ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೆಲೆನಿಕ್ ಗಣರಾಜ್ಯದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಕಿರಿಯಾಕೋಸ್ ಮಿಟ್ಸೊಟಾಕಿಸ್ ಅವರಿಂದ ದೂರವಾಣಿ ಕರೆಯನ್ನು ಸ್ವೀಕರಿಸಿದರು.
ಪ್ರಧಾನಮಂತ್ರಿ ಮಿಟ್ಸೊಟಾಕಿಸ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಸಂದರ್ಭದಲ್ಲಿ ಹಾರ್ದಿಕ ಶುಭಾಶಯಗಳನ್ನು ಹಂಚಿಕೊಂಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಹೃತ್ಪೂರ್ವಕ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
ವ್ಯಾಪಾರ, ಹೂಡಿಕೆ, ತಂತ್ರಜ್ಞಾನ, ಹಡಗು, ರಕ್ಷಣೆ, ಭದ್ರತೆ, ಸಂಪರ್ಕ ಮತ್ತು ಜನರ ನಡುವಿನ ಸಂಬಂಧಗಳಂತಹ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧಗಳಲ್ಲಿನ ಬೆಳವಣಿಗೆಗಳನ್ನು ಉಭಯ ನಾಯಕರು ಸ್ವಾಗತಿಸಿದರು ಮತ್ತು ಭಾರತ-ಗ್ರೀಸ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.
ಪರಸ್ಪರ ಲಾಭದಾಯಕ ಭಾರತ-ಐರೋಪ್ಯ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದದ ಶೀಘ್ರ ತೀರ್ಮಾನಕ್ಕೆ ಮತ್ತು 2026ರಲ್ಲಿ ಭಾರತವು ಆಯೋಜಿಸಲಿರುವ ಎ.ಐ. ಪರಿಣಾಮ ಶೃಂಗಸಭೆಯ ಯಶಸ್ಸಿಗೆ ಗ್ರೀಸ್‌ನ ಬೆಂಬಲವನ್ನು ಪ್ರಧಾನಮಂತ್ರಿ ಮಿಟ್ಸೊಟಾಕಿಸ್ ತಿಳಿಸಿದರು.
ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆಯೂ ಅವರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.
ಉಭಯ ನಾಯಕರು ಸಂಪರ್ಕದಲ್ಲಿರಲು ಪರಸ್ಪರ ಸಮ್ಮತಿಸಿದರು.
A pleasure speaking with Prime Minister Mitsotakis today. Grateful for his warm birthday wishes. India-Greece Strategic Partnership continues to grow across trade, investment, connectivity, defence, security and people-to-people linkages. We reaffirmed our commitment to early…
— Narendra Modi (@narendramodi) September 19, 2025


