ಎಂಜಿನಿಯರ್ ಗಳ ದಿನದ ಅಂಗವಾಗಿ ಎಂಜಿನಿಯರ್‌ಗಳಿಗೆ ಶುಭಾಶಯಗಳು

ಪ್ರಧಾನ ನರೇಂದ್ರ ಮೋದಿ ಅವರು ಎಂಜಿನಿಯರ್ ಗಳ ದಿನಾಚರಣೆಯ ಸಂದರ್ಭದಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಅವರಿಗೆ ನಮನ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ದೇಶದ ಎಲ್ಲಾ ಶ್ರಮಶೀಲ ಎಂಜಿನಿಯರ್‌ಗಳಿಗೆ ಸಹ ಶುಭಾಶಯಗಳನ್ನು ತಿಳಿಸಿದ್ದಾರೆ. 

ಸರ್ ಎಂ ವಿಶ್ವೇಶ್ವರಯ್ಯ ಅವರು ಹೊಸದನ್ನು ಸಂಶೋಧನೆ ಮಾಡುವವರಿಗೆ ಮತ್ತು ಸೇವೆ ಸಲ್ಲಿಸಲು ತಲೆತಲಾಂತರದವರೆಗೆ ಜನರಿಗೆ ಸ್ಫೂರ್ತಿ ನೀಡುತ್ತಾರೆ ಎಂದಿರುವ ಪ್ರಧಾನ ಮಂತ್ರಿಗಳು, ಈ ವರ್ಷದ ಆರಂಭದಲ್ಲಿ ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸರ್ ಎಂ ವಿಶ್ವೇಶ್ವರಯ್ಯನವರ ಸ್ಮಾರಕಕ್ಕೆ ಭೇಟಿ ನೀಡಿದ್ದನ್ನು ಸ್ಮರಿಸಿಕೊಂಡು ಅದರ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಅವರು, ಎಂಜಿನಿಯರ್ ಗಳ ದಿನದಂದು ನಾವು ದೂರದೃಷ್ಟಿಯ ಎಂಜಿನಿಯರ್ ಮತ್ತು ಆಡಳಿತಗಾರ ಸರ್ ಎಂ ವಿಶ್ವೇಶ್ವರಯ್ಯ ಅವರಿಗೆ ಗೌರವ ಸಲ್ಲಿಸುತ್ತೇವೆ. ಅವರು ಹೊಸತನವನ್ನು ಆವಿಷ್ಕರಿಸಲು ಮತ್ತು ದೇಶ ಸೇವೆ ಮಾಡಲು ಪೀಳಿಗೆಗೆ ಸ್ಫೂರ್ತಿ ನೀಡುತ್ತಾರೆ. ಈ ವರ್ಷದ ಆರಂಭದಲ್ಲಿ ನನ್ನ ಭೇಟಿಯ ಸಂದರ್ಭದಲ್ಲಿ ನಾನು ಅವರಿಗೆ ಗೌರವ ಸಲ್ಲಿಸಿದ ಚಿಕ್ಕಬಳ್ಳಾಪುರದ ಫೋಟೋಗಳು ಇಲ್ಲಿವೆ.

ಎಲ್ಲಾ ಶ್ರಮಶೀಲ ಎಂಜಿನಿಯರ್‌ಗಳಿಗೆ ಎಂಜಿನಿಯರ್ ಗಳ ಶುಭಾಶಯಗಳು! ಅವರ ನವೀನ ಮನಸ್ಸು ಮತ್ತು ದಣಿವರಿಯದ ಸಮರ್ಪಣೆ ನಮ್ಮ ರಾಷ್ಟ್ರದ ಪ್ರಗತಿಯ ಬೆನ್ನೆಲುಬಾಗಿದೆ. ಮೂಲಸೌಕರ್ಯ ಅದ್ಭುತಗಳಿಂದ ಹಿಡಿದು ತಂತ್ರಜ್ಞಾನದ ಪ್ರಗತಿಗಳವರೆಗೆ, ಅವರ ಕೊಡುಗೆಗಳು ನಮ್ಮ ಜೀವನದ ಪ್ರತಿಯೊಂದು ಅಂಶವನ್ನು ಸ್ಪರ್ಶಿಸುತ್ತವೆ ಎಂದು ಬರೆದುಕೊಂಡಿದ್ದಾರೆ.

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
One of the world’s first canal-top solar projects placed a 750-meter solar array above an Indian irrigation canal, generating clean power while saving an estimated 9 million liters of water each year

Media Coverage

One of the world’s first canal-top solar projects placed a 750-meter solar array above an Indian irrigation canal, generating clean power while saving an estimated 9 million liters of water each year
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 17 ಜುಲೈ 2026
July 17, 2026

Green Trains, Private Rockets & Global Partnerships — PM Modi’s New India is Playing to Win