ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಗೋವಾ ಇಂಧನ ಅಭಿವೃದ್ಧಿ ಸಂಸ್ಥೆ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆ ಮತ್ತು ವಿದ್ಯುಚ್ಛಕ್ತಿ ಇಲಾಖೆಯ ಸಹಯೋಗದ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ. ಈ ಉಪಕ್ರಮವು ವಿದ್ಯುತ್ ಉತ್ಪಾದನೆಯ ಪರಿಸರ ಸ್ನೇಹಿ ವಿಧಾನಗಳನ್ನು ಅಳವಡಿಸಿಕೊಳ್ಳಲು ಗೋವಾದ ಜನರನ್ನು ಪ್ರೇರೇಪಿಸುತ್ತದೆ.
ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಅವರ ಟ್ವೀಟ್ ಗೆ ಉತ್ತರ ನೀಡಿರುವ ಪ್ರಧಾನಮಂತ್ರಿ ಅವರು: "ಗೋವಾ ಸೂರ್ಯನ ಶಕ್ತಿಯನ್ನು ಬಳಸಿಕೊಳ್ಳುತ್ತಿರುವುದನ್ನು ನೋಡಿ ಸಂತೋಷವಾಗಿದೆ.
ಈ ಸಹಯೋಗದ ಪ್ರಯತ್ನವು ಸುಸ್ಥಿರ ಅಭಿವೃದ್ಧಿಯನ್ನು ಹೆಚ್ಚಿಸುತ್ತದೆ,” ಎಂದಿದ್ದಾರೆ.
Happy to see Goa harnessing the power of the sun. This collaborative effort will boost sustainable development. https://t.co/uMEPlcW7SX
— Narendra Modi (@narendramodi) June 17, 2023


