ಕೃತಕ ಬುದ್ಧಿಮತ್ತೆಯು (ಎಐ) ಮಾನವ ಇತಿಹಾಸದಲ್ಲಿ ಒಂದು ಪರಿವರ್ತನಾತ್ಮಕ ಅಧ್ಯಾಯವನ್ನು ಗುರುತಿಸುತ್ತದೆ: ಪ್ರಧಾನಮಂತ್ರಿ
ನಾವು ಎಐ ಅನ್ನು ಪ್ರಜಾಪ್ರಭುತ್ವೀಕರಣಗೊಳಿಸಬೇಕು; ಇದು ವಿಶೇಷವಾಗಿ ಜಾಗತಿಕ ದಕ್ಷಿಣದ ರಾಷ್ಟ್ರಗಳಿಗೆ ಒಳಗೊಳ್ಳುವಿಕೆ ಮತ್ತು ಸಬಲೀಕರಣಕ್ಕೆ ಒಂದು ಸಾಧನವಾಗಬೇಕು:ಪ್ರಧಾನಮಂತ್ರಿ
ನೈತಿಕ ಮತ್ತು ನೀತಿಬದ್ಧ ವ್ಯವಸ್ಥೆಗಳು, ಹೊಣೆಗಾರಿಕೆಯ ಆಡಳಿತ, ರಾಷ್ಟ್ರೀಯ ಸಾರ್ವಭೌಮತ್ವ, ಸುಲಭ ಲಭ್ಯತೆ ಮತ್ತು ಒಳಗೊಳ್ಳುವಿಕೆ, ಮಾನ್ಯತೆ ಮತ್ತು ಕಾನೂನುಬದ್ಧ ಎಐಗಾಗಿ ಪ್ರಧಾನಮಂತ್ರಿಯವರು ʼಮಾನವ್‌ʼ (M.A.N.A.V.) ದೃಷ್ಟಿಕೋನವನ್ನು ಮಂಡಿಸಿದರು
ನಾವು ಮಾನವರು ಮತ್ತು ಬುದ್ಧಿವಂತ ವ್ಯವಸ್ಥೆಗಳು ಸಹ-ಸೃಷ್ಟಿಸುವ, ಸಹ-ಕೆಲಸ ಮಾಡುವ ಮತ್ತು ಸಹ-ವಿಕಸನಗೊಳ್ಳುವ ಯುಗವನ್ನು ಪ್ರವೇಶಿಸುತ್ತಿದ್ದೇವೆ; ಎಐ ನಮ್ಮ ಕೆಲಸವನ್ನು ಹೆಚ್ಚು ಚತುರ, ಹೆಚ್ಚು ದಕ್ಷ ಮತ್ತು ಹೆಚ್ಚು ಪ್ರಭಾವಶಾಲಿಯಾಗಿಸಲಿದೆ: ಪ್ರಧಾನಮಂತ್ರಿ
ಜಾಗತಿಕ ಸಾಮಾನ್ಯ ಒಳಿತಿಗಾಗಿ ಎಐ ಎಂಬ ಸಾಮೂಹಿಕ ಸಂಕಲ್ಪವನ್ನು ನಾವು ಅಭಿವೃದ್ಧಿಪಡಿಸಬೇಕು: ಪ್ರಧಾನಮಂತ್ರಿ
ಎಐನಲ್ಲಿ ಭಾರತವು ಅವಕಾಶವನ್ನು ಮತ್ತು ನಾಳೆಯ ನೀಲನಕ್ಷೆಯನ್ನು ಕಾಣುತ್ತಿದೆ: ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026' ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ಮಾನವಕುಲದ ಆರನೇ ಒಂದು ಭಾಗವನ್ನು ಪ್ರತಿನಿಧಿಸುವ ಭಾರತದಲ್ಲಿ ವಿಶ್ವದ ಅತಿದೊಡ್ಡ ಮತ್ತು ಐತಿಹಾಸಿಕ 'ಎಐ ಇಂಪ್ಯಾಕ್ಟ್ ಶೃಂಗಸಭೆ' ನಡೆಯುತ್ತಿದೆ ಎಂದು ಹೇಳಿದರು. ಭಾರತವು ವಿಶ್ವದ ಅತಿದೊಡ್ಡ ಯುವ ಜನಸಂಖ್ಯೆ, ಅತಿದೊಡ್ಡ ತಾಂತ್ರಿಕ ಪ್ರತಿಭಾನ್ವಿತರ ಬಳಗ ಮತ್ತು ಅಭಿವೃದ್ಧಿ ಹೊಂದುತ್ತಿರುವ ತಂತ್ರಜ್ಞಾನ ಆಧಾರಿತ ಪರಿಸರ ವ್ಯವಸ್ಥೆಗೆ ನೆಲೆಯಾಗಿದೆ ಎಂದು ಅವರು ಒತ್ತಿಹೇಳಿದರು. ಭಾರತವು ಕೇವಲ ಹೊಸ ತಂತ್ರಜ್ಞಾನಗಳನ್ನು ಸೃಷ್ಟಿಸುವುದು ಮಾತ್ರವಲ್ಲದೆ, ಅವುಗಳನ್ನು ಅಭೂತಪೂರ್ವ ವೇಗದಲ್ಲಿ ಅಳವಡಿಸಿಕೊಳ್ಳುತ್ತದೆ ಎಂದು ಅವರು ಪ್ರತಿಪಾದಿಸಿದರು. 140 ಕೋಟಿ ಭಾರತೀಯರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಉತ್ಸುಕರಾಗಿದ್ದಾರೆ ಎಂದು ಹೇಳಿದ ಪ್ರಧಾನಮಂತ್ರಿಯವರು, ಶೃಂಗಸಭೆಯಲ್ಲಿ ಭಾಗವಹಿಸುತ್ತಿರುವ ವಿವಿಧ ರಾಷ್ಟ್ರಗಳ ಮುಖ್ಯಸ್ಥರಿಗೆ, ಜಾಗತಿಕ ಎಐ ವ್ಯವಸ್ಥೆಯ ನಾಯಕರಿಗೆ ಮತ್ತು ನಾವೀನ್ಯಕಾರರಿಗೆ ಭಾರತೀಯರ ಪರವಾಗಿ ಆತ್ಮೀಯ ಸ್ವಾಗತ ಕೋರಿದರು. ಅವರ ಉಪಸ್ಥಿತಿಗಾಗಿ ಕೃತಜ್ಞತೆ ಸಲ್ಲಿಸಿದ ಅವರು, ಈ ಶೃಂಗಸಭೆಯನ್ನು ಭಾರತದಲ್ಲಿ ಆಯೋಜಿಸಿರುವುದು ಕೇವಲ ದೇಶಕ್ಕೆ ಮಾತ್ರವಲ್ಲದೆ ಇಡೀ ಜಾಗತಿಕ ದಕ್ಷಿಣದ ರಾಷ್ಟ್ರಗಳಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.

ಈ ಶೃಂಗಸಭೆಯು 100 ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಮತ್ತು ಜಗತ್ತಿನಾದ್ಯಂತದ ಗಣ್ಯ ಪಾಲ್ಗೊಳ್ಳುವಿಕೆಯೊಂದಿಗೆ ಎಐ ಪ್ರಪಂಚದ ಅತಿರಥ ಮಹಾರಥರನ್ನು ಒಂದೆಡೆ ಸೇರಿಸಿದ್ದು, ಇದರ ಯಶಸ್ಸನ್ನು ಹೊಸ ಎತ್ತರಕ್ಕೆ ಕೊಂಡೊಯ್ದಿದೆ ಎಂದು ಶ್ರೀ ಮೋದಿ ಹೇಳಿದರು. ಶೃಂಗಸಭೆಯಲ್ಲಿ ಯುವ ಪೀಳಿಗೆಯ ಬಲವಾದ ಉಪಸ್ಥಿತಿಯನ್ನು ಉಲ್ಲೇಖಿಸಿದ ಅವರು, ಇದು ಹೊಸ ಆತ್ಮವಿಶ್ವಾಸವನ್ನು ತುಂಬುತ್ತದೆ ಎಂದರು. ಹೊಸ ತಂತ್ರಜ್ಞಾನಗಳು ಆರಂಭದಲ್ಲಿ ಸಂದೇಹಗಳನ್ನು ಎದುರಿಸುವುದು ಸಹಜವಾದರೂ, ವಿಶ್ವದಾದ್ಯಂತ ಯುವಜನರು ಎಐ ಅನ್ನು ಸ್ವೀಕರಿಸುತ್ತಿರುವ, ಅದರ ಮಾಲೀಕತ್ವವನ್ನು ಪಡೆಯುತ್ತಿರುವ ಮತ್ತು ಬಳಸುತ್ತಿರುವ ವೇಗ ಹಾಗೂ ವಿಶ್ವಾಸವು ಅಭೂತಪೂರ್ವವಾಗಿದೆ ಎಂದು ಅವರು ಹೇಳಿದರು. ಎಐ ಶೃಂಗಸಭೆಯ ಪ್ರದರ್ಶನದ ಬಗ್ಗೆ ಇರುವ ಉತ್ಸಾಹವನ್ನು, ವಿಶೇಷವಾಗಿ ಯುವ ಪ್ರತಿಭೆಗಳ ದೊಡ್ಡ ಮಟ್ಟದ ಭಾಗವಹಿಸುವಿಕೆಯನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದರು. ಕೃಷಿ, ಭದ್ರತೆ, ದಿವ್ಯಾಂಗರಿಗೆ ನೆರವು ಮತ್ತು ಬಹುಭಾಷಾ ಜನಸಂಖ್ಯೆಯ ಅಗತ್ಯಗಳನ್ನು ಪೂರೈಸುವಂತಹ ಕ್ಷೇತ್ರಗಳಲ್ಲಿ ಪ್ರಸ್ತುತಪಡಿಸಲಾದ ಪರಿಹಾರಗಳು 'ಮೇಡ್ ಇನ್ ಇಂಡಿಯಾ'ದ ಶಕ್ತಿಯನ್ನು ಪ್ರತಿಬಿಂಬಿಸುತ್ತವೆ ಮತ್ತು ಎಐ ಕ್ಷೇತ್ರದಲ್ಲಿ ಭಾರತದ ನವೀನ ಸಾಮರ್ಥ್ಯಗಳನ್ನು ಪ್ರದರ್ಶಿಸುತ್ತವೆ ಎಂದು ಅವರು ಹೇಳಿದರು.

 

ಮಾನವ ಇತಿಹಾಸದಲ್ಲಿ, ಪ್ರತಿ ಕೆಲವು ಶತಮಾನಗಳಿಗೊಮ್ಮೆ ನಾಗರಿಕತೆಯ ದಿಕ್ಕನ್ನು ಮರುಹೊಂದಿಸುವ ಒಂದು ತಿರುವು ಉದ್ಭವಿಸುತ್ತದೆ ಎಂದು ಪ್ರಧಾನಿ ಹೇಳಿದರು. ಇಂತಹ ಕ್ಷಣಗಳು ಅಭಿವೃದ್ಧಿಯ ವೇಗವನ್ನು ಬದಲಾಯಿಸುತ್ತವೆ ಮತ್ತು ಆಲೋಚನೆ, ತಿಳುವಳಿಕೆ ಮತ್ತು ಕೆಲಸದ ಮಾದರಿಗಳನ್ನು ರೂಪಾಂತರಿಸುತ್ತವೆ ಎಂದು ಅವರು ತಿಳಿಸಿದರು. ಇಂತಹ ಪರಿವರ್ತನೆಯ ಅವಧಿಯಲ್ಲಿ, ನಿಜವಾದ ಪ್ರಭಾವವು ತಕ್ಷಣವೇ ಅರ್ಥವಾಗುವುದಿಲ್ಲ ಎಂದು ಅವರು ಹೇಳಿದರು. ಕಲ್ಲುಗಳಿಂದ ಮೊದಲ ಬಾರಿಗೆ ಕಿಡಿಗಳನ್ನು ಸೃಷ್ಟಿಸಿದಾಗ, ಅದೇ ಕಿಡಿ ನಾಗರಿಕತೆಯ ಅಡಿಪಾಯವಾಗುತ್ತದೆ ಎಂದು ಯಾರೂ ಊಹಿಸಿರಲಿಲ್ಲ ಎಂದು ಅವರು ಸ್ಮರಿಸಿದರು. ಆಡುಭಾಷೆಯನ್ನು ಮೊದಲು ಲಿಪಿಯಾಗಿ ಪರಿವರ್ತಿಸಿದಾಗ, ಲಿಖಿತ ಜ್ಞಾನವು ಭವಿಷ್ಯದ ವ್ಯವಸ್ಥೆಗಳ ಬೆನ್ನೆಲುಬಾಗುತ್ತದೆ ಎಂದು ಯಾರೂ ಅರಿತುಕೊಂಡಿರಲಿಲ್ಲ ಎಂದು ಶ್ರೀ ಮೋದಿ ಉಲ್ಲೇಖಿಸಿದರು. ತಂತಿರಹಿತವಾಗಿ ಸಂಕೇತಗಳನ್ನು (ಸಿಗ್ನಲ್‌ ಗಳನ್ನು) ಮೊದಲು ರವಾನಿಸಿದಾಗ, ಒಂದು ದಿನ ಇಡೀ ಜಗತ್ತು ನೈಜ ಸಮಯದಲ್ಲಿ ಸಂಪರ್ಕಗೊಳ್ಳುತ್ತದೆ ಎಂದು ಯಾರೂ ಕಲ್ಪಿಸಿಕೊಂಡಿರಲಿಲ್ಲ ಎಂದು ಅವರು ಹೇಳಿದರು.

"ಕೃತಕ ಬುದ್ಧಿಮತ್ತೆಯು ಮಾನವ ನಾಗರಿಕತೆಯ ಐತಿಹಾಸಿಕ ತಿರುವುಗಳಷ್ಟೇ ಭಾರಿ ಪ್ರಮಾಣದ ರೂಪಾಂತರವನ್ನು ಪ್ರತಿನಿಧಿಸುತ್ತದೆ" ಎಂದು ಶ್ರೀ ಮೋದಿ ಅಭಿಪ್ರಾಯಪಟ್ಟರು. ಇಂದು ನಾವು ನೋಡುತ್ತಿರುವುದು ಮತ್ತು ಊಹಿಸುತ್ತಿರುವುದು ಅದರ ಪ್ರಭಾವದ ಆರಂಭಿಕ ಚಿಹ್ನೆಗಳು ಮಾತ್ರ ಎಂದು ಅವರು ಹೇಳಿದರು. ಎಐ ಯಂತ್ರಗಳನ್ನು ಬುದ್ಧಿವಂತವಾಗಿಸುತ್ತಿದೆ, ಆದರೆ ಅದಕ್ಕಿಂತ ಮುಖ್ಯವಾಗಿ, ಇದು ಮಾನವ ಸಾಮರ್ಥ್ಯವನ್ನು ಹಲವು ಪಟ್ಟು ಹೆಚ್ಚಿಸುತ್ತಿದೆ ಎಂದು ಅವರು ಹೇಳಿದರು. ಈ ಬಾರಿಯ ವ್ಯತ್ಯಾಸವೆಂದರೆ ಅದರ ಅಭೂತಪೂರ್ವ ವೇಗ ಮತ್ತು ನಿರೀಕ್ಷೆಗೂ ಮೀರಿದ ಪ್ರಮಾಣ ಎಂದು ಪ್ರಧಾನಮಂತ್ರಿ ಹೇಳಿದರು. ಹಿಂದೆ ತಂತ್ರಜ್ಞಾನದ ಪ್ರಭಾವವು ವ್ಯಕ್ತವಾಗಲು ದಶಕಗಳೇ ಬೇಕಾಗುತ್ತಿತ್ತು, ಆದರೆ ಇಂದು 'ಮೆಷಿನ್ ಲರ್ನಿಂಗ್‌'ನಿಂದ 'ಲರ್ನಿಂಗ್ ಮೆಷಿನ್ಸ್‌'ವರೆಗಿನ ಪಯಣವು ವೇಗವಾಗಿ, ಆಳವಾಗಿ ಮತ್ತು ವಿಸ್ತಾರವಾಗಿ ಸಾಗುತ್ತಿದೆ ಎಂದು ಅವರು ಹೇಳಿದರು. ಇದು ವಿಶಾಲವಾದ ದೃಷ್ಟಿಕೋನ ಮತ್ತು ಅಷ್ಟೇ ಹೆಚ್ಚಿನ ಜವಾಬ್ದಾರಿಯನ್ನು ಬಯಸುತ್ತದೆ ಎಂದು ಅವರು ಹೇಳಿದರು. ಪ್ರಸ್ತುತ ಪೀಳಿಗೆಯ ಜೊತೆಗೆ, ಭವಿಷ್ಯದ ಪೀಳಿಗೆಗೆ ಹಸ್ತಾಂತರಿಸುವ ಎಐ ರೂಪದ ಬಗ್ಗೆಯೂ ಕಾಳಜಿ ಇರಬೇಕು ಎಂದು ಶ್ರೀ ಮೋದಿ ಹೇಳಿದರು. ಭವಿಷ್ಯದಲ್ಲಿ ಎಐ ಏನು ಮಾಡಬಲ್ಲದು ಎಂಬುದು ಅಸಲಿ ಪ್ರಶ್ನೆಯಲ್ಲ, ಬದಲಾಗಿ ವರ್ತಮಾನದಲ್ಲಿ ಮಾನವಕುಲವು ಎಐ ಅನ್ನು ಹೇಗೆ ಬಳಸಿಕೊಳ್ಳಲು ಆಯ್ಕೆ ಮಾಡುತ್ತದೆ ಎಂಬುದು ಮುಖ್ಯ ಎಂದು ಅವರು ಹೇಳಿದರು. ಪರಮಾಣು ಶಕ್ತಿಯ ಸಾಮ್ಯತೆಯನ್ನು ನೀಡಿದ ಪ್ರಧಾನಮಂತ್ರಿಯವರು, ಮಾನವಕುಲವು ಅದರ ವಿನಾಶಕಾರಿ ಸಾಮರ್ಥ್ಯ ಮತ್ತು ಸಕಾರಾತ್ಮಕ ಕೊಡುಗೆಗಳೆರಡನ್ನೂ ಕಂಡಿದೆ ಎಂದು ಹೇಳಿದರು. ಎಐ ಕೂಡ ಒಂದು ರೂಪಾಂತರದ ಶಕ್ತಿಯಾಗಿದೆ – ಅದಕ್ಕೆ ದಿಕ್ಕು ದೆಸೆ ಇಲ್ಲದಿದ್ದರೆ ಅದು ಅಸ್ತವ್ಯಸ್ತತೆಗೆ ಕಾರಣವಾಗುತ್ತದೆ, ಆದರೆ ಸರಿಯಾದ ದಿಕ್ಕಿನಲ್ಲಿ ಸಾಗಿದರೆ ಅದು ಪರಿಹಾರವಾಗುತ್ತದೆ ಎಂದು ಅವರು ಪ್ರತಿಪಾದಿಸಿದರು. ಜಾಗತಿಕ ಎಐ ಇಂಪ್ಯಾಕ್ಟ್ ಶೃಂಗಸಭೆಯ ಮೂಲ ಉದ್ದೇಶವು ಎಐ ಅನ್ನು ಯಂತ್ರ-ಕೇಂದ್ರಿತವಾಗಿಸುವ ಬದಲಿಗೆ ಮಾನವ-ಕೇಂದ್ರಿತವಾಗಿಸುವುದು ಹೇಗೆ ಮತ್ತು ಅದನ್ನು ಸಂವೇದನಾಶೀಲ ಹಾಗೂ ಜವಾಬ್ದಾರಿಯುತವಾಗಿಸುವುದು ಹೇಗೆ ಎಂಬುದರ ಕುರಿತು ಚರ್ಚಿಸುವುದಾಗಿದೆ ಎಂದು ಶ್ರೀ ಮೋದಿ ಅವರು ಹೇಳಿದರು.

 

ಎಐ ಬಗ್ಗೆ ಭಾರತದ ದೃಷ್ಟಿಕೋನವು ಶೃಂಗಸಭೆಯ ವಿಷಯವಾದ 'ಸರ್ವಜನ ಹಿತಾಯ, ಸರ್ವಜನ ಸುಖಾಯ' - ಎಲ್ಲರ ಕಲ್ಯಾಣ, ಎಲ್ಲರ ಸಂತೋಷ ಎಂಬಲ್ಲಿ ಸ್ಪಷ್ಟವಾಗಿ ಪ್ರತಿಫಲಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ಮೋದಿ  ಅವರು ತಿಳಿಸಿದರು. ಇದು ಭಾರತದ ಮಾನದಂಡ ಎಂದು ಅವರು ಹೇಳಿದರು. ಮಾನವರು ಕೇವಲ 'ಡೇಟಾ ಪಾಯಿಂಟ್ಸ್' ಅಥವಾ ಎಐಗಾಗಿ ಕಚ್ಚಾ ವಸ್ತುಗಳಾಗಬಾರದು ಎಂದು ಅವರು ಎಚ್ಚರಿಸಿದರು ಮತ್ತು ಆದ್ದರಿಂದ ಎಐ ಅನ್ನು ಪ್ರಜಾಪ್ರಭುತ್ವೀಕರಣಗೊಳಿಸಬೇಕು ಎಂದರು. ಎಐ ವಿಶೇಷವಾಗಿ ಜಾಗತಿಕ ದಕ್ಷಿಣದ ರಾಷ್ಟ್ರಗಳಲ್ಲಿ ಒಳಗೊಳ್ಳುವಿಕೆ ಮತ್ತು ಸಬಲೀಕರಣದ ಮಾಧ್ಯಮವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಹಿರಿದಾಗಿ ಹೇಳಿದರು.

ಎಐಗೆ ಮುಕ್ತ ಆಕಾಶವನ್ನು ನೀಡಬೇಕು, ಆದರೆ ಅದರ ನಿಯಂತ್ರಣ ಮಾನವನ ಕೈಯಲ್ಲೇ ಇರಬೇಕು ಎಂದು ಪ್ರಧಾನಮಮತ್ರಿ ತಿಳಿಸಿದರು. ಇದನ್ನು ಜಿಪಿಎಸ್ ಗೆ ಹೋಲಿಸಿದ ಅವರು, ಅದು ಮಾರ್ಗವನ್ನು ಸೂಚಿಸುತ್ತದೆ ಆದರೆ ಅಂತಿಮ ನಿರ್ಧಾರವನ್ನು ಬಳಕೆದಾರರಿಗೆ ಬಿಡುತ್ತದೆ ಎಂದರು. ಇಂದು ಮಾನವಕುಲವು ಎಐ ಅನ್ನು ಯಾವ ದಿಕ್ಕಿಗೆ ಕೊಂಡೊಯ್ಯುತ್ತದೆ ಎಂಬುದು ಭವಿಷ್ಯವನ್ನು ನಿರ್ಧರಿಸುತ್ತದೆ ಎಂದು ಅವರು ಒತ್ತಿ ಹೇಳಿದರು.

ನವದೆಹಲಿಯ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರು ಭಾರತದ ಎಐಗಾಗಿ 'M.A.N.A.V.' (ಮಾನವ್) ದೃಷ್ಟಿಕೋನವನ್ನು ಮಂಡಿಸಿದರು. M.A.N.A.V. ಎಂದರೆ:

  • M – ನೈತಿಕ ಮತ್ತು ನೀತಿಬದ್ಧ ವ್ಯವಸ್ಥೆಗಳು: ಎಐ ನೈತಿಕ ಮಾರ್ಗಸೂಚಿಗಳನ್ನು ಆಧರಿಸಿರಬೇಕು.
  • A – ಹೊಣೆಗಾರಿಕೆಯ ಆಡಳಿತ: ಪಾರದರ್ಶಕ ನಿಯಮಗಳು ಮತ್ತು ದೃಢವಾದ ಮೇಲ್ವಿಚಾರಣೆ.
  • N – ರಾಷ್ಟ್ರೀಯ ಸಾರ್ವಭೌಮತ್ವ: ದತ್ತಾಂಶವು ಅದರ ಹಕ್ಕುದಾರರಿಗೆ ಸೇರಿದ್ದು.
  • A – ಸುಲಭ ಲಭ್ಯತೆ ಮತ್ತು ಒಳಗೊಳ್ಳುವಿಕೆ: ಎಐ ಏಕಸ್ವಾಮ್ಯವಾಗಬಾರದು, ಬದಲಾಗಿ ಗುಣಕವಾಗಬೇಕು.
  • V-ಮಾನ್ಯತೆ ಮತ್ತು ಕಾನೂನುಬದ್ಧತೆ: ಎಐ ಕಾನೂನುಬದ್ಧ ಮತ್ತು ಪರಿಶೀಲಿಸುವಂತಿರಬೇಕು.

ಭಾರತದ M.A.N.A.V. ದೃಷ್ಟಿಕೋನವು 21ನೇ ಶತಮಾನದ ಎಐ ಚಾಲಿತ ಜಗತ್ತಿನಲ್ಲಿ ಮನುಕುಲದ ಕಲ್ಯಾಣಕ್ಕಾಗಿ ಒಂದು ಪ್ರಮುಖ ಕೊಂಡಿಯಾಗಲಿದೆ ಎಂದು ಅವರು ಪ್ರತಿಪಾದಿಸಿದರು.

ದಶಕಗಳ ಹಿಂದೆ ಇಂಟರ್ನೆಟ್ ಪ್ರಾರಂಭವಾದಾಗ, ಅದು ಎಷ್ಟು ಉದ್ಯೋಗಗಳನ್ನು ಸೃಷ್ಟಿಸುತ್ತದೆ ಎಂದು ಯಾರೂ ಊಹಿಸಿರಲಿಲ್ಲ ಎಂದು ಪ್ರಧಾನಮಂತ್ರಿ ಮೋದಿ ಹೇಳಿದರು. ಇಂದು ಎಐ ವಿಷಯದಲ್ಲೂ ಇದು ನಿಜವಾಗಿದೆ, ಭವಿಷ್ಯದಲ್ಲಿ ಎಂತಹ ಉದ್ಯೋಗಗಳು ಹೊರಹೊಮ್ಮಲಿವೆ ಎಂದು ಊಹಿಸುವುದು ಕಷ್ಟ ಎಂದು ಅವರು ತಿಳಿಸಿದರು. ಎಐನಲ್ಲಿ ಕೆಲಸದ ಭವಿಷ್ಯವು ಮೊದಲೇ ನಿರ್ಧರಿಸಲ್ಪಟ್ಟಿಲ್ಲ, ಆದರೆ ಅದು ಸಾಮೂಹಿಕ ನಿರ್ಧಾರಗಳು ಮತ್ತು ಕ್ರಮಗಳನ್ನು ಅವಲಂಬಿಸಿರುತ್ತದೆ ಎಂದು ಅವರು ಒತ್ತಿ ಹೇಳಿದರು. ಕೆಲಸದ ಭವಿಷ್ಯವು ಒಂದು ಹೊಸ ಅವಕಾಶವಾಗಿದ್ದು, ಇದು ಮಾನವರು ಮತ್ತು ಬುದ್ಧಿವಂತ ವ್ಯವಸ್ಥೆಗಳು ಸಹ-ಸೃಷ್ಟಿಸುವ, ಸಹ-ಕೆಲಸ ಮಾಡುವ ಮತ್ತು ಸಹ-ವಿಕಸನಗೊಳ್ಳುವ ಯುಗವನ್ನು ಸೂಚಿಸುತ್ತದೆ ಎಂದು ಶ್ರೀ ಮೋದಿ ಹೇಳಿದರು. ಎಐ ಕೆಲಸವನ್ನು ಹೆಚ್ಚು ಚತುರ, ಹೆಚ್ಚು ದಕ್ಷ ಮತ್ತು ಹೆಚ್ಚು ಪ್ರಭಾವಶಾಲಿಯಾಗಿಸುತ್ತದೆ, ಇದು ಉತ್ತಮ ವಿನ್ಯಾಸ, ವೇಗದ ನಿರ್ಮಾಣ ಮತ್ತು ಸುಧಾರಿತ ನಿರ್ಧಾರ ತೆಗೆದುಕೊಳ್ಳುವಿಕೆಯನ್ನು ಸಕ್ರಿಯಗೊಳಿಸುತ್ತದೆ ಎಂದು ಅವರು ಹೇಳಿದರು.

ಎಐ ಹೆಚ್ಚು ಮೌಲ್ಯಯುತ, ಸೃಜನಶೀಲ ಮತ್ತು ಅರ್ಥಪೂರ್ಣ ಪಾತ್ರಗಳನ್ನು ಹೆಚ್ಚಿನ ಜನರಿಗೆ ಮುಕ್ತಗೊಳಿಸುತ್ತದೆ, ಇದು ನಾವೀನ್ಯತೆ, ಉದ್ಯಮಶೀಲತೆ ಮತ್ತು ಹೊಸ ಕೈಗಾರಿಕೆಗಳಿಗೆ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಶ್ರೀ ಮೋದಿ ಗಮನಿಸಿದರು. ಕೌಶಲ್ಯ ಅಭಿವೃದ್ಧಿ, ಮರು-ಕೌಶಲ್ಯಮತ್ತು ಜೀವಮಾನದ ಕಲಿಕೆಯನ್ನು ಜನಾಂದೋಲನವನ್ನಾಗಿ ಮಾಡುವ ಪ್ರಾಮುಖ್ಯತೆಯನ್ನು ಅವರು ಹೇಳಿದರು.

ಕೆಲಸದ ಭವಿಷ್ಯವು ಒಳಗೊಳ್ಳುವಿಕೆ, ವಿಶ್ವಾಸಾರ್ಹತೆ ಮತ್ತು ಮಾನವ-ಕೇಂದ್ರಿತವಾಗಿರುತ್ತದೆ ಎಂದು ಪ್ರತಿಪಾದಿಸಿದ ಪ್ರಧಾನಮಂತ್ರಿಯವರು, ಮಾನವಕುಲವು ಒಟ್ಟಾಗಿ ಮುನ್ನಡೆದರೆ, ಕೃತಕ ಬುದ್ಧಿಮತ್ತೆಯು ಮಾನವ ಸಾಮರ್ಥ್ಯವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತದೆ ಎಂದು ಹೇಳಿದರು.

ಪಾರದರ್ಶಕತೆಯೇ ದೊಡ್ಡ ರಕ್ಷಣೆ ಎಂದು ಹೇಳಿದ ಪ್ರಧಾನಮಂತ್ರಿಯವರು, "ಸೂರ್ಯನ ಬೆಳಕು ಅತ್ಯುತ್ತಮ ಸೋಂಕುನಿವಾರಕ" ಎಂಬ ಗಾದೆಯನ್ನು ಉಲ್ಲೇಖಿಸಿದರು. ಕೆಲವು ದೇಶಗಳು ಮತ್ತು ಕಂಪನಿಗಳು ಎಐ ಅನ್ನು ಗೌಪ್ಯವಾಗಿ ಅಭಿವೃದ್ಧಿಪಡಿಸಬೇಕಾದ ಕಾರ್ಯತಂತ್ರದ ಆಸ್ತಿ ಎಂದು ಪರಿಗಣಿಸಿದರೆ, ಭಾರತವು ಎಐ ಅನ್ನು ಜಗತ್ತಿನೊಂದಿಗೆ ಹಂಚಿಕೊಂಡಾಗ ಮಾತ್ರ ಅದು ಜಗತ್ತಿಗೆ ಪ್ರಯೋಜನಕಾರಿಯಾಗುತ್ತದೆ ಎಂದು ನಂಬುತ್ತದೆ ಎಂದರು. ಓಪನ್ ಕೋಡ್ ಮತ್ತು ಹಂಚಿಕೆಯ ಅಭಿವೃದ್ಧಿಯು ಲಕ್ಷಾಂತರ ಯುವ ಮನಸ್ಸುಗಳಿಗೆ ಎಐ ಅನ್ನು ಉತ್ತಮವಾಗಿ ಮತ್ತು ಸುರಕ್ಷಿತವಾಗಿ ಮಾಡಲು ಅನುವು ಮಾಡಿಕೊಡುತ್ತದೆ ಎಂದು ಅವರು ತಿಳಿಸಿದರು. ಎಐ ಅನ್ನು 'ಜಾಗತಿಕ ಸಾಮಾನ್ಯ ಒಳಿತಾಗಿ' ಅಭಿವೃದ್ಧಿಪಡಿಸಲು ಸಾಮೂಹಿಕ ಸಂಕಲ್ಪಕ್ಕೆ ಅವರು ಕರೆ ನೀಡಿದರು.

ಜಾಗತಿಕ ಮಾನದಂಡಗಳ ತುರ್ತು ಅಗತ್ಯವನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ ಅವರು, ಡೀಪ್‌ ಫೇಕ್‌ ಗಳು ಮತ್ತು ಕಟ್ಟುಕಥೆಯ ವಿಷಯಗಳು ಮುಕ್ತ ಸಮಾಜಗಳನ್ನು ಅಸ್ಥಿರಗೊಳಿಸುತ್ತಿವೆ ಎಂದು ಹೇಳಿದರು. ಆಹಾರದ ಮೇಲಿನ ಪೌಷ್ಟಿಕಾಂಶದ ಲೇಬಲ್‌ ಗಳ ಉದಾಹರಣೆ ನೀಡಿದ ಅವರು, ಡಿಜಿಟಲ್ ವಿಷಯಗಳೂ ಸಹ ಅಧಿಕೃತತೆಯ ಲೇಬಲ್‌ ಗಳನ್ನು ಹೊಂದಿರಬೇಕು, ಇದರಿಂದ ಜನರು ಅಸಲಿ ಮತ್ತು ಎಐ-ಸೃಷಿಯ ವಿಷಯಗಳ ನಡುವೆ ವ್ಯತ್ಯಾಸವನ್ನು ಗುರುತಿಸಬಹುದು ಎಂದರು. ಎಐ ಹೆಚ್ಚಾಗಿ ಪಠ್ಯ, ಚಿತ್ರಗಳು ಮತ್ತು ವೀಡಿಯೊಗಳನ್ನು ರಚಿಸುತ್ತಿರುವುದರಿಂದ 'ವಾಟರ್‌ಮಾರ್ಕಿಂಗ್' ಮತ್ತು ಸ್ಪಷ್ಟ ಮೂಲ ಮಾನದಂಡಗಳ ಅಗತ್ಯವು ಹೆಚ್ಚುತ್ತಿದೆ ಎಂದು ಶ್ರೀ ಮೋದಿ ಒತ್ತಿ ಹೇಳಿದರು, ತಂತ್ರಜ್ಞಾನದಲ್ಲಿ ಮೊದಲಿನಿಂದಲೇ ನಂಬಿಕೆಯನ್ನು ನಿರ್ಮಿಸಬೇಕು ಎಂದು ಅವರು ಹೇಳಿದರು.

 

ಮಕ್ಕಳ ಸುರಕ್ಷತೆಯ ಪ್ರಾಮುಖ್ಯತೆಯನ್ನು ಒತ್ತಿಹೇಳಿದ ಪ್ರಧಾನಮಂತ್ರಿಯವರು, ಶಾಲಾ ಪಠ್ಯಕ್ರಮವನ್ನು ಹೇಗೆ ರೂಪಿಸಲಾಗುತ್ತದೆಯೋ ಹಾಗೆಯೇ ಎಐ ಕ್ಷೇತ್ರವೂ ಮಕ್ಕಳ ಪಾಲಿಗೆ ಸುರಕ್ಷಿತವಾಗಿರಬೇಕು ಮತ್ತು ಕುಟುಂಬದಿಂದ ಮಾರ್ಗದರ್ಶಿಸಲ್ಪಡಬೇಕು ಎಂದು ಹೇಳಿದರು. ಇಂದು ಎರಡು ರೀತಿಯ ಜನರಿದ್ದಾರೆ - ಎಐನಲ್ಲಿ ಭಯವನ್ನು ಕಾಣುವವರು ಮತ್ತು ಅದರಲ್ಲಿ ಭವಿಷ್ಯವನ್ನು ಕಾಣುವವರು ಎಂದು ಅವರು ಹೇಳಿದರು. ಭಾರತವು ಪ್ರತಿಭೆ, ಶಕ್ತಿಯ ಸಾಮರ್ಥ್ಯ ಮತ್ತು ನೀತಿಯ ಸ್ಪಷ್ಟತೆಯ ಬೆಂಬಲದೊಂದಿಗೆ ಎಐನಲ್ಲಿ ಭವಿಷ್ಯ ಮತ್ತು ಅದೃಷ್ಟವನ್ನು ಕಾಣುತ್ತಿದೆ ಎಂದು ಅವರು ಪ್ರತಿಪಾದಿಸಿದರು. ಶೃಂಗಸಭೆಯ ಸಂದರ್ಭದಲ್ಲಿ ಮೂರು ಭಾರತೀಯ ಕಂಪನಿಗಳು ತಮ್ಮ ಎಐ ಮಾಡೆಲ್‌ ಗಳು ಮತ್ತು ಆಪ್‌ ಗಳನ್ನು ಬಿಡುಗಡೆ ಮಾಡಿರುವುದಕ್ಕೆ ಶ್ರೀ ಮೋದಿ ಸಂತೋಷ ವ್ಯಕ್ತಪಡಿಸಿದರು. ಈ ಮಾಡೆಲ್‌ ಗಳು ಭಾರತದ ಯುವಜನರ ಪ್ರತಿಭೆಯನ್ನು ಪ್ರತಿಬಿಂಬಿಸುತ್ತವೆ ಮತ್ತು ಜಾಗತಿಕ ಎಐ ಭೂದೃಶ್ಯಕ್ಕೆ ಭಾರತವು ನೀಡುತ್ತಿರುವ ಪರಿಹಾರಗಳ ಆಳ ಮತ್ತು ವೈವಿಧ್ಯತೆಯನ್ನು ಪ್ರದರ್ಶಿಸುತ್ತವೆ ಎಂದು ಅವರು ಹೇಳಿದರು.

ಸೆಮಿಕಂಡಕ್ಟರ್‌ ಗಳು ಮತ್ತು ಚಿಪ್-ತಯಾರಿಕೆಯಿಂದ ಹಿಡಿದು ಕ್ವಾಂಟಮ್ ಕಂಪ್ಯೂಟಿಂಗ್‌ ವರೆಗೆ ಭಾರತವು ಸ್ಥಿತಿಸ್ಥಾಪಕ ಪರಿಸರ ವ್ಯವಸ್ಥೆಯನ್ನು ನಿರ್ಮಿಸುತ್ತಿದೆ ಎಂದು ಪ್ರಧಾನಮಂತ್ರಿ ಮೋದಿ ತಿಳಿಸಿದರು. ಸುರಕ್ಷಿತ ಡೇಟಾ ಕೇಂದ್ರಗಳು, ಬಲವಾದ ಐಟಿ ಬೆನ್ನೆಲುಬು ಮತ್ತು ಕ್ರಿಯಾತ್ಮಕ ನವೋದ್ಯಮ ಪರಿಸರ ವ್ಯವಸ್ಥೆಯು ಭಾರತವನ್ನು ಮಿತವ್ಯಯದ, ವಿಸ್ತರಿಸಬಹುದಾದ ಮತ್ತು ಸುರಕ್ಷಿತವಾದ ಎಐ ಪರಿಹಾರಗಳ ಸಹಜ ಕೇಂದ್ರವನ್ನಾಗಿ ಮಾಡುತ್ತದೆ ಎಂದು ಅವರು ಹೇಳಿದರು. ಭಾರತವು ವೈವಿಧ್ಯತೆ, ಜನಸಂಖ್ಯಾ ಲಾಭ ಮತ್ತು ಪ್ರಜಾಪ್ರಭುತ್ವವನ್ನು ಹೊಂದಿದೆ ಎಂದು ಶ್ರೀ ಮೋದಿ ಹೇಳಿದರು. ಭಾರತದಲ್ಲಿ ಯಶಸ್ವಿಯಾಗುವ ಯಾವುದೇ ಎಐ ಮಾದರಿಯನ್ನು ಜಾಗತಿಕವಾಗಿ ಅಳವಡಿಸಬಹುದು ಎಂದು ಅವರು ಹೇಳಿದರು. 'ಭಾರತದಲ್ಲಿ ವಿನ್ಯಾಸಗೊಳಿಸಿ ಮತ್ತು ಅಭಿವೃದ್ಧಿಪಡಿಸಿ. ಜಗತ್ತಿಗೆ ತಲುಪಿಸಿ. ಮಾನವಕುಲಕ್ಕೆ ತಲುಪಿಸಿ' ಎಂಬ ಕರೆಯೊಂದಿಗೆ ಅವರು ಜಗತ್ತಿಗೆ ಆಮಂತ್ರಣ ನೀಡಿದರು. ಭಾಗವಹಿಸುವ ಎಲ್ಲರಿಗೂ ಶುಭ ಹಾರೈಸುವ ಮೂಲಕ ಅವರು ತಮ್ಮ ಮಾತು ಮುಗಿಸಿದರು.

 

ಫ್ರಾನ್ಸ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್, ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ, ವಿವಿಧ ರಾಷ್ಟ್ರಗಳ ಮುಖ್ಯಸ್ಥರು, ಸಚಿವರು, ಬಹುಪಕ್ಷೀಯ ಸಂಸ್ಥೆಗಳ ಹಿರಿಯ ಪ್ರತಿನಿಧಿಗಳು ಮತ್ತು ತಂತ್ರಜ್ಞಾನ ಹಾಗೂ ಎಐ ಉದ್ಯಮದ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹಿನ್ನೆಲೆ

ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026ರ ವಿಷಯವು 'ಸರ್ವಜನ ಹಿತಾಯ, ಸರ್ವಜನ ಸುಖಾಯ' ಅಂದರೆ ಎಲ್ಲರ ಕಲ್ಯಾಣ, ಎಲ್ಲರ ಸಂತೋಷ ಎಂದಾಗಿದೆ. ಇದು ಭಾರತವನ್ನು ಎಐ ಕ್ಷೇತ್ರದಲ್ಲಿ ನಾಯಕನನ್ನಾಗಿ ಮಾಡುವ ಗುರಿಯನ್ನು ಹೊಂದಿದೆ ಮತ್ತು ಎಐ ಮಾನವೀಯತೆಯನ್ನು ಮುನ್ನಡೆಸುವ, ಒಳಗೊಳ್ಳುವ ಬೆಳವಣಿಗೆಯನ್ನು ಉತ್ತೇಜಿಸುವ ಮತ್ತು ನಮ್ಮ ಹಂಚಿಕೆಯ ಗ್ರಹವನ್ನು ರಕ್ಷಿಸುವ ಭವಿಷ್ಯವನ್ನು ರೂಪಿಸುತ್ತದೆ.

 

ಏಳು ಕಾರ್ಯಕಾರಿ ಗುಂಪುಗಳು ಜನ, ಗ್ರಹ ಮತ್ತು ಪ್ರಗತಿ ಎಂಬ ಮೂರು ಸ್ತಂಭಗಳಿಗೆ ಅನುಗುಣವಾಗಿ ಶೃಂಗಸಭೆಯನ್ನು ಮುನ್ನಡೆಸುತ್ತಿವೆ. ಈ ಗುಂಪುಗಳು ವಿವಿಧ ಕ್ಷೇತ್ರಗಳಲ್ಲಿ ಎಐ ಪ್ರಭಾವವನ್ನು ಪ್ರದರ್ಶಿಸುವ ದೃಢವಾದ ಫಲಿತಾಂಶಗಳನ್ನು ನೀಡುವಲ್ಲಿ ಕೆಲಸ ಮಾಡಲಿವೆ. ಆ ಏಳು ವಿಷಯಗಳೆಂದರೆ: ಆರ್ಥಿಕ ಬೆಳವಣಿಗೆ ಮತ್ತು ಸಾಮಾಜಿಕ ಒಳಿತಿಗಾಗಿ ಎಐ; ಎಐ ಸಂಪನ್ಮೂಲಗಳ ಪ್ರಜಾಪ್ರಭುತ್ವೀಕರಣ; ಸಾಮಾಜಿಕ ಸಬಲೀಕರಣಕ್ಕಾಗಿ ಒಳಗೊಳ್ಳುವಿಕೆ; ಸುರಕ್ಷಿತ ಮತ್ತು ವಿಶ್ವಾಸಾರ್ಹ ಎಐ; ಮಾನವ ಬಂಡವಾಳ; ವಿಜ್ಞಾನ; ಸ್ಥಿತಿಸ್ಥಾಪಕತ್ವ, ನಾವೀನ್ಯತೆ ಮತ್ತು ದಕ್ಷತೆ.

ಈ ಶೃಂಗಸಭೆಯು ಸಿಇಒಗಳು/ಸಿ ಎಕ್ಸ್‌ ಒ ಗಳು, ಸುಮಾರು 100 ಸಿಇಒಗಳು ಮತ್ತು ಸಂಸ್ಥಾಪಕರು, 150 ಶಿಕ್ಷಣ ತಜ್ಞರು ಮತ್ತು ಸಂಶೋಧಕರು ಹಾಗೂ 400 ಸಿಟಿಒಗಳು, ವಿಪಿಗಳು ಮತ್ತು ಲೋಕೋಪಕಾರಿಗಳು ಸೇರಿದಂತೆ 500 ಕ್ಕೂ ಹೆಚ್ಚು ಜಾಗತಿಕ ಎಐ ನಾಯಕರನ್ನು ಒಟ್ಟುಗೂಡಿಸಲಿದೆ. ಇದು 20 ಕ್ಕೂ ಹೆಚ್ಚು ರಾಷ್ಟ್ರದ ಮುಖ್ಯಸ್ಥರು ಮತ್ತು ಸುಮಾರು 60 ಸಚಿವರು ಮತ್ತು ಉಪ ಸಚಿವರು ಸೇರಿದಂತೆ 100 ಕ್ಕೂ ಹೆಚ್ಚು ಸರ್ಕಾರಿ ಪ್ರತಿನಿಧಿಗಳನ್ನು ಒಳಗೊಳ್ಳಲಿದೆ.

 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India adds record 27 GW solar capacity in H1, installations jump 49%

Media Coverage

India adds record 27 GW solar capacity in H1, installations jump 49%
NM on the go

Nm on the go

Always be the first to hear from the PM. Get the App Now!
...
Cabinet approves a road upgradation project in Bihar at a total capital cost of Rs.3590.73 crore
August 19, 2026

The Cabinet Committee on Economic Affairs, chaired by the Prime Minister Shri Narendra Modi, today has approved the Upgradation of the Muzaffarpur-Sitamarhi-Sonbarsa Section of NH-22 to four-Lane Standard in Bihar. The project will be developed on Hybrid Annuity Mode (HAM) at a total capital cost of Rs.3590.73 crore with a total length of 82.578 km.

The proposed project holds significant strategic and economic relevance due to its integration with Bihar’s expanding National Highway network. It acts as a key feeder corridor connecting the India–Nepal border at Sonbarsa with economic centers like Muzaffarpur at NH-27 (East–West Corridor). The project will significantly reduce congestion in densely populated areas of Muzaffarpur, Muksudpur, Runni Saidpur, Thumma, Dumra, Bhutahi, and Sonbarsa.

The project is expected to enable faster and safer movement of passengers and freight, improve travel efficiency and strengthen regional connectivity. It has been designed for a speed of 100 kmph with an average speed of 80 kmph, having no at-grade median openings, ensuring fast and safe travel.

Planned in accordance with the principles of the PM GatiShakti National Master Plan, the project will enhance multimodal integration by improving connectivity to key economic, social and logistics nodes, including industrial areas and major railway stations. Improved connectivity will facilitate efficient movement of goods and agricultural supply chains, support regional economic growth, and provide better access to important cultural and religious destinations such as the Buddhist Circuit and historic Janaki Punaura Dham Temple, Sitamarhi.

The Muzaffarpur–Sitamarhi–Sonbarsa stretch of NH-22 holds significant strategic and economic relevance, ensuring seamless linkage to the national freight grid. It is in synergy with existing corridors such as NH-31 and NH-122 enhances connectivity to industrial zones like Barauni and riverine logistics hubs along the Ganga It also enhances cross-border passenger and cargo movement via the nearby Land Port at Bhithamore.

In addition, the project has provision for seven Major Bridges (including a 340m long major bridge over the perennial Bagmati River), three Railway Over Bridges (ROBs), and two Flyovers (1170m & 270m) to maintain cross movement of the traffic and ensure safe, high-speed travel.

The project will increase average travel speeds, reduce travel time, and improve overall road safety, fuel efficiency, and vehicle operating costs, thereby enhancing regional mobility and socio-economic development.

The project provides seamless connectivity to key economic, social, and logistics nodes across Bihar. Additionally, the upgraded corridor will enhance connectivity to five PM Gati-Shakti Economic Nodes (four Industrial Estates and one Mega Food park), four Social Nodes (Baba Garibnath Temple, Mata Janki Temple, Punaura Dham, Muzaffarpur & Sitamarhi aspirational Districts), and two Logistic Nodes (Muzaffarpur & Sitamarhi Railway Stations), thereby facilitating faster movement of goods and passengers across the region.