ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವದ ವಿಶೇಷ ಸಂದರ್ಭದಲ್ಲಿ ಅವರಿಗೆ ಇಂದು ಗೌರವ ನಮನ ಸಲ್ಲಿಸಿದ್ದಾರೆ. ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿ ಅವರು ಸೇವೆ ಮತ್ತು ಆಧ್ಯಾತ್ಮಿಕತೆಗೆ ತಮ್ಮನ್ನು ತಾವು ಅರ್ಪಿಸಿಕೊಂಡು ಸಮಾಜದ ಮೇಲೆ ಶಾಶ್ವತ ಪ್ರಭಾವ ಬೀರಿದ್ದಾರೆ ಎಂದು ಶ್ರೀ ಮೋದಿ ಅವರು ಸ್ಮರಿಸಿದ್ದಾರೆ. ಪೂಜ್ಯ ಸ್ವಾಮಿಗಳು ಅನೇಕ ಸಂಸ್ಥೆಗಳು ಮತ್ತು ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಿದರು ಮತ್ತು ಜನರಲ್ಲಿ ಶಿಕ್ಷಣದ ಆನಂದ ಪಸರಿಸಲು ಬಹುವಾಗಿ ಬದ್ಧರಾಗಿದ್ದರು ಎಂದು ಅವರು ವಿವರಿಸಿದ್ದಾರೆ. 

 ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

“ವಾರಾಣಸಿಯ ಶ್ರೀ ಕಾಶಿ ಮಠ ಸಂಸ್ಥಾನದ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವದ ವಿಶೇಷ ಸಂದರ್ಭದಲ್ಲಿ ಅವರಿಗೆ ಗೌರವ ನಮನಗಳು.  ಸೇವೆ ಮತ್ತು ಆಧ್ಯಾತ್ಮಿಕತೆಗಾಗಿ ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು. ಅವರು ಅನೇಕ ಸಂಸ್ಥೆಗಳು, ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಿದರು ಮತ್ತು ಜನರಲ್ಲಿ ಶಿಕ್ಷಣದ ಆನಂದ ಪಸರಿಸಲು ಉತ್ಸುಕರಾಗಿದ್ದರು. ಅವರ ಬೋಧನೆಗಳು ಸರಳತೆ, ಕರುಣೆ ಮತ್ತು ಸದಾಚಾರವನ್ನು ಒತ್ತಿಹೇಳುತ್ತವೆ. ನಮ್ಮ ನೆಲದಲ್ಲಿ ಹುಟ್ಟಿದ ಭಾರತದ ಸಂಸ್ಕೃತಿ ಮತ್ತು ಮೌಲ್ಯ ವ್ಯವಸ್ಥೆಗಳನ್ನು ಸಂರಕ್ಷಿಸಲು ಮತ್ತು ಜನಪ್ರಿಯಗೊಳಿಸಲು ಅವರು ಮಾಡಿರುವ ಪ್ರಯತ್ನಗಳು ಕೂಡ ಅಷ್ಟೇ ಶ್ಲಾಘನೀಯ.”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India accelerates ‘semiconductor drive’ with Rs 1.64 lakh crore investment plan

Media Coverage

India accelerates ‘semiconductor drive’ with Rs 1.64 lakh crore investment plan
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 29 ಜೂನ್ 2026
June 29, 2026

PM Modi Advancing National Strength Through Unity, Innovation and Janbhagidari