब यहां उनकी नहीं चली जम्मू-कश्मीर को लोग उनकी असलीयत को जान गए। अब जम्मू-कश्मीर में उनके झूठे वादे भ्रम का मायाजाल नहीं चल पा रही है। तो ये लोग जम्मू-कश्मीर के बाहर देश के लोगों के बीच भ्रम फैलाने का खेल-खेल रहे हैं। यह कहते हैं कि 370 हटने से देश का कोई लाभ नहीं हुआ। जिस राज्य में जाते हैं, वहां भी बोलते हैं। तुम्हारे राज्य को क्या लाभ हुआ, तुम्हारे राज्य को क्या लाभ हुआ? 

370 के हटने से क्या लाभ हुआ है, वो जम्मू-कश्मीर की मेरी बहनों-बेटियों से पूछो, जो अपने हकों के लिए तरस रही थी। यह उनका भाई, यह उनका बेटा, उन्होंने उनके हक वापस दिए हैं। जरा कांग्रेस के लोगों जरा देश भर के दलित नेताओं से मैं कहना चाहता हूं। यहां के हमारे दलित भाई-बहन हमारे बाल्मीकि भाई-बहन देश आजाद हुआ, तब से परेशानी झेल रहे थे। जरा जाकर उन बाल्मीकि भाई-बहनों से पूछो और गड्डा ब्राह्मण, कोहली से पूछो और पहाड़ी परिवार हों, मचैल माता की भूमि में रहने वाले मेरे पाड्डरी साथी हों, अब हर किसी को संविधान में मिले अधिकार मिलने लगे हैं।

अब हमारे फौजियों की वीर माताओं को चिंता नहीं करनी पड़ती, क्योंकि पत्थरबाज़ी नहीं होती। इतना ही नहीं घाटी की माताएं मुझे आशीर्वाद देती हैं, उनको चिंता रहती थी कि बेटा अगर दो चार दिन दिखाई ना दे। तो उनको लगता था कि कहीं गलत हाथों में तो नहीं फंस गया है। आज कश्मीर घाटी की हर माता चैन की नींद सोती है क्योंकि अब उनका बच्चा बर्बाद होने से बच रहा है। 

साथियो, 

अब स्कूल नहीं जलाए जाते, बल्कि स्कूल सजाए जाते हैं। अब यहां एम्स बन रहे हैं, IIT बन रहे हैं, IIM बन रहे हैं। अब आधुनिक टनल, आधुनिक और चौड़ी सड़कें, शानदार रेल का सफर जम्मू-कश्मीर की तकदीर बन रही है। जम्मू हो या कश्मीर, अब रिकॉर्ड संख्या में पर्यटक और श्रद्धालु आने लगे हैं। ये सपना यहां की अनेक पीढ़ियों ने देखा है और मैं आपको गारंटी देता हूं कि आपका सपना, मोदी का संकल्प है। आपके सपनों को पूरा करने के लिए हर पल आपके नाम, आपके सपनों को पूरा करने के लिए हर पल देश के नाम, विकसित भारत का सपना पूरा करने के लिए 24/7, 24/74 फॉर 2047, यह मोदी के गारंटी है। 10 सालों में हमने आतंकवादियों और भ्रष्टाचारियों पर घेरा बहुत ही कसा है। अब आने वाले 5 सालों में इस क्षेत्र को विकास की नई ऊंचाई पर ले जाना है।

साथियों,

सड़क, बिजली, पानी, यात्रा, प्रवास वो तो है। सबसे बड़ी बात है कि जम्मू-कश्मीर का मन बदला है। निराशा में से आशा की और बढ़े हैं। जीवन पूरी तरीके से विश्वास से भरा हुआ है, इतना विकास यहां हुआ है। चारों तरफ विकास हो रहा। लोग कहेंगे, मोदी जी अभी इतना कर लिया। चिंता मत कीजिए, हम आपके साथ हैं। आपका साथ उसके प्रति तो मेरा अपार विश्वास है। मैं यहां ना आता तो भी मुझे पता था कि जम्मू कश्मीर का मेरा नाता इतना गहरा है कि आप मेरे लिए मुझे भी ज्यादा करेंगे। लेकिन मैं तो आया हूं। मां वैष्णो देवी के चरणों में बैठे हुए आप लोगों के बीच दर्शन करने के लिए। मां वैष्णो देवी की छत्रछाया में जीने वाले भी मेरे लिए दर्शन की योग्य होते हैं और जब लोग कहते हैं, कितना कर लिया, इतना हो गया, इतना हो गया और इससे ज्यादा क्या कर सकते हैं। मेरे जम्मू कश्मीर के भाई-बहन अपने पहले इतने बुरे दिन देखे हैं कि आपको यह सब बहुत लग रहा है। बहुत अच्छा लग रहा है लेकिन जो विकास जैसा लग रहा है लेकिन मोदी है ना वह तो बहुत बड़ा सोचता है। यह मोदी दूर का सोचता है। और इसलिए अब तक जो हुआ है वह तो ट्रेलर है ट्रेलर। मुझे तो नए जम्मू कश्मीर की नई और शानदार तस्वीर बनाने के लिए जुट जाना है। 

वो समय दूर नहीं जब जम्मू-कश्मीर में भी विधानसभा के चुनाव होंगे। जम्मू कश्मीर को वापस राज्य का दर्जा मिलेगा। आप अपने विधायक, अपने मंत्रियों से अपने सपने साझा कर पाएंगे। हर वर्ग की समस्याओं का तेज़ी से समाधान होगा। यहां जो सड़कों और रेल का काम चल रहा है, वो तेज़ी से पूरा होगा। देश-विदेश से बड़ी-बड़ी कंपनियां, बड़ी-बड़ी फैक्ट्रियां औऱ ज्यादा संख्या में आएंगी। जम्मू कश्मीर, टूरिज्म के साथ ही sports और start-ups के लिए जाना जाएगा, इस संकल्प को लेकर मुझे जम्मू कश्मीर को आगे बढ़ाना है। 

भाइयों और बहनों,

ये ‘परिवार-चलित’ परिवारवादी , परिवार के लिए जीने मरने वाली पार्टियां, विकास की भी विरोधी है और विरासत की भी विरोधी है। आपने देखा होगा कि कांग्रेस राम मंदिर से कितनी नफरत करती है। कांग्रेस और उनकी पूरा इको सिस्टम अगर मुंह से कहीं राम मंदिर निकल गया। तो चिल्लाने लग जाती है, रात-दिन चिल्लाती है कि राम मंदिर बीजेपी के लिए चुनावी मुद्दा है। राम मंदिर ना चुनाव का मुद्दा था, ना चुनाव का मुद्दा है और ना कभी चुनाव का मुद्दा बनेगा। अरे राम मंदिर का संघर्ष तो तब से हो रहा था, जब कि भाजपा का जन्म भी नहीं हुआ था। राम मंदिर का संघर्ष तो तब से हो रहा था जब यहां अंग्रेजी सल्तनत भी नहीं आई थी। राम मंदिर का संघर्ष 500 साल पुराना है। जब कोई चुनाव का नामोनिशान नहीं था। जब विदेशी आक्रांताओं ने हमारे मंदिर तोड़े, तो भारत के लोगों ने अपने धर्मस्थलों को बचाने की लड़ाई लड़ी थी। वर्षों तक, लोगों ने अपनी ही आस्था के लिए क्या-क्या नहीं झेला। कांग्रेस और उसके सहयोगी दलों के नेता बड़े-बड़े बंगलों में रहते थे, लेकिन जब रामलला के टेंट बदलने की बात आती थी तो ये लोग मुंह फेर लेते थे, अदालतों की धमकियां देते थे। बारिश में रामलला का टेंट टपकता रहता था और रामलला के भक्त टेंट बदलवाने के लिए अदालतों के चक्कर काटते रहते थे। ये उन करोड़ों-अरबों लोगों की आस्था पर आघात था, जो राम को अपना आराध्य कहते हैं। हमने इन्हीं लोगों से कहा कि एक दिन आएगा, जब रामलला भव्य मंदिर में विराजेंगे। और तीन बातें कभी भूल नहीं सकते। एक 500 साल के अविरत संघर्ष के बाद ये हुआ। आप सहमत हैं। 500 साल के अविरत संघर्ष के बाद हुआ है, आप सहमत हैं। दूसरा, पूरी न्यायिक प्रक्रिया की कसौटी से कस करके, न्याय के तराजू से तौल करके अदालत के निर्णय से ये काम हुआ है, सहमत हैं। तीसरा, ये भव्य राम मंदिर सरकारी खजाने से नहीं, देश के कोटि-कोटि नागरिकों ने पाई-पाई दान देकर बनाया है। सहमत हैं। 

जब उस मंदिर की प्राण-प्रतिष्ठा हुई तो पिछले 70 साल में कांग्रेस ने जो भी पाप किए थे, उनके साथियों ने जो रुकावटें डाली थी, सबको माफ करके, राम मंदिर के जो ट्रस्टी हैं, वो खुद कांग्रेस वालों के घर गए, इंडी गठबंधन वालों के घर गए, उनके पुराने पापों को माफ कर दिया। उन्होंने कहा राम आपके भी हैं, आप प्राण-प्रतिष्ठा में जरूर पधारिये। सम्मान के साथ बुलाया। लेकिन उन्होंने इस निमंत्रण को भी ठुकरा दिया। कोई बताए, वो कौन सा चुनावी कारनामा था, जिसके दबाव में आपने राम मंदिर के प्राण-प्रतिष्ठा के निमंत्रण को ठुकरा दिया। वो कौन सा चुनावी खेल था कि आपने प्राण-प्रतिष्ठा के पवित्र कार्य को ठुकरा दिया। और ये कांग्रेस वाले, इंडी गठबंधन वाले इसे चुनाव का मुद्दा कहते हैं। उनके लिए ये चुनावी मुद्दा था, देश के लिए ये श्रद्धा का मुद्दा था। ये धैर्य की विजय का मुद्दा था। ये आस्था और विश्वास का मु्द्दा था। ये 500 वर्षों की तपस्या का मुद्दा था।

मैं कांग्रेस से पूछता हूं...आप ने अपनी सरकार के समय दिन-रात इसका विरोध किया, तब ये किस चुनाव का मुद्दा था? लेकिन आप राम भक्तों की आस्था देखिए। मंदिर बना तो ये लोग इंडी गठबंधन वालें के घर प्राण प्रतिष्ठा का आमंत्रण देने खुद गए। जिस क्षण के लिए करोड़ों लोगों ने इंतजार किया, आप बुलाने पर भी उसे देखने नहीं गए। पूरी दुनिया के रामभक्तों ने आपके इस अहंकार को देखा है। ये किस चुनावी मंशा को देखा है। ये चुनावी मंशा थी कि आपने प्राण प्रतिष्ठा का आमंत्रण ठुकरा दिया। आपके लिए चुनाव का खेल है। ये किस तरह की तुष्टिकरण की राजनीति थी। भगवान राम को काल्पनिक कहकर कांग्रेस किसे खुश करना चाहती थी?

साथियों, 

कांग्रेस और इंडी गठबंधन के लोगों को देश के ज्यादातर लोगों की भावनाओं की कोई परवाह नहीं है। इन्हें लोगों की भावनाओं से खिलवाड़ करने में मजा आता है। ये लोग सावन में एक सजायाफ्ता, कोर्ट ने जिसे सजा की है, जो जमानत पर है, ऐसे मुजरिम के घर जाकर के सावन के महीने में मटन बनाने का मौज ले रहे हैं इतना ही नहीं उसका वीडियो बनाकर के देश के लोगों को चिढ़ाने का काम करते हैं। कानून किसी को कुछ खाने से नहीं रोकता। ना ही मोदी रोकता है। सभी को स्वतंत्रता है की जब मन करें वेज खायें या नॉन-वेज खाएं। लेकिन इन लोगों की मंशा दूसरी होती है। जब मुगल यहां आक्रमण करते थे ना तो उनको सत्ता यानि राजा को पराजित करने से संतोष नहीं होता था, जब तक मंदिर तोड़ते नहीं थे, जब तक श्रद्धास्थलों का कत्ल नहीं करते थे, उसको संतोष नहीं होता था, उनको उसी में मजा आता था वैसे ही सावन के महीने में वीडियो दिखाकर वो मुगल के लोगों के जमाने की जो मानसिकता है ना उसके द्वारा वो देश के लोगों को चिढ़ाना चाहते हैं, और अपनी वोट बैंक पक्की करना चाहते हैं। ये वोट बैंक के लिए चिढ़ाना चाहते हैं । आप किसे चिढ़ाना चाहते हैंनवरात्र के दिनों में आपका नॉनवेज खाना,  आप किस मंशा से वीडियो दिखा-दिखा कर के लोगों की भावनाओं को चोट पहुंचा करके, किसको खुश करने का खेल कर रहे हो।  

मैं जानता हूं मैं  जब आज ये  बोल रहा हूं, उसके बाद ये लोग पूरा गोला-बारूद लेकर गालियों की बौछार मुझ पर चलाएंगे, मेरे पीछे पड़ जाएंगे। लेकिन जब बात  बर्दाश्त के बाहर हो जाती है, तो लोकतंत्र में मेरा दायित्व बनता है कि सही चीजों का सही पहलू बताऊं। और मैं वो अपना कर्तव्य पूरा कर रहा हूं। ये लोग ऐसा जानबूझकर इसलिए करते हैं ताकि इस देश की मान्यताओं पर हमला हो। ये इसलिए होता है, ताकि एक बड़ा वर्ग इनके वीडियो को देखकर चिढ़ता रहे, असहज होता रहे। समस्या इस अंदाज से है। तुष्टिकरण से आगे बढ़कर ये इनकी मुगलिया सोच है। लेकिन ये लोग नहीं जानते, जनता जब जवाब देती है तो बड़े-बड़े शाही खानदान के युवराजों को बेदखल होना पड़ता है।

साथियों, 

ये जो परिवार-चलित पार्टियां हैं, ये जो भ्रष्टाचारी हैं, अब इनको फिर मौका नहीं देना है। उधमपुर से डॉ. जितेंद्र सिंह और जम्मू से जुगल किशोर जी को नया रिकॉर्ड बनाकर सांसद भेजना है। जीत के बाद दोबारा जब उधमपुर आऊं तो, स्वादिष्ट कलाड़ी का आनंद ज़रूर लूंगा। आपको मेरा एक काम और करना है। इतना निकट आकर मैं माता वैष्णों देवी जा नहीं पा रहा हूं। तो माता वैष्णों देवी को क्षमा मांगिए और मेरी तरफ से मत्था टेकिए। दूसरा एक काम करोगे। एक और काम करोगे, मेरा एक और काम करोगे, पक्का करोगे। देखिए आपको घर-घर जाना है। कहना मोदी जी उधमपुर आए थे, मोदी जी ने आपको प्रणाम कहा है, राम-राम कहा है। जय माता दी कहा है, कहोगे। मेरे साथ बोलिए

भारत माता की जय !

भारत माता की जय !

भारत माता की जय ! 

बहुत-बहुत धन्यवाद