ಕಲಿಯುಗದಲ್ಲಿ,ದೇವರ ನಾಮವನ್ನು ಜಪಿಸುವುದರಿಂದ ಲೌಕಿಕ ದುಃಖದ ಸಾಗರದಿಂದ ಮುಕ್ತಿ ದೊರೆಯುತ್ತದೆ: ಪ್ರಧಾನಮಂತ್ರಿ
ಗೀತೆಯ ಮಾತುಗಳು ಜನರಿಗೆ ಮಾರ್ಗದರ್ಶನ ನೀಡುವುದಲ್ಲದೆ, ರಾಷ್ಟ್ರದ ನೀತಿಗಳ ದಿಕ್ಕನ್ನು ರೂಪಿಸುತ್ತವೆ: ಪ್ರಧಾನಮಂತ್ರಿ
ಶಾಂತಿ ಮತ್ತು ಸತ್ಯವನ್ನು ಎತ್ತಿಹಿಡಿಯಲು ಅನ್ಯಾಯದ ಶಕ್ತಿಗಳನ್ನು ಎದುರಿಸುವುದು ಮತ್ತು ನಿರ್ಮೂಲನೆ ಮಾಡುವುದು ಅಗತ್ಯ ಎಂದು ಭಗವದ್ಗೀತೆ ಕಲಿಸುತ್ತದೆ ಮತ್ತು ಈ ತತ್ವವು ನಮ್ಮ ರಾಷ್ಟ್ರೀಯ ಭದ್ರತಾ ಚಿಂತನೆಯ ಹೃದಯಭಾಗದಲ್ಲಿದೆ: ಪ್ರಧಾನಮಂತ್ರಿ
ನೀರನ್ನು ಉಳಿಸುವುದು, ಮರಗಳನ್ನು ನೆಡುವುದು, ಬಡವರಿಗೆ ಸೇವೆ ಸಲ್ಲಿಸುವುದು, ಸ್ವದೇಶಿ ಅಳವಡಿಸಿಕೊಳ್ಳುವುದು, ಸಹಜ ಕೃಷಿಯನ್ನು ಉತ್ತೇಜಿಸುವುದು, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು, ಯೋಗವನ್ನು ಅಭ್ಯಾಸ ಮಾಡುವುದು, ಹಸ್ತಪ್ರತಿಗಳನ್ನು ಸಂರಕ್ಷಿಸುವುದು ಮತ್ತು ಕನಿಷ್ಠ 25 ಪಾರಂಪರಿಕ ತಾಣಗಳಿಗೆ ಭೇಟಿ ನೀಡುವ ʼನವಸಂಕಲ್ಪʼಗಳನ್ನು ನಾವು ಮಾಡೋಣ: ಪ್ರಧಾನಮಂತ್ರಿ

ಕರ್ನಾಟಕದ ಉಡುಪಿಯಲ್ಲಿರುವ ಶ್ರೀ ಕೃಷ್ಣ ಮಠದಲ್ಲಿ ಇಂದು ನಡೆದ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಭಗವಾನ್ ಶ್ರೀ ಕೃಷ್ಣನ ದಿವ್ಯ ದರ್ಶನದ ತೃಪ್ತಿ, ಶ್ರೀಮದ್ ಭಗವದ್ಗೀತೆಯ ಮಂತ್ರಗಳ ಆಧ್ಯಾತ್ಮಿಕ ಅನುಭವ ಮತ್ತು ಹಲವಾರು ಪೂಜ್ಯ ಸಂತರು ಮತ್ತು ಗುರುಗಳ ಉಪಸ್ಥಿತಿಯು ತಮಗೆ ದೊರೆತ ಪರಮ ಭಾಗ್ಯ. ಇದು ಅಸಂಖ್ಯಾತ ಆಶೀರ್ವಾದಗಳನ್ನು ಪಡೆದಂತೆ ಎಂದು ಅವರು ಹೇಳಿದರು.

ಕೇವಲ ಮೂರು ದಿನಗಳ ಹಿಂದೆ ತಾನು ಗೀತೆಯ ನಾಡು ಕುರುಕ್ಷೇತ್ರದಲ್ಲಿದ್ದೆನು ಎಂದು ನೆನಪಿಸಿಕೊಂಡ ಶ್ರೀ ನರೇಂದ್ರ ಮೋದಿ ಅವರು, ಭಗವಾನ್ ಶ್ರೀ ಕೃಷ್ಣನ ಆಶೀರ್ವಾದ ಮತ್ತು ಜಗದ್ಗುರು ಶ್ರೀ ಮಧ್ವಾಚಾರ್ಯರ ಮಹಿಮೆಯಿಂದ ಆಶೀರ್ವದಿಸಲ್ಪಟ್ಟ ಈ ಭೂಮಿಗೆ ಭೇಟಿ ನೀಡಿದ್ದು ತಮಗೆ ಅತ್ಯಂತ ಸಂತೃಪ್ತಿಯ ಕ್ಷಣ ಎಂದು ಹೇಳಿದರು. ಈ ಸಂದರ್ಭದಲ್ಲಿ, ಒಂದು ಲಕ್ಷ ಜನರು ಏಕಕಾಲದಲ್ಲಿ ಭಗವದ್ಗೀತೆಯ ಶ್ಲೋಕಗಳನ್ನು ಪಠಿಸಿದಾಗ, ಪ್ರಪಂಚದಾದ್ಯಂತದ ಜನರು ಭಾರತದ ಸಹಸ್ರಮಾನಗಳಷ್ಟು ಹಳೆಯದಾದ ಆಧ್ಯಾತ್ಮಿಕ ಪರಂಪರೆಯ ಜೀವಂತ ದೈವತ್ವವನ್ನು ವೀಕ್ಷಿಸಿದರು ಎಂದು ಹೇಳಿದರು.

ಕರ್ನಾಟಕದ ನೆಲಕ್ಕೆ ಭೇಟಿ ನೀಡುವುದು ಮತ್ತು ಇಲ್ಲಿನ ಅಕ್ಕರೆಯ ಜನರ ನಡುವೆ ಇರುವುದು ಯಾವಾಗಲೂ ತಮಗೆ ಒಂದು ವಿಶಿಷ್ಟ ಅನುಭವ ಎಂದು ಪ್ರಧಾನಮಂತ್ರಿ ಹೇಳಿದರು. ಉಡುಪಿಯ ಪವಿತ್ರ ಭೂಮಿಗೆ ಭೇಟಿ ನೀಡುವುದು ಯಾವಾಗಲೂ ಅಸಾಧಾರಣವಾದುದು ಎಂದು ಅವರು ಒತ್ತಿ ಹೇಳಿದರು. ತಾವು ಗುಜರಾತಿನಲ್ಲಿ ಜನಿಸಿದರೂ, ಗುಜರಾತ್ ಮತ್ತು ಉಡುಪಿ ಯಾವಾಗಲೂ ಆಳವಾದ ಮತ್ತು ವಿಶೇಷ ಬಾಂಧವ್ಯವನ್ನು ಹೊಂದಿವೆ ಎಂದು ಹೇಳಿದರು. ಇಲ್ಲಿ ಪ್ರತಿಷ್ಠಾಪಿಸಲಾದ ಶ್ರೀ ಕೃಷ್ಣನ ವಿಗ್ರಹವನ್ನು ಮೊದಲು ಮಾತಾ ರುಕ್ಮಿಣಿ ದ್ವಾರಕಾದಲ್ಲಿ ಪೂಜಿಸಿದ್ದರು ಮತ್ತು ನಂತರ ಉಡುಪಿಯಲ್ಲಿ ಜಗದ್ಗುರು ಶ್ರೀ ಮಧ್ವಾಚಾರ್ಯರು ಪ್ರತಿಷ್ಠಾಪಿಸಿದರು ಎಂಬ ನಂಬಿಕೆಯನ್ನು ಶ್ರೀ ಮೋದಿ ಅವರು ನೆನಪಿಸಿಕೊಂಡರು. ಕಳೆದ ವರ್ಷವಷ್ಟೇ ಸಮುದ್ರದ ಒಳಗೆ ಶ್ರೀ ದ್ವಾರಕಾನಾಥನನ್ನು ನೋಡಿದ ದಿವ್ಯ ಅನುಭವವನ್ನು ಅವರು ಹಂಚಿಕೊಂಡರು. ಈ ವಿಗ್ರಹದ ದರ್ಶನ ಪಡೆದಾಗ ತಾವು ಅನುಭವಿಸಿದ ಆಳವಾದ ಭಾವನೆಯನ್ನು ಯಾರಾದರೂ ಊಹಿಸಬಹುದು ಮತ್ತು ಈ ದರ್ಶನವು ತಮಗೆ ಅಪಾರ ಆಧ್ಯಾತ್ಮಿಕ ಆನಂದವನ್ನು ನೀಡಿತು ಎಂದರು.

 

ಉಡುಪಿಗೆ ಬರುವುದು ತಮಗೆ ಮತ್ತೊಂದು ಕಾರಣಕ್ಕೆ ವಿಶೇಷವಾಗಿದೆ ಎಂದು ಹೇಳಿದ ಶ್ರೀ ಮೋದಿ, ಉಡುಪಿಯು ಜನಸಂಘ ಮತ್ತು ಭಾರತೀಯ ಜನತಾ ಪಕ್ಷದ ಆಡಳಿತ ಮಾದರಿಯ ಕರ್ಮಭೂಮಿಯಾಗಿದೆ ಎಂದರು. 1968ರಲ್ಲಿ ಉಡುಪಿಯ ಜನರು ಜನಸಂಘದ ವಿ.ಎಸ್. ಆಚಾರ್ಯ ಅವರನ್ನು ನಗರಸಭೆಗೆ ಆಯ್ಕೆ ಮಾಡಿ ಉಡುಪಿಯಲ್ಲಿ ಹೊಸ ಆಡಳಿತ ಮಾದರಿಗೆ ಅಡಿಪಾಯ ಹಾಕಿದರು ಎಂದು ಅವರು ನೆನಪಿಸಿಕೊಂಡರು. ಇಂದು ರಾಷ್ಟ್ರೀಯ ಮಟ್ಟದಲ್ಲಿ ಕಂಡುಬರುವ ಸ್ವಚ್ಛತಾ ಅಭಿಯಾನಗಳನ್ನು ಐದು ದಶಕಗಳ ಹಿಂದೆಯೇ ಉಡುಪಿಯಲ್ಲಿ ಅಳವಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು. ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆಗಳ ಹೊಸ ಮಾದರಿಯಂತಹ ಕಾರ್ಯಕ್ರಮಗಳನ್ನು ಉಡುಪಿಯು 1970ರ ದಶಕದಲ್ಲಿಯೇ ಪ್ರಾರಂಭಿಸಿತ್ತು ಎಂದು ಅವರು ಒತ್ತಿ ಹೇಳಿದರು. ಇಂದು ಈ ಅಭಿಯಾನಗಳು ರಾಷ್ಟ್ರೀಯ ಅಭಿವೃದ್ಧಿ ಮತ್ತು ಆದ್ಯತೆಯ ಭಾಗವಾಗಿದ್ದು, ದೇಶವನ್ನು ಮುನ್ನಡೆಸಲು ಮಾರ್ಗದರ್ಶನ ನೀಡುತ್ತಿವೆ ಎಂದು ಅವರು ಹೇಳಿದರು.

ರಾಮಚರಿತಮಾನಸದ ಮಾತುಗಳನ್ನು ಸ್ಮರಿಸಿಕೊಂಡ ಶ್ರೀ ನರೇಂದ್ರ ಮೋದಿ ಅವರು, "ಕಲಿಯುಗದಲ್ಲಿ, ದೇವರ ನಾಮವನ್ನು ಜಪಿಸುವುದರಿಂದಲೇ ಲೌಕಿಕ ದುಃಖದ ಸಾಗರದಿಂದ ಮುಕ್ತಿ ದೊರೆಯುತ್ತದೆ" ಎಂದು ಹೇಳಿದರು. ಸಮಾಜದಲ್ಲಿ ಮಂತ್ರಗಳು ಮತ್ತು ಗೀತೆಯ ಶ್ಲೋಕಗಳ ಪಠಣವು ಶತಮಾನಗಳಿಂದ ನಡೆದು ಬಂದಿದೆ, ಆದರೆ ಒಂದು ಲಕ್ಷ ಧ್ವನಿಗಳು ಒಟ್ಟಾಗಿ ಈ ಶ್ಲೋಕಗಳನ್ನು ಒಟ್ಟಿಗೆ ಪಠಿಸಿದಾಗ, ಅದೊಂದು ವಿಶಿಷ್ಟ ಅನುಭವವನ್ನು ಸೃಷ್ಟಿಸುತ್ತದೆ ಎಂದು ಅವರು ಹೇಳಿದರು. ಗೀತೆಯಂತಹ ಪವಿತ್ರ ಗ್ರಂಥವನ್ನು ಹಲವಾರು ಜನರು ಪಠಿಸಿದಾಗ, ಅಂತಹ ದೈವಿಕ ಪದಗಳು ಒಂದೇ ಸ್ಥಳದಲ್ಲಿ ಪ್ರತಿಧ್ವನಿಸಿದಾಗ, ಮನಸ್ಸು ಮತ್ತು ಬುದ್ಧಿಶಕ್ತಿಗೆ ಹೊಸ ಕಂಪನ ಮತ್ತು ಹೊಸ ಬಲವನ್ನು ನೀಡುವ ವಿಶೇಷ ಶಕ್ತಿ ಉದ್ಭವಿಸುತ್ತದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಈ ಶಕ್ತಿಯು ಆಧ್ಯಾತ್ಮಿಕತೆಯ ಶಕ್ತಿ ಮತ್ತು ಸಾಮಾಜಿಕ ಏಕತೆಯ ಶಕ್ತಿಯಾಗಿದೆ ಎಂದು ಅವರು ಹೇಳಿದರು. ಇಂದಿನ ಒಂದು ಲಕ್ಷ ಧ್ವನಿಗಳ ಗೀತಾ ಪಠಣವು ವಿಶಾಲವಾದ ಶಕ್ತಿಯನ್ನು ಅನುಭವಿಸುವ ಅವಕಾಶವಾಗಿದೆ ಮತ್ತು ಸಾಮೂಹಿಕ ಪ್ರಜ್ಞೆಯ ಬಲವನ್ನು ಜಗತ್ತಿಗೆ ತೋರಿಸುತ್ತಿದೆ ಎಂದು ಹೇಳಿದರು.

 

ಈ ದಿನದಂದು, ಲಕ್ಷ  ಕಂಠ ಗೀತಾ ಪಾರಾಯಣವನ್ನು ದೈವಿಕವಾಗಿ ಕಲ್ಪಿಸಿದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಗೆ ವಿಶೇಷವಾಗಿ ನಮನ ಸಲ್ಲಿಸುತ್ತೇನೆ ಎಂದು ಪ್ರಧಾನಮಂತ್ರಿ ಹೇಳಿದರು. ಪ್ರಪಂಚದಾದ್ಯಂತದ ಜನರು ಗೀತೆಯನ್ನು ಕೈಯಿಂದ ಬರೆಯಲು ಪ್ರೇರೇಪಿಸುವ ಮೂಲಕ, ಸ್ವಾಮೀಜಿಯವರು ಸನಾತನ ಸಂಪ್ರದಾಯದಲ್ಲಿ ಜಾಗತಿಕ ಸಾಮೂಹಿಕ ಚಳವಳಿಯಾಗಿ ಮಾರ್ಪಟ್ಟಿರುವ ಕೋಟಿ ಗೀತಾ ಲೇಖನ ಯಜ್ಞವನ್ನು ಪ್ರಾರಂಭಿಸಿದರು ಎಂದು ಅವರು ಒತ್ತಿ ಹೇಳಿದರು. ಭಾರತದ ಯುವಜನರು ಭಗವದ್ಗೀತೆಯ ಸ್ಫೂರ್ತಿ ಮತ್ತು ಬೋಧನೆಗಳೊಂದಿಗೆ ಸಂಪರ್ಕ ಸಾಧಿಸುತ್ತಿರುವ ರೀತಿ ಸ್ವತಃ ಒಂದು ಮಹತ್ವದ ಬೆಳವಣಿಗೆಯಾಗಿದೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು. ಶತಮಾನಗಳಿಂದ ಭಾರತದಲ್ಲಿ ವೇದಗಳು, ಉಪನಿಷತ್ತುಗಳು ಮತ್ತು ಶಾಸ್ತ್ರಗಳ ಜ್ಞಾನವನ್ನು ಮುಂದಿನ ಪೀಳಿಗೆಗೆ ರವಾನಿಸುವುದು ಸಂಪ್ರದಾಯವಾಗಿದೆ ಎಂದು ಅವರು ನೆನಪಿಸಿಕೊಂಡರು ಮತ್ತು ಈ ಕಾರ್ಯಕ್ರಮವು ಮುಂದಿನ ಪೀಳಿಗೆಯನ್ನು ಭಗವದ್ಗೀತೆಯೊಂದಿಗೆ ಸಂಪರ್ಕಿಸುವ ಅರ್ಥಪೂರ್ಣ ಪ್ರಯತ್ನವಾಗಿದೆ ಎಂದು ತಿಳಿಸಿದರು.

ಇಲ್ಲಿಗೆ ಬರುವ ಮೂರು ದಿನಗಳ ಮೊದಲು, ತಾವು ಅಯೋಧ್ಯೆಗೆ ಭೇಟಿ ನೀಡಿದ್ದಾಗಿ ತಿಳಿಸಿದ ಶ್ರೀ ಮೋದಿ ಅವರು, ನವೆಂಬರ್ 25ರಂದು ವಿವಾಹ ಪಂಚಮಿಯ ಶುಭ ದಿನದಂದು ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ಧರ್ಮ ಧ್ವಜವನ್ನು ಸ್ಥಾಪಿಸಲಾಯಿತು ಎಂದು ಹೇಳಿದರು. ಅಯೋಧ್ಯೆಯಿಂದ ಉಡುಪಿಯವರೆಗೆ, ಶ್ರೀ ರಾಮನ ಅಸಂಖ್ಯಾತ ಭಕ್ತರು ಈ ಅತ್ಯಂತ ದೈವಿಕ ಮತ್ತು ಭವ್ಯವಾದ ಆಚರಣೆಗೆ ಸಾಕ್ಷಿಯಾಗಿದ್ದಾರೆ ಎಂದು ಅವರು ಹೇಳಿದರು. ರಾಮ ಮಂದಿರ ಚಳುವಳಿಯಲ್ಲಿ ಉಡುಪಿ ವಹಿಸಿದ ಮಹತ್ವದ ಪಾತ್ರ ಇಡೀ ರಾಷ್ಟ್ರಕ್ಕೆ ತಿಳಿದಿದೆ ಎಂದು ಅವರು ಹೇಳಿದರು. ದಶಕಗಳ ಹಿಂದೆ, ಪರಮ ಪೂಜ್ಯ ದಿವಂಗತ ವಿಶ್ವೇಶ ತೀರ್ಥ ಸ್ವಾಮೀಜಿಯವರು ಇಡೀ ಚಳುವಳಿಗೆ ನಿರ್ದೇಶನ ನೀಡಿದರು ಮತ್ತು ಧ್ವಜಾರೋಹಣ ಸಮಾರಂಭವು ಆ ಕೊಡುಗೆಯ ಫಲಪ್ರದತೆಯನ್ನು ಗುರುತಿಸುವ ಹಬ್ಬವಾಗಿದೆ ಎಂದು ಅವರು ನೆನಪಿಸಿಕೊಂಡರು. ಉಡುಪಿಗೆ, ರಾಮ ಮಂದಿರ ನಿರ್ಮಾಣವು ಮತ್ತೊಂದು ಕಾರಣಕ್ಕಾಗಿ ವಿಶೇಷವಾಗಿದೆ ಎಂದು ಅವರು ಹೇಳಿದರು. ಏಕೆಂದರೆ ಹೊಸ ಮಂದಿರದಲ್ಲಿ ಜಗದ್ಗುರು ಮಧ್ವಾಚಾರ್ಯ ಅವರ ಹೆಸರಿನಲ್ಲಿ ಭವ್ಯ ದ್ವಾರವನ್ನು ನಿರ್ಮಿಸಲಾಗಿದೆ. ಶ್ರೀ ರಾಮನ ಪರಮಭಕ್ತರಾದ ಜಗದ್ಗುರು ಮಧ್ವಾಚಾರ್ಯ ಅವರು ಭಗವಾನ್ ಶ್ರೀ ರಾಮನು ಆರು ದೈವಿಕ ಗುಣಗಳಿಂದ ಅಲಂಕರಿಸಲ್ಪಟ್ಟಿದ್ದಾನೆ, ಪರಮಾತ್ಮ ಮತ್ತು ಅಪಾರ ಶಕ್ತಿ ಮತ್ತು ಧೈರ್ಯದ ಸಾಗರ ಎಂಬ ಅರ್ಥವನ್ನು ನೀಡುವ ಶ್ಲೋಕವನ್ನು ಬರೆದಿದ್ದಾರೆ ಎಂದು ಅವರು ಹೇಳಿದರು. ಆದ್ದರಿಂದ, ರಾಮ ಮಂದಿರ ಸಂಕೀರ್ಣದಲ್ಲಿ ಅವರ ಹೆಸರಿನ ದ್ವಾರವನ್ನು ಹೊಂದುವುದು ಕರ್ನಾಟಕದ ಉಡುಪಿಯ ಜನರಿಗೆ ಮತ್ತು ಇಡೀ ರಾಷ್ಟ್ರಕ್ಕೆ ಅತ್ಯಂತ ಹೆಮ್ಮೆಯ ವಿಷಯವಾಗಿದೆ ಎಂದರು.

 

ಜಗದ್ಗುರು ಶ್ರೀ ಮಧ್ವಾಚಾರ್ಯರನ್ನು ಭಾರತದ ದ್ವೈತ ಸಿದ್ಧಾಂತದ ಪ್ರವರ್ತಕ ಮತ್ತು ವೇದಾಂತದ ದಾರಿದೀಪ ಎಂದು ಬಣ್ಣಿಸಿದ ಪ್ರಧಾನಮಂತ್ರಿ, ಅವರು ಉಡುಪಿಯಲ್ಲಿರುವ ಎಂಟು ಮಠಗಳ ವ್ಯವಸ್ಥೆಯು ಅವರಿಂದ ರಚಿಸಲ್ಪಟ್ಟಿದೆ, ಇದು ಸಾಂಸ್ಥಿಕೀಕರಣ ಮತ್ತು ಹೊಸ ಸಂಪ್ರದಾಯಗಳ ಸೃಷ್ಟಿಗೆ ಜೀವಂತ ಉದಾಹರಣೆಯಾಗಿದೆ ಎಂದು ಹೇಳಿದರು. ಇಲ್ಲಿ ಭಗವಾನ್ ಶ್ರೀ ಕೃಷ್ಣನ ಮೇಲಿನ ಭಕ್ತಿ, ವೇದಾಂತದ ಜ್ಞಾನ ಮತ್ತು ಸಾವಿರಾರು ಜನರಿಗೆ ಅನ್ನದಾನ ಮಾಡುವ ಸಂಕಲ್ಪವಿದೆ ಎಂದು ಅವರು ಹೇಳಿದರು. ಒಂದು ರೀತಿಯಲ್ಲಿ ಈ ಸ್ಥಳವು ಜ್ಞಾನ, ಭಕ್ತಿ ಮತ್ತು ಸೇವೆಯ ಪವಿತ್ರ ಸಂಗಮವಾಗಿದೆ ಎಂದು ಹೇಳಿದರು.

ಜಗದ್ಗುರು ಮಧ್ವಾಚಾರ್ಯರು ಜನಿಸಿದ ಸಮಯದಲ್ಲಿ ಭಾರತವು ಅನೇಕ ಆಂತರಿಕ ಮತ್ತು ಬಾಹ್ಯ ಸವಾಲುಗಳನ್ನು ಎದುರಿಸುತ್ತಿತ್ತು ಮತ್ತು ಅವರು ಸಮಾಜದ ಪ್ರತಿಯೊಂದು ವರ್ಗ ಮತ್ತು ಪ್ರತಿಯೊಂದು ನಂಬಿಕೆಯನ್ನು ಒಂದುಗೂಡಿಸುವ ಭಕ್ತಿ ಮಾರ್ಗವನ್ನು ತೋರಿಸಿದರು ಎಂದು ಶ್ರೀ ಮೋದಿ ಅವರು ಸ್ಮರಿಸಿದರು. ಈ ಮಾರ್ಗದರ್ಶನದಿಂದಾಗಿ, ಶತಮಾನಗಳ ನಂತರವೂ, ಅವರು ಸ್ಥಾಪಿಸಿದ ಮಠಗಳು ಪ್ರತಿದಿನ ಲಕ್ಷಾಂತರ ಜನರಿಗೆ ಸೇವೆ ಸಲ್ಲಿಸುತ್ತಿವೆ ಎಂದು ಅವರು ಹೇಳಿದರು. ಅವರಿಂದ ಪ್ರೇರಿತರಾಗಿ, ಧರ್ಮ, ಸೇವೆ ಮತ್ತು ರಾಷ್ಟ್ರ ನಿರ್ಮಾಣದ ಉದ್ದೇಶವನ್ನು ಯಾವಾಗಲೂ ಪ್ರತಿಪಾದಿಸುವ ದ್ವೈತ ಸಂಪ್ರದಾಯದಲ್ಲಿ ಅನೇಕ ಮಹಾನ್ ವ್ಯಕ್ತಿಗಳು ಹೊರಹೊಮ್ಮಿದ್ದಾರೆ ಎಂದು ಅವರು ಒತ್ತಿ ಹೇಳಿದರು. ಸಾರ್ವಜನಿಕ ಸೇವೆಯ ಈ ಶಾಶ್ವತ ಸಂಪ್ರದಾಯವು ಉಡುಪಿಯ ಶ್ರೇಷ್ಠ ಪರಂಪರೆಯಾಗಿದೆ ಎಂದು ತಿಳಿಸಿದರು.

ಜಗದ್ಗುರು ಮಧ್ವಾಚಾರ್ಯರ ಪರಂಪರೆಯು ಹರಿದಾಸ ಪರಂಪರೆಗೆ ಶಕ್ತಿ ತುಂಬಿದೆ ಎಂದು ಹೇಳಿದ ಪ್ರಧಾನಮಂತ್ರಿ,ಗಳು ಪುರಂದರದಾಸ ಮತ್ತು ಕನಕದಾಸರಂತಹ ಮಹಾನ್ ಸಂತರು ಸರಳ, ಸುಮಧುರ ಮತ್ತು ಸುಲಭವಾಗಿ ತಲುಪಬಹುದಾದ ಕನ್ನಡ ಭಾಷೆಯಲ್ಲಿ ಸಾಮಾನ್ಯ ಜನರಿಗೆ ಭಕ್ತಿಯನ್ನು ತಲುಪಿಸಿದರು ಎಂದು ಒತ್ತಿ ಹೇಳಿದರು. ಅವರ ರಚನೆಗಳು ಸಮಾಜದ ಬಡ ವರ್ಗಗಳನ್ನೂ ಒಳಗೊಂಡಂತೆ ಪ್ರತಿಯೊಬ್ಬರ ಹೃದಯವನ್ನು ತಲುಪಿದವು ಮತ್ತು ಅವರನ್ನು ಧರ್ಮ ಮತ್ತು ಸನಾತನ ಮೌಲ್ಯಗಳೊಂದಿಗೆ ಸಂಪರ್ಕಿಸಿದವು ಮತ್ತು ಈ ರಚನೆಗಳು ಇಂದಿನ ಪೀಳಿಗೆಗೂ ಪ್ರಸ್ತುತವಾಗಿವೆ ಎಂದು ಅವರು ಹೇಳಿದರು. ಈಗಲೂ ಸಹ, ಸಾಮಾಜಿಕ ಮಾಧ್ಯಮ ರೀಲ್ ಗಳಲ್ಲಿ ಪುರಂದರದಾಸರ ರಚನೆಯಾದ "ಚಂದ್ರಚೂಡ ಶಿವ ಶಂಕರ ಪಾರ್ವತಿ" ಗೀತೆಯನ್ನು ಕೇಳುವಾಗ, ಯುವಜನರು ವಿಭಿನ್ನವಾದ ಆಧ್ಯಾತ್ಮಿಕ ಭಾವನೆಗೆ ಸಾಗುತ್ತಾರೆ ಎಂದು ಅವರು ಹೇಳಿದರು. ಇಂದಿಗೂ ಉಡುಪಿಯಲ್ಲಿ ತಮ್ಮಂತಹ ಭಕ್ತನಿಗೆ ಸಣ್ಣ ಕಿಟಕಿಯ ಮೂಲಕ ಶ್ರೀ ಕೃಷ್ಣನ ದರ್ಶನವಾದಾಗ, ಅದು ಕನಕದಾಸರ ಭಕ್ತಿಯೊಂದಿಗೆ ಸಂಪರ್ಕ ಸಾಧಿಸಲು ಒಂದು ಅವಕಾಶವಾಗುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. ಇಂದು ಮತ್ತು ಇದಕ್ಕೂ ಮೊದಲು ಕನಕದಾಸರಿಗೆ ನಮಸ್ಕರಿಸುವ ಸೌಭಾಗ್ಯ ಸಿಕ್ಕಿದ್ದು ತಮ್ಮ ಅದೃಷ್ಟ ಎಂದರು.

 

ಶ್ರೀಕೃಷ್ಣನ ಬೋಧನೆಗಳು ಎಲ್ಲಾ ಯುಗಗಳಲ್ಲೂ ಪ್ರಸ್ತುತವಾಗಿವೆ ಮತ್ತು ಗೀತೆಯ ಮಾತುಗಳು ಜನರನ್ನು ಮಾತ್ರವಲ್ಲದೆ ದೇಶದ ನೀತಿಗಳಿಗೂ ಮಾರ್ಗದರ್ಶನ ನೀಡುತ್ತವೆ ಎಂದು ಹೇಳಿದ ಶ್ರೀ ಮೋದಿ ಅವರು, ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಪರಮಾತ್ಮ ಎಲ್ಲರ ಕಲ್ಯಾಣಕ್ಕಾಗಿ ನಾವು ಹೇಗೆ ಕೆಲಸ ಮಾಡಬೇಕೆಂದು ವಿವರಿಸಿದ್ದಾರೆ ಎಂದು ನೆನಪಿಸಿಕೊಂಡರು. ಜಗದ್ಗುರು ಮಧ್ವಾಚಾರ್ಯರು ಈ ಭಾವನೆಗಳನ್ನು ತಮ್ಮ ಜೀವನದುದ್ದಕ್ಕೂ ಮುಂದುವರೆಸಿಕೊಂಡು ಭಾರತದ ಏಕತೆಯನ್ನು ಬಲಪಡಿಸಿದರು ಎಂದು ಹೇಳಿದರು.

ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸರ್ವಜನ ಹಿತಾಯ, ಸರ್ವಜನ ಸುಖಾಯ ನೀತಿಗಳು ಶ್ರೀ ಕೃಷ್ಣನ ಶ್ಲೋಕಗಳಿಂದ ಪ್ರೇರಿತವಾಗಿವೆ ಎಂದು ಹೇಳಿದ ಶ್ರೀ ಮೋದಿ ಅವರು, ಶ್ರೀ ಕೃಷ್ಣ ಬಡವರಿಗೆ ಸಹಾಯ ಮಾಡುವ ಮಂತ್ರವನ್ನು ನೀಡುತ್ತಾರೆ ಮತ್ತು ಈ ಸ್ಫೂರ್ತಿಯೇ ಆಯುಷ್ಮಾನ್ ಭಾರತ್ ಮತ್ತು ಪಿಎಂ ಆವಾಸ್ ನಂತಹ ಯೋಜನೆಗಳಿಗೆ ಆಧಾರವಾಗಿದೆ ಎಂದು ಒತ್ತಿ ಹೇಳಿದರು. ಮಹಿಳಾ ಸುರಕ್ಷತೆ ಮತ್ತು ಸಬಲೀಕರಣದ ಬಗ್ಗೆ ಭಗವಾನ್ ಶ್ರೀ ಕೃಷ್ಣ ಪರಮಾತ್ಮ ಜ್ಞಾನವನ್ನು ನೀಡುತ್ತಾರೆ ಮತ್ತು ಈ ಜ್ಞಾನವೇ ರಾಷ್ಟ್ರವು ನಾರಿ ಶಕ್ತಿ ವಂದನಾ ಅಧಿನಿಯಮದ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಳ್ಳಲು ಪ್ರೇರೇಪಿಸಿತು ಎಂದು ಅವರು ಹೇಳಿದರು. ಭಗವಾನ್ ಶ್ರೀ ಕೃಷ್ಣ ಎಲ್ಲರಿಗೂ ಕಲ್ಯಾಣದ ತತ್ವವನ್ನು ಬೋಧಿಸುತ್ತಾರೆ ಮತ್ತು ಈ ತತ್ವವು ಲಸಿಕೆ ಮೈತ್ರಿ, ಸೌರ ಮೈತ್ರಿ ಮತ್ತು ವಸುಧೈವ ಕುಟುಂಬಕಂನಂತಹ ಭಾರತದ ನೀತಿಗಳಿಗೆ ಆಧಾರವಾಗಿದೆ ಎಂದು ಹೇಳಿದರು.

 

ಯುದ್ಧಭೂಮಿಯಲ್ಲಿ ಭಗವಾನ್ ಶ್ರೀ ಕೃಷ್ಣನು ಗೀತೆಯ ಸಂದೇಶವನ್ನು ಬೋಧಿಸಿದನು ಮತ್ತು ಶಾಂತಿ ಮತ್ತು ಸತ್ಯದ ಸ್ಥಾಪನೆಗೆ ನಿರಂಕುಶಾಧಿಕಾರಿಗಳ ಅಂತ್ಯ ಅತ್ಯಗತ್ಯ ಎಂದು ಭಗವದ್ಗೀತೆ ನಮಗೆ ಕಲಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ಮೋದಿ ಅವರು ಹೇಳಿದರು. ಇದು ದೇಶದ ಭದ್ರತಾ ನೀತಿಯ ಮೂಲ ಆಶಯವಾಗಿದೆ ಎಂದು ಅವರು ಹೇಳಿದರು. ಭಾರತವು ವಸುಧೈವ ಕುಟುಂಬಕಂ ಅನ್ನು ಬೋಧಿಸುತ್ತದೆ ಮತ್ತು "ಧರ್ಮೋ ರಕ್ಷತಿ ರಕ್ಷಿತಃ" ಎಂಬ ಮಂತ್ರವನ್ನು ಪುನರುಚ್ಚರಿಸುತ್ತದೆ ಎಂದು ಅವರು ಹೇಳಿದರು. ಕೆಂಪು ಕೋಟೆಯಿಂದ ಶ್ರೀ ಕೃಷ್ಣನ ಕರುಣೆಯ ಸಂದೇಶವನ್ನು ತಿಳಿಸಲಾಗುತ್ತದೆ ಮತ್ತು ಅದೇ ಕೋಟೆಯಿಂದ ಮಿಷನ್ ಸುದರ್ಶನ ಚಕ್ರದ ಘೋಷಣೆಯನ್ನು ಸಹ ಮಾಡಲಾಗುತ್ತದೆ ಎಂದು ಅವರು ಹೇಳಿದರು. ಮಿಷನ್ ಸುದರ್ಶನ ಚಕ್ರ ಎಂದರೆ ದೇಶದ ಪ್ರಮುಖ ಸ್ಥಳಗಳು, ಅದರ ಕೈಗಾರಿಕೆಗಳು ಮತ್ತು ಸಾರ್ವಜನಿಕ ವಲಯಗಳ ಸುತ್ತಲೂ ರಕ್ಷಣಾತ್ಮಕ ಗೋಡೆಯನ್ನು ನಿರ್ಮಿಸುವುದು, ಇದನ್ನು ಶತ್ರುಗಳು ಭೇದಿಸಲು ಸಾಧ್ಯವಿಲ್ಲ ಮತ್ತು ಶತ್ರುಗಳು ಧೈರ್ಯವನ್ನು ತೋರಿಸಲು ಮುಂದಾದರೆ, ಭಾರತದ ಸುದರ್ಶನ ಚಕ್ರವು ಅವರನ್ನು ನಾಶಪಡಿಸುತ್ತದೆ ಎಂದು ಶ್ರೀ ಮೋದಿ ಅವರು ವಿವರಿಸಿದರು.

 

ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ, ದೇಶವು ಈ ದೃಢಸಂಕಲ್ಪಕ್ಕೆ ಸಾಕ್ಷಿಯಾಗಿದೆ ಎಂದು ಒತ್ತಿ ಹೇಳಿದ ಪ್ರಧಾನಮಂತ್ರಿ, ಅವರು ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಕರ್ನಾಟಕದ ಜನರು ಸೇರಿದಂತೆ ಅನೇಕ ದೇಶವಾಸಿಗಳು ತಮ್ಮ ಪ್ರಾಣ ಕಳೆದುಕೊಂಡರು ಎಂದು ಹೇಳಿದರು. ಈ ಹಿಂದೆ, ಇಂತಹ ಭಯೋತ್ಪಾದಕ ದಾಳಿಗಳು ನಡೆದಾಗ, ಸರ್ಕಾರಗಳು ಸುಮ್ಮನೆ ಕುಳಿತುಕೊಳ್ಳುತ್ತಿದ್ದವು, ಆದರೆ ಇದು ಯಾರ ಮುಂದೆಯೂ ತಲೆಬಾಗದ ಅಥವಾ ತನ್ನ ನಾಗರಿಕರನ್ನು ರಕ್ಷಿಸುವ ಕರ್ತವ್ಯದಿಂದ ಹಿಂದೆ ಸರಿಯದ ನವಭಾರತ ಎಂದು ಅವರು ಹೇಳಿದರು. "ಭಾರತಕ್ಕೆ ಶಾಂತಿಯನ್ನು ಹೇಗೆ ಸ್ಥಾಪಿಸಬೇಕು ಮತ್ತು ಶಾಂತಿಯನ್ನು ಹೇಗೆ ಕಾಪಾಡಬೇಕು ಎಂದು ತಿಳಿದಿದೆ" ಎಂದು ಪ್ರಧಾನಮಂತ್ರಿ ಹೇಳಿದರು.

ಭಗವದ್ಗೀತೆಯು ನಮ್ಮ ಜೀವನದಲ್ಲಿ ನಮ್ಮ ಕರ್ತವ್ಯಗಳು ಮತ್ತು ಬದ್ಧತೆಗಳ ಬಗ್ಗೆ ಹೇಳುತ್ತದೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು ಮತ್ತು ಇದರಿಂದ ಪ್ರೇರಿತರಾಗಿ, ಪ್ರತಿಯೊಬ್ಬರೂ ಕೆಲವು ಸಂಕಲ್ಪಗಳನ್ನು ಮಾಡುವಂತೆ ಮನವಿ ಮಾಡಿದರು. ಈ ಮನವಿಗಳು ನಮ್ಮ ವರ್ತಮಾನ ಮತ್ತು ಭವಿಷ್ಯಕ್ಕೆ ಬಹಳ ಮುಖ್ಯವಾದ ʼನವಸಂಕಲ್ಪʼ ಗಳು ಎಂದು ಅವರು ಹೇಳಿದರು. ಸಂತರ ಸಮುದಾಯವು ಈ ಮನವಿಗಳನ್ನು ಒಮ್ಮೆ ಆಶೀರ್ವದಿಸಿದರೆ, ಅವುಗಳು ಪ್ರತಿಯೊಬ್ಬ ನಾಗರಿಕನನ್ನು ತಲುಪುವುದನ್ನು ಯಾವುದೂ ತಡೆಯಲಾಗುವುದಿಲ್ಲ ಎಂದು ತಿಳಿಸಿದರು.

ನಮ್ಮ ಮೊದಲ ಸಂಕಲ್ಪ ನೀರನ್ನು ಸಂರಕ್ಷಿಸುವುದು, ನೀರನ್ನು ಉಳಿಸುವುದು ಮತ್ತು ನದಿಗಳನ್ನು ರಕ್ಷಿಸುವುದು ಎಂದು ಪ್ರಧಾನಮಂತ್ರಿ ಹೇಳಿದರು. ನಮ್ಮ ಎರಡನೇ ಸಂಕಲ್ಪ ಗಿಡಗಳನ್ನು ನೆಡುವುದು ಎಂದು ಅವರು ಒತ್ತಿ ಹೇಳಿದರು, ರಾಷ್ಟ್ರವ್ಯಾಪಿ ಅಭಿಯಾನ "ಏಕ್ ಪೇಡ್ ಮಾ ಕೆ ನಾಮ್" ವೇಗವನ್ನು ಪಡೆಯುತ್ತಿದೆ ಮತ್ತು ಎಲ್ಲಾ ಮಠಗಳು ಈ ಅಭಿಯಾನಕ್ಕೆ ಸೇರಿದರೆ, ಅದರ ಪರಿಣಾಮ ಇನ್ನೂ ಹೆಚ್ಚಾಗುತ್ತದೆ ಎಂದು ಅವರು ಹೇಳಿದರು. ಮೂರನೇ ಸಂಕಲ್ಪ ದೇಶದಲ್ಲಿ ಕನಿಷ್ಠ ಒಬ್ಬ ಬಡವನ ಜೀವನವನ್ನು ಸುಧಾರಿಸಲು ಪ್ರಯತ್ನಿಸಬೇಕು ಎಂದು ಅವರು ಹೇಳಿದರು. ನಾಲ್ಕನೇ ಸಂಕಲ್ಪವು ಸ್ವದೇಶಿಯ ಕಲ್ಪನೆಯಾಗಿರಬೇಕು ಮತ್ತು ಜವಾಬ್ದಾರಿಯುತ ನಾಗರಿಕರಾಗಿ ನಾವೆಲ್ಲರೂ ಸ್ವದೇಶಿಯನ್ನು ಅಳವಡಿಸಿಕೊಳ್ಳಬೇಕು ಎಂದು ಶ್ರೀ ನರೇಂದ್ರ ಮೋದಿ ಅವರು ಒತ್ತಿ ಹೇಳಿದರು. ಇಂದು ಭಾರತವು ಆತ್ಮನಿರ್ಭರ ಭಾರತ ಮತ್ತು ಸ್ವದೇಶಿ ಎಂಬ ಮಂತ್ರದೊಂದಿಗೆ ಮುಂದುವರಿಯುತ್ತಿದೆ, ನಮ್ಮ ಆರ್ಥಿಕತೆ, ನಮ್ಮ ಉದ್ಯಮ ಮತ್ತು ನಮ್ಮ ತಂತ್ರಜ್ಞಾನವು ತಮ್ಮ ಸ್ವಂತ ಕಾಲಿನ ಮೇಲೆ ದೃಢವಾಗಿ ನಿಂತಿವೆ. ಆದ್ದರಿಂದ ನಾವು ಪೂರ್ಣ ಬಲದಿಂದ "ವೋಕಲ್ ಫಾರ್ ಲೋಕಲ್" ಎಂದು ಹೇಳಬೇಕು ಎಂದರು.

 

ಐದನೇ ಸಂಕಲ್ಪ ಕುರಿತು ಮಾತನಾಡಿದ ಶ್ರೀ ಮೋದಿ, ನಾವು ಸಹಜ ಕೃಷಿಯನ್ನು ಉತ್ತೇಜಿಸಬೇಕು ಎಂದು ಹೇಳಿದರು. ಆರನೇ ಸಂಕಲ್ಪವು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದಾಗಿದ್ದು, ನಮ್ಮ ಆಹಾರದಲ್ಲಿ ಸಿರಿಧಾನ್ಯವನ್ನು ಸೇರಿಸಿಕೊಳ್ಳುವುದು ಮತ್ತು ಅಡುಗೆ ಎಣ್ಣೆ ಸೇವನೆಯನ್ನು ಕಡಿಮೆ ಮಾಡುವುದು ಎಂದು ಅವರು ಒತ್ತಿ ಹೇಳಿದರು. ಏಳನೇ ಸಂಕಲ್ಪವು ಯೋಗವನ್ನು ಅಳವಡಿಸಿಕೊಳ್ಳುವುದು ಮತ್ತು ಅದನ್ನು ಜೀವನದ ಒಂದು ಭಾಗವನ್ನಾಗಿ ಮಾಡಿಕೊಳ್ಳುವುದು ಎಂದು ಅವರು ಹೇಳಿದರು. ಎಂಟನೇ ಸಂಕಲ್ಪವು ಹಸ್ತಪ್ರತಿಗಳ ಸಂರಕ್ಷಣೆಯನ್ನು ಬೆಂಬಲಿಸುವುದು ಎಂದು ಪ್ರಧಾನಮಂತ್ರಿ ಅವರು ಒತ್ತಿ ಹೇಳಿದರು, ಭಾರತದ ಪ್ರಾಚೀನ ಜ್ಞಾನದ ಬಹುಪಾಲು ಈ ಹಸ್ತಪ್ರತಿಗಳಲ್ಲಿ ಅಡಗಿದೆ ಎಂದು ಅವರು ಹೇಳಿದರು. ಈ ಜ್ಞಾನವನ್ನು ಸಂರಕ್ಷಿಸಲು ಭಾರತ ಸರ್ಕಾರವು ಜ್ಞಾನ ಭಾರತಂ ಮಿಷನ್ ನಲ್ಲಿ ಕೆಲಸ ಮಾಡುತ್ತಿದೆ ಮತ್ತು ಜನರ ಸಹಕಾರವು ಈ ಅಮೂಲ್ಯ ಪರಂಪರೆಯನ್ನು ರಕ್ಷಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು.

ನಮ್ಮ ಪರಂಪರೆಗೆ ಸಂಬಂಧಿಸಿದ ದೇಶದ ಕನಿಷ್ಠ 25 ಸ್ಥಳಗಳಿಗೆ ಭೇಟಿ ನೀಡುವ ಒಂಬತ್ತನೇ ಸಂಕಲ್ಪವನ್ನು ಮಾಡುವಂತೆ ಜನರನ್ನು ಒತ್ತಾಯಿಸಿದ ಶ್ರೀ ಮೋದಿ, ಮೂರು ನಾಲ್ಕು ದಿನಗಳ ಹಿಂದೆ ಹರಿಯಾಣದ ಕುರುಕ್ಷೇತ್ರದಲ್ಲಿ ಮಹಾಭಾರತ ಅನುಭವ ಕೇಂದ್ರವನ್ನು ಉದ್ಘಾಟಿಸಲಾಗಿದೆ ಎಂದು ಹೇಳಿದರು. ಭಗವಾನ್ ಶ್ರೀ ಕೃಷ್ಣನ ಜೀವನ ತತ್ವವನ್ನು ವೀಕ್ಷಿಸಲು ಈ ಕೇಂದ್ರಕ್ಕೆ ಭೇಟಿ ನೀಡುವಂತೆ ಅವರು ಜನರಿಗೆ ಮನವಿ ಮಾಡಿದರು. ಗುಜರಾತಿನಲ್ಲಿ ಪ್ರತಿ ವರ್ಷ ಶ್ರೀ ಕೃಷ್ಣ ಮತ್ತು ಮಾತಾ ರುಕ್ಮಿಣಿಯವರ ವಿವಾಹಕ್ಕೆ ಮೀಸಲಾಗಿರುವ ಮಾಧವಪುರ ಮೇಳವನ್ನು ಆಯೋಜಿಸಲಾಗುತ್ತದೆ ಎಂದು ಶ್ರೀ ಮೋದಿ ಅವರು ಹೇಳಿದರು. ಇದು ದೇಶಾದ್ಯಂತ, ವಿಶೇಷವಾಗಿ ಈಶಾನ್ಯದಿಂದ ಜನರನ್ನು ಆಕರ್ಷಿಸುತ್ತದೆ ಮತ್ತು ಮುಂದಿನ ವರ್ಷ ಎಲ್ಲರೂ ಇದರಲ್ಲಿ ಭಾಗವಹಿಸಲು ಪ್ರಯತ್ನಿಸಬೇಕೆಂದು ಒತ್ತಾಯಿಸಿದರು.

ಶ್ರೀ ಕೃಷ್ಣನ ಸಂಪೂರ್ಣ ಜೀವನ ಮತ್ತು ಗೀತೆಯ ಪ್ರತಿಯೊಂದು ಅಧ್ಯಾಯವು ಕರ್ಮ, ಕರ್ತವ್ಯ ಮತ್ತು ಕಲ್ಯಾಣದ ಸಂದೇಶವನ್ನು ನೀಡುತ್ತದೆ ಎಂದು ಪ್ರಧಾನಮಂತ್ರಿ ಮೋದಿ ಅವರು ಹೇಳಿದರು. 2047 ಭಾರತೀಯರಿಗೆ ಕೇವಲ ಅಮೃತ ಕಾಲವಲ್ಲ, ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ಕರ್ತವ್ಯ ಬದ್ಧ ಯುಗವಾಗಿದೆ ಎಂದು ಅವರು ಒತ್ತಿ ಹೇಳಿದರು. ಪ್ರತಿಯೊಬ್ಬ ನಾಗರಿಕ, ಪ್ರತಿಯೊಬ್ಬ ಭಾರತೀಯನಿಗೆ ಜವಾಬ್ದಾರಿ ಇದೆ ಮತ್ತು ಪ್ರತಿಯೊಬ್ಬ ವ್ಯಕ್ತಿ ಮತ್ತು ಸಂಸ್ಥೆಗೆ ಕರ್ತವ್ಯವಿದೆ ಎಂದು ಶ್ರೀ ಮೋದಿ ಹೇಳಿದರು. ಕರ್ನಾಟಕದ ಶ್ರಮಶೀಲ ಜನರು ಈ ಕರ್ತವ್ಯಗಳನ್ನು ಪೂರೈಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಅವರು ಒತ್ತಿ ಹೇಳಿದರು. ಪ್ರತಿಯೊಂದು ಪ್ರಯತ್ನವನ್ನೂ ದೇಶಕ್ಕೆ ಸಮರ್ಪಿಸಬೇಕು ಮತ್ತು ಈ ಕರ್ತವ್ಯ ಪ್ರಜ್ಞೆಯನ್ನು ಅನುಸರಿಸುವ ಮೂಲಕ ಅಭಿವೃದ್ಧಿ ಹೊಂದಿದ ಕರ್ನಾಟಕ ಮತ್ತು ಅಭಿವೃದ್ಧಿ ಹೊಂದಿದ ಭಾರತದ ಕನಸು ನನಸಾಗುತ್ತದೆ ಎಂದು ಅವರು ಹೇಳಿದರು. ಉಡುಪಿಯ ನೆಲದಿಂದ ಹೊರಹೊಮ್ಮುವ ಶಕ್ತಿಯು ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪಕ್ಕೆ ಮಾರ್ಗದರ್ಶನ ನೀಡುವುದನ್ನು ಮುಂದುವರಿಸಲಿ ಎಂದು ಹಾರೈಸುವ ಮೂಲಕ ಶ್ರೀ ಮೋದಿ ಅವರು ತಮ್ಮ ಭಾಷಣವನ್ನು ಮುಕ್ತಾಯಗೊಳಿಸಿದರು. ಈ ಪವಿತ್ರ ಸಂದರ್ಭದಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ಅವರು ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು.

 

ಕರ್ನಾಟಕದ ರಾಜ್ಯಪಾಲ ಶ್ರೀ ಥಾವರಚಂದ್ ಗೆಹ್ಲೋಟ್, ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಸೇರಿದಂತೆ ಇತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಹಿನ್ನೆಲೆ

ಪ್ರಧಾನಮಂತ್ರಿಯವರು ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ವಿದ್ಯಾರ್ಥಿಗಳು, ಸಂತರು, ವಿದ್ವಾಂಸರು ಮತ್ತು ಸಮಾಜದ ಎಲ್ಲಾ ವರ್ಗಗಳ ಜನರು ಸೇರಿದಂತೆ 100,000 ಜನರು ಭಾಗವಹಿಸಿದ ಕಾರ್ಯಕ್ರಮದಲ್ಲಿ, ಅವರು ಒಟ್ಟಾಗಿ ಭಗವದ್ಗೀತೆಯನ್ನು ಪಠಿಸುತ್ತಾರೆ.

ಪ್ರಧಾನಮಂತ್ರಿಯವರು ಶ್ರೀಕೃಷ್ಣ ಗರ್ಭಗುಡಿಯ ಮುಂಭಾಗದಲ್ಲಿರುವ ಸುವರ್ಣ ತೀರ್ಥ ಮಂಟಪವನ್ನು ಉದ್ಘಾಟಿಸಿದರು ಮತ್ತು ಪವಿತ್ರ ಕನಕನ ಕಿಂಡಿಗೆ ಕನಕ ಕವಚವನ್ನು (ಚಿನ್ನದ ಹೊದಿಕೆ) ಸಮರ್ಪಿಸಿದರು, ಇದು ಸಂತ ಕನಕದಾಸರು ಭಗವಾನ್ ಕೃಷ್ಣನ ದೈವಿಕ ದರ್ಶನ ಪಡೆದ ಪವಿತ್ರ ಕಿಟಕಿ ಎಂಬ ನಂಬಿಕೆಯಿದೆ. ಉಡುಪಿಯ ಶ್ರೀ ಕೃಷ್ಣ ಮಠವನ್ನು 800 ವರ್ಷಗಳ ಹಿಂದೆ ವೇದಾಂತದ ದ್ವೈತ ಸಿದ್ಧಾಂತದ ಸ್ಥಾಪಕರಾದ ಶ್ರೀ ಮಧ್ವಾಚಾರ್ಯರು ಸ್ಥಾಪಿಸಿದರು.

 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Solar powers India as electricity demand hits record high of 256 GW

Media Coverage

Solar powers India as electricity demand hits record high of 256 GW
NM on the go

Nm on the go

Always be the first to hear from the PM. Get the App Now!
...
Today, Sikkim has beautifully showcased the spirit of “Ek Bharat, Shreshtha Bharat”: PM Modi in Gangtok
April 28, 2026
Known for Serenity and Enterprise, Sikkim Sees Rapid Progress :PM
One of the best things I noticed all along the way, was the cleanliness of Sikkim's roads: PM
No garbage as far as the eye can see,cleanliness in the air too, cleanliness on the roads as well, the people of Sikkim, are true protectors of nature, its brand ambassadors: PM
We are placing maximum focus on connectivity and infrastructure in Sikkim; In recent years, hundreds of kilometers of highways have been constructed here, Work is progressing rapidly to connect every village with roads: PM
Another vast horizon of possibilities for Sikkim lies in sports;The youth here have showcased their capability and talent on grand stages: PM
Our government is committed to ensuring that alongside robust health infrastructure, people also receive affordable medical treatment: PM
Previously, we provided Ayushman cards to ensure free healthcare for the poor; Now, this facility is being extended to all senior citizens aged 70 years and above, medicines are available at highly affordable prices at Jan Aushadhi Kendras: PM
Sikkim's model of organic and natural farming serves as an inspiration for the entire nation : PM
The lifestyle of Sikkim and Sikkim’s resolve have today become an integral part of the nation's vision: PM

भारत माता की जय।

भारत माता की जय।

भारत माता की जय।

सिक्किम के राज्यपाल श्री ओम माथुर जी, यहां के लोकप्रिय, ऊर्जावान युवा और मेरे परम मित्र श्री प्रेम सिंह तमांग जी, संसद में मेरे साथी श्री दोरजी शेरिंग लेपचा जी, डॉ. इन्द्र हांग सुब्बा जी, श्री दिली राम थापा जी और सिक्किम के मेरे प्यारे भाइयों और बहनों।

समग्र सिक्किम वासी लाई स्वर्ण जयंती को धेरै धेरै बधाई तथा शुभकामना, नमस्ते, टाशी डिले!

खाम-रि-मो! तपाईंहरू कॉस्तो हुनु-हुन्छ ?

साथियों,

मैं कल दोपहर बाद गंगटोक पहुंचा था, और यहां मेरे आने से पहले, मैं बंगाल चुनावों की गहमा-गहमी में जरा व्यस्त था। यहां आते ही एक नई अनुभूति, एक नया आनंद, चारों तरफ उत्सव का माहौल, मन खुशियों से भर गया। रात में हुई बारिश, फिर सुबह की ठंडक और ये खिली हुई धूप, सिक्किम के रंग ही निराले हैं।

साथियों,

पूरब का स्वर्ग सिक्किम, ऑर्किड्स का गार्डन सिक्किम, इसका अप्रतिम सौंदर्य, यहां की शांति, यहां का आध्यात्मिक आनंद, ये अनुभूति बड़े सौभाग्य से मिलती है। आज मैं यहां के ऑर्किड्स को भी देखने गया था। मेरे लिए जितना समय तय हुआ था, मैं ज्यादा ही समय वहां बिता रहा था। और मैं देशभर के टूरिस्टों को, प्रकृति प्रेमी टूरिस्टों को, अगर उन्होंने सिक्किम का ये ऑर्किड नहीं देखा है, तो कुछ भी नहीं देखा है। और मुझे विश्वास है कि इस बार टूरिस्ट, सिक्किम के टूरिज्म के सारे आंकड़े इस बार पार कर देंगे। ऑर्किड में मैंने देखा प्रकृति के वो रंग, उनका उल्लास, मेरा मन अभी भी उसी में डूबा हुआ है।

साथियों,

आज हमें सिक्किम की 50 वर्ष की यात्रा का उत्सव मनाने का अवसर मिला है। जब अवसर इतना ऐतिहासिक हो और इतने दिव्य माहौल में हो रहा हो, तो उसकी भव्यता कई गुना बढ़ जाती है। पालजोर का ये स्टेडियम आज उसी अद्भुत आभा से भरा हुआ है। यहां जो सांस्कृतिक कार्यक्रम हुए, कलाकारों की मुग्ध कर देने वाली प्रस्तुतियां हुईं। सिक्किम के आप लोगों का जो उत्साह दिखा, सामने पहाड़ों और आसमान में प्रकृति की सुंदर छटा दिखी। ऐसा लग रहा था, जैसे प्रकृति और संस्कृति साथ मिलकर जीवंत हो उठी। वाकई ये स्मूर्तियां हमेशा मेरे दिल में बनी रहेगी। और मैं जो भी कोरियोग्राफी करने वाले लोग होंगे, जो भी गाने वाले लोग होंगे, सबको बधाई देता हूं। और आज का ये कार्यक्रम मैं चाहूंगा कि ये टीवी, मीडिया वाले, दूरदर्शन वाले देश को बार-बार दिखाएं। जब देश में राजनीतिक स्वार्थ के चलते भाषावाद, प्रांतवाद, ऊंच-नीच, देश में भेदभाव के लिए लगातार कोशिश हो रही है, आज सिक्किम ने ‘एक भारत श्रेष्ठ भारत’ के दर्शन करा दिए। उन्होंने इस छोटे से कार्यक्रम में पूरा हिंदुस्तान आंखों के सामने खड़ा कर दिया। और अभी भी जो उन्होंने बैठने की रचना की है, मुझे ऊपर से दिखता है, पूरा हिंदुस्तान है, और जो जिस प्रदेश का है, वैसे ही परिवेश है, उधर गुजरात तो गुजराती कपड़ों में लोग बैठे हैं। वाकई-वाकई आपने दिल जीत लिया है। ये मोदी का नहीं, पूरे हिंदुस्तान का दिल जीत लिया है आज। यही तो भारत भक्ति होती है, यही तो देशभक्ति होती है। नई पीढ़ी में इसी से देशभक्ति के भाव जगते हैं। बहुत-बहुत बधाई आप लोगों को।

साथियों,

सिक्किम आने पर मुझे इसलिए भी बहुत खुशी है, क्योंकि पिछली बार मैं खराब मौसम के कारण यहां तक नहीं पहुंच पाया था। मुझे बागडोगरा से ऑनलाइन ही आपसे जुड़ना पड़ा था। आपसे यहां आकर ना मिल पाने की वो कसक मेरे मन में बनी हुई थी। और जब भी प्रेम सिंह जी मिलते थे ना, तो मेरी आंखें झुक जाती थी कि आपने इतनी मेहनत की, मैं आ नहीं पाया, और इसलिए मैं इंतजार में था, वो इंतजार भी आज इस अवसर के माध्यम से पूरा हुआ है।

साथियों,

सिक्किम के लोगों से मिलना मुझे हमेशा एक अलग सुकून देता है। आपकी ये सौम्यता, आपकी ये सादगी, आपके चेहरों की मुस्कान अद्भुत है। यहां आने से पहले भी मैं सिक्किम के कई प्रतिभाशाली लोगों से मिला। सिक्किम के प्रबुद्ध लोग, पद्म सम्मान विजेता, आर्टिस्ट और फुटबॉलर्स उनसे अलग-अलग विषयों पर मेरी बात हुई।

साथियों,

कल शाम को जो रोड शो हुआ, मैं उसे भी अब तक भूल नहीं पाया हूं, और शायद कभी नहीं भूल पाऊंगा। हाथों में हमारा ये प्यारा तिरंगा। लगातार भारत माता का जयकारा, और वंदे मातरम का उद्घोष, पूरा वातावरण ‘एक भारत श्रेष्ठ भारत’ की तस्वीरों से रंगा हुआ था। गंजू लामा द्वार से लोकभवन के रास्ते तक, जिस तरह सिक्किम के मेरे भाई-बहन अपना प्यार देने उमड़े, जिस तरह सभी जातीय समुदायों ने स्वागत किया, हर समुदाय की अपनी वेशभूषा, अपना-अपना संगीत, अपनी-अपनी परंपराएं, पूरा माहौल ही एक बड़े महोत्सव में बदल गया था। ये दृश्य ऐसा था, जैसे प्रकृति की गोद में अलग-अलग रंग खिले हों। बड़ी संख्या में मेरी माताएं-बहनें, बच्चे और बुजुर्ग भी अपना आशीर्वाद देने आए थे। और जो एक सबसे अच्छी बात मुझे पूरे रास्ते भर दिखी, वो थी सिक्किम की सड़कों की स्वच्छता, आप सबको सैल्यूट। दूर-दूर तक कोई गंदगी नहीं, वायु में भी स्वच्छता, सड़कों पर भी स्वच्छता, सिक्किम के आप लोग प्रकृति के पक्के वाले संरक्षक हैं, ब्रैंड एंबेसेडर हैं। मैं फिर देशवासियों को कहता हूं, सिक्किम आइए। कितना साफ-सुथरा, स्वच्छ बनाए रखा है सिक्किम को।

भाइयों-बहनों,

कल रोड शो जो हुआ, और अभी इस आयोजन के लिए मैं आप सभी का और सभी कलाकारों का हृदय से बहुत-बहुत आभार प्रकट करता हूं, आपका अभिनंदन करता हूं। मैं सिक्किम के लोगों को, और सभी देशवासियों को 50 वर्ष की इस महत्वपूर्ण यात्रा के इस उत्सव की बहुत-बहुत बधाई देता हूं। मैं आपको विश्वास दिलाता हूं, आपके प्यार, आपका स्नेह, आपके आशीर्वाद का ये कर्ज, इसे चुकाने के लिए मैं कोई कोर-कसर बाकी नहीं छोडूंगा।

साथियों,

सिक्किम की यात्रा मानवीय मूल्यों की यात्रा है। ये विकास और विरासत को साथ लेकर चलने की यात्रा है। सिक्किम की अनेक पीढ़ियों ने इस यात्रा को आगे बढ़ाया है। गत् 50 वर्ष में जिन-जिन लोगों ने सिक्किम को आगे बढ़ाया है, यहां तक पहुंचाया है, उन सबको मैं आज हृदय से बहुत-बहुत बधाई देता हूं, उनका अभिनंदन करता हूं। जिस समय, जिसको जो करना था, उसने किया, उसने सिक्किम को दिया। अब, इसकी ज़िम्मेदारी हमारे पर है, हमारे ऊपर है। सिक्किम की सरकार, मेरे मित्र प्रेम सिंह जी के नेतृत्व में पूरी ईमानदारी से सिक्किम की विरासत को संजोने और विकास को गति देने का काम कर रही है। हमारे लिए सिक्किम, नॉर्थ ईस्ट केवल देश का एक अहम हिस्सा ही नहीं है, बल्कि ये भारत की ‘अष्ट लक्ष्मी’ हैं। नॉर्थ ईस्ट ये हिंदुस्तान की ‘अष्ट लक्ष्मी’ हैं। इसलिए, हम ‘एक्ट ईस्ट’ की पॉलिसी पर तो काम कर ही रहे हैं, हमने नॉर्थ ईस्ट के लिए ‘एक्ट फास्ट’ का संकल्प भी लिया है। और इसलिए ‘एक्ट ईस्ट’, ‘एक्ट फास्ट’। आज भी यहाँ हजारों करोड़ रुपए की 30 से ज्यादा परियोजनाओं का लोकार्पण और शिलान्यास हुआ है। इनमें रोड, पावर, टूरिज्म, हेल्थ, एजुकेशन, हर तरह के प्रोजेक्ट शामिल हैं। नॉर्थ सिक्किम के क्षेत्रों में 2023 के बाद जो चुनौतियां आईं, उन्हें भी ध्यान में रखा गया है। जहां-जहां कनेक्टिविटी प्रभावित हुई, वहां उसे फिर से मजबूत करने पर फोकस किया गया है। मैं इनके लिए सिक्किम के आप सभी लोगों को बहुत-बहुत बधाई देता हूं।

साथियों,

हमारे सिक्किम की बहुत बड़ी ताकत उसकी टूरिज़्म इकोनॉमी है। सिक्किम का क्षेत्रफल देश के कुल क्षेत्रफल का एक परसेंट से भी कम है, लेकिन देश की 25 परसेंट से ज्यादा फ्लोरल diversity हमारे सिक्किम में मिलती है। यहाँ पक्षियों की करीब 500 प्रजातियाँ, बटरफ़्लाइज़ की करीब 700 प्रजातियाँ, खूबसूरत फॉरेस्ट कवर, कंचनजंगा का अद्भुत आकर्षण, कितना कुछ है। इसलिए हर कोई बार-बार सिक्किम आना चाहता है।

साथियों,

सिक्किम के टूरिज्म से यहां बहुत बड़ी संख्या में लोगों की आय जुड़ी हुई है। और टूरिज्म तभी बढ़ता है, उस राज्य का इंफ्रास्ट्रक्चर जब बढ़िया हो, तब बढ़ता है। इसीलिए हम सिक्किम की कनेक्टिविटी और यहां इंफ्रास्ट्रक्चर पर सबसे ज्यादा फोकस कर रहे हैं। बीते वर्षों में यहाँ सैकड़ों किलोमीटर हाइवेज का निर्माण हुआ है। गाँव-गाँव तक सड़कों को पहुंचाने के लिए तेजी से काम चल रहा है। ऐसे आधुनिक इंफ्रास्ट्रक्चर पहले जिनकी कल्पना भी नहीं होती थी, आज वो हकीकत बन रहे हैं। बागडोगरा से गंगटोक तक एक्सप्रेसवे का निर्माण हो, सेवोक-रंगपो रेल लाइन हो, ये प्रोजेक्ट सिक्किम को पूरे देश से जोड़ने का जरिया बन रहे हैं। यहां नए नेशनल हाईवेज, उसका निर्माण भी कराया जा रहा है। गंगटोक जैसे शहरों में रिंग रोड जैसी परियोजनाएं भविष्य के लिए जरूरी हैं। इस दिशा में भी काम आगे बढ़ रहा है।

भाइयों-बहनों,

बीजेपी सरकार जो काम आज कर रही है, वो पहले भी हो सकते थे, लेकिन काँग्रेस की सरकारों ने हमेशा सिक्किम के विकास को पीछे धकेला। सेवोक-रंगपो रेल लाइन का ही उदाहरण लीजिए, इस प्रोजेक्ट को 2008-2009 में मंजूरी मिली थी, लेकिन जमीन पर काम नहीं हुआ, कागज पर लटका रहा। परियोजना फाइलों में ही पड़ी रही। केंद्र में बीजेपी सरकार आने के बाद विकास को फिर से गति मिली है। पहली बार सिक्किम तक रेल पहुँचने जा रही है।

साथियों,

पर्यटन को बढ़ावा देने के लिए हमें नए ideas की भी जरूरत होती है। आज हम इसी सोच के साथ काम कर रहे हैं। भालेढूंगा, येन-येंग और पेलिंग में रोपवे का निर्माण इसी का उदाहरण है। भालेढूंगा में स्काइवॉक का भी निर्माण कराया जा रहा है। और अब सिंहशोर Bridge पर ग्लास डेक स्काइवॉक भी बनाने की तैयारी है। नाथूला और नामली जैसी जगहों पर बार्डर एक्सपीरियंस को बेहतर बनाने का काम भी हो रहा है।

साथियों,

हमारी सरकार के इन प्रयासों से आपका जीवन आसान होगा, सिक्किम आने वाले पर्यटकों की संख्या और बढ़ेगी, और आपकी आमदनी में भी वृद्धि होगी। और मैं देशभर के टूरिस्टों को हमेशा आग्रह करता हूं। आप यात्रा के लिए जाएं, आप एडवेंचर टूरिज्म के लिए जाएं, आप एनवायरमेंट टूरिज्म के लिए जाएं, लेकिन जहां जाए, वहां जो लोकल उत्पाद होते हैं, आपकी यात्रा के बजट का 5% वहां से कुछ ना कुछ खरीदना कंपलसरी होना चाहिए। लोकल को वोकल बनाने का रास्ता यहीं से शुरू होता है। आप जहां जाए, वहीं का खाना खाएं, जहां जाए वहीं की चीजें खरीदें, Souvenir के तौर पर ले जाएं। ताकि यहां के लोगों को दूर-दूर पहाड़ों में रहने वाले छोटे-छोटे समूहों को ये जो इतनी बड़ी मात्रा में मेरी बहनें आई हैं, ये इतनी बढ़िया-बढ़िया चीजें बनाती हैं सेल्फ हेल्प ग्रुप में, वो खरीदने वाले लोग देश भर से आने चाहिए और इससे यहां रोजगार के अवसर भी बढ़ेंगे।

साथियों,

सिक्किम में इको-वेलनेस टूरिज़्म का भी बहुत स्कोप है, हम इसे भी प्रमोट कर रहे हैं। स्थानीय लोगों को टूरिज़्म से ज्यादा से ज्यादा आय हो, इसके लिए 1 हजार होमस्टे भी बिल्ड किए जा रहे हैं। Adventure टूरिज़्म के लिए भी इंफ्रास्ट्रक्चर को सपोर्ट किया जा रहा है।

साथियों,

सिक्किम के लिए संभावनाओं का एक और आसमान स्पोर्ट्स में भी है, खेलकूद में भी है। यहाँ के युवाओं ने स्पोर्ट्स में अपनी क्षमता और प्रतिभा को बड़े-बड़े मंचों पर साबित किया है। फुटबाल, बॉक्सिंग, आर्चरी, इन खेलों में यहाँ से निकले खिलाड़ियों ने सिक्किम और देश का नाम रोशन किया है।

साथियों,

इन प्रतिभाओं को आगे बढ़ाने के लिए हम ‘खेलो इंडिया’ और ‘फिट इंडिया’ जैसे मूवमेंट चला रहे हैं। यहाँ की State Sports Academy को भी पुनर्जीवित किया गया है। सिक्किम प्रिमियर लीग जैसी sports events को बढ़ावा दिया जा रहा है, ताकि ज्यादा से ज्यादा संख्या में खिलाड़ियों को खेलने का मौका मिले, उनके खेलने में सुधार आए।

साथियों,

यहाँ जसलाल प्रधान जी के नाम पर state-of-the-art boxing academy का भी प्रस्ताव है। इंटीग्रेटेड स्पोर्ट्स और कल्चरल विलेज जैसे प्रोजेक्ट भी आगे बढ़ रहे हैं। इससे सिक्किम के युवाओं को बेहतर सुविधाएं मिलेंगी, और वे अपने खेल को और चमका भी पाएंगे।

साथियों,

आज जिन प्रोजेक्ट्स का लोकार्पण और शिलान्यास हुआ है, उनमें हेल्थ सेक्टर से जुड़े कई बड़े काम भी शामिल हैं। एक समय था, जब सिक्किम और नॉर्थ ईस्ट को कांग्रेस की सरकारों ने पूरी तरह नजर अंदाज कर रखा था। यहाँ स्वास्थ्य सेवाएं बहुत सीमित होती थीं। इस कारण से टूरिस्ट भी यहाँ आने में संकोच करते थे, लेकिन आज वो चुनौती भी खत्म हो रही है। आज सिक्किम में करीब 200 आयुष्मान आरोग्य मंदिर काम कर रहे हैं। आज यहाँ 4 डिस्ट्रिक्ट हॉस्पिटल्स हैं, Tertiary care हॉस्पिटल है, वेलनेस सेंटर्स हैं, यहाँ आयुष सुविधाओं का भी हजारों लोग लाभ ले रहे हैं। ड्रेजॉन्ग नामग्यल सोवा रिग्पा हॉस्पिटल के लोकार्पण के बाद सिक्किम के हेल्थकेयर सिस्टम को और बूस्ट मिलेगा।

भाइयों-बहनों,

हेल्थ इंफ्रास्ट्रक्चर के साथ-साथ लोगों को सस्ता इलाज भी मिले, हमारी सरकार इसके लिए भी कमिटेड है। पहले हमने गरीबों को मुफ्त इलाज के लिए आयुष्मान कार्ड दिये थे। अब ये सुविधा 70 वर्ष और उससे ऊपर वाले उम्र के सभी बुजुर्गों को भी दी जा रही है। साथ ही, जन औषधि केन्द्रों पर दवाएं भी बेहद सस्ते दामों पर उपलब्ध हैं। इन प्रयासों से यहाँ के लोगों का जीवन तो आसान हुआ ही है, इलाज पर होने वाला आपका खर्च भी कम हो रहा है।

साथियों,

आज आर्थिक प्रगति और संसाधनों को लेकर विश्व का नज़रिया तेजी से बदल रहा है। आज दुनिया sustainable lifestyle की बात कर रही है। आज क्लीन एनर्जी पर दुनिया का फोकस है। आज organic फूड्स को प्राथमिकता दी जा रही है। मुझे खुशी है कि हमारा नॉर्थ ईस्ट और सिक्किम इस futuristic ग्रोथ का बड़ा केंद्र है। सिक्किम ने पूरे देश को दिशा दिखाई है। सिक्किम ने तो 10 साल पहले, 2016 में ही पूरे राज्य को organic state घोषित कर दिया था। हमारा डेमाजोंग अब केवल राइस उत्पादन के लिए नहीं जाना जाता, उसकी पहचान अब organic राइस के लिए होने लगी है। बड़ी इलायची, अदरक, हल्दी, एवोकाडो, कीवी, ऐसे कितने ही उत्पाद देश और दुनिया के बाजार तक पहुँच रहे हैं। सिक्किम में medicinal plants की भी सैकड़ों प्रजातियाँ पाई जाती हैं। ये भी स्थानीय लोगों की आय बढ़ाने का जरिया बन रही है।

साथियों,

Organic और प्राकृतिक खेती का सिक्किम का मॉडल, ये पूरे देश के लिए एक प्रेरणा है। सिक्किम की लाइफस्टाइल, सिक्किम के संकल्प, आज ये देश के विज़न का हिस्सा बन चुके हैं। यहां प्राकृतिक खेती को बढ़ावा देने अब ऑर्गेनिक प्रोसेसिंग प्लांट भी शुरू किये गए हैं। इससे किसानों को बाजार से सीधा जुड़ने का मौका मिल रहा है।

साथियों,

सिक्किम की आर्थिक प्रगति में एक बहुत बड़ी भूमिका यहाँ के सेल्फ हेल्प ग्रुप्स और इन महिलाओं की भी है। इन सेल्फ हेल्प ग्रुप्स के प्रॉडक्ट्स बड़े बाज़ारों तक पहुंचे, डिजिटल इंडिया इसमें एक बड़ी भूमिका निभा रहा है। “स्वयं सिक्किम” जैसे प्लेटफॉर्म आज इन महिलाओं को सशक्त बना रहे हैं।

साथियों,

क्लीन एनर्जी के क्षेत्र में सिक्किम की व्यापक क्षमता मौजूद है। यहाँ के पर्यावरण को भी संरक्षित रखते हुए, हमें सिक्किम के इस potential का और इस्तेमाल करना है। मैं जानता हूं, पर्यावरण संरक्षण, ये सिक्किम के लोगों का स्वभाव है। जब देश ने ‘एक पेड़ मां के नाम’ की पहल शुरू की थी, सिक्किम के लोगों ने कर्तव्य भाव से आगे बढ़ाया, और मुख्यमंत्री जी ने यहां के लोग को प्रेरणा देकर के “मेरो रुख मेरो संतति” पहल भी चला रहे हैं। इसके तहत हर शिशु के जन्म पर 108 पेड़ लगाए जाते हैं। मुझे लगता है ये पहल पूरी दुनिया के लिए एक प्रेरणा है। हमें पर्यावरण से जुड़े अपने प्रयासों को और निष्ठा से आगे बढ़ाना है। ये हमारी ऐसी विरासत है, जो हमें अगली पीढ़ी के लिए सुरक्षित रखना है।

साथियों,

सिक्किम और तेज गति से आगे बढ़े, विकसित भारत के सपने को गति दे, हमें इसके लिए मिलकर मेहनत करनी है। हमें सिक्किम को नई ऊंचाइयों पर लेकर जाना है। इसी संकल्प के साथ एक बार फिर, आप सभी को इस अवसर पर शुभकामनाएं देता हूं। आप सभी के उज्ज्वल भविष्य की कामना करता हूं। और आज 50 वर्ष की यात्रा अब हमें दो पड़ाव पूरे करने हैं। जब

सिक्किम की यात्रा के 100 साल होंगे तब क्या करेंगे? सिक्किम की यात्रा के 75 साल होंगे तब तक क्या करेंगे? और देश की आजादी के 100 साल होंगे, विकसित भारत का सपना जो है, 2047 उसके लिए आज से तैयारी शुरू कर करके संकल्प के साथ हम आगे बढ़े। इसी भावना के साथ फिर एक बार हृदय से मैं आप सबका बहुत-बहुत आभार व्यक्त करता हूं। बहुत-बहुत धन्यवाद। मेरे साथ बोलिए-

भारत माता की जय। भारत माता की जय। भारत माता की जय।

वंदे मातरम। वंदे मातरम। वंदे मातरम।

वंदे मातरम। वंदे मातरम। वंदे मातरम।

वंदे मातरम। वंदे मातरम। वंदे मातरम।

वंदे मातरम।