ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಅವರಿಂದ ಕರೆ ಸ್ವೀಕರಿಸಿದರು.
ವಿವಿಧ ವಲಯಗಳಲ್ಲಿ ದ್ವಿಪಕ್ಷೀಯ ಸಹಕಾರ ಸಂಬಂಧದಲ್ಲಿ ಸಾಧಿಸಿರುವ ಗಣನೀಯ ಪ್ರಗತಿಯನ್ನು ಉಭಯ ನಾಯಕರು ಪರಿಶೀಲಿಸಿದರು ಮತ್ತು ಎಲ್ಲಾ ವಲಯಗಳಲ್ಲಿ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ವ್ಯಕ್ತಪಡಿಸಿದರು.
ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಬಗ್ಗೆಯೂ ಅವರು ಚರ್ಚಿಸಿದರು ಮತ್ತು ಹೊರ್ಮುಜ್ ಜಲಸಂಧಿಯನ್ನು ಮುಕ್ತ ಮತ್ತು ಸುರಕ್ಷಿತವಾಗಿಡುವ ಮಹತ್ವವನ್ನು ಒತ್ತಿ ಹೇಳಿದರು.
ಶ್ರೀ ನರೇಂದ್ರ ಮೋದಿ ಅವರು ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ;
“ನನ್ನ ಸ್ನೇಹಿತ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಅವರಿಂದ ಕರೆ ಬಂದಿದೆ. ವಿವಿಧ ವಲಯಗಳಲ್ಲಿ ನಮ್ಮ ದ್ವಿಪಕ್ಷೀಯ ಸಹಕಾರದಲ್ಲಿ ಸಾಧಿಸಿರುವ ಗಣನೀಯ ಪ್ರಗತಿಯನ್ನು ನಾವು ಪರಿಶೀಲಿಸಿದೆವು. ಎಲ್ಲಾ ಕ್ಷೇತ್ರಗಳಲ್ಲಿ ನಮ್ಮ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ನಾವು ಬದ್ಧರಾಗಿದ್ದೇವೆ. ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿಯ ಬಗ್ಗೆಯೂ ನಾವು ಚರ್ಚಿಸಿದ್ದೇವೆ ಮತ್ತು ಹೊರ್ಮುಜ್ ಜಲಸಂಧಿಯನ್ನು ಮುಕ್ತ ಮತ್ತು ಸುರಕ್ಷಿತವಾಗಿಡುವ ಮಹತ್ವವನ್ನು ಒತ್ತಿ ಹೇಳಿದ್ದೇವೆ’’.
@POTUS
@realDonaldTrump”
Received a call from my friend President Donald Trump. We reviewed the substantial progress achieved in our bilateral cooperation in various sectors. We are committed to further strengthening our Comprehensive Global Strategic Partnership in all areas. We also discussed the…
— Narendra Modi (@narendramodi) April 14, 2026


