ಭಾರತದ ಶ್ರೇಷ್ಠ ಆಧ್ಯಾತ್ಮಿಕ ದಿಗ್ಗಜರಲ್ಲಿ ಒಬ್ಬರಾದ ಆದಿ ಶಂಕರಾಚಾರ್ಯರ ಜಯಂತಿ ಅಂಗವಾಗಿ ಅವರಿಗೆ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು. ಶಂಕರಾಚಾರ್ಯರ ಅಗಾಧ ಬೋಧನೆಗಳು, ಚಿಂತನೆಗಳು ಮತ್ತು ಅದ್ವೈತ ವೇದಾಂತದ ತತ್ವಶಾಸ್ತ್ರವು ಜಗತ್ತಿನ ಅಸಂಖ್ಯಾತ ಜನರಿಗೆ ಮಾರ್ಗದರ್ಶನ ನೀಡುತ್ತಲೇ ಇದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. ಆಧ್ಯಾತ್ಮಿಕ ಚಿಂತನೆಯನ್ನು ಪುನರುಜ್ಜೀವನಗೊಳಿಸಲು ಮತ್ತು ರಾಷ್ಟ್ರದಾದ್ಯಂತ ಆಧ್ಯಾತ್ಮಿಕ ಕೇಂದ್ರಗಳನ್ನು ಸ್ಥಾಪಿಸಲು ಅವರ ಪ್ರಯತ್ನಗಳು ಶಾಶ್ವತ ಸ್ಫೂರ್ತಿಯಾಗಿವೆ. "ಅವರ ವಿವೇಕವು ನಮ್ಮ ಪಥ ಬೆಳಗುವುದನ್ನು ಮುಂದುವರಿಸಲಿ ಹಾಗೂ ಸತ್ಯ, ಸಹಾನುಭೂತಿ ಮತ್ತು ಸಾಮೂಹಿಕ ಯೋಗಕ್ಷೇಮಕ್ಕೆ ನಮ್ಮ ಬದ್ಧತೆಯನ್ನು ಬಲಪಡಿಸಲಿ" ಎಂದು ಶ್ರೀ ಮೋದಿ ಅವರು ತಿಳಿಸಿದ್ದಾರೆ.

ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

"ಭಾರತದ ಶ್ರೇಷ್ಠ ಆಧ್ಯಾತ್ಮಿಕ ದಿಗ್ಗಜರಲ್ಲಿ ಒಬ್ಬರಾದ ಆದಿ ಶಂಕರಾಚಾರ್ಯರಿಗೆ ಅವರ ಜಯಂತಿಯ ಪವಿತ್ರ ಸಂದರ್ಭದಲ್ಲಿ, ಗೌರವ ನಮನಗಳು. ಅವರ ಅಗಾಧ ಬೋಧನೆಗಳು, ಚಿಂತನೆಗಳು ಮತ್ತು ಅದ್ವೈತ ವೇದಾಂತದ ತತ್ವಶಾಸ್ತ್ರವು ಜಾಗತಿಕವಾಗಿ ಅಸಂಖ್ಯಾತ ಜನರಿಗೆ ಮಾರ್ಗದರ್ಶನ ನೀಡುತ್ತಲೇ ಇದೆ. ಅವರು ಸಾಮರಸ್ಯ, ಶಿಸ್ತು ಮತ್ತು ಎಲ್ಲಾ ಅಸ್ತಿತ್ವಗಳಲ್ಲಿ ಏಕತೆಯನ್ನು ಪ್ರತಿಪಾದಿಸಿದ್ದರು. ಆಧ್ಯಾತ್ಮಿಕ ಚಿಂತನೆಯನ್ನು ಪುನರುಜ್ಜೀವನಗೊಳಿಸಲು ಮತ್ತು ದೇಶಾದ್ಯಂತ ಆಧ್ಯಾತ್ಮಿಕ ಕೇಂದ್ರಗಳನ್ನು ಸ್ಥಾಪಿಸಲು ಅವರ ಪ್ರಯತ್ನಗಳು ಶಾಶ್ವತ ಸ್ಫೂರ್ತಿಯಾಗಿ ಉಳಿದಿವೆ. ಅವರ ಜ್ಞಾನವು ನಮ್ಮ ಮಾರ್ಗವನ್ನು ಬೆಳಗಿಸುವುದನ್ನು ಹಾಗೂ ಸತ್ಯ, ಕರುಣೆ ಮತ್ತು ಸಾಮೂಹಿಕ ಯೋಗಕ್ಷೇಮಕ್ಕೆ ನಮ್ಮ ಬದ್ಧತೆಯನ್ನು ಬಲಪಡಿಸುವುದನ್ನು ಮುಂದುವರಿಸಲಿ."

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Jumbo Indian contingent comprising 768 athletes, support staff and officials for Asian Games

Media Coverage

Jumbo Indian contingent comprising 768 athletes, support staff and officials for Asian Games
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 4 ಸೆಪ್ಟೆಂಬರ್ 2026
September 04, 2026

Make in India, Power India, Play for India: Multi-Sector Momentum Under PM Modi’s Leadership