ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬ್ರೆಜಿಲ್ ನ ರಿಯೋ ಡಿ ಜನೈರೊದಲ್ಲಿ ನಡೆದ 17ನೇ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ಮಲೇಷ್ಯಾ ಪ್ರಧಾನಮಂತ್ರಿ ಘನತೆವೆತ್ತ ಅನ್ವರ್ ಬಿನ್ ಇಬ್ರಾಹಿಂ ಅವರನ್ನು ಭೇಟಿ ಮಾಡಿದರು.

 

 

ವ್ಯಾಪಾರ ಮತ್ತು ಹೂಡಿಕೆ, ರಕ್ಷಣೆ, ಶಿಕ್ಷಣ, ಆರೋಗ್ಯ, ಪ್ರವಾಸೋದ್ಯಮ ಮತ್ತು ಜನರ ನಡುವಿನ ಸಂಪರ್ಕ ಸೇರಿದಂತೆ 2024 ರ ಆಗಸ್ಟ್ ನಲ್ಲಿ ಮಲೇಷ್ಯಾ ಪ್ರಧಾನಿ ಅವರು ಭಾರತಕ್ಕೆ ಅಧಿಕೃತ ಭೇಟಿ ನೀಡಿದ ನಂತರ ಭಾರತ ಮತ್ತು ಮಲೇಷ್ಯಾ ನಡುವಿನ ದ್ವಿಪಕ್ಷೀಯ ಸಂಬಂಧಗಳ ಪ್ರಗತಿಯನ್ನು ನಾಯಕರು ಪರಿಶೀಲಿಸಿದರು.

 

ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸಿದ್ದಕ್ಕಾಗಿ ಪ್ರಧಾನಮಂತ್ರಿ ಅವರು ಪ್ರಧಾನಮಂತ್ರಿ ಇಬ್ರಾಹಿಂ ಅವರಿಗೆ ಧನ್ಯವಾದ ಅರ್ಪಿಸಿದರು. ಇಬ್ಬರೂ ನಾಯಕರು ಬಹುಪಕ್ಷೀಯ ವಲಯ ಮತ್ತು ಪ್ರಾದೇಶಿಕ ಭದ್ರತೆಯಲ್ಲಿನ ಸಹಕಾರದ ಬಗ್ಗೆಯೂ ಚರ್ಚಿಸಿದರು.

 

ಆಸಿಯಾನ್ ನ ಯಶಸ್ವಿ ನಿರ್ವಹಣೆಗಾಗಿ ಮಲೇಷ್ಯಾವನ್ನು ಪ್ರಧಾನಮಂತ್ರಿ ಅವರು ಅಭಿನಂದಿಸಿದರು ಮತ್ತು ಆಸಿಯಾನ್-ಭಾರತ ಎಫ್ ಟಿಎಯ ಪರಾಮರ್ಶೆಯನ್ನು ಶೀಘ್ರವಾಗಿ ಮತ್ತು ಯಶಸ್ವಿಯಾಗಿ ಪೂರ್ಣಗೊಳಿಸುವುದು ಸೇರಿದಂತೆ ಬಲವಾದ ಆಸಿಯಾನ್-ಭಾರತ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಗೆ ಅದರ ನಿರಂತರ ಬೆಂಬಲವನ್ನು ಸ್ವಾಗತಿಸಿದರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India attracts $70 billion investment in AI infra, AI Mission 2.0 in 5-6 months: Ashwini Vaishnaw

Media Coverage

India attracts $70 billion investment in AI infra, AI Mission 2.0 in 5-6 months: Ashwini Vaishnaw
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 31 ಜನವರಿ 2026
January 31, 2026

From AI Surge to Infra Boom: Modi's Vision Powers India's Economic Fortress