ಇಸ್ರೇಲ್ ಗೆ ತಮ್ಮ ಅಧಿಕೃತ ಭೇಟಿಯ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 26, 2026 ರಂದು ಜೆರುಸಲೆಮ್ನಲ್ಲಿ ಇಸ್ರೇಲ್ ದೇಶದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಅಧಿಕೃತ ಮಾತುಕತೆ ನಡೆಸಿದರು.

ಭಾರತ ಮತ್ತು ಇಸ್ರೇಲ್ ಪಾಲುದಾರಿಕೆಯ ಎಲ್ಲಾ ಅಂಶಗಳ ಕುರಿತು ಎರಡೂ ದೇಶದ ಪ್ರಧಾನಮಂತ್ರಿಗಳು ವಿಸ್ತೃತ ಚರ್ಚೆಗಳನ್ನು ನಡೆಸಿದರು. ಎರಡೂ ದೇಶಗಳ ನಡುವಿನ ಬಲವಾದ ನಂಬಿಕೆ ಮತ್ತು ಸ್ನೇಹವನ್ನು ಪ್ರತಿಬಿಂಬಿಸುತ್ತಾ, ಇಬ್ಬರೂ ನಾಯಕರು ತಮ್ಮ ದ್ವಿಪಕ್ಷೀಯ ಸಂಬಂಧಗಳನ್ನು "ಶಾಂತಿ, ನಾವೀನ್ಯತೆ ಮತ್ತು ಸಮೃದ್ಧಿಗಾಗಿ ವಿಶೇಷ ಕಾರ್ಯತಂತ್ರದ ಪಾಲುದಾರಿಕೆ"ಯನ್ನು ಉನ್ನತ ಮಟ್ಟಕ್ಕೆ ಏರಿಸಲು ನಿರ್ಧರಿಸಿದರು. ಇದು  ಪರಸ್ಪರ ಹಿತಾಸಕ್ತಿಗಳು ಹೆಚ್ಚುತ್ತಿರುವ ಒಮ್ಮುಖ ಮತ್ತು ಸುರಕ್ಷಿತ ಮತ್ತು ಸಮೃದ್ಧ ಭವಿಷ್ಯಕ್ಕಾಗಿ ಎರಡೂ ದೇಶಗಳ ಹಂಚಿಕೆಯ ದೃಷ್ಟಿಕೋನದ ಸಂಕೇತವಾಗಿದೆ.

 

 ಎಲ್ಲಾ ಕ್ಷೇತ್ರಗಳಲ್ಲು ದ್ವಿಪಕ್ಷೀಯ ಸಹಕಾರದಲ್ಲಿ ಆಗಿರುವ ಪ್ರಗತಿಯ ಬಗ್ಗೆ ಇಬ್ಬರೂ ನಾಯಕರು ತೃಪ್ತಿ ವ್ಯಕ್ತಪಡಿಸಿದರು ಹಾಗು ವ್ಯಾಪಾರ ಮತ್ತು ಹೂಡಿಕೆ, ರಕ್ಷಣೆ ಮತ್ತು ಭದ್ರತೆ, ಬಾಹ್ಯಾಕಾಶ, ಇಂಧನ, ನಿರ್ಣಾಯಕ ತಂತ್ರಜ್ಞಾನಗಳು, ಸೈಬರ್ ಭದ್ರತೆ, ಶಿಕ್ಷಣ, ವೈಜ್ಞಾನಿಕ ಸಂಶೋಧನೆ ಮತ್ತು ನಾವೀನ್ಯತೆ ಕ್ಷೇತ್ರಗಳಲ್ಲಿ ಸಹಕಾರವನ್ನು ಮತ್ತಷ್ಟು ಹೆಚ್ಚಿಸಲು ಒಪ್ಪಿಕೊಂಡರು. ಕೃಷಿ, ನೀರು ನಿರ್ವಹಣೆ, ನವೋದ್ಯಮಗಳು, ಫಿನ್ಟೆಕ್, ಡಿಜಿಟಲ್ ಆರೋಗ್ಯ ರಕ್ಷಣೆ, ಜೈವಿಕ ತಂತ್ರಜ್ಞಾನ ಮತ್ತು ಮುಂದುವರಿದ ಔಷಧಗಳಲ್ಲಿ ಭಾರತ-ಇಸ್ರೇಲ್ ಪಾಲುದಾರಿಕೆಯ ಪರಿವರ್ತನಾ ಸಾಮರ್ಥ್ಯವನ್ನು ಅವರು ಒತ್ತಿ ಹೇಳಿದರು. ಜನರಿಂದ ಜನರಿಗೆ ಸಂಬಂಧಗಳನ್ನು ಮತ್ತಷ್ಟು ಹೆಚ್ಚಿಸುವ ಎರಡೂ ದೇಶಗಳಿಗೆ ಸಂಚಾರ ಮಾಡುವ ಪಾಲುದಾರಿಕೆಯನ್ನು ವಿಸ್ತರಿಸಲು ಹೊಸ ಉಪಕ್ರಮಗಳನ್ನು ಇಬ್ಬರು ನಾಯಕರು ಸ್ವಾಗತಿಸಿದರು. ಪ್ರಸ್ತಾವಿತ ಮುಕ್ತ ವ್ಯಾಪಾರ ಒಪ್ಪಂದವನ್ನು ಶೀಘ್ರವಾಗಿ ತೀರ್ಮಾನಿಸಲು ಕರೆ ನೀಡಿದ ಅವರು, ದ್ವಿಪಕ್ಷೀಯ ಹೂಡಿಕೆ ಒಪ್ಪಂದ, ಭಾರತ ಇಸ್ರೇಲ್ ನಾವೀನ್ಯತೆ ಸೇತುವೆ, ಕೃಷಿಗಾಗಿ ಭಾರತ ಇಸ್ರೇಲ್ ನಾವೀನ್ಯತೆ ಕೇಂದ್ರ ಮತ್ತು ಭಾರತ ಇಸ್ರೇಲ್ ಕೈಗಾರಿಕಾ ಸಂಶೋಧನೆ ಮತ್ತು ಅಭಿವೃದ್ಧಿ ಮತ್ತು ನಾವೀನ್ಯತೆ ನಿಧಿಯು ಎರಡೂ ದೇಶಗಳ ನಡುವಿನ ಆರ್ಥಿಕ, ಉದ್ಯಮಶೀಲತೆ ಮತ್ತು ವೈಜ್ಞಾನಿಕ ಸಹಕಾರವನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ ಎಂದು ಅಭಿಪ್ರಾಯ ಪಟ್ಟರು. ಭಾರತದ ಪ್ರತಿಭಾನ್ವಿತ ಉದ್ಯೋಗಿಗಳನ್ನು ಇಸ್ರೇಲ್ ನ ನಾವೀನ್ಯತೆಯೊಂದಿಗೆ ಸಂಯೋಜಿಸಲು ಸಹಾಯ ಮಾಡುವ  ಎಐ, ಸೆಮಿಕಂಡಕ್ಟರ್ ಗಳು, ಕ್ವಾಂಟಮ್ ಮತ್ತು ಇತರ ಅತ್ಯಾಧುನಿಕ ತಂತ್ರಜ್ಞಾನಗಳ ಕ್ಷೇತ್ರಗಳಲ್ಲಿ ಹೆಚ್ಚಿನ ಸಹಕಾರಕ್ಕಾಗಿ ಅವರು ಕರೆ ನೀಡಿದರು.

 

ಪರಸ್ಪರ ಆಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆಯೂ ಇಬ್ಬರೂ ನಾಯಕರು ಚರ್ಚಿಸಿದರು. ಗಾಜಾ ಶಾಂತಿ ಯೋಜನೆಗೆ ಪ್ರಧಾನಮಂತ್ರಿಯವರು ತಮ್ಮ ಬೆಂಬಲವನ್ನು ತಿಳಿಸಿದರು ಮತ್ತು ಈ ಉಪಕ್ರಮವು  ಈ ಪ್ರದೇಶಕ್ಕೆ ಶಾಂತಿ ಮತ್ತು ಸ್ಥಿರತೆಯನ್ನು ತರುತ್ತದೆ ಎಂದು ಆಶಯ ವ್ಯಕ್ತ ಪಡಿಸಿದರು. ಐ ಎಂ ಇ ಸಿ  ಮತ್ತು ಐ2ಯು2 ಉಪಕ್ರಮಗಳಲ್ಲಿ ಎರಡೂ ದೇಶಗಳ ನಡುವೆ ನಿಕಟ ಸಹಕಾರಕ್ಕಾಗಿಯೂ ಇಬ್ಬರೂ ನಾಯಕರು ಕರೆ ನೀಡಿದರು. ಭಯೋತ್ಪಾದನೆಯ ವಿರುದ್ಧ ಜಾಗತಿಕ ಹೋರಾಟವನ್ನು ಬಲಪಡಿಸುವ ತಮ್ಮ ಸಂಕಲ್ಪವನ್ನು ಅವರು ವ್ಯಕ್ತಪಡಿಸಿದರು. ಭಯೋತ್ಪಾದನೆ ವಿರುದ್ಧ ಭಾರತದ ಹೋರಾಟದಲ್ಲಿ ಇಸ್ರೇಲ್ ನೀಡಿದ ಬೆಂಬಲಕ್ಕಾಗಿ ಪ್ರಧಾನಮಂತ್ರಿ ನೆತನ್ಯಾಹು ಅವರಿಗೆ ಪ್ರಧಾನಮಂತ್ರಿ ಮೋದಿ ಧನ್ಯವಾದ ಅರ್ಪಿಸಿದರು.

ಮಾತುಕತೆಯ ನಂತರ, ಹಲವಾರು ಒಪ್ಪಂದಗಳು ಮತ್ತು ತಿಳುವಳಿಕೆ ಪತ್ರಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು [Link]. ದ್ವಿಪಕ್ಷೀಯ ಪಾಲುದಾರಿಕೆಗಾಗಿ ಭವಿಷ್ಯದ ಕ್ರಮವನ್ನು ವಿವರಿಸುವ ಜಂಟಿ ಹೇಳಿಕೆಯನ್ನು ಅಧಿಕೃತ ಸಭೆಯಲ್ಲಿ ಅಂಗೀಕರಿಸಲಾಯಿತು [Link].

 

ಪ್ರಧಾನಮಂತ್ರಿ ನೆತನ್ಯಾಹು ಅವರ ಆತ್ಮೀಯತೆ ಮತ್ತು ಆತಿಥ್ಯಕ್ಕಾಗಿ ಪ್ರಧಾನಮಂತ್ರಿ ಮೋದಿಯವರು ಧನ್ಯವಾದ ಅರ್ಪಿಸಿದರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
The Bishkek Balancing Act: How India’s dual engagements define its strategic autonomy

Media Coverage

The Bishkek Balancing Act: How India’s dual engagements define its strategic autonomy
NM on the go

Nm on the go

Always be the first to hear from the PM. Get the App Now!
...
PM condoles loss of lives in firecracker factory mishap in Kaushambi
August 31, 2026
PM announces ex-gratia from Prime Minister’s National Relief Fund

The Prime Minister, Shri Narendra Modi has expressed deep sorrow over the loss of lives in a mishap at a firecracker factory in Kaushambi, Uttar Pradesh. Shri Modi conveyed his condolences to the bereaved families and prayed for the speedy recovery of the injured.

Shri Modi also announced an ex-gratia of ₹2 lakh from the Prime Minister’s National Relief Fund (PMNRF) to the next of kin of each deceased and ₹50,000 for the injured.

The Prime Minister posted on X;

Extremely saddened by the loss of lives due to a mishap at a firecracker factory in Kaushambi, Uttar Pradesh. My thoughts are with the bereaved families in this hour of grief. May the injured recover at the earliest.

An ex-gratia of Rs. 2 lakh from PMNRF would be given to the next of kin of each deceased. The injured would be given Rs. 50,000: PM @narendramodi