ಅಧ್ಯಕ್ಷ ಟೊಕಯೆವ್‌ ಅವರ ಆತ್ಮೀಯ ಶುಭಾಶಯಗಳಿಗೆ ಪ್ರಧಾನಿ ಧನ್ಯವಾದ ಅರ್ಪಿಸಿದರು
ಉಭಯ ನಾಯಕರು ವ್ಯೂಹಾತ್ಮಕ ಪಾಲುದಾರಿಕೆಯನ್ನು ಮುಂದುವರಿಸುವ ಬದ್ಧತೆಯನ್ನು ಪುನರುಚ್ಚರಿಸಿದರು
ಕಜಕಿಸ್ತಾನದಲ್ಲಿಎಸ್‌ಸಿಒ ಶೃಂಗಸಭೆಯ ಯಶಸ್ಸಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕಜಕಿಸ್ತಾನದ ಅಧ್ಯಕ್ಷ  ಘನತೆವೆತ್ತ ಶ್ರೀ ಕಾಸಿಮ್‌ ಜೊಮಾರ್ಟ್‌ ಟೊಕಯೆವ್‌ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.

ಅಧ್ಯಕ್ಷ  ಟೊಕಯೆವ್‌ ಅವರು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಿದ್ದಕ್ಕಾಗಿ ಮತ್ತು ಐತಿಹಾಸಿಕ ಸತತ ಮೂರನೇ ಅವಧಿಗೆ ಪುನರಾಯ್ಕೆಯಾಗಿದ್ದಕ್ಕಾಗಿ ಪ್ರಧಾನಮಂತ್ರಿ ಅವರನ್ನು ಹೃತ್ಪೂರ್ವಕವಾಗಿ ಅಭಿನಂದಿಸಿದರು. ಪ್ರಧಾನಮಂತ್ರಿ ಅವರು ತಮ್ಮ ಹಾರ್ದಿಕ ಅಭಿನಂದನೆಗಳಿಗಾಗಿ ಅವರಿಗೆ ಧನ್ಯವಾದ ಅರ್ಪಿಸಿದರು. ದ್ವಿಪಕ್ಷೀಯ ಕಾರ್ಯತಂತ್ರದ ಪಾಲುದಾರಿಕೆಯನ್ನು ಮುನ್ನಡೆಸಲು ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುವ ಬದ್ಧತೆಯನ್ನು ಇಬ್ಬರೂ ನಾಯಕರು ಪುನರುಚ್ಚರಿಸಿದರು.

ಅಸ್ತಾನಾದಲ್ಲಿ ನಡೆಯಲಿರುವ ಎಸ್‌ಸಿಒ ಶೃಂಗಸಭೆಯ ಯಶಸ್ಸಿಗೆ ಭಾರತದ ಸಂಪೂರ್ಣ ಬೆಂಬಲವನ್ನು ಪ್ರಧಾನಿ ತಿಳಿಸಿದರು ಮತ್ತು ಕಜಕಿಸ್ತಾನದ ನಾಯಕತ್ವವು ಪ್ರಾದೇಶಿಕ ಸಹಕಾರದ ಪ್ರಗತಿಗೆ ಹೆಚ್ಚಿನ ಕೊಡುಗೆ ನೀಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಇಬ್ಬರೂ ನಾಯಕರು ಸಂಪರ್ಕದಲ್ಲಿರಲು ಸಮ್ಮತಿಸಿದರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Why Abrogation Of Article 370 Was A Strategic Necessity For India

Media Coverage

Why Abrogation Of Article 370 Was A Strategic Necessity For India
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 05 ಆಗಸ್ಟ್ 2026
August 05, 2026

Viksit Bharat in Action: Inclusive, Green, and Globally Competitive Under PM Modi