ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಜನ್ಮ ದಿನಾಚರಣೆಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ.
ಯುವ ಮನಸ್ಸುಗಳನ್ನು ಬೆಳಗಿಸಿದ ಮತ್ತು ರಾಷ್ಟ್ರದ ಜನರು ದೊಡ್ಡ ಕನಸು ಕಾಣಲು ಪ್ರೇರೇಪಿಸಿದ ದಾರ್ಶನಿಕರಾಗಿ ಡಾ. ಅಬ್ದುಲ್ ಕಲಾಂ ಅವರನ್ನು ಸ್ಮರಿಸಲಾಗುತ್ತದೆ. ಡಾ. ಕಲಾಂ ಅವರ ಜೀವನವು ಯಶಸ್ಸಿಗೆ ನಮ್ರತೆ ಮತ್ತು ಕಠಿಣ ಪರಿಶ್ರಮ ಅತ್ಯಗತ್ಯ ಎಂದು ನಮಗೆ ನೆನಪಿಸುತ್ತದೆ ಎಂದು ಶ್ರೀ ಮೋದಿ ಹೇಳಿದ್ದಾರೆ.
ಡಾ. ಕಲಾಂ ಅವರು ಕಂಡ ಬಲಿಷ್ಠ, ಸ್ವಾವಲಂಬಿ ಮತ್ತು ಸಹಾನುಭೂತಿಯುಳ್ಳ ಭಾರತವನ್ನು ನಾವು ನಿರ್ಮಿಸುವುದನ್ನು ಮುಂದುವರಿಸುತ್ತೇವೆ ಎಂದು ಪ್ರಧಾನಮಂತ್ರಿ ಆಶಯ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:
"ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಜನ್ಮ ವಾರ್ಷಿಕೋತ್ಸವದಂದು ಅವರನ್ನು ಸ್ಮರಿಸಲಾಗುತ್ತಿದೆ. ಯುವ ಮನಸ್ಸುಗಳನ್ನು ಬೆಳಗಿಸಿದ ಮತ್ತು ನಮ್ಮ ದೇಶವು ದೊಡ್ಡ ಕನಸು ಕಾಣಲು ಪ್ರೇರೇಪಿಸಿದ ದಾರ್ಶನಿಕರಾಗಿ ಅವರನ್ನು ಸ್ಮರಿಸಲಾಗುತ್ತದೆ. ಅವರ ಜೀವನವು ವಿನಮ್ರತೆ ಮತ್ತು ಕಠಿಣ ಪರಿಶ್ರಮ ಯಶಸ್ಸಿಗೆ ಅತ್ಯಗತ್ಯ ಎಂದು ನಮಗೆ ನೆನಪಿಸುತ್ತದೆ. ಅವರು ಕಲ್ಪಿಸಿಕೊಂಡಿದ್ದ ಬಲಿಷ್ಠ, ಸ್ವಾವಲಂಬಿ ಮತ್ತು ಸಹಾನುಭೂತಿಯುಳ್ಳ ಭಾರತವನ್ನು ನಿರ್ಮಿಸಲು ನಾವು ಮುಂದುವರಿಯೋಣ."
https://x.com/narendramodi/status/1978291330418622968?s=46


