ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಚೀನಾದ ಟಿಯಾಂಜಿನ್ ನಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯ ನೇಪಥ್ಯದಲ್ಲಿ ರಷ್ಯಾ ಒಕ್ಕೂಟದ ಅಧ್ಯಕ್ಷ ಘನತೆವೆತ್ತ ಶ್ರೀ ವ್ಲಾದಿಮಿರ್ ಪುಟಿನ್ ಅವರನ್ನು ಭೇಟಿ ಮಾಡಿದರು.

ನಾಯಕರು ಆರ್ಥಿಕ, ಹಣಕಾಸು ಮತ್ತು ಇಂಧನ ಕ್ಷೇತ್ರಗಳು ಸೇರಿದಂತೆ ದ್ವಿಪಕ್ಷೀಯ ಸಹಕಾರದ ಬಗ್ಗೆ ಚರ್ಚಿಸಿದರು ಮತ್ತು ಈ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧಗಳ ನಿರಂತರ ಬೆಳವಣಿಗೆಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.
ಇಬ್ಬರೂ ನಾಯಕರು ಉಕ್ರೇನ್ ಗೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳು ಸೇರಿದಂತೆ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಚರ್ಚಿಸಿದರು. ಉಕ್ರೇನ್ ನಲ್ಲಿನ ಸಂಘರ್ಷವನ್ನು ಪರಿಹರಿಸಲು ಇತ್ತೀಚೆಗೆ ಕೈಗೊಂಡಿರುವ ಉಪಕ್ರಮಗಳಿಗೆ ತಮ್ಮ ಬೆಂಬಲವನ್ನು ಪುನರುಚ್ಚರಿಸಿದ ಪ್ರಧಾನಮಂತ್ರಿ ಅವರು, ಸಂಘರ್ಷವನ್ನು ತ್ವರಿತವಾಗಿ ಕೊನೆಗೊಳಿಸುವ ಮತ್ತು ದೀರ್ಘಕಾಲೀನ ಶಾಂತಿ ಪರಿಹಾರವನ್ನು ಕಂಡುಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದರು.

ಉಭಯ ದೇಶಗಳ ನಡುವಿನ ವಿಶೇಷ ಮತ್ತು ವಿಶೇಷ ವ್ಯೂಹಾತ್ಮಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಇಬ್ಬರೂ ನಾಯಕರು ತಮ್ಮ ಬೆಂಬಲವನ್ನು ಪುನರುಚ್ಚರಿಸಿದರು. ಈ ವರ್ಷದ ಕೊನೆಯಲ್ಲಿ ನಡೆಯಲಿರುವ 23ನೇ ವಾರ್ಷಿಕ ಶೃಂಗಸಭೆಗಾಗಿ ಅಧ್ಯಕ್ಷರನ್ನು ಭಾರತಕ್ಕೆ ಸ್ವಾಗತಿಸಲು ತಾವು ಎದುರು ನೋಡುತ್ತಿರುವುದಾಗಿ ಪ್ರಧಾನಮಂತ್ರಿ ಅವರು ಅಧ್ಯಕ್ಷ ಪುಟಿನ್ ಅವರಿಗೆ ತಿಳಿಸಿದರು.
ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Had an excellent meeting with President Putin on the sidelines of the SCO Summit in Tianjin. Discussed ways to deepen bilateral cooperation in all sectors, including trade, fertilisers, space, security and culture. We exchanged views on regional and global developments, including… pic.twitter.com/DhTyqOysbf
— Narendra Modi (@narendramodi) September 1, 2025
Провёл отличную встречу с Президентом Путиным на полях саммита ШОС в Тяньцзине. Обсудили пути углубления двустороннего сотрудничества во всех сферах, включая торговлю, удобрения, космос, безопасность и культуру. Обменялись мнениями о региональных и глобальных процессах, включая… pic.twitter.com/VKr3nK5sLh
— Narendra Modi (@narendramodi) September 1, 2025


