ಪ್ರಧಾನಮಂತ್ರಿ ಅಧ್ಯಕ್ಷತೆಯಲ್ಲಿ ಅಹಮದಾಬಾದ್ ವಿಮಾನ ಪತನ ದುರಂತದ ಪರಿಶೀಲನಾ ಸಭೆ

ಅಹಮದಾಬಾದ್ ನಲ್ಲಿ ಸಂಭವಿಸಿದ ವಿಮಾನ ಪತನ ದುರ್ಘಟನೆಯಲ್ಲಿ ಅನೇಕರು ಮೃತಪಟ್ಟಿದ್ದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಲ್ಲಿಗೆ ಭೇಟಿ ನೀಡಿದರು. ಸಂತ್ರಸ್ತ ಕುಟುಂಬಗಳ ಜೊತೆಗೆ ನಿಲ್ಲುವುದಾಗಿ ಹೇಳಿರುವ ಶ್ರೀ ಮೋದಿ ಅವರು, ವಿಮಾನದಲ್ಲಿದ್ದವರ ಪೈಕಿ ಬದುಕುಳಿದ ಏಕೈಕ ವ್ಯಕ್ತಿ ಹಾಗೂ ಇತರ ಗಾಯಗೊಂಡವರನ್ನು ಭೇಟಿ ಮಾಡಿದರು ಹಾಗೂ ಈ ಸಂಕಷ್ಟದ ಸಮಯದಲ್ಲಿ ರಾಷ್ಟ್ರದ ದೃಢ ಬೆಂಬಲದ ಭರವಸೆ ನೀಡಿದರು.

ಪ್ರಸ್ತುತ ನಡೆಯುತ್ತಿರುವ ಪರಿಹಾರ ಮತ್ತು ಇತರ ಕಾರ್ಯಗಳ ಮೌಲ್ಯಮಾಪನ ಕುರಿತಾಗಿ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಉನ್ನತ ಅಧಿಕಾರಿಗಳ ಪರಿಶೀಲನಾ ಸಭೆ ನಡೆಯಿತು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು.   

ಎಕ್ಸ್ ನಲ್ಲಿ ಪ್ರತ್ಯೇಕ ಪೋಸ್ಟ್ ಗಳಲ್ಲಿ ಶ್ರೀ ಮೋದಿ ಅವರು ಹೀಗೆ ಹೇಳಿದ್ದಾರೆ.

“"ಅಹಮದಾಬಾದ್‌ನಲ್ಲಿ ಸಂಭವಿಸಿದ ಭೀಕರ ವಿಮಾನ ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಸೇರಿದಂತೆ ಇತರ ಗಾಯಗೊಂಡವರನ್ನು ಭೇಟಿಯಾದೆ, ಈ ಅತೀವ ಸಂಕಷ್ಟದ ಸಮಯದಲ್ಲಿ ಅವರು ಮತ್ತು ಅವರ ಕುಟುಂಬದವರೊಂದಿಗೆ ನಾವಿದ್ದೇವೆ ಎಂಬ ಭರವಸೆ ನೀಡಿದೆ. ಇಡೀ ರಾಷ್ಟ್ರವು ಗಾಯಾಳುಗಳ ಶೀಘ್ರ ಚೇತರಿಕೆಗೆ ಪ್ರಾರ್ಥಿಸುತ್ತಿದೆ."

"ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಉನ್ನತ ಅಧಿಕಾರಿಗಳೊಂದಿಗೆ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದೆ."

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Cabinet approves ₹1,570 crore ship repair facility at Vadinar, Gujarat

Media Coverage

Cabinet approves ₹1,570 crore ship repair facility at Vadinar, Gujarat
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 6 ಮೇ 2026
May 06, 2026

New India, New Pride: When Self-Reliance Meets Results — A Tribute to PM Modi