ಕೆನಡಾದ ಕನನಾಸ್ಕಿಸ್‌ನಲ್ಲಿ ನಡೆದ ಜಿ-7 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಜರ್ಮನಿಯ ಚಾನ್ಸೆಲರ್ ಗೌರವಾನ್ವಿತ ಶ್ರೀ ಫ್ರೆಡ್ರಿಕ್ ಮೆರ್ಜ್ ಅವರನ್ನು ಭೇಟಿಯಾದರು. 2025 ಮೇ ತಿಂಗಳಲ್ಲಿ ಚಾನ್ಸೆಲರ್ ಮೆರ್ಜ್ ಅಧಿಕಾರ ವಹಿಸಿಕೊಂಡ ನಂತರ ಉಭಯ ನಾಯಕರ ನಡುವಿನ ಮೊದಲ ಭೇಟಿ ಇದಾಗಿದೆ. ಚುನಾವಣೆಯಲ್ಲಿ ಗೆಲುವು ಸಾಧಿಸಿ ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಪ್ರಧಾನಮಂತ್ರಿ ಮೆರ್ಜ್ ಅವರನ್ನು ಅಭಿನಂದಿಸಿದರು. ಕಳೆದ ವಾರ ಅಹಮದಾಬಾದ್‌ನಲ್ಲಿ ನಡೆದ ವಿಮಾನ ಅಪಘಾತ ದುರಂತದ ಬಗ್ಗೆ ಜರ್ಮನ್ ಸರ್ಕಾರ ವ್ಯಕ್ತಪಡಿಸಿದ ಸಂತಾಪಕ್ಕೆ ಅವರು ಆಳವಾದ ಕೃತಜ್ಞತೆ ವ್ಯಕ್ತಪಡಿಸಿದರು.

ದ್ವಿಪಕ್ಷೀಯ ಸಂಬಂಧದಲ್ಲಿ ಆಗುತ್ತಿರುವ ಸುಸ್ಥಿರ ಪ್ರಗತಿಗೆ ಉಭಯ ನಾಯಕರು ಸಂತೋಷ ವ್ಯಕ್ತಪಡಿಸಿದರು. ವ್ಯಾಪಾರ ಮತ್ತು ಹೂಡಿಕೆ, ರಕ್ಷಣೆ ಮತ್ತು ಭದ್ರತೆ, ಹಸಿರು ಮತ್ತು ಸುಸ್ಥಿರ ಅಭಿವೃದ್ಧಿ ಪಾಲುದಾರಿಕೆ, ಹಸಿರು ಇಂಧನ, ತಂತ್ರಜ್ಞಾನ, ನಾವೀನ್ಯತೆ, ಶಿಕ್ಷಣ ಮತ್ತು ಚಲನಶೀಲತೆಯ ಪ್ರಮುಖ ಕ್ಷೇತ್ರಗಳಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸುವ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು. 25 ವರ್ಷಗಳು ಪೂರ್ಣಗೊಂಡ ಮೈಲಿಗಲ್ಲನ್ನು ಗುರುತಿಸುವ ಭಾರತ-ಜರ್ಮನಿ ಕಾರ್ಯತಂತ್ರ ಪಾಲುದಾರಿಕೆಯನ್ನು ಮತ್ತಷ್ಟು ಆಳಗೊಳಿಸಲು ಮತ್ತು ವೈವಿಧ್ಯಗೊಳಿಸಲು ಎರಡೂ ಕಡೆಯವರು ಒಪ್ಪಿಗೆ ಸೂಚಿಸಿದರು.
ಭಯೋತ್ಪಾದನೆಯು ವಿಶ್ವದ ಶಾಂತಿ ಮತ್ತು ಸ್ಥಿರತೆಗೆ ದೊಡ್ಡ ಬೆದರಿಕೆಯಾಗಿದೆ ಎಂದು ಇಬ್ಬರೂ ನಾಯಕರು ಒಪ್ಪಿಕೊಂಡರು. ಈ ನಿಟ್ಟಿನಲ್ಲಿ, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತದ ಕ್ರಮಗಳಿಗೆ ಜರ್ಮನಿಯ ಬಲವಾದ ಒಗ್ಗಟ್ಟು ಮತ್ತು ಬೆಂಬಲ ನೀಡುತ್ತಿರುವುದಕ್ಕೆ ಪ್ರಧಾನಮಂತ್ರಿ ಅವರು ಚಾನ್ಸೆಲರ್ ಮೆರ್ಜ್ ಅವರಿಗೆ ಧನ್ಯವಾದ ಅರ್ಪಿಸಿದರು.
ನಾಯಕರು ಪ್ರಮುಖ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ಬೆಳವಣಿಗೆಗಳ ಬಗ್ಗೆಯೂ ವಿಚಾರ ವಿನಿಮಯ ಮಾಡಿಕೊಂಡರು. ಪರಸ್ಪರ ಅನುಕೂಲಕರ ಸಮಯದಲ್ಲಿ ಚಾನ್ಸೆಲರ್ ಮೆರ್ಜ್ ಅವರನ್ನು ಭಾರತದಲ್ಲಿ ಸ್ವಾಗತಿಸಲು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಮಂತ್ರಿ ಮೋದಿ ತಿಳಿಸಿದರು.
Delighted to hold talks with Chancellor Friedrich Merz on the sidelines of the G7 Summit in Canada. India and Germany are close friends, connected by shared values. This year we mark 25 years of our Strategic Partnership. We discussed how to work even more closely in areas like… pic.twitter.com/9vEiYCqyXW
— Narendra Modi (@narendramodi) June 17, 2025
Ich freue mich, am Rande des G7-Gipfels in Kanada Gespräche mit Bundeskanzler Friedrich Merz zu führen. Indien und Deutschland sind enge Freunde, die durch gemeinsame Werte verbunden sind. In diesem Jahr feiern wir das 25-jährige Bestehen unserer strategischen Partnerschaft. Wir… pic.twitter.com/yMlTCAKNob
— Narendra Modi (@narendramodi) June 17, 2025


