ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶ್ವ ಆರೋಗ್ಯ ದಿನದ ಅಂಗವಾಗಿ ಸ್ವಾಸ್ಥ್ಯ ಭೂಗ್ರಹವನ್ನು ರೂಪಿಸುವ ನಿಟ್ಟಿನಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಹಾಗೂ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಎಲ್ಲಾ ಸಾರ್ವಜನಿಕರಿಗೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ
ಸ್ವಾಸ್ಥ್ಯ ಸಮಾಜ ನಿರ್ಮಾಣ ನಿಟ್ಟಿನಲ್ಲಿ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ. ಪ್ರತಿಯೊಬ್ಬ ವ್ಯಕ್ತಿಯ ಯೋಗಕ್ಷೇಮಕ್ಕೆ ಆದ್ಯತೆ ನೀಡುವ ಮತ್ತು ಆರೋಗ್ಯ ವ್ಯವಸ್ಥೆಗಳನ್ನು ಬಲಪಡಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದ್ದಾರೆ.
ಎಲ್ಲಾ ಪ್ರಜೆಗಳಿಗೆ ಉತ್ತಮ ಆರೋಗ್ಯ ಲಭಿಸಲಿ ಎಂದು ಆಶಿಸಿರುವ ಪ್ರಧಾನ ಮಂತ್ರಿ ಅವರು, ಪ್ರತಿಯೊಬ್ಬರೂ ತಮ್ಮ ದೈಹಿಕ ಕ್ಷಮತೆಯನ್ನು ಕಾಯ್ದುಕೊಳ್ಳಲು ಸಾಧ್ಯವಾದಷ್ಟು ಪ್ರಯತ್ನಗಳನ್ನು ಕೈಗೊಳ್ಳಬೇಕು ಎಂದು ಉತ್ತೇಜಿಸಿದ್ದಾರೆ.
ಈ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಅವರು ದೈಹಿಕ ವ್ಯಾಯಾಮದ ಪ್ರಯೋಜನಗಳನ್ನು ಪ್ರಮುಖವಾಗಿ ಬಿಂಬಿಸುವ ಸಂಸ್ಕೃತ ಶುಭಾಷಿತವನ್ನು ಹಂಚಿಕೊಂಡಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ.
“ಭೂಮಿಯ ಆರೋಗ್ಯದ ನಿಟ್ಟಿನಲ್ಲಿ ನಿರಂತರವಾಗಿ ಬದ್ಧತೆಯಿಂದ ಸೇವೆ ಸಲ್ಲಿಸುತ್ತಿರುವ ಎಲ್ಲರಿಗೂ ವಿಶ್ವ ಆರೋಗ್ಯ ದಿನದಂದು ನಾನು ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ನಾವು ಆರೋಗ್ಯವಂತ ಸಮಾಜ ನಿರ್ಮಿಸುವ ನಮ್ಮ ಬದ್ಧತೆಯನ್ನು ಪುನರ್ ಉಚ್ಚರಿಸುತ್ತೇವೆ. ಆರೋಗ್ಯ ವ್ಯವಸ್ಥೆಯನ್ನು ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಮತ್ತು ಪ್ರತಿಯೊಬ್ಬರ ಯೋಗಕ್ಷೇಮಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ನಾವೆಲ್ಲರೂ ಒಗ್ಗೂಡಿ ಕೆಲಸ ಮಾಡೋಣ. ”
“विश्व स्वास्थ्य दिवस पर मैं सभी देशवासियों के उत्तम स्वास्थ्य की कामना करता हूं। मेरा आग्रह है कि खुद को स्वस्थ रखने के लिए हरसंभव प्रयास जरूर करें।
लाघवं कर्मसामर्थ्यं दीप्तोऽग्निर्मेदसः क्षयः।
विभक्तघनगात्रत्वं व्यायामादुपजायते॥"
ದೈಹಿಕ ವ್ಯಾಯಾಮ ದುಡಿಯುವ ಸಾಮರ್ಥ್ಯ ಹೆಚ್ಚಿಸುತ್ತದೆ, ಜೀರ್ಣಶಕ್ತಿ ವೃದ್ಧಿಸುತ್ತದೆ, ಬೊಜ್ಜು ತಗ್ಗಿಸುತ್ತದೆ ಮತ್ತು ದೇಹದ ಭಾಗಗಳು ಸದೃಢವಾಗುತ್ತವೆ ಮತ್ತು ಸಮತೋಲಿತನದಿಂದ ಕೂಡಿರುತ್ತವೆ.
On World Health Day, we express our gratitude to all those who dedicate themselves tirelessly to the service of others and work towards a healthier planet. We also reaffirm our commitment to building a healthier society. Let us all keep working together to strengthen healthcare…
— Narendra Modi (@narendramodi) April 7, 2026
विश्व स्वास्थ्य दिवस पर मैं सभी देशवासियों के उत्तम स्वास्थ्य की कामना करता हूं। मेरा आग्रह है कि खुद को स्वस्थ रखने के लिए हरसंभव प्रयास जरूर करें।
— Narendra Modi (@narendramodi) April 7, 2026
लाघवं कर्मसामर्थ्यं दीप्तोऽग्निर्मेदसः क्षयः।
विभक्तघनगात्रत्वं व्यायामादुपजायते॥ pic.twitter.com/EEH6gNbodz


