ಇಂದು ಮಾಜಿ ಉಪ ಪ್ರಧಾನಮಂತ್ರಿ ಬಾಬು ಜಗಜೀವನ್ ರಾಮ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಪ್ರಧಾನಮಂತ್ರಿಗಳು:
"ಮಾಜಿ ಉಪ ಪ್ರಧಾನಮಂತ್ರಿಗಳಾದ ಬಾಬು ಜಗಜೀವನ್ ರಾಮ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವಪೂರ್ವಕ ನಮನಗಳು. ಸೌಲಭ್ಯಗಳಿಂದ ವಂಚಿತರಾದ ಮತ್ತು ತುಳಿತಕ್ಕೊಳಗಾದವರ ಹಕ್ಕುಗಳಿಗಾಗಿ ತಮ್ಮ ಜೀವಮಾನವಿಡೀ ಅವರು ನಡೆಸಿದ್ದ ಹೋರಾಟ ಇತರರಿಗೆ ಸದಾ ಸ್ಫೂರ್ತಿಯಾಗಿ ಉಳಿಯುತ್ತದೆ." ಎಂದು ಹೇಳಿದ್ದಾರೆ.
देश के पूर्व उप प्रधानमंत्री बाबू जगजीवन राम को उनकी जयंती पर आदरपूर्ण श्रद्धांजलि। वंचितों और पीड़ितों के अधिकार के लिए उनका आजीवन संघर्ष सदैव प्रेरणास्रोत बना रहेगा। pic.twitter.com/42m73kAQ6M
— Narendra Modi (@narendramodi) April 5, 2025


