ಕೇಂದ್ರ ಸರ್ಕಾರದ ಮಾಜಿ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಜಯಂತಿ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ. ಸಮಾಜದ ದೀನದಲಿತರು, ಹಿಂದುಳಿದ ವರ್ಗಗಳು ಮತ್ತು ಸವಲತ್ತುಗಳ ವಂಚಿತರ ಹಕ್ಕುಗಳಿಗೆ ರಾಮ್ ವಿಲಾಸ್ ಪಾಸ್ವಾನ್ ಅವರ ಹೋರಾಟವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಪ್ರಧಾನ ಮಂತ್ರಿಗಳು ಸ್ಮರಿಸಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಪ್ರಧಾನ ಮಂತ್ರಿಗಳು:
"ಕೇಂದ್ರ ಸರ್ಕಾರದ ಮಾಜಿ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ವಿನಮ್ರ ನಮನಗಳು. ಅವರ ಇಡೀ ಜೀವನ ಸಾಮಾಜಿಕ ನ್ಯಾಯಕ್ಕಾಗಿ ಮೀಸಲಾಗಿತ್ತು. ದಲಿತರು, ಹಿಂದುಳಿದವರು ಮತ್ತು ವಂಚಿತರ ಹಕ್ಕುಗಳಿಗಾಗಿ ಅವರ ಹೋರಾಟವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ'' ಎಂದು ಬರೆದುಕೊಂಡಿದ್ದಾರೆ.
पूर्व केंद्रीय मंत्री रामविलास पासवान जी को उनकी जयंती पर विनम्र श्रद्धांजलि। उनका संपूर्ण जीवन सामाजिक न्याय को समर्पित रहा। दलितों, पिछड़ों और वंचितों के अधिकारों के लिए उनके संघर्ष को कभी भुलाया नहीं जा सकता। pic.twitter.com/SCqIav16He
— Narendra Modi (@narendramodi) July 5, 2025


