"ಹೊಸ ಶಕ್ತಿ, ಸ್ಫೂರ್ತಿ ಮತ್ತು ಸಂಕಲ್ಪಗಳ ಬೆಳಕಿನಲ್ಲಿ ಹೊಸ ಅಧ್ಯಾಯ ಪ್ರಾರಂಭವಾಗುತ್ತಿದೆ"
“ಇಡೀ ಪ್ರಪಂಚದ ಕಣ್ಣುಗಳು ಇಂದು ಭಾರತದ ಮೇಲಿವೆ. ಭಾರತದ ಬಗೆಗಿನ ಜಗತ್ತಿನ ದೃಷ್ಟಿಕೋನ ಬದಲಾಗಿದೆ”
"ಹಲವು ನಿಲ್ದಾಣಗಳ ಆಧುನೀಕರಣವು ದೇಶದಲ್ಲಿ ಅಭಿವೃದ್ಧಿಗೆ ಹೊಸ ವಾತಾವರಣವನ್ನು ಸೃಷ್ಟಿಸುತ್ತದೆ"
"ಈ ಅಮೃತ ರೈಲು ನಿಲ್ದಾಣಗಳು ಪರಂಪರೆಯ ಬಗ್ಗೆ ಗೌರವದ ಸಂಕೇತವಾಗಿವೆ ಮತ್ತು ಪ್ರತಿಯೊಬ್ಬ ನಾಗರಿಕರಲ್ಲಿ ಹೆಮ್ಮೆಯನ್ನು ತುಂಬುತ್ತವೆ"
"ಭಾರತೀಯ ರೈಲ್ವೇಯನ್ನು ಆಧುನಿಕ ಮತ್ತು ಪರಿಸರ ಸ್ನೇಹಿಯನ್ನಾಗಿ ಮಾಡುವುದು ನಮ್ಮ ಆದ್ಯತೆಯಾಗಿದೆ"
"ಈಗ ಉತ್ತಮ ಗುರುತು ಮತ್ತು ಆಧುನಿಕ ಭವಿಷ್ಯದೊಂದಿಗೆ ರೈಲನ್ನು ಜೋಡಿಸುವುದು ನಮ್ಮ ಜವಾಬ್ದಾರಿಯಾಗಿದೆ"
"ನವ ಭಾರತದಲ್ಲಿ, ಅಭಿವೃದ್ಧಿಯು ಯುವಕರಿಗೆ ಹೊಸ ಅವಕಾಶಗಳಿಗೆ ದಾರಿ ಮಾಡಿಕೊಡುತ್ತಿದೆ ಮತ್ತು ಯುವಜನರು ದೇಶದ ಅಭಿವೃದ್ಧಿಗೆ ಹೊಸ ರೆಕ್ಕೆಗಳನ್ನು ನೀಡುತ್ತಿದ್ದಾರೆ"
“ಆಗಸ್ಟ್ ತಿಂಗಳು ಕ್ರಾಂತಿ, ಕೃತಜ್ಞತೆ ಮತ್ತು ಕರ್ತವ್ಯದ ತಿಂಗಳು. ಭಾರತದ ಇತಿಹಾಸಕ್ಕೆ ಹೊಸ ದಿಕ್ಕನ್ನು ನೀಡಿದ ಅನೇಕ ಐತಿಹಾಸಿಕ ಘಟನೆಗಳು ಆಗಸ್ಟ್‌ನಲ್ಲಿ ನಡೆದಿವೆ.”
“ನಮ್ಮ ಸ್ವಾತಂತ್ರ್ಯ ದಿನವು ನಮ್ಮ ತ್ರಿವರ್ಣ ಧ್ವಜ ಮತ್ತು ನಮ್ಮ ರಾಷ್ಟ್ರದ ಪ್ರಗತಿಗೆ ನಮ್ಮ ಬದ್ಧತೆಯನ್ನು ಪುನರುಚ್ಚರಿಸುವ ದಿನವಾಗಿದೆ. ಕಳೆದ ವರ್ಷದಂತೆ ಈ ಬಾರಿಯೂ ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜವನ್ನು ಹಾರಿಸಬೇಕು.”

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಐತಿಹಾಸಿಕ ಕ್ರಮವಾಗಿ, ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ದೇಶಾದ್ಯಂತ 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಶಂಕುಸ್ಥಾಪನೆ ನೆರವೇರಿಸಿದರು. 24,470 ಕೋಟಿ ರೂ.ಗಿಂತ ಹೆಚ್ಚಿನ ವೆಚ್ಚದಲ್ಲಿ ಈ 508 ನಿಲ್ದಾಣಗಳನ್ನು ಮರು ಅಭಿವೃದ್ಧಿಪಡಿಸಲಾಗುತ್ತಿದೆ. ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ತಲಾ 55, ಬಿಹಾರದಲ್ಲಿ 49, ಮಹಾರಾಷ್ಟ್ರದಲ್ಲಿ 44, ಪಶ್ಚಿಮ ಬಂಗಾಳದಲ್ಲಿ 37, ಮಧ್ಯಪ್ರದೇಶದಲ್ಲಿ 34, ಅಸ್ಸಾಂನಲ್ಲಿ 32, ಒಡಿಶಾದಲ್ಲಿ 25, ಪಂಜಾಬ್‌ನಲ್ಲಿ 22, ಗುಜರಾತ್ ಮತ್ತು ತೆಲಂಗಾಣದಲ್ಲಿ ತಲಾ 21, ಜಾರ್ಖಂಡ್‌ನಲ್ಲಿ 20, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ತಲಾ 18, ಹರಿಯಾಣದಲ್ಲಿ 15, ಕರ್ನಾಟಕದಲ್ಲಿ 13 ಸೇರಿದಂತೆ 27 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, “ವಿಕಸಿತ ಭಾರತದ ಗುರಿಯತ್ತ ವೇಗವಾಗಿ ಸಾಗುತ್ತಿರುವ ನವ ಭಾರತವು ಅಮೃತ ಕಾಲದ ಆರಂಭದಲ್ಲಿದೆ. ಅದರಲ್ಲಿ ಹೊಸ ಶಕ್ತಿ, ಹೊಸ ಸ್ಫೂರ್ತಿಗಳು ಮತ್ತು ಹೊಸ ಸಂಕಲ್ಪಗಳಿವೆ" ಎಂದು ಹೇಳಿದರು.  ಇದು ಭಾರತೀಯ ರೈಲ್ವೇ ಇತಿಹಾಸದಲ್ಲಿ ಹೊಸ ಅಧ್ಯಾಯದ ಆರಂಭವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ದೇಶದ ಸುಮಾರು 1300 ಪ್ರಮುಖ ರೈಲು ನಿಲ್ದಾಣಗಳು ಈಗ ಆಧುನಿಕತೆಯೊಂದಿಗೆ ‘ಅಮೃತ ಭಾರತ ನಿಲ್ದಾಣ’ಗಳಾಗಿ ಮರುಅಭಿವೃದ್ಧಿಯಾಗಲಿವೆ ಮತ್ತು ಹೊಸ ರೂಪ ಪಡೆಯಲಿವೆ ಎಂದು ಅವರು ಹೇಳಿದರು. 1300 ರೈಲು ನಿಲ್ದಾಣಗಳ ಪೈಕಿ ಇಂದು ಸುಮಾರು 25,000 ಕೋಟಿ ರೂಪಾಯಿ ವೆಚ್ಚದಲ್ಲಿ 508 ಅಮೃತ ಭಾರತ ನಿಲ್ದಾಣಗಳಿಗೆ ಶಂಕುಸ್ಥಾಪನೆ ಮಾಡಲಾಗುತ್ತಿದೆ ಎಂದು ಪ್ರಧಾನಿ ಮಾಹಿತಿ ನೀಡಿದರು. ಪುನರಾಭಿವೃದ್ಧಿ ಯೋಜನೆಯು ರೈಲ್ವೆ ಮತ್ತು ಸಾಮಾನ್ಯ ನಾಗರಿಕರ ಜೊತೆಗೆ ದೇಶದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಬೃಹತ್ ಅಭಿಯಾನವಾಗಲಿದೆ ಎಂದು ಅವರು ಒತ್ತಿ ಹೇಳಿದರು. ಇದರ ಪ್ರಯೋಜನವನ್ನು ದೇಶದ ಎಲ್ಲಾ ರಾಜ್ಯಗಳಿಗೂ ವಿಸ್ತರಿಸಲಾಗುವುದು ಎಂದು ತಿಳಿಸಿದ ಪ್ರಧಾನಿ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಸುಮಾರು 4,000 ಕೋಟಿ ರೂಪಾಯಿ ವೆಚ್ಚದಲ್ಲಿ 55 ಅಮೃತ ನಿಲ್ದಾಣಗಳು, ಮಧ್ಯಪ್ರದೇಶದಲ್ಲಿ 1,000 ಕೋಟಿ ರೂಪಾಯಿ ವೆಚ್ಚದಲ್ಲಿ 34 ನಿಲ್ದಾಣಗಳು, 1,500 ಕೋಟಿ ರೂ. ವೆಚ್ಚದಲ್ಲಿ ಮಹಾರಾಷ್ಟ್ರದ 44 ನಿಲ್ದಾಣಗಳು ಮತ್ತು ತಮಿಳುನಾಡು, ಕರ್ನಾಟಕ ಮತ್ತು ಕೇರಳದ ಪ್ರಮುಖ ರೈಲು ನಿಲ್ದಾಣಗಳನ್ನು ಪುನರಾಭಿವೃದ್ಧಿಗೊಳಿಸಲಾಗುವುದು ಎಂದರು. ಪ್ರಧಾನಿಯವರು ಈ ಐತಿಹಾಸಿಕ ಯೋಜನೆಗಾಗಿ ರೈಲ್ವೆ ಸಚಿವಾಲಯವನ್ನು ಶ್ಲಾಘಿಸಿದರು ಮತ್ತು ನಾಗರಿಕರನ್ನು ಅಭಿನಂದಿಸಿದರು. 

ವಿಶ್ವದಲ್ಲಿ ಬೆಳೆಯುತ್ತಿರುವ ಭಾರತದ ಸ್ಥಾನಮಾನವನ್ನು ಪ್ರಧಾನಮಂತ್ರಿಯವರು ಒತ್ತಿ ಹೇಳಿದರು ಮತ್ತು ಭಾರತದ ಬಗ್ಗೆ ಬೆಳೆಯುತ್ತಿರುವ ಜಾಗತಿಕ ಆಸಕ್ತಿಯನ್ನು ಎತ್ತಿ ತೋರಿಸಿದರು. ಇದಕ್ಕೆ ಎರಡು  ಪ್ರಮುಖ ಅಂಶಗಳಿಗೆ ಅವರು ಮನ್ನಣೆ ಶ್ರೇಯ ನೀಡಿದರು. ಮೊದಲನೆಯದಾಗಿ, ಭಾರತದ ಜನರಿಂದ ಸ್ಥಿರವಾದ ಪೂರ್ಣ ಬಹುಮತದ ಸರ್ಕಾರದ ಆಯ್ಕೆ ಮತ್ತು ಎರಡನೆಯದಾಗಿ, ಸರ್ಕಾರವು ಮಹತ್ವಾಕಾಂಕ್ಷೆಯ ನಿರ್ಧಾರಗಳನ್ನು ತೆಗೆದುಕೊಂಡಿರುವುದು ಮತ್ತು ಅವರ ಆಕಾಂಕ್ಷೆಗಳಿಗೆ ಅನುಗುಣವಾಗಿ ಜನರ ಅಭಿವೃದ್ಧಿಗೆ ಅವಿರತವಾಗಿ ಶ್ರಮಿಸುತ್ತಿರುವುದು. ಭಾರತೀಯ ರೈಲ್ವೇ ಕೂಡ ಇದನ್ನು ಸಂಕೇತಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಪ್ರಧಾನಿಯವರು ತಮ್ಮ ಅಂಶಗಳನ್ನು ವಿವರಿಸಲು ರೈಲ್ವೆ ವಲಯದ ವಿಸ್ತರಣೆಯ ಸಂಗತಿಗಳನ್ನು ಪ್ರಸ್ತುತಪಡಿಸಿದರು. ಕಳೆದ 9 ವರ್ಷಗಳಲ್ಲಿ, ದಕ್ಷಿಣ ಆಫ್ರಿಕಾ, ಉಕ್ರೇನ್, ಪೋಲೆಂಡ್, ಬ್ರಿಟನ್ ಮತ್ತು ಸ್ವೀಡನ್‌ನ ಒಟ್ಟು ರೈಲ್ವೆ ಜಾಲಕ್ಕಿಂತ ದೇಶದಲ್ಲಿ ಹಾಕಲಾದ ರೈಲು ಹಳಿಗಳ ಉದ್ದವು ಹೆಚ್ಚು ಎಂದು ಅವರು ಹೇಳಿದರು. ಭಾರತೀಯ ರೈಲ್ವೇಯಲ್ಲಿನ ವಿಸ್ತರಣೆಯ ಪ್ರಮಾಣದ ಬಗ್ಗೆ ವಿವರಿಸಿದ ಪ್ರಧಾನಿಯವರು, ಕಳೆದ ವರ್ಷವೊಂದರಲ್ಲೇ ಭಾರತವು ದಕ್ಷಿಣ ಕೊರಿಯಾ, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾದ ಒಟ್ಟು ರೈಲ್ವೆ ಜಾಲಕ್ಕಿಂತ ಹೆಚ್ಚಿನ ರೈಲು ಹಳಿಗಳನ್ನು ಹಾಕಿದೆ ಎಂದು ಹೇಳಿದರು. ಇಂದು ರೈಲು ಪ್ರಯಾಣವನ್ನು ಸುಲಭವಾಗಿಸುವ ಜತೆಗೆ ಹಿತಕರವಾಗಿಸಲು ಸರಕಾರ ಶ್ರಮಿಸುತ್ತಿದೆ ಎಂದರು. "ರೈಲಿನಿಂದ ನಿಲ್ದಾಣದವರೆಗೆ ಸಾಧ್ಯವಾದಷ್ಟು ಉತ್ತಮ ಅನುಭವವನ್ನು ಒದಗಿಸುವ ನಮ್ಮ ಪ್ರಯತ್ನವಾಗಿದೆ" ಎಂದು ಅವರು ಹೇಳಿದರು. ಪ್ಲಾಟ್‌ಫಾರ್ಮ್‌ಗಳಲ್ಲಿ ಉತ್ತಮ ಆಸನಗಳು, ಕಾಯುವ ಕೊಠಡಿಗಳ ನವೀಕರಣ ಮತ್ತು ಸಾವಿರಾರು ನಿಲ್ದಾಣಗಳಲ್ಲಿ ಉಚಿತ ವೈಫೈ ಕುರಿತು ಅವರು ಪ್ರಸ್ತಾಪಿಸಿದರು.

ಭಾರತೀಯ ರೈಲ್ವೇಯಲ್ಲಿ ನಡೆದಿರುವ ಅಗಾಧ ಬೆಳವಣಿಗೆಗಳನ್ನು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಇಂದಿನ ಕಾರ್ಯಕ್ರಮದ ಭವ್ಯವಾದ ಸಂಘಟನೆಯಿಂದಾಗಿ ರೈಲ್ವೆಯ ಸಾಧನೆಗಳನ್ನು ಇಂದು ಹೆಚ್ಚು ವಿವರವಾಗಿ ಹೇಳಲಾಗುತ್ತಿದೆ ಎಂದರು.

ರೈಲ್ವೆಯನ್ನು ದೇಶದ ಜೀವನಾಡಿ ಎಂದು ಬಣ್ಣಿಸಿದ ಪ್ರಧಾನಿ, ಇದರೊಂದಿಗೆ ನಗರಗಳ ಗುರುತನ್ನು ನಗರದ ಹೃದಯ ಭಾಗವಾಗಿರುವ ರೈಲ್ವೆ ನಿಲ್ದಾಣಗಳೊಂದಿಗೆ ಕೂಡ ಜೋಡಿಸಲಾಗಿದೆ. ಇದರಿಂದ ನಿಲ್ದಾಣಗಳಿಗೆ ಆಧುನಿಕ ರೂಪ ನೀಡುವುದು ಅನಿವಾರ್ಯವಾಗಿದೆ ಎಂದು ಹೇಳಿದರು.

ಹಲವಾರು ನಿಲ್ದಾಣಗಳ ಆಧುನೀಕರಣವು ದೇಶದಲ್ಲಿ ಅಭಿವೃದ್ಧಿಗೆ ಹೊಸ ವಾತಾವರಣವನ್ನು ಸೃಷ್ಟಿಸುತ್ತದೆ ಮತ್ತು ನಗರಗಳಿಗೆ ಭೇಟಿ ನೀಡುವವರಿಗೆ ಅದರ ಬಗ್ಗೆ ಉತ್ತಮ ಮೊದಲ ಆಕರ್ಷಣೆಯನ್ನು ಉಂಟುಮಾಡುತ್ತದೆ ಎಂದು ಪ್ರಧಾನಿ ಹೇಳಿದರು. ನವೀಕರಿಸಿದ ನಿಲ್ದಾಣಗಳು ಪ್ರವಾಸೋದ್ಯಮವನ್ನು ಹೆಚ್ಚಿಸುವುದಲ್ಲದೆ, ಹತ್ತಿರದ ಪ್ರದೇಶಗಳಲ್ಲಿ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತವೆ. ‘ಒಂದು ನಿಲ್ದಾಣ ಒಂದು ಉತ್ಪನ್ನʼಯೋಜನೆಯು ಕುಶಲಕರ್ಮಿಗಳಿಗೆ ಸಹಾಯ ಮಾಡುತ್ತದೆ ಮತ್ತು ಜಿಲ್ಲೆಯ ಬ್ರ್ಯಾಂಡಿಂಗ್‌ಗೆ ಸಹಾಯ ಮಾಡುತ್ತದೆ ಎಂದು ಹೇಳಿದರು.

ಸ್ವಾತಂತ್ರ್ಯದ ಅಮೃತ ಕಾಲದಲ್ಲಿ ಪರಂಪರೆಯ ಬಗ್ಗೆ ಹೆಮ್ಮೆ ಪಡುವ ಸಂಕಲ್ಪವನ್ನು ದೇಶವೂ ತೆಗೆದುಕೊಂಡಿದೆ ಎಂದು ಪ್ರಧಾನಿ ಒತ್ತಿ ಹೇಳಿದರು. "ಈ ಅಮೃತ ರೈಲು ನಿಲ್ದಾಣಗಳು ಪರಂಪರೆಯ ಬಗ್ಗೆ ಹೆಮ್ಮೆ ಪಡುವ ಸಂಕೇತವಾಗಿವೆ ಮತ್ತು ಪ್ರತಿಯೊಬ್ಬ ನಾಗರಿಕರಲ್ಲಿ ಹೆಮ್ಮೆಯನ್ನು ತುಂಬುತ್ತವೆ" ಎಂದು ಶ್ರೀ ಮೋದಿ ಹೇಳಿದರು. ಅಮೃತ ನಿಲ್ದಾಣಗಳು ಭಾರತದ ಸಾಂಸ್ಕೃತಿಕ ಮತ್ತು ಸ್ಥಳೀಯ ಪರಂಪರೆಯ ಕಿರುನೋಟವನ್ನು ಪ್ರಸ್ತುತಪಡಿಸುತ್ತವೆ ಎಂದು ಪ್ರಧಾನಮಂತ್ರಿ ಹೇಳಿದರು. ಅದಕ್ಕೆ ಉದಾಹರಣೆಗಳನ್ನು ನೀಡಿದ ಅವರು, ಜೈಪುರ ರೈಲು ನಿಲ್ದಾಣಗಳು ರಾಜಸ್ಥಾನದ ಹವಾ ಮಹಲ್ ಮತ್ತು ಅಮೇರ್ ಕೋಟೆಯ ನೋಟವನ್ನು ಹೊಂದಿದ್ದು, ಜಮ್ಮು ಮತ್ತು ಕಾಶ್ಮೀರದ ಜಮ್ಮು ತಾವಿ ರೈಲು ನಿಲ್ದಾಣವು ಪ್ರಸಿದ್ಧ ರಘುನಾಥ ಮಂದಿರದಿಂದ ಪ್ರೇರಿತವಾಗಿದೆ ಮತ್ತು ನಾಗಾಲ್ಯಾಂಡ್‌ನ ದಿಮಾಪುರ್ ನಿಲ್ದಾಣವು ಈ ಪ್ರದೇಶದ 16 ವಿವಿಧ ಬುಡಕಟ್ಟುಗಳ ಸ್ಥಳೀಯ ವಾಸ್ತುಶಿಲ್ಪವನ್ನು ಪ್ರದರ್ಶಿಸುತ್ತದೆ ಎಂದು ಪ್ರಧಾನಿ ಹೇಳಿದರು. ಪ್ರತಿಯೊಂದು ರೈಲು ನಿಲ್ದಾಣವು ತನ್ನ ಪ್ರಾಚೀನ ಪರಂಪರೆಯ ಜೊತೆಗೆ ದೇಶದ ಆಧುನಿಕ ಆಶಯಗಳ ಸಂಕೇತವಾಗಲಿದೆ ಎಂದು ಅವರು ಹೇಳಿದರು. ಐತಿಹಾಸಿಕ ಮತ್ತು ಯಾತ್ರಾ ಸ್ಥಳಗಳನ್ನು ಸಂಪರ್ಕಿಸುವ ‘ಭಾರತ ಗೌರವ್ ಯಾತ್ರಾ ರೈಲುಗಳನ್ನು’ಬಲಪಡಿಸುವ ಬಗ್ಗೆ ಪ್ರಧಾನಿ ಪ್ರಸ್ತಾಪಿಸಿದರು.

ದೇಶದ ಆರ್ಥಿಕ ಬೆಳವಣಿಗೆಗೆ ವೇಗ ನೀಡುವಲ್ಲಿ ರೈಲ್ವೇಯ ಪಾತ್ರವನ್ನು ಒತ್ತಿ ಹೇಳಿದ ಪ್ರಧಾನಿ, ರೈಲ್ವೇಯಲ್ಲಿ ದಾಖಲೆಯ ಹೂಡಿಕೆ ಮಾಡಲಾಗಿದೆ ಎಂದು ಹೇಳಿದರು. ಈ ವರ್ಷ, ರೈಲ್ವೆಗೆ 2.5 ಲಕ್ಷ ಕೋಟಿ ರೂ.ಗಿಂತ ಹೆಚ್ಚು ಬಜೆಟ್ ಒದಗಿಸಲಾಗಿದೆ. ಇದು 2014 ಕ್ಕೆ ಹೋಲಿಸಿದರೆ ಐದು ಪಟ್ಟು ಹೆಚ್ಚಾಗಿದೆ. ಇಂದು, ಸಮಗ್ರ ವಿಧಾನದೊಂದಿಗೆ ರೈಲ್ವೆಯ ಸಂಪೂರ್ಣ ಅಭಿವೃದ್ಧಿಗೆ ಕೆಲಸ ಮಾಡಲಾಗುತ್ತಿದೆ ಎಂದು ಅವರು ಹೇಳಿದರು. ಕಳೆದ 9 ವರ್ಷಗಳಲ್ಲಿ ಲೊಕೊಮೊಟಿವ್ ತಯಾರಿಕೆಯು 9 ಪಟ್ಟು ಹೆಚ್ಚಾಗಿದೆ. ಇಂದು 13 ಪಟ್ಟು ಹೆಚ್ಚು ಎಚ್‌ ಎಲ್‌ ಬಿ ಬೋಗಿಗಳನ್ನು ತಯಾರಿಸಲಾಗುತ್ತಿದೆ ಎಂದರು.

ಈಶಾನ್ಯ ಭಾಗದ ರೈಲ್ವೇ ವಿಸ್ತರಣೆ ಕುರಿತು ಮಾತನಾಡಿದ ಪ್ರಧಾನಿ, ಜೋಡಿ ಮಾರ್ಗಗಳು, ಗೇಜ್ ಪರಿವರ್ತನೆ, ವಿದ್ಯುದ್ದೀಕರಣ ಮತ್ತು ಹೊಸ ಮಾರ್ಗಗಳ ಕೆಲಸ ವೇಗವಾಗಿ ನಡೆಯುತ್ತಿದೆ ಎಂದು ಹೇಳಿದರು. ಶೀಘ್ರದಲ್ಲೇ, ಈಶಾನ್ಯದ ಎಲ್ಲಾ ರಾಜ್ಯಗಳ ರಾಜಧಾನಿಗಳನ್ನು ರೈಲ್ವೆ ಜಾಲದಿಂದ ಸಂಪರ್ಕಿಸಲಾಗುವುದು ಎಂದು ಶ್ರೀ ಮೋದಿ ಹೇಳಿದರು. 100 ವರ್ಷಗಳ ನಂತರ ನಾಗಾಲ್ಯಾಂಡ್ ತನ್ನ ಎರಡನೇ ನಿಲ್ದಾಣವನ್ನು ಪಡೆದುಕೊಂಡಿದೆ ಎಂದು ಅವರು ಮಾಹಿತಿ ನೀಡಿದರು. ಈ ಪ್ರದೇಶದಲ್ಲಿ ಹೊಸ ರೈಲು ಮಾರ್ಗಗಳ ಕಾರ್ಯಯೋಜನೆಯು ಮೂರು ಪಟ್ಟು ಹೆಚ್ಚಾಗಿದೆ ಎಂದು ಅವರು ಹೇಳಿದರು.

ಕಳೆದ 9 ವರ್ಷಗಳಲ್ಲಿ 2200 ಕಿಮೀ ಪ್ರತ್ಯೇಕ ಸರಕು ಸಾಗಣೆ ಕಾರಿಡಾರ್‌ಗಳನ್ನು ನಿರ್ಮಿಸಲಾಗಿದ್ದು, ಗೂಡ್ಸ್ ರೈಲಿನ ಪ್ರಯಾಣದ ಸಮಯವನ್ನು ಕಡಿತಗೊಳಿಸಲಾಗಿದೆ ಎಂದು ಪ್ರಧಾನಿ ಹೇಳಿದರು. ಈಗ ಸರಕುಗಳು ದೆಹಲಿ ಎನ್‌ ಸಿ ಆರ್‌ ನಿಂದ ಪಶ್ಚಿಮ ಬಂದರುಗಳನ್ನು 24 ಗಂಟೆಗಳಲ್ಲಿ ತಲುಪುತ್ತವೆ, ಇದಕ್ಕೆ ಮೊದಲು 72 ಗಂಟೆಗಳು ಬೇಕಾಗಿತ್ತು. ಇತರ ಮಾರ್ಗಗಳಲ್ಲಿ 40 ಪ್ರತಿಶತದಷ್ಟು ಸಮಯದ ಕಡಿತವು ಕಂಡುಬಂದಿದೆ, ಇದು ಉದ್ಯಮಿಗಳು, ಕೈಗಾರಿಕೋದ್ಯಮಿಗಳು ಮತ್ತು ರೈತರಿಗೆ ಹೆಚ್ಚು ಪ್ರಯೋಜನವನ್ನು ನೀಡುತ್ತಿದೆ ಎಂದು ಅವರು ಹೇಳಿದರು.

ರೈಲ್ವೆ ಸೇತುವೆಗಳ ಕೊರತೆಯಿಂದ ಎದುರಿಸುತ್ತಿದ್ದ ತೊಂದರೆಗಳನ್ನು ಎತ್ತಿ ತೋರಿಸಿದ ಪ್ರಧಾನಿ, 2014 ಕ್ಕೂ ಮೊದಲು 6000 ಕ್ಕಿಂತ ಕಡಿಮೆ ರೈಲ್ವೆ ಮೇಲ್ಸೇತುವೆಗಳು ಮತ್ತು ಕೆಳಸೇತುವೆಗಳು ಇದ್ದವು, ಆದರೆ ಇಂದು ಆ ಸಂಖ್ಯೆ 10,000 ಮೀರಿದೆ ಎಂದು ತಿಳಿಸಿದರು. ದೊಡ್ಡ ಮಾರ್ಗಗಳಲ್ಲಿ ಮಾನವರಹಿತ ಲೆವೆಲ್ ಕ್ರಾಸಿಂಗ್‌ಗಳ ಸಂಖ್ಯೆ ಈಗ ಶೂನ್ಯಕ್ಕೆ ಇಳಿದಿದೆ ಎಂದರು. ಪ್ರಯಾಣಿಕರ ಅನುಕೂಲದ ಕುರಿತು ಮಾತನಾಡಿದ ಪ್ರಧಾನಮಂತ್ರಿಯವರು, ವೃದ್ಧರು ಮತ್ತು ದಿವ್ಯಾಂಗರ ಅಗತ್ಯಗಳಿಗೆ ವಿಶೇಷ ಒತ್ತು ನೀಡಲಾಗುತ್ತಿದೆ ಎಂದು ಒತ್ತಿ ಹೇಳಿದರು.

ನಮ್ಮ ಆದ್ಯತೆ ಭಾರತೀಯ ರೈಲ್ವೇಯನ್ನು ಆಧುನಿಕ ಮತ್ತು ಪರಿಸರ ಸ್ನೇಹಿಯನ್ನಾಗಿ ಮಾಡುವುದಾಗಿದೆ, 100 ಪ್ರತಿಶತ ರೈಲು ಮಾರ್ಗದ ವಿದ್ಯುದ್ದೀಕರಣವನ್ನು ಅತಿ ಶೀಘ್ರದಲ್ಲಿ ಸಾಧಿಸಲಾಗುವುದು ಎಂದು ತಿಳಿಸಿದ ಪ್ರಧಾನಿ, ಇದು ಭಾರತದ ಎಲ್ಲಾ ರೈಲುಗಳು ಕೇವಲ ವಿದ್ಯುಚ್ಛಕ್ತಿಯಿಂದ ಮಾತ್ರ ಚಲಿಸುವಂತೆ ಮಾಡುತ್ತದೆ ಎಂದರು. ಕಳೆದ 9 ವರ್ಷಗಳಲ್ಲಿ ಸೌರ ಫಲಕಗಳಿಂದ ವಿದ್ಯುತ್ ಉತ್ಪಾದಿಸುವ ಕೇಂದ್ರಗಳ ಸಂಖ್ಯೆ 1200 ಕ್ಕಿಂತ ಹೆಚ್ಚಿದೆ ಎಂದು ಪ್ರಧಾನಿ ತಿಳಿಸಿದರು. ಮುಂದಿನ ದಿನಗಳಲ್ಲಿ ಪ್ರತಿ ರೈಲು ನಿಲ್ದಾಣದಿಂದ ಹಸಿರು ಇಂಧನವನ್ನು ಉತ್ಪಾದಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಪ್ರಧಾನಿ ಹೇಳಿದರು. ಸುಮಾರು 70,000 ಬೋಗಿಗಳಲ್ಲಿ ಎಲ್‌ ಇ ಡಿ ದೀಪಗಳನ್ನು ಅಳವಡಿಸಲಾಗಿದೆ ಮತ್ತು 2014 ಕ್ಕೆ ಹೋಲಿಸಿದರೆ ರೈಲುಗಳಲ್ಲಿ ಜೈವಿಕ ಶೌಚಾಲಯಗಳ ಸಂಖ್ಯೆ 28 ಪಟ್ಟು ಹೆಚ್ಚಾಗಿದೆ ಎಂದು ಅವರು ಹೇಳಿದರು. ಎಲ್ಲಾ ಅಮೃತ ನಿಲ್ದಾಣಗಳನ್ನು ಹಸಿರು ಕಟ್ಟಡಗಳ ಗುಣಮಟ್ಟದಲ್ಲಿ ನಿರ್ಮಿಸಲಾಗುವುದು. 2030 ರ ವೇಳೆಗೆ, ಭಾರತವು ನಿವ್ವಳ ಶೂನ್ಯ ಹೊರಸೂಸುವಿಕೆಯಲ್ಲಿ ಚಲಿಸುವ ರೈಲ್ವೆ ಜಾಲದ ದೇಶವಾಗಲಿದೆ ಎಂದು ಅವರು ಹೇಳಿದರು.

ರೈಲು ನಮ್ಮ ಪ್ರೀತಿಪಾತ್ರರೊಂದಿಗೆ ನಮ್ಮನ್ನು ಸಂಪರ್ಕಿಸಲು ದಶಕಗಳಿಂದ ಕೆಲಸ ಮಾಡಿದೆ, ಅದು ದೇಶವನ್ನು ಸಂಪರ್ಕಿಸುವ ಕೆಲಸ ಮಾಡಿದೆ. ಈಗ ಉತ್ತಮ ಗುರುತು ಮತ್ತು ಆಧುನಿಕ ಭವಿಷ್ಯದೊಂದಿಗೆ ರೈಲನ್ನು ಸಂಪರ್ಕಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಪ್ರಧಾನಿ ಹೇಳಿದರು. ನೂತನ ಸಂಸತ್ ಭವನ, ಕರ್ತವ್ಯ ಪಥ, ಯುದ್ಧ ಸ್ಮಾರಕ ಮತ್ತು ಏಕತಾ ಪ್ರತಿಮೆಯಂತಹ ಯೋಜನೆಗಳಿಗೆ ಪ್ರತಿಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿರುವುದಕ್ಕೆ ಅವರು ವಿಷಾದ ವ್ಯಕ್ತಪಡಿಸಿದರು. ನಕಾರಾತ್ಮಕ ರಾಜಕೀಯದಿಂದ ದೂರವಾಗಿ, ನಾವು ರಾಷ್ಟ್ರದ ಅಭಿವೃದ್ಧಿಯ ಕಾರ್ಯವನ್ನು ಒಂದು ಧ್ಯೇಯವಾಗಿ ತೆಗೆದುಕೊಂಡಿದ್ದೇವೆ ಮತ್ತು ಮತ ಬ್ಯಾಂಕ್ ಮತ್ತು ಪಕ್ಷ ರಾಜಕೀಯವನ್ನು ಲೆಕ್ಕಿಸದೆ ಅದಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದೇವೆ ಎಂದು ಅವರು ಹೇಳಿದರು.

ರೈಲ್ವೇಯೊಂದೇ 1.5 ಲಕ್ಷಕ್ಕೂ ಹೆಚ್ಚು ಯುವಕರಿಗೆ ಉದ್ಯೋಗ ಒದಗಿಸಿದೆ ಎಂಬುದನ್ನು ಒತ್ತಿ ಹೇಳಿದ ಪ್ರಧಾನಿ, ಮೂಲಸೌಕರ್ಯಗಳ ಮೇಲೆ ಲಕ್ಷ ಕೋಟಿ ರೂ. ಹೂಡಿಕೆ ಮಾಡುವ ಮೂಲಕ ಉದ್ಯೋಗವನ್ನೂ ಸೃಷ್ಟಿಸಲಾಗುತ್ತಿದೆ ಎಂದು ಹೇಳಿದರು. ಪ್ರಸ್ತುತ, ಉದ್ಯೋಗ ಮೇಳದ ಮೂಲಕ 10 ಲಕ್ಷ ಯುವಕರಿಗೆ ಉದ್ಯೋಗ ನೀಡುವ ಅಭಿಯಾನವನ್ನು ಕೇಂದ್ರ ಸರ್ಕಾರ ನಡೆಸುತ್ತಿದೆ ಎಂದು ಪ್ರಧಾನಿ ಹೇಳಿದರು. ಇದು ಬದಲಾಗುತ್ತಿರುವ ಭಾರತದ ಚಿತ್ರಣವಾಗಿದೆ, ಅಲ್ಲಿ ಅಭಿವೃದ್ಧಿಯು ಯುವಕರಿಗೆ ಹೊಸ ಅವಕಾಶಗಳಿಗೆ ದಾರಿ ಮಾಡಿಕೊಡುತ್ತಿದೆ ಮತ್ತು ಯುವಕರು ದೇಶದ ಅಭಿವೃದ್ಧಿಗೆ ಹೊಸ ರೆಕ್ಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಆಶೀರ್ವದಿಸಲು ಅನೇಕ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಹಲವಾರು ಪದ್ಮ ಪ್ರಶಸ್ತಿ ಪುರಸ್ಕೃತರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವುದಕ್ಕೆ ಪ್ರಧಾನಮಂತ್ರಿಯವರು ಧನ್ಯವಾದ ಹೇಳಿದರು. ಪ್ರತಿಯೊಬ್ಬ ಭಾರತೀಯನಿಗೂ ಆಗಸ್ಟ್ ತಿಂಗಳ ಹೇಗೆ ಮಹತ್ವದ್ದು ಎಂದು ವಿವರಿಸಿದ ಪ್ರಧಾನಿ, ಇದು ಕ್ರಾಂತಿ, ಕೃತಜ್ಞತೆ ಮತ್ತು ಕರ್ತವ್ಯದ ತಿಂಗಳು ಮತ್ತು ಭಾರತದ ಇತಿಹಾಸಕ್ಕೆ ಹೊಸ ದಿಕ್ಕನ್ನು ನೀಡಿದ ಅನೇಕ ಐತಿಹಾಸಿಕ ಸಂದರ್ಭಗಳಿಂದ ತುಂಬಿರುವ ತಿಂಗಳು ಎಂದು ಹೇಳಿದರು. ರಾಷ್ಟ್ರೀಯ ಕೈಮಗ್ಗ ದಿನವನ್ನು ಆಗಸ್ಟ್ 7 ರಂದು ಆಚರಿಸಲಾಗುತ್ತದೆ ಮತ್ತು ಸ್ವದೇಶಿ ಆಂದೋಲನಕ್ಕೆ ಸಮರ್ಪಿಸಲಾಗಿದೆ ಎಂದು ಪ್ರಧಾನಿ ಪ್ರಸ್ತಾಪಿಸಿದರು. ಈ ಆಗಸ್ಟ್ 7 ನೇ ದಿನಾಂಕವು ಪ್ರತಿಯೊಬ್ಬ ಭಾರತೀಯನು ಸ್ಥಳೀಯತೆಗೆ ಧ್ವನಿಯಾಗುವ ಸಂಕಲ್ಪವನ್ನು ಪುನರುಚ್ಚರಿಸುವ ದಿನವಾಗಿದೆ ಎಂದು ಶ್ರೀ ಮೋದಿ ಹೇಳಿದರು. ಗಣೇಶ ಚತುರ್ಥಿಯ ಪವಿತ್ರ ಹಬ್ಬವನ್ನು ಪ್ರಸ್ತಾಪಿಸಿದ ಅವರು ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಅಗತ್ಯವನ್ನು ಒತ್ತಿ ಹೇಳಿದರು. ಪರಿಸರ ಸ್ನೇಹಿ ವಸ್ತುವಿನಿಂದ ತಯಾರಿಸಿದ ವಿಗ್ರಹಗಳನ್ನು ಪೂಜಿಸುವಂತೆ ಪ್ರಧಾನಿ ಸಲಹೆ ನೀಡಿದರು. ಸ್ಥಳೀಯ ಕುಶಲಕರ್ಮಿಗಳು, ಕಸುಬುದಾರರು ಮತ್ತು ಸಣ್ಣ ಉದ್ಯಮಿಗಳು ತಯಾರಿಸಿದ ಉತ್ಪನ್ನಗಳನ್ನು ಖರೀದಿಸುವಂತೆ ಅವರು ಸಲಹೆ ನೀಡಿದರು.

ಆಗಸ್ಟ್ 9 ರ ಕುರಿತು ಮಾತನಾಡಿದ ಪ್ರಧಾನಿ, ಇದು ಕ್ವಿಟ್ ಇಂಡಿಯಾ ಚಳುವಳಿ ಪ್ರಾರಂಭವಾದ ಐತಿಹಾಸಿಕ ದಿನ ಮತ್ತು ಇದು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಹೊಸ ಶಕ್ತಿಯನ್ನು ಸೃಷ್ಟಿಸಿತು ಎಂದು ಹೇಳಿದರು. ಇದರಿಂದ ಪ್ರೇರಿತರಾಗಿ ಇಂದು ಇಡೀ ದೇಶ ಪ್ರತಿ ಕೆಟ್ಟ, ಭ್ರಷ್ಟಾಚಾರಿ, ವಂಶಪಾರಂಪರ್ಯ ಮತ್ತು ತುಷ್ಟೀಕರಣ ರಾಜಕೀಯಕ್ಕೆ ಕ್ವಿಟ್ ಇಂಡಿಯಾ ಎಂದು ಘರ್ಜಿಸುತ್ತಿದೆ ಎಂದು ಅವರು ಹೇಳಿದರು.

ಮುಂಬರುವ ವಿಭಜನೆಯ ಭೀಭತ್ಸ ಸಂಸ್ಮರಣಾ ದಿನವನ್ನು ಪ್ರಸ್ತಾಪಿಸಿದ ಪ್ರಧಾನಿ, ವಿಭಜನೆಯಿಂದಾಗಿ ಭಾರಿ ತೆತ್ತ ಅಸಂಖ್ಯಾತ ಜನರನ್ನು ನಾವು ಸ್ಮರಿಸುತ್ತೇವೆ ಮತ್ತು ಆಘಾತದ ನಂತರ ತಮ್ಮನ್ನು ಒಟ್ಟುಗೂಡಿಸಿ ದೇಶದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿರುವ ಜನರ ಕೊಡುಗೆಯನ್ನು ಗುರುತಿಸಿದ್ದೇವೆ ಎಂದು ಹೇಳಿದರು. ಈ ದಿನ ನಮ್ಮ ಒಗ್ಗಟ್ಟನ್ನು ಉಳಿಸಿಕೊಳ್ಳುವ ಜವಾಬ್ದಾರಿಯನ್ನು ನೀಡುತ್ತದೆ ಎಂದು ಹೇಳಿದರು. ನಮ್ಮ ಸ್ವಾತಂತ್ರ್ಯ ದಿನವು ನಮ್ಮ ತ್ರಿವರ್ಣಧ್ವಜ ಮತ್ತು ನಮ್ಮ ರಾಷ್ಟ್ರದ ಪ್ರಗತಿಗೆ ನಮ್ಮ ಬದ್ಧತೆಯನ್ನು ಪುನರುಚ್ಚರಿಸುವ ದಿನವಾಗಿದೆ. ಕಳೆದ ವರ್ಷದಂತೆ ಈ ಬಾರಿಯೂ ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜವನ್ನು ಹಾರಿಸಬೇಕು ಎಂದು ಶ್ರೀ ಮೋದಿ ಹೇಳಿದರು. ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಧ್ವಜ ಮೆರವಣಿಗೆಗಳಲ್ಲಿ ಜನರ ಉತ್ಸಾಹವನ್ನು ಪ್ರಸ್ತಾಪಿಸಿದ ಅವರು ಅಭಿಯಾನದಲ್ಲಿ ಭಾಗವಹಿಸುವಂತೆ ಎಲ್ಲರಿಗೂ ಮನವಿ ಮಾಡಿದರು.

ನಾಗರಿಕರು ಪಾವತಿಸುವ ತೆರಿಗೆಯನ್ನು ಭ್ರಷ್ಟಾಚಾರದಲ್ಲಿ ಪೋಲು ಮಾಡಲಾಗುತ್ತದೆ ಎಂಬ ಗ್ರಹಿಕೆಯನ್ನು ಸರ್ಕಾರ ಬದಲಾಯಿಸಿದೆ ಮತ್ತು ಇಂದು ಜನರು ತಮ್ಮ ಹಣವನ್ನು ರಾಷ್ಟ್ರ ನಿರ್ಮಾಣಕ್ಕೆ ಬಳಸಲಾಗುತ್ತಿದೆ ಎಂದು ಭಾವಿಸುತ್ತಿದ್ದಾರೆ ಎಂದು ಪ್ರಧಾನಿ ಒತ್ತಿ ಹೇಳಿದರು. ಹೆಚ್ಚುತ್ತಿರುವ ಸೌಲಭ್ಯಗಳು ಮತ್ತು ಸುಲಭ ಜೀವನದಿಂದ ತೆರಿಗೆ ಪಾವತಿಸುವವರ ಸಂಖ್ಯೆ ಹೆಚ್ಚುತ್ತಿದೆ ಎಂದು ಅವರು ಹೇಳಿದರು. ದೇಶದಲ್ಲಿ 2 ಲಕ್ಷ ರೂಪಾಯಿ ಆದಾಯಕ್ಕೆ ತೆರಿಗೆ ವಿಧಿಸಲಾಗುತ್ತಿತ್ತು, ಈಗ 7 ಲಕ್ಷ ರೂಪಾಯಿವರೆಗಿನ ಆದಾಯಕ್ಕೆ ಇಂದು ತೆರಿಗೆ ಇಲ್ಲ ಎಂದು ಪ್ರಧಾನಿ ಹೇಳಿದರು. ಇದರ ಹೊರತಾಗಿಯೂ, ದೇಶದಲ್ಲಿ ಆದಾಯ ತೆರಿಗೆ ಸಂಗ್ರಹದ ಪ್ರಮಾಣ ಹೆಚ್ಚುತ್ತಿದೆ ಮತ್ತು ದೇಶದಲ್ಲಿ ಮಧ್ಯಮ ವರ್ಗದ ವ್ಯಾಪ್ತಿ ನಿರಂತರವಾಗಿ ಹೆಚ್ಚುತ್ತಿದೆ ಎಂಬ ಸ್ಪಷ್ಟ ಸಂದೇಶವನ್ನು ಪ್ರಧಾನಿ ರವಾನಿಸಿದರು. ಈ ವರ್ಷ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವವರ ಸಂಖ್ಯೆ ಶೇ.16ರಷ್ಟು ಹೆಚ್ಚಿದ್ದು, ಇದು ಸರ್ಕಾರದ ಮೇಲಿನ ನಂಬಿಕೆ ಹಾಗೂ ದೇಶದಲ್ಲಿ ನಡೆಯುತ್ತಿರುವ ಆವಿಷ್ಕಾರವನ್ನು ತೋರಿಸುತ್ತದೆ ಎಂದು ಮಾಹಿತಿ ನೀಡಿದರು. ಇಂದು ದೇಶದಲ್ಲಿ ರೈಲ್ವೆ ಹೇಗೆ ಪುನಶ್ಚೇತನಗೊಳ್ಳುತ್ತಿದೆ, ಮೆಟ್ರೋ ಹೇಗೆ ವಿಸ್ತರಣೆಯಾಗುತ್ತಿದೆ ಎಂಬುದನ್ನು ಜನರು ನೋಡುತ್ತಿದ್ದಾರೆ ಎಂದರು. ಅವರು ಹೊಸ ಎಕ್ಸ್‌ ಪ್ರೆಸ್‌ ವೇ ಮತ್ತು ವಿಮಾನ ನಿಲ್ದಾಣಗಳ ಅಭಿವೃದ್ಧಿಯನ್ನು ಪ್ರಸ್ತಾಪಿಸಿದರು. ಅಂತಹ ಬದಲಾವಣೆಗಳು ತೆರಿಗೆದಾರರ ಹಣದಿಂದ ನವ ಭಾರತವನ್ನು ಅಭಿವೃದ್ಧಿಪಡಿಸುವ ಭಾವನೆಯನ್ನು ಉತ್ತೇಜಿಸುತ್ತವೆ ಎಂದು ಹೇಳಿದರು. “ಈ 508 ರೈಲು ನಿಲ್ದಾಣಗಳ ಆಧುನೀಕರಣವು ಈ ದಿಕ್ಕಿನಲ್ಲಿ ತೆಗೆದುಕೊಂಡ ಒಂದು ಹೆಜ್ಜೆಯಾಗಿದೆ. ಅಮೃತ ಭಾರತ ನಿಲ್ದಾಣಗಳು ಭಾರತೀಯ ರೈಲ್ವೆಯ ಈ ಪರಿವರ್ತನೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತವೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ” ಎಂದ ಪ್ರಧಾನಮಂತ್ರಿಯವರು ತಮ್ಮು ಭಾಷಣವನ್ನು ಮುಕ್ತಾಯಗೊಳಿಸಿದರು.

ಹಿನ್ನೆಲೆ

ಅತ್ಯಾಧುನಿಕ ಸಾರ್ವಜನಿಕ ಸಾರಿಗೆಯನ್ನು ಒದಗಿಸುವ ಬಗ್ಗೆ ಪ್ರಧಾನಿಯವರು ಸದಾ ಒತ್ತು ನೀಡುತ್ತಿದ್ದಾರೆ. ದೇಶಾದ್ಯಂತ ಜನರಿಗೆ ರೈಲ್ವೇ ಆದ್ಯತೆಯ ಸಾರಿಗೆ ವಿಧಾನವಾಗಿದೆ ಎಂದು ಗಮನಿಸಿದ ಅವರು ರೈಲು ನಿಲ್ದಾಣಗಳಲ್ಲಿ ವಿಶ್ವದರ್ಜೆಯ ಸೌಕರ್ಯಗಳನ್ನು ಒದಗಿಸುವ ಮಹತ್ವವನ್ನು ಒತ್ತಿ ಹೇಳಿದರು. ಈ ದೃಷ್ಟಿಕೋನದಿಂದ ಮಾರ್ಗದರ್ಶಿಸಲ್ಪಟ್ಟ ಅಮೃತ ಭಾರತ ನಿಲ್ದಾಣ ಯೋಜನೆಯನ್ನು ರಾಷ್ಟ್ರವ್ಯಾಪಿ 1309 ನಿಲ್ದಾಣಗಳನ್ನು ಪುನರಾಭಿವೃದ್ಧಿ ಮಾಡಲು ಪ್ರಾರಂಭಿಸಲಾಯಿತು.

ಈ ಯೋಜನೆಯ ಭಾಗವಾಗಿ ಪ್ರಧಾನಮಂತ್ರಿಯವರು 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಅಡಿಗಲ್ಲು ಹಾಕಿದ್ದಾರೆ. ಈ ನಿಲ್ದಾಣಗಳನ್ನು 24,470 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ಮರು ಅಭಿವೃದ್ಧಿಗೊಳಿಸಲಾಗುವುದು. ನಗರದ ಎರಡೂ ಬದಿಗಳನ್ನು ಸರಿಯಾಗಿ ಸಂಯೋಜಿಸಿ, ಈ ನಿಲ್ದಾಣಗಳನ್ನು ‘ಸಿಟಿ ಸೆಂಟರ್’ಗಳಾಗಿ ಅಭಿವೃದ್ಧಿಪಡಿಸಲು ಮಾಸ್ಟರ್ ಪ್ಲಾನ್‌ಗಳನ್ನು ಸಿದ್ಧಪಡಿಸಲಾಗುತ್ತಿದೆ. ಈ ಸಂಯೋಜಿತ ಕ್ರಮವು ರೈಲ್ವೇ ನಿಲ್ದಾಣದ ಸುತ್ತಲೂ ಕೇಂದ್ರೀಕೃತವಾಗಿರುವ ಪ್ರದೇಶದ ಒಟ್ಟಾರೆ ನಗರಾಭಿವೃದ್ಧಿಯ ಸಮಗ್ರ ದೃಷ್ಟಿಕೋನವಾಗಿದೆ. 

ಈ 508 ನಿಲ್ದಾಣಗಳು ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ತಲಾ 55, ಬಿಹಾರದಲ್ಲಿ 49, ಮಹಾರಾಷ್ಟ್ರದಲ್ಲಿ 44, ಪಶ್ಚಿಮ ಬಂಗಾಳದಲ್ಲಿ 37, ಮಧ್ಯಪ್ರದೇಶದಲ್ಲಿ 34, ಅಸ್ಸಾಂನಲ್ಲಿ 32, ಒಡಿಶಾದಲ್ಲಿ 25, ಪಂಜಾಬ್‌ ನಲ್ಲಿ 22, ಗುಜರಾತ್ ಮತ್ತು ತೆಲಂಗಾಣದಲ್ಲಿ ತಲಾ 21, ಜಾರ್ಖಂಡ್‌ನಲ್ಲಿ 20, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ತಲಾ 18, ಹರಿಯಾಣದಲ್ಲಿ 15, ಕರ್ನಾಟಕದಲ್ಲಿ 13 ಸೇರಿದಂತೆ 27 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹರಡಿವೆ. 

ಪುನರಾಭಿವೃದ್ಧಿಯು ಪ್ರಯಾಣಿಕರಿಗೆ ಆಧುನಿಕ ಸೌಕರ್ಯಗಳನ್ನು ಒದಗಿಸುತ್ತದೆ ಜೊತೆಗೆ ಉತ್ತಮವಾಗಿ ವಿನ್ಯಾಸಗೊಳಿಸಲಾದ ಸಂಚಾರ ಪರಿಚಲನೆ, ಇಂಟರ್-ಮೋಡಲ್ ಇಂಟಿಗ್ರೇಷನ್‌ ಮತ್ತು ಪ್ರಯಾಣಿಕರ ಮಾರ್ಗದರ್ಶನಕ್ಕಾಗಿ ಸಂಕೇತಗಳನ್ನು ಖಾತ್ರಿಪಡಿಸುತ್ತದೆ. ನಿಲ್ದಾಣದ ಕಟ್ಟಡಗಳ ವಿನ್ಯಾಸವು ಸ್ಥಳೀಯ ಸಂಸ್ಕೃತಿ, ಪರಂಪರೆ ಮತ್ತು ವಾಸ್ತುಶಿಲ್ಪದಿಂದ ಪ್ರೇರಿತವಾಗಿರುತ್ತದೆ.

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯ ಕೊತ್ತಲದಿಂದ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಪಠ್ಯಾಂತರ

ಜನಪ್ರಿಯ ಭಾಷಣಗಳು

77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯ ಕೊತ್ತಲದಿಂದ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಪಠ್ಯಾಂತರ
Indian Air Force’s Made-in-India Samar-II to shield India’s skies against threats from enemies

Media Coverage

Indian Air Force’s Made-in-India Samar-II to shield India’s skies against threats from enemies
NM on the go

Nm on the go

Always be the first to hear from the PM. Get the App Now!
...
New India is finishing tasks at a rapid pace: PM Modi
February 25, 2024
Dedicates five AIIMS at Rajkot, Bathinda, Raebareli, Kalyani and Mangalagiri
Lays foundation stone and dedicates to nation more than 200 Health Care Infrastructure Projects worth more than Rs 11,500 crore across 23 States /UTs
Inaugurates National Institute of Naturopathy named ‘Nisarg Gram’ in Pune
Inaugurates and dedicates to nation 21 projects of the Employees’ State Insurance Corporation worth around Rs 2280 crores
Lays foundation stone for various renewable energy projects
Lays foundation stone for New Mundra-Panipat pipeline project worth over Rs 9000 crores
“We are taking the government out of Delhi and trend of holding important national events outside Delhi is on the rise”
“New India is finishing tasks at rapid pace”
“I can see that generations have changed but affection for Modi is beyond any age limit”
“With Darshan of the submerged Dwarka, my resolve for Vikas and Virasat has gained new strength; divine faith has been added to my goal of a Viksit Bharat”
“In 7 decades 7 AIIMS were approved, some of them never completed. In last 10 days, inauguration or foundation stone laying of 7 AIIMS have taken place”
“When Modi guarantees to make India the world’s third largest economic superpower, the goal is health for all and prosperity for all”

भारत माता की जय!

भारत माता की जय!

मंच पर उपस्थित गुजरात के लोकप्रिय मुख्यमंत्री श्रीमान भूपेंद्र भाई पटेल, केंद्र में मंत्रिपरिषद के मेरे सहयोगी मनसुख मांडविया, गुजरात प्रदेश भारतीय जनता पार्टी के अध्यक्ष और संसद में मेरे साथी सी आर पाटिल, मंच पर विराजमान अन्य सभी वरिष्ठ महानुभाव, और राजकोट के मेरे भाइयों और बहनों, नमस्कार।

आज के इस कार्यक्रम से देश के अनेक राज्यों से बहुत बड़ी संख्या में अन्य लोग भी जुड़े हैं। कई राज्यों के माननीय मुख्यमंत्री, माननीय गवर्नर श्री, विधायकगण, सांसदगण, केंद्र के मंत्रीगण, ये सब इस कार्यक्रम में वीडियो कांफ्रेंसिंग से हमारे साथ जुड़े हैं। मैं उन सभी का भी हृदय से बहुत-बहुत अभिनंदन करता हूं।

एक समय था, जब देश के सारे प्रमुख कार्यक्रम दिल्ली में ही होकर रह जाते थे। मैंने भारत सरकार को दिल्ली से बाहर निकालकर देश के कोने-कोने तक पहुंचा दिया है और आज राजकोट पहुंच गए। आज का ये कार्यक्रम भी इसी बात का गवाह है। आज इस एक कार्यक्रम से देश के अनेकों शहरों में विकास कार्यों का लोकार्पण और शिलान्यास होना, एक नई परंपरा को आगे बढ़ा रहा है। कुछ दिन पहले ही मैं जम्मू कश्मीर में था। वहां से मैंने IIT भिलाई, IIT तिरुपति, ट्रिपल आईटी DM कुरनूल, IIM बोध गया, IIM जम्मू, IIM विशाखापट्टनम और IIS कानपुर के कैंपस का एक साथ जम्‍मू से लोकार्पण किया था। और अब आज यहां राजकोट से- एम्स राजकोट, एम्स रायबरेली, एम्स मंगलगिरी, एम्स भटिंडा, एम्स कल्याणी का लोकार्पण हुआ है। पांच एम्स, विकसित होता भारत, ऐसे ही तेज गति से काम कर रहा है, काम पूरे कर रहा है।

साथियों,

आज मैं राजकोट आया हूं, तो बहुत कुछ पुराना भी याद आ रहा है। मेरे जीवन का कल एक विशेष दिन था। मेरी चुनावी यात्रा की शुरुआत में राजकोट की बड़ी भूमिका है। 22 साल पहले 24 फरवरी को ही राजकोट ने मुझे पहली बार आशीर्वाद दिया था, अपना MLA चुना था। और आज 25 फरवरी के दिन मैंने पहली बार राजकोट के विधायक के तौर पर गांधीनगर विधानसभा में शपथ ली थी, जिंदगी में पहली बार। आपने तब मुझे अपने प्यार, अपने विश्वास का कर्जदार बना दिया था। लेकिन आज 22 साल बाद मैं राजकोट के एक-एक परिजन को गर्व के साथ कह सकता हूं कि मैंने आपके भरोसे पर खरा उतरने की पूरी कोशिश की है।

आज पूरा देश इतना प्यार दे रहा है, इतने आशीर्वाद दे रहा है, तो इसके यश का हकदार ये राजकोट भी है। आज जब पूरा देश, तीसरी बार-NDA सरकार को आशीर्वाद दे रहा है, आज जब पूरा देश, अबकी बार-400 पार का विश्वास, 400 पार का विश्वास कर रहा है। तब मैं पुन: राजकोट के एक-एक परिजन को सिर झुकाकर नमन करता हूं। मैं देख रहा हूं, पीढ़ियां बदल गई हैं, लेकिन मोदी के लिए स्नेह हर आयु सीमा से परे है। ये जो आपका कर्ज है, इसको मैं ब्याज के साथ, विकास करके चुकाने का प्रयास करता हूं।

साथियों,

मैं आप सबकी भी क्षमा चाहता हूं, और सभी अलग-अलग राज्यों में माननीय मुख्यमंत्री और वहां के जो नागरिक बैठे हैं, मैं उन सबसे भी क्षमा मांगता हूं क्योंकि मुझे आज आने में थोड़ा विलंब हो गया, आपको इंतजार करना पड़ा। लेकिन इसके पीछे कारण ये था कि आज मैं द्वारका में भगवान द्वारकाधीश के दर्शन करके, उन्हें प्रणाम करके राजकोट आया हूं। द्वारका को बेट द्वारका से जोड़ने वाले सुदर्शन सेतु का लोकार्पण भी मैंने किया है। द्वारका की इस सेवा के साथ-साथ ही आज मुझे एक अद्भुत आध्यात्मिक साधना का लाभ भी मिला है। प्राचीन द्वारका, जिसके बारे में कहते हैं कि उसे खुद भगवान श्रीकृष्ण ने बसाया था, आज वो समुद्र में डूब गई है, आज मेरा सौभाग्य था कि मैं समुद्र के भीतर जाकर बहुत गहराई में चला गया और भीतर जाकर मुझे उस समुद्र में डूब चुकी श्रीकृष्‍ण वाली द्वारका, उसके दर्शन करने का और जो अवशेष हैं, उसे स्पर्श करके जीवन को धन्य बनाने का, पूजन करने का, वहां कुछ पल प्रभु श्रीकृष्ण का स्मरण करने का मुझे सौभाग्य मिला। मेरे मन में लंबे अर्से से ये इच्छा थी कि भगवान कृष्ण की बसाई उस द्वारका भले ही पानी के भीतर रही हो, कभी न कभी जाऊंगा, मत्था टेकुंगा और वो सौभाग्य आज मुझे मिला। प्राचीन ग्रंथों में द्वारका के बारे में पढ़ना, पुरातत्वविदों की खोजों को जानना, ये हमें आश्चर्य से भर देता है। आज समंदर के भीतर जाकर मैंने उसी दृश्य को अपनी आंखों से देखा, उस पवित्र भूमि को स्पर्श किया। मैंने पूजन के साथ ही वहां मोर पंख को भी अर्पित किया। उस अनुभव ने मुझे कितना भाव विभोर किया है, ये शब्दों में बताना मेरे लिए मुश्किल है। समंदर के गहरे पानी में मैं यही सोच रहा था कि हमारे भारत का वैभव, उसके विकास का स्तर कितना ऊंचा रहा है। मैं समुद्र से जब बाहर निकला, तो भगवान श्रीकृष्ण के आशीर्वाद के साथ-साथ मैं द्वारका की प्रेरणा भी अपने साथ लेकर लाया हूं। विकास और विरासत के मेरे संकल्पों को आज एक नई ताकत मिली है, नई ऊर्जा मिली है, विकसित भारत के मेरे लक्ष्य से आज दैवीय विश्वास उसके साथ जुड़ गया है।

साथियों,

आज भी यहां 48 हज़ार करोड़ से ज्यादा के प्रोजेक्ट्स आपको, पूरे देश को मिले हैं। आज न्यू मुंद्रा-पानीपत पाइपलाइन प्रोजेक्ट का शिलान्यास हुआ है। इससे गुजरात से कच्चा तेल सीधे हरियाणा की रिफाइनरी तक पाइप से पहुंचेगा। आज राजकोट सहित पूरे सौराष्ट्र को रोड, उसके bridges, रेल लाइन के दोहरीकरण, बिजली, स्वास्थ्य और शिक्षा सहित अनेक सुविधाएं भी मिली हैं। इंटरनेशनल एयरपोर्ट के बाद, अब एम्स भी राजकोट को समर्पित है और इसके लिए राजकोट को, पूरे सौराष्‍ट्र को, पूरे गुजरात को बहुत-बहुत बधाई! और देश में जिन-जिन स्‍थानों पर आज ये एम्स समर्पित हो रहा है, वहां के भी सब नागरिक भाई-बहनों को मेरी तरफ से बहुत-बहुत बधाई।

साथियों,

आज का दिन सिर्फ राजकोट और गुजरात के लिए ही नहीं, बल्कि पूरे देश के लिए भी ऐतिहासिक है। दुनिया की 5वीं बड़ी अर्थव्यवस्था का हेल्थ सेक्टर कैसा होना चाहिए? विकसित भारत में स्वास्थ्य सुविधाओं का स्तर कैसा होगा? इसकी एक झलक आज हम राजकोट में देख रहे हैं। आज़ादी के 50 सालों तक देश में सिर्फ एक एम्स था और भी दिल्ली में। आज़ादी के 7 दशकें में सिर्फ 7 एम्स को मंजूरी दी गई, लेकिन वो भी कभी पूरे नहीं बन पाए। और आज देखिए, बीते सिर्फ 10 दिन में, 10 दिन के भीतर-भीतर, 7 नए एम्स का शिलान्यास और लोकार्पण हुआ है। इसलिए ही मैं कहता हूं कि जो 6-7 दशकों में नहीं हुआ, उससे कई गुना तेजी से हम देश का विकास करके, देश की जनता के चरणों में समर्पित कर रहे हैं। आज 23 राज्यों और केंद्र शासित प्रदेशों में 200 से अधिक हेल्थ केयर इंफ्रास्ट्रक्चर प्रोजेक्ट्स का भी शिलान्यास और लोकार्पण हुआ है। इनमें मेडिकल कॉलेज हैं, बड़े अस्पतालों के सैटेलाइट सेंटर हैं, गंभीर बीमारियों के लिए इलाज से जुड़े बड़े अस्पताल हैं।

साथियों,

आज देश कह रहा है, मोदी की गारंटी यानि गारंटी पूरा होने की गारंटी। मोदी की गारंटी पर ये अटूट भरोसा क्यों है, इसका जवाब भी एम्स में मिलेगा। मैंने राजकोट को गुजरात के पहले एम्स की गारंटी दी थी। 3 साल पहले शिलान्यास किया और आज लोकार्पण किया- आपके सेवक ने गारंटी पूरी की। मैंने पंजाब को अपने एम्स की गारंटी दी थी, भटिंडा एम्स का शिलान्यास भी मैंने किया था और आज लोकार्पण भी मैं ही कर रहा हूं- आपके सेवक ने गारंटी पूरी की। मैंने यूपी के रायबरेली को एम्स की गारंटी दी थी। कांग्रेस के शाही परिवार ने रायबरेली में सिर्फ राजनीति की, काम मोदी ने किया। मैंने रायबरेली एम्स का 5 साल पहले शिलान्यास किया और आज लोकार्पण किया। आपके इस सेवक ने गारंटी पूरी की। मैंने पश्चिम बंगाल को पहले एम्स की गारंटी दी थी, आज कल्याणी एम्स का लोकार्पण भी हुआ-आपके सेवक ने गारंटी पूरी कर दी। मैंने आंध्र प्रदेश को पहले एम्स की गारंटी दी थी, आज मंगलगिरी एम्स का लोकार्पण हुआ- आपके सेवक ने वो गारंटी भी पूरी कर दी। मैंने हरियाणा के रेवाड़ी को एम्स की गारंटी दी थी, कुछ दिन पहले ही, 16 फरवरी को उसकी आधारशिला रखी गई है। यानि आपके सेवक ने ये गारंटी भी पूरी की। बीते 10 वर्षों में हमारी सरकार ने 10 नए एम्स देश के अलग-अलग राज्यों में स्वीकृत किए हैं। कभी राज्यों के लोग केंद्र सरकार से एम्स की मांग करते-करते थक जाते थे। आज एक के बाद एक देश में एम्स जैसे आधुनिक अस्पताल और मेडिकल कॉलेज खुल रहे हैं। तभी तो देश कहता है- जहां दूसरों से उम्मीद खत्म हो जाती है, मोदी की गारंटी वहीं से शुरू हो जाती है।

साथियों,

भारत ने कोरोना को कैसे हराया, इसकी चर्चा आज पूरी दुनिया में होती है। हम ये इसलिए कर पाए, क्योंकि बीते 10 वर्षों में भारत का हेल्थ केयर सिस्टम पूरी तरह से बदल गया है। बीते दशक में एम्स, मेडिकल कॉलेज और क्रिटिकल केयर इंफ्रास्ट्रक्चर के नेटवर्क का अभूतपूर्व विस्तार हुआ है। हमने छोटी-छोटी बीमारियों के लिए गांव-गांव में डेढ़ लाख से ज्यादा आयुष्मान आरोग्य मंदिर बनाए हैं, डेढ़ लाख से ज्यादा। 10 साल पहले देश में करीब-करीब 380-390 मेडिकल कॉलेज थे, आज 706 मेडिकल कॉलेज हैं। 10 साल पहले MBBS की सीटें लगभग 50 हज़ार थीं, आज 1 लाख से अधिक हैं। 10 साल पहले मेडिकल की पोस्ट ग्रेजुएट सीटें करीब 30 हज़ार थीं, आज 70 हज़ार से अधिक हैं। आने वाले कुछ वर्षों में भारत में जितने युवा डॉक्टर बनने जा रहे हैं, उतने आजादी के बाद 70 साल में भी नहीं बने। आज देश में 64 हज़ार करोड़ रुपए का आयुष्मान भारत हेल्थ इंफ्रास्ट्रक्चर मिशन चल रहा है। आज भी यहां अनेक मेडिकल कॉलेज, टीबी के इलाज से जुड़े अस्पताल और रिसर्च सेंटर, PGI के सैटेलाइट सेंटर, क्रिटिकल केयर ब्लॉक्स, ऐसे अनेक प्रोजेक्ट्स का शिलान्यास और लोकार्पण किया गया है। आज ESIC के दर्जनों अस्पताल भी राज्यों को मिले हैं।

साथियों,

हमारी सरकार की प्राथमिकता, बीमारी से बचाव और बीमारी से लड़ने की क्षमता बढ़ाने की भी है। हमने पोषण पर बल दिया है, योग-आयुष और स्वच्छता पर बल दिया है, ताकि बीमारी से बचाव हो। हमने पारंपरिक भारतीय चिकित्सा पद्धति और आधुनिक चिकित्सा, दोनों को बढ़ावा दिया है। आज ही महाराष्ट्र और हरियाणा में योग और नेचुरोपैथी से जुड़े दो बड़े अस्पताल और रिसर्च सेंटर का भी उद्घाटन हुआ है। यहां गुजरात में ही पारंपरिक चिकित्सा पद्धति से जुड़ा WHO का वैश्विक सेंटर भी बन रहा है।

साथियों,

हमारी सरकार का ये निरंतर प्रयास है कि गरीब हो या मध्यम वर्ग, उसको बेहतर इलाज भी मिले और उसकी बचत भी हो। आयुष्मान भारत योजना की वजह से गरीबों के एक लाख करोड़ रुपए खर्च होने से बचे हैं। जन औषधि केंद्रों में 80 परसेंट डिस्काउंट पर दवा मिलने से गरीबों और मध्यम वर्ग के 30 हजार करोड़ रुपए खर्च होने से बचे हैं। यानि सरकार ने जीवन तो बचाया, इतना बोझ भी गरीब और मिडिल क्लास पर पड़ने से बचाया है। उज्ज्वला योजना से भी गरीब परिवारों को 70 हज़ार करोड़ रुपए से अधिक की बचत हो चुकी है। हमारी सरकार ने जो डेटा सस्ता किया है, उसकी वजह से हर मोबाइल इस्तेमाल करने वाले के करीब-करीब 4 हजार रुपए हर महीने बच रहे हैं। टैक्स से जुड़े जो रिफॉर्म्स हुए हैं, उसके कारण भी टैक्सपेयर्स को लगभग ढाई लाख करोड़ रुपए की बचत हुई है।

साथियों,

अब हमारी सरकार एक और ऐसी योजना लेकर आई है, जिससे आने वाले वर्षों में अनेक परिवारों की बचत और बढ़ेगी। हम बिजली का बिल ज़ीरो करने में जुटे हैं और बिजली से परिवारों को कमाई का भी इंतजाम कर रहे हैं। पीएम सूर्य घर- मुफ्त बिजली योजना के माध्यम से हम देश के लोगों की बचत भी कराएंगे और कमाई भी कराएंगे। इस योजना से जुड़ने वाले लोगों को 300 यूनिट तक मुफ्त बिजली मिलेगी और बाकी बिजली सरकार खरीदेगी, आपको पैसे देगी।

साथियों,

एक तरफ हम हर परिवार को सौर ऊर्जा का उत्पादक बना रहे हैं, तो वहीं सूर्य और पवन ऊर्जा के बड़े प्लांट भी लगा रहे हैं। आज ही कच्छ में दो बड़े सोलर प्रोजेक्ट और एक विंड एनर्जी प्रोजेक्ट का शिलान्यास हुआ है। इससे रिन्यूएबल एनर्जी के उत्पादन में गुजरात की क्षमता का और विस्तार होगा।

साथियों,

हमारा राजकोट, उद्यमियों का, श्रमिकों, कारीगरों का शहर है। ये वो साथी हैं जो आत्मनिर्भर भारत के निर्माण में बहुत बड़ी भूमिका निभा रहे हैं। इनमें से अनेक साथी हैं, जिन्हें पहली बार मोदी ने पूछा है, मोदी ने पूजा है। हमारे विश्वकर्मा साथियों के लिए देश के इतिहास में पहली बार एक राष्ट्रव्यापी योजना बनी है। 13 हज़ार करोड़ रुपए की पीएम विश्वकर्मा योजना से अभी तक लाखों लोग जुड़ चुके हैं। इसके तहत उन्हें अपने हुनर को निखारने और अपने व्यापार को आगे बढ़ाने में मदद मिल रही है। इस योजना की मदद से गुजरात में 20 हजार से ज्यादा लोगों की ट्रेनिंग पूरी हो चुकी है। इनमें से प्रत्येक विश्वकर्मा लाभार्थी को 15 हजार रुपए तक की मदद भी मिल चुकी है।

साथियों,

आप तो जानते हैं कि हमारे राजकोट में, हमारे यहाँ सोनार का काम कितना बड़ा काम है। इस विश्वकर्मा योजना का लाभ इस व्यवसाय से जुड़े लोगों को भी मिला है।

साथियों,

हमारे लाखों रेहड़ी-ठेले वाले साथियों के लिए पहली बार पीएम स्वनिधि योजना बनी है। अभी तक इस योजना के तहत लगभग 10 हज़ार करोड़ रुपए की मदद इन साथियों को दी जा चुकी है। यहां गुजरात में भी रेहड़ी-पटरी-ठेले वाले भाइयों को करीब 800 करोड़ रुपए की मदद मिली है। आप कल्पना कर सकते हैं कि जिन रेहड़ी-पटरी वालों को पहले दुत्कार दिया जाता था, उन्हें भाजपा किस तरह सम्मानित कर रही है। यहां राजकोट में भी पीएम स्वनिधि योजना के तहत 30 हजार से ज्यादा लोन दिए गए हैं।

साथियों,

जब हमारे ये साथी सशक्त होते हैं, तो विकसित भारत का मिशन सशक्त होता है। जब मोदी भारत को तीसरे नंबर की आर्थिक महाशक्ति बनाने की गारंटी देता है, तो उसका लक्ष्य ही, सबका आरोग्य और सबकी समृद्धि है। आज जो ये प्रोजेक्ट देश को मिले हैं, ये हमारे इस संकल्प को पूरा करेंगे, इसी कामना के साथ आपने जो भव्‍य स्‍वागत किया, एयरपोर्ट से यहां तक आने में पूरे रास्ते पर और यहां भी बीच में आकर के आप के दर्शन करने का अवसर मिला। पुराने कई साथियों के चेहरे आज बहुत सालों के बाद देखे हैं, सबको नमस्ते किया, प्रणाम किया। मुझे बहुत अच्छा लगा। मैं बीजेपी के राजकोट के साथियों का हृदय से अभिनंदन करता हूं। इतना बड़ा भव्य कार्यक्रम करने के लिए और फिर एक बार इन सारे विकास कामों के लिए और विकसित भारत के सपने को साकार करने के लिए हम सब मिलजुल करके आगे बढ़ें। आप सबको बहुत-बहुत बधाई। मेरे साथ बोलिए- भारत माता की जय! भारत माता की जय! भारत माता की जय!

बहुत-बहुत धन्यवाद!

डिस्क्लेमर: प्रधानमंत्री के भाषण का कुछ अंश कहीं-कहीं पर गुजराती भाषा में भी है, जिसका यहाँ भावानुवाद किया गया है।