ಲೋಕಮಾನ್ಯ ತಿಲಕ್ ಅವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಅವರಿಗೆ ಗೌರವ ಸಲ್ಲಿಸಿದರು. ಭಾರತದ ಸ್ವಾತಂತ್ರ್ಯ ಹೋರಾಟದ ಅತ್ಯುನ್ನತ ವ್ಯಕ್ತಿಯಾಗಿ, ಲೋಕಮಾನ್ಯ ತಿಲಕರು ರಾಷ್ಟ್ರೀಯತೆಯ ಚೈತನ್ಯವನ್ನು ಜಾಗೃತಗೊಳಿಸಿ, ಅವರ ಮುಂದಿನ ಪೀಳಿಗೆಯವರು ಜನರ ಸೇವೆಗೆ ತಮ್ಮನ್ನು ತಾವು ಅರ್ಪಿಸಿಕೊಳ್ಳುವಂತೆ ಪ್ರೇರೇಪಿಸಿದರು ಎಂದು ಹೇಳಿದರು.

ನಮ್ಮ ಸಂಸ್ಕೃತಿಯನ್ನು ಜನಪ್ರಿಯಗೊಳಿಸಲು ಮತ್ತು ಸಹೋದರತ್ವದ ಮನೋಭಾವವನ್ನು ಮತ್ತಷ್ಟು ಹೆಚ್ಚಿಸಲು ಲೋಕಮಾನ್ಯ ತಿಲಕರ ಪ್ರಯತ್ನಗಳು ಕೂಡಾ ಸ್ಪೂರ್ತಿದಾಯಕವಾಗಿವೆ ಎಂದು ಪ್ರಧಾನಿಯವರು ತಿಳಿಸಿದರು. ಅವರ ಬರಹಗಳು ಜನರಿಗೆ ಹೊಸ ಆತ್ಮವಿಶ್ವಾಸವನ್ನು ನೀಡಿ, ಹೆಮ್ಮೆಯ ಮನೋಭಾವವನ್ನು ಮೂಡಿಸಿದೆ ಎಂದು ಶ್ರೀ ಮೋದಿಯವರು ತಿಳಿಸಿದರು.

ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ:

"ಲೋಕಮಾನ್ಯ ತಿಲಕರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ನಮನಗಳು. ಭಾರತದ ಸ್ವಾತಂತ್ರ್ಯ ಹೋರಾಟದ ಮುಂದಾಳತ್ವ ವಹಿಸಿದ ಅತ್ಯುನ್ನತ ವ್ಯಕ್ತಿಯಾಗಿದ್ದ ಅವರು ರಾಷ್ಟ್ರೀಯತೆಯ ಮನೋಭಾವವನ್ನು ಜಾಗೃತಗೊಳಿಸಿ, ಭವಿಷ್ಯದ ಪೀಳಿಗೆಗಳು ಜನರ ಸೇವೆಗೆ ತಮ್ಮನ್ನು ತಾವು ಅರ್ಪಿಸಿಕೊಳ್ಳುವಂತೆ ಪ್ರೇರೇಪಿಸಿದರು. ನಮ್ಮ ಸಂಸ್ಕೃತಿಯನ್ನು ಜನಪ್ರಿಯಗೊಳಿಸಲು ಮತ್ತು ಸಹೋದರತ್ವದ ಮನೋಭಾವವನ್ನು ಮತ್ತಷ್ಟು ಹೆಚ್ಚಿಸಲು ಅವರ ಪ್ರಯತ್ನಗಳು ಅಷ್ಟೇ ಸ್ಪೂರ್ತಿದಾಯಕವಾಗಿದ್ದವು. ಅವರ ಬರಹಗಳು ಜನರಿಗೆ ಹೊಸ ಆತ್ಮವಿಶ್ವಾಸವನ್ನು ನೀಡಿ, ಹೆಮ್ಮೆಯ ಮನೋಭಾವವನ್ನು ಹೆಚ್ಚಿಸಿದವು."

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s Defence Exports Explode: ₹40,000 Crore Milestone Signals a New Manufacturing Era

Media Coverage

India’s Defence Exports Explode: ₹40,000 Crore Milestone Signals a New Manufacturing Era
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 6 ಸೆಪ್ಟೆಂಬರ್ 2026
September 06, 2026

Building a Safer Bharat — Weapons, Work and a Future for Every Child Under PM Modi