ಫ್ರೀಡಂ ಪಾರ್ಕ್ ಮೆಟ್ರೊ ನಿಲ್ದಾಣದಿಂದ ಖಾಪ್ರಿ ಮೆಟ್ರೊ ನಿಲ್ದಾಣದವರೆಗೆ ಮೆಟ್ರೊ ರೈಲಿನಲ್ಲಿ ಪ್ರಯಾಣಿಸಿದ ಪ್ರಧಾನಿ ಮೋದಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ನಾಗ್ಪುರ ಮೆಟ್ರೋದ ಒಂದನೇ ಹಂತವನ್ನು ರಾಷ್ಟ್ರಕ್ಕೆ ಸಮರ್ಪಿಸಿ 'ನಾಗ್ಪುರ ಮೆಟ್ರೋ 2ನೇ ಹಂತಕ್ಕೆ ಖಾಪ್ರಿ ಮೆಟ್ರೋ ನಿಲ್ದಾಣದಲ್ಲಿ ಶಂಕುಸ್ಥಾಪನೆ ನೆರವೇರಿಸಿದರು.

ಖಾಪ್ರಿಯಿಂದ ಆಟೋಮೋಟಿವ್ ಸ್ಕ್ವೇರ್ ಮತ್ತು ಪ್ರಜಾಪತಿ ನಗರದಿಂದ ಲೋಕಮಾನ್ಯ ನಗರಕ್ಕೆ ಎರಡು ಉದ್ಘಾಟನಾ ಮೆಟ್ರೋ ರೈಲುಗಳಿಗೆ ಪ್ರಧಾನಮಂತ್ರಿಗಳು ಇದೇ ಸಂದರ್ಭದಲ್ಲಿ ಚಾಲನೆ ನೀಡಿದರು. ನಾಗ್ಪುರ ಮೆಟ್ರೋದ ಒಂದನೇ ಹಂತವನ್ನು 8,650 ಕೋಟಿ ರೂಪಾಯಿಗಿಂತಲೂ ಅಧಿಕ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಎರಡನೇ ಹಂತವನ್ನು 6,700 ಕೋಟಿ ರೂಪಾಯಿಗೂ ಅಧಿಕ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.

ಫ್ರೀಡಂ ಪಾರ್ಕ್ ಮೆಟ್ರೋ ನಿಲ್ದಾಣದಿಂದ ನಾಗ್ಪುರ ಮೆಟ್ರೋದಲ್ಲಿ ಸವಾರಿ ಮಾಡಿದ ನಂತರ ಪ್ರಧಾನಿ ಖಾಪ್ರಿ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದರು. ಫ್ರೀಡಂ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ಹತ್ತುವ ಮೊದಲು ಪ್ರಧಾನಮಂತ್ರಿಯವರು ನಾಗ್ಪುರ ಮೆಟ್ರೋ ರೈಲು ಯೋಜನೆಯನ್ನು ಮತ್ತು 'ಸಪ್ನೋ ಸೆ ಬೆಹ್ತಾರ್' ಪ್ರದರ್ಶನವನ್ನು ವೀಕ್ಷಿಸಿದರು. ಎಎಫ್‌ಸಿ ಗೇಟ್‌ನಲ್ಲಿ ಸ್ವತಃ ಇ-ಟಿಕೆಟ್ ಖರೀದಿಸಿದ ಪ್ರಧಾನ ಮಂತ್ರಿಗಳು, ವಿದ್ಯಾರ್ಥಿಗಳು, ನಾಗರಿಕರು ಮತ್ತು ಅಧಿಕಾರಿಗಳ ಜೊತೆ ಪ್ರಯಾಣಿಸಿದರು. ಪ್ರಯಾಣದುದ್ದಕ್ಕೂ ಅವರೊಂದಿಗೆ ಸಂವಾದ ನಡೆಸಿದರು.

ನಂತರ ಪ್ರಧಾನ ಮಂತ್ರಿಗಳು ಟ್ವೀಟ್ ಮಾಡಿ,  ನಾಗ್ಪುರ ಮೆಟ್ರೋದ ಒಂದನೇ ಹಂತದ ಉದ್ಘಾಟನೆಯ ಈ ಸಂದರ್ಭದಲ್ಲಿ ನಾನು ನಾಗ್ಪುರದ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಎರಡು ಮೆಟ್ರೋ ರೈಲುಗಳ ಸಂಚಾರಕ್ಕೆ ಚಾಲನೆ ನೀಡಿ ಮೆಟ್ರೋದಲ್ಲಿ ಸವಾರಿ ಮಾಡಿದೆನು. ಮೆಟ್ರೋ ಪ್ರಯಾಣ ಆರಾಮದಾಯಕ ಮತ್ತು ಅನುಕೂಲಕರವಾಗಿದೆ ಎಂದು ಬರೆದುಕೊಂಡಿದ್ದಾರೆ.

 

 

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
PM Modi inaugurates Northeast’s first Emergency Landing Facility in Moran. Why it matters?

Media Coverage

PM Modi inaugurates Northeast’s first Emergency Landing Facility in Moran. Why it matters?
NM on the go

Nm on the go

Always be the first to hear from the PM. Get the App Now!
...
Prime Minister pays homage to great social reformer Shri Sant Sevalal Maharaj
February 15, 2026

The Prime Minister, Shri Narendra Modi paid tributes to the great social reformer Shri Sant Sevalal Maharaj on his birth anniversary, today. “By spreading the message of truth, non-violence, and high moral values, he instilled a new consciousness in society. His inspiring life will forever continue to guide the people of the country”, Shri Modi said.

The Prime Minister posted on X:

“महान समाज सुधारक श्री संत सेवालाल महाराज को उनकी जयंती पर शत-शत नमन। सत्य, अहिंसा और उच्च नैतिक मूल्यों का संदेश देकर उन्होंने समाज में नवचेतना का संचार किया। उनका प्रेरणादायी जीवन सदैव देशवासियों का मार्गदर्शन करता रहेगा।

जय सेवालाल!”