ಭಾರತದಲ್ಲಿ ಜಪಾನಿನ ಹೂಡಿಕೆಗೆ ಅನುಕೂಲವಾಗುವಂತೆ ಮತ್ತು ತ್ವರಿತವಾಗಿ ಟ್ರ್ಯಾಕ್ ಮಾಡಲು ಭಾರತದಲ್ಲಿ ಅಭಿವೃದ್ಧಿಪಡಿಸಲಾದ ಜಪಾನ್ ಪ್ಲಸ್ ವ್ಯವಸ್ಥೆಯನ್ನು ಪ್ರಧಾನಮಂತ್ರಿ ಅವರು ಎತ್ತಿ ತೋರಿಸಿದರು
ಭಾರತದ ಆಡಳಿತವು ನೀತಿ ಚಾಲಿತವಾಗಿದೆ ಮತ್ತು ಪಾರದರ್ಶಕ ಹಾಗು ಊಹಿಸಬಹುದಾದ ವಾತಾವರಣವನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಬದ್ಧವಾಗಿದೆ: ಪ್ರಧಾನಮಂತ್ರಿ
ಭಾರತದ ಯುವಜನರು, ನುರಿತ ಕೌಶಲ್ಯಯುಕ್ತ ಕಾರ್ಮಿಕರು ಮತ್ತು ಕಡಿಮೆ ವೆಚ್ಚದ ಕಾರ್ಮಿಕರು ಉತ್ಪಾದನೆಗೆ ಆಕರ್ಷಕ ತಾಣವನ್ನಾಗಿ ಮಾಡಿದ್ದಾರೆ: ಪ್ರಧಾನಮಂತ್ರಿ
ಭಾರತದ ವಿಶಾಲ ವೈವಿಧ್ಯತೆಯನ್ನು ಗಮನಿಸಿದರೆ, ಎಐ ಭೂದೃಶ್ಯದಲ್ಲಿ ದೇಶವು ಪ್ರಮುಖ ಪಾತ್ರ ವಹಿಸುತ್ತದೆ: ಪ್ರಧಾನಮಂತ್ರಿ
ನಿಯೋಗವು ವಿಕಸಿತ ಭಾರತ @2047ರ ಚಿಂತನೆಗೆ ಬೆಂಬಲ ಮತ್ತು ಬದ್ಧತೆಯನ್ನು ವ್ಯಕ್ತಪಡಿಸಿತು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ 7 ಲೋಕ ಕಲ್ಯಾಣ ಮಾರ್ಗದಲ್ಲಿ,  ಭಾರತ ಮತ್ತು ಜಪಾನ್ ನಡುವಿನ ಆರ್ಥಿಕ ಸಹಕಾರವನ್ನು ಆಳಗೊಳಿಸುವ ನಿಟ್ಟಿನಲ್ಲಿ ಅಭಿಪ್ರಾಯಗಳು ಮತ್ತು ಆಲೋಚನೆಗಳನ್ನು ಆಲಿಸಲು ಕೀಜೈ ಡೊಯುಕೈ ಅಧ್ಯಕ್ಷ ಶ್ರೀ ತಕೇಶಿ ನೈನಾಮಿ ನೇತೃತ್ವದ ಕೀಜೈ ಡೊಯುಕೈ (ಜಪಾನ್ ಕಾರ್ಪೊರೇಟ್ ಕಾರ್ಯನಿರ್ವಾಹಕರ ಸಂಘ) ಮತ್ತು ಇತರ 20 ವಾಣಿಜ್ಯ ಪ್ರತಿನಿಧಿಗಳನ್ನು ಒಳಗೊಂಡ ಉನ್ನತ ಮಟ್ಟದ ನಿಯೋಗವನ್ನು ಸ್ವಾಗತಿಸಿದರು.

ದ್ವಿಪಕ್ಷೀಯ ವ್ಯಾಪಾರವನ್ನು ಬಲಪಡಿಸುವುದು, ಹೂಡಿಕೆ ಅವಕಾಶಗಳನ್ನು ಹೆಚ್ಚಿಸುವುದು ಮತ್ತು ಕೃಷಿ, ಸಾಗರ ಉತ್ಪನ್ನಗಳು, ಬಾಹ್ಯಾಕಾಶ, ರಕ್ಷಣೆ, ವಿಮೆ, ತಂತ್ರಜ್ಞಾನ, ಮೂಲಸೌಕರ್ಯ, ನಾಗರಿಕ ವಿಮಾನಯಾನ, ಶುದ್ಧ ಇಂಧನ, ಪರಮಾಣು ಶಕ್ತಿ ಮತ್ತು ಎಂಎಸ್ಎಂಇ ಪಾಲುದಾರಿಕೆಯಂತಹ ಪ್ರಮುಖ ಕ್ಷೇತ್ರಗಳಲ್ಲಿ ಸಹಯೋಗವನ್ನು ಉತ್ತೇಜಿಸುವುದು ಈ ಚರ್ಚೆಯ ಭಾಗವಾಗಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಎತ್ತಿ ತೋರಿಸಿದರು ಮತ್ತು ವ್ಯಾಪಾರ ಸ್ನೇಹಿ ವಾತಾವರಣವನ್ನು ಒದಗಿಸುವ ಭಾರತದ ದೃಢ ನಿರ್ಧಾರವನ್ನು ಪುನರುಚ್ಚರಿಸಿದರು. ಭಾರತದಲ್ಲಿ ಜಪಾನಿನ ಹೂಡಿಕೆಗೆ ಅನುಕೂಲವಾಗುವಂತೆ ಮತ್ತು ತ್ವರಿತವಾಗಿ ಟ್ರ್ಯಾಕ್ ಮಾಡಲು ಭಾರತದಲ್ಲಿ ಅಭಿವೃದ್ಧಿಪಡಿಸಲಾದ ಜಪಾನ್ ಪ್ಲಸ್ ವ್ಯವಸ್ಥೆಯನ್ನು ಅವರು ಎತ್ತಿ ತೋರಿಸಿದರು. ಹೂಡಿಕೆದಾರರಿಗೆ ಯಾವುದೇ ಅಸ್ಪಷ್ಟತೆ/ಗೊಂದಲ ಅಥವಾ ಹಿಂಜರಿಕೆ ಇರಬಾರದು ಎಂದು ಅವರು ಒತ್ತಿ ಹೇಳಿದರು. ಭಾರತದ ಆಡಳಿತವು ನೀತಿ-ಚಾಲಿತವಾಗಿದೆ ಮತ್ತು ಪಾರದರ್ಶಕತೆಯನ್ನು ಒಳಗೊಂಡು ಊಹಿಸಬಹುದಾದ ವಾತಾವರಣವನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದರು.

ದೇಶದಲ್ಲಿ ವಾಯುಯಾನ ಕ್ಷೇತ್ರದ ಅಗಾಧ ಪ್ರಮಾಣದ ಬೆಳವಣಿಗೆಯ ಬಗ್ಗೆ ಪ್ರಧಾನಮಂತ್ರಿ ಮಾತನಾಡಿದರು. ಹೊಸ ವಿಮಾನ ನಿಲ್ದಾಣಗಳ ನಿರ್ಮಾಣ ಮತ್ತು ಲಾಜಿಸ್ಟಿಕ್ಸ್ ಸಾಮರ್ಥ್ಯಗಳ ವಿಸ್ತರಣೆ ಸೇರಿದಂತೆ ಗಮನಾರ್ಹ ಮೂಲಸೌಕರ್ಯಗಳನ್ನು ನಿರ್ಮಿಸುವತ್ತ ಭಾರತ ಕೆಲಸ ಮಾಡುತ್ತಿದೆ ಎಂಬುದನ್ನು ಅವರು ಉಲ್ಲೇಖಿಸಿದರು.

ಭಾರತದ ವಿಶಾಲ ವೈವಿಧ್ಯತೆಯನ್ನು ಗಮನಿಸಿದರೆ, ಎಐ ಭೂದೃಶ್ಯದಲ್ಲಿ ದೇಶವು ಪ್ರಮುಖ ಪಾತ್ರ ವಹಿಸಲಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಕೃತಕ ಬುದ್ಧಿಮತ್ತೆಯಲ್ಲಿ ತೊಡಗಿರುವವರೊಂದಿಗೆ ಸಹಯೋಗದ ಮಹತ್ವವನ್ನು ಅವರು ಒತ್ತಿ ಹೇಳಿದರು, ಭಾರತದೊಂದಿಗೆ ಪಾಲುದಾರರಾಗಲು ಅವರನ್ನು ಪ್ರೋತ್ಸಾಹಿಸಿದರು.

ಜೈವಿಕ ಇಂಧನಗಳ ಮೇಲೆ ಗಮನ ಕೇಂದ್ರೀಕರಿಸಿದ ಅಭಿಯಾನವನ್ನು ಪ್ರಾರಂಭಿಸಿದ ಭಾರತವು ಹಸಿರು ಇಂಧನ ಕ್ಷೇತ್ರದಲ್ಲಿ ಗಮನಾರ್ಹ ದಾಪುಗಾಲು ಹಾಕುತ್ತಿದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ವಿಶೇಷವಾಗಿ ಕೃಷಿ ವಲಯವು ಜೈವಿಕ ಇಂಧನಗಳ ಪರಿಣಾಮವಾಗಿ  ಪ್ರಮುಖ ಮೌಲ್ಯವರ್ಧನೆಯ ಪ್ರಯೋಜನ ಪಡೆಯಲಿದೆ ಎಂದು ಅವರು ಹೇಳಿದರು.

ವಿಮಾ ವಲಯವನ್ನು ಮುಕ್ತ ಮಾಡುವ ಬಗ್ಗೆ ಮತ್ತು ಬಾಹ್ಯಾಕಾಶ ಹಾಗು ಪರಮಾಣು ಇಂಧನದಂತಹ (ಅಣು ಶಕ್ತಿ) ಅತ್ಯಾಧುನಿಕ ಕ್ಷೇತ್ರಗಳಲ್ಲಿ ಅವಕಾಶಗಳನ್ನು ವಿಸ್ತರಿಸುವ ಬಗ್ಗೆಯೂ ಪ್ರಧಾನಮಂತ್ರಿ ಮಾತನಾಡಿದರು.

ಜಪಾನ್ ನ ವಾಣಿಜ್ಯೋದ್ಯಮದ ಹಿರಿಯ ನಾಯಕರನ್ನು ಒಳಗೊಂಡ ಕೀಜೈ ಡೊಯುಕೈ ನಿಯೋಗವು ಭಾರತಕ್ಕಾಗಿರುವ ತಮ್ಮ ಯೋಜನೆಗಳನ್ನು ಹಂಚಿಕೊಂಡಿತು. ಮಾನವ ಸಂಪನ್ಮೂಲ ಮತ್ತು ಕೌಶಲ್ಯ ಅಭಿವೃದ್ಧಿಯಲ್ಲಿ ಭಾರತ ಮತ್ತು ಜಪಾನ್ ನಡುವಿನ ಪೂರಕ ಸಂಗತಿಗಳನ್ನು ಬಳಸಿಕೊಳ್ಳುವ ಆಸಕ್ತಿಯನ್ನು ನಿಯೋಗ ವ್ಯಕ್ತಪಡಿಸಿತು. ಎರಡೂ ಕಡೆಯವರು ಭವಿಷ್ಯದ ಸಹಯೋಗಗಳ ಬಗ್ಗೆ ಆಶಾವಾದವನ್ನು ವ್ಯಕ್ತಪಡಿಸಿದರು ಮತ್ತು ಮುಂಬರುವ ವರ್ಷಗಳಲ್ಲಿ ವ್ಯಾಪಾರ ಮತ್ತು ಹೂಡಿಕೆ ಸಂಬಂಧಗಳನ್ನು ಆಳಗೊಳಿಸುವುದನ್ನು  ಎದುರು ನೋಡುವುದಾಗಿ ತಿಳಿಸಿದರು.  

ಸನ್ಟೋರಿ ಹೋಲ್ಡಿಂಗ್ಸ್ ಲಿಮಿಟೆಡ್ ನ ಪ್ರತಿನಿಧಿ ನಿರ್ದೇಶಕ, ಅಧ್ಯಕ್ಷ ಮತ್ತು ಸಿಇಒ ನೈನಾಮಿ ತಕೇಶಿ ಅವರು ಪ್ರಧಾನಮಂತ್ರಿ ಮೋದಿಯವರ ನಾಯಕತ್ವದಲ್ಲಿ ಭಾರತ ಮತ್ತು ಜಪಾನ್ ನಡುವೆ ಸಂಬಂಧ ಅಭಿವೃದ್ಧಿ ಹೊಂದುತ್ತಿರುವುದನ್ನು ಶ್ಲಾಘಿಸಿದರು. ಭಾರತದಲ್ಲಿ ಹೂಡಿಕೆ ಮಾಡಲು ಜಪಾನ್ ಗೆ ದೊಡ್ಡ ಅವಕಾಶವನ್ನು ಎದುರು ನೋಡುತ್ತಿದ್ದೇನೆ ಎಂದು ಅವರು ಹೇಳಿದರು. ಮೇಕ್ ಇನ್ ಇಂಡಿಯಾ, ಮೇಕ್ ಫಾರ್ ದಿ ವರ್ಲ್ಡ್ ನ ಪ್ರಧಾನಮಂತ್ರಿ ಮೋದಿಯವರ ಚಿಂತನೆ/ದೃಷ್ಟಿಕೋನವನ್ನು ಅವರು ವಿಶೇಷವಾಗಿ ಪ್ರಸ್ತಾಪಿಸಿದರು.

ಎನ್ಇಸಿ ಕಾರ್ಪೊರೇಷನ್ನಿನ ಕಾರ್ಪೊರೇಟ್ ಹಿರಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷ ಮತ್ತು ಮುಖ್ಯ ಸರ್ಕಾರಿ ವ್ಯವಹಾರಗಳ ಅಧಿಕಾರಿ ಟನಾಕಾ ಶಿಗೆಹಿರೊ, ಜಪಾನಿನ ಉದ್ಯಮವು ಭಾರತದಲ್ಲಿ ಹೂಡಿಕೆ ಮಾಡುವ ಬಗ್ಗೆ ಪ್ರಧಾನಮಂತ್ರಿ ಮೋದಿ ತಮ್ಮ ದೃಷ್ಟಿಕೋನ ಮತ್ತು ನಿರೀಕ್ಷೆಗಳನ್ನು ಸ್ಪಷ್ಟವಾಗಿ ವಿವರಿಸಿದ್ದಾರೆ ಎಂದು ಹೇಳಿದರು.

ಅರ್ಥಪೂರ್ಣ ಮತ್ತು ಪರಸ್ಪರ ಪ್ರಯೋಜನಕಾರಿ ರೀತಿಯಲ್ಲಿ ವಿಕಸಿತ ಭಾರತ @ 2047ರ ದೃಷ್ಟಿಕೋನಕ್ಕೆ ಜಪಾನಿನ ಉದ್ಯಮದ ಬೆಂಬಲ ಮತ್ತು ಬದ್ಧತೆಯನ್ನು ಸಭೆ ಒತ್ತಿಹೇಳಿತು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s Defence Exports Explode: ₹40,000 Crore Milestone Signals a New Manufacturing Era

Media Coverage

India’s Defence Exports Explode: ₹40,000 Crore Milestone Signals a New Manufacturing Era
NM on the go

Nm on the go

Always be the first to hear from the PM. Get the App Now!
...
Text of PM’s remarks during inauguration of Swaminarayan Hindu Temple in Paris
September 06, 2026

पूज्य महंत स्वामी, फ्रांस सरकार के सम्मानित प्रतिनिधिगण, उपस्थित अतिथिगण, इंडियन कम्युनिटी के मेरे साथी, देश दुनिया से जुड़े सभी हरि भक्त, देवियों और सज्जनों, जय स्वामीनारायण!

आज फ्रांस की राजधानी पेरिस में भव्य स्वामीनारायण मंदिर का लोकार्पण हो रहा है। यह लोकार्पण भारत और फ्रांस के सांस्कृतिक संबंधों का नया युग स्तंभ है। पूज्य संत जनों और सनातन परंपरा के श्रेष्ठ जनों के आशीर्वाद के साथ आज इस लोकार्पण का मंच ‘वसुधैव कुटुम्बकम’ के भाव का मंच बन गया है। भगवान स्वामीनारायण की कृपा और हमारे संतों का स्नेह, संतों का आशीर्वाद, मेरा सौभाग्य है कि मुझे ऐसे पुण्य अवसरों से जुड़ने का अवसर हमेशा मिलता रहता है। आज भी मैं भले ही पेरिस में आप सबके बीच उपस्थित नहीं हूं, लेकिन मन से और हृदय से, मैं स्वयं को आपके बीच ही अनुभव कर रहा हूं।

साथियों,

आज इस अवसर पर मैं परम पूज्य प्रमुख स्वामी जी महाराज का भी श्रद्धापूर्वक स्मरण करता हूं। प्राचीन काल में भारत का जो सांस्कृतिक आध्यात्मिक वैभव था, उन्होंने उसके पुनर्जागरण का एक अभियान शुरू किया था। आज उसका प्रकाश यूरोप समेत पूरी दुनिया में फैल रहा है। 2024 में अबू धाबी में भव्य मंदिर का लोकार्पण हुआ था। आज वहां हजारों लोग दर्शन करने जाते हैं और अब यहां पेरिस में स्वामीनारायण मंदिर का निर्माण सृजन की यह निरंतरता, यह संतों की संकल्प शक्ति का ही प्रमाण है। मैं पुनीत कार्य के लिए पूज्य महंत स्वामी का आभार प्रकट करता हूं, मैं उनके चरणों में प्रणाम करता हूं। मैं BAPS स्वामीनारायण संस्था को और करोड़ों हरि भक्तों को इस अवसर पर हृदय की गहराई से बधाई देता हूं।

साथियों,

BAPS के माध्यम से जब अलग-अलग देश में मंदिरों की प्राण प्रतिष्ठा होती है, तो वहां भारत के प्राचीन विचार और मानवीय मूल्य भी साथ-साथ ही जाते हैं और भारत का विचार कहता है ‘समानं मनः सह चित्तमेषाम्’ अर्थात हमारे मन समान हो, हमारे हृदय साथ जुड़े। इसलिए आज जब फ्रांस में इतना भव्य मंदिर बनकर तैयार हुआ है, यह फ्रांस की विविधता को तो समृद्ध करेगा ही, इससे भारत और फ्रांस के सांस्कृतिक संबंधों को भी ऊर्जा मिलेगी।

साथियों,

बीते वर्षों में भारत और फ्रांस के संबंध नई ऊंचाइयों तक पहुंचे हैं। मेरे मित्र, प्रेसिडेंट मैक्रों के साथ मिलकर दोनों देश एक Special Global Strategic Partnership बना रहे हैं। Technology, AI और Defence से लेकर Space और Climate Action तक हम एक नई गति और नई ऊर्जा के साथ मिलकर के आगे बढ़ रहे हैं। हम 2026 को India-France Year of Innovation के रूप में भी सेलिब्रेट कर रहे हैं। भारत-फ्रांस की ये Strategic Partnership इसलिए भी खास है, क्योंकि ये हमारे पुराने सांस्कृतिक-राजनैतिक सम्बन्धों की मजबूत बुनियाद पर टिकी है। इतिहास गवाह है, फ्रांस में भारतीय सैनिकों के बलिदान का इतिहास आज भी मन-मंदिर में जीवित है। भाषा से जुड़े विषयों में रुचि रखने वाले लोग यह भी जानते हैं कि फ्रेंच स्कॉलर्स ने संस्कृत को लोकप्रिय बनाने में कितनी अहम भूमिका निभाई है। रामकृष्ण परमहंस और स्वामी विवेकानंद पर रोमाँ रोलाँ की की लेखनी हमारी सोसाइटीज़ को और करीब लाई है। पेरिस से पुडुचेरी के अरबिंदो आश्रम तक 'The mother' की spiritual journey, उसने कितने ही भारतीय और फ्रेंच साधकों को inspire किया है।

साथियों,

दशकों पहले श्रील प्रभुपाद स्वामी भी फ्रांस आए थे। इस्कॉन के जरिए भारत फ्रांस के बीच आध्यात्मिक सम्बन्धों का नया अध्याय उन्होंने शुरू किया था। आज योग भी भारत-फ्रांस के people to people कनेक्ट का एक माध्यम बन चुका है। 'इंटरनेशनल योगा डे' पर एफिल टॉवर के सामने से आने वाली तस्वीरें फ्रांस में योग की लोकप्रियता का उदाहरण बनती हैं और अब BAPS के इस भव्य मंदिर के जरिए, हमारे उन सांस्कृतिक सम्बन्धों में एक नया अध्याय जुड़ रहा है।

साथियों,

इन दिनों, भारत फ्रांस Joint Ventures की संभावनाओं पर बातें होती हैं। स्वामीनारायण मंदिर ने इस संभावना में भी एक नया आयाम जोड़ा है। यह मंदिर 'मेड इन इंडिया' है और 'बिल्ट इन फ्रांस' है। इसके काफी पत्थरों को भारत में तराशा गया है। भारत की प्राचीन प्रतिभा यहाँ फ्रांस में आधुनिक इंजीनियरिंग से आकर जुड़ चुकी है। पेरिस में इस भव्य मंदिर ने आकार लिया है। इसलिए, मैं आशा करता हूँ, यह मंदिर सदियों तक भारत और फ्रांस के बीच सहयोग और संभावनाओं का भी प्रतीक बनकर उभरेगा।

साथियों,

स्वामीनारायण मंदिर हमेशा से भक्ति के साथ-साथ सेवा का माध्यम भी रहे हैं। मुझे बताया गया है, यह मंदिर भी सेवा प्रकल्पों का वैसा ही केंद्र बनेगा। मुझे विश्वास है कि यहाँ से भारतीय संस्कृति के जो स्वर निकलेंगे, उनका लाभ पूरे यूरोप में लोगों को मिलेगा। भविष्य में मुझे जब भी समय मिलेगा, मैं इस मंदिर में दर्शन करने का प्रयास अवश्य करूंगा। इन्हीं शब्दों के साथ, एक बार फिर आज के इस लोकार्पण समारोह में सम्मिलित सभी अतिथिगणों को, सभी परिवारों को, सभी हरि भक्तों को और पूरी Indian Diaspora को मेरी ओर से इस शुभारंभ पर्व की ढेरों शुभकामनाएं!

बहुत-बहुत धन्यवाद!

मर्सी बोकू!

जय स्वामीनारायण!