ಸ್ವೀಡನ್ನಿನ ಗೋಥೆನ್‌ಬರ್ಗ್‌ನಲ್ಲಿ ಆಯೋಜಿಸಲಾಗಿದ್ದ ವಿಶೇಷ ಸಮಾರಂಭದಲ್ಲಿ, ಸ್ವೀಡನ್‌ನ ಗೌರವಾನ್ವಿತ ರಾಣಿ ಕ್ರೌನ್ ಪ್ರಿನ್ಸೆಸ್ ವಿಕ್ಟೋರಿಯಾ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ 18ನೇ ಶತಮಾನದಲ್ಲಿ ಸ್ಥಾಪಿಸಲಾದ ಸ್ವೀಡನ್‌ನ ಅತ್ಯಂತ ಹಳೆಯ ಮತ್ತು ಅತ್ಯಂತ ವಿಶಿಷ್ಟ ಗೌರವಗಳಲ್ಲಿ ಒಂದಾದ 'ರಾಯಲ್ ಆರ್ಡರ್ ಆಫ್ ದಿ ಪೋಲಾರ್ ಸ್ಟಾರ್, ಡಿಗ್ರಿ ಕಮಾಂಡರ್ ಗ್ರ್ಯಾಂಡ್ ಕ್ರಾಸ್' ಅನ್ನು ಪ್ರದಾನ ಮಾಡಿದರು. ಈ ಪ್ರಶಸ್ತಿಯು ಸ್ವೀಡನ್‌ನೊಂದಿಗಿನ ಸಂಬಂಧಗಳ ಬಲವರ್ಧನೆಯಲ್ಲಿ ಅಸಾಧಾರಣ ಸಾರ್ವಜನಿಕ ಸೇವೆ ಮತ್ತು ಕೊಡುಗೆಯನ್ನು ಗುರುತಿಸಿ ವಿದೇಶಿ ಸರ್ಕಾರದ ಮುಖ್ಯಸ್ಥರಿಗೆ ನೀಡಲಾಗುವ ಸ್ವೀಡನ್‌ನ ಅತ್ಯುನ್ನತ ಗೌರವವಾಗಿದೆ.

ಈ ವೇಳೆ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಈ ಗೌರವಕ್ಕಾಗಿ ಗೌರವಾನ್ವಿತ ರಾಣಿ ಪ್ರಿನ್ಸೆಸ್ ವಿಕ್ಟೋರಿಯಾ ಮತ್ತು ಸ್ವೀಡನ್ ಜನರಿಗೆ ತಮ್ಮ ಕೃತಜ್ಞತೆಯನ್ನು ಸಲ್ಲಿಸಿದರು. ಅವರು ಈ ಪ್ರಶಸ್ತಿಯನ್ನು ಭಾರತದ 1.4 ಶತಕೋಟಿ ಜನರಿಗೆ ಮತ್ತು ಭಾರತ ಮತ್ತು ಸ್ವೀಡನ್ ನಡುವಿನ ಶಾಶ್ವತ ಸ್ನೇಹಕ್ಕೆ ಸಮರ್ಪಣೆ ಮಾಡಿದರು. ರಾಯಲ್ ಆರ್ಡರ್ ಆಫ್ ದಿ ಪೋಲಾರ್ ಸ್ಟಾರ್ ಪ್ರಶಸ್ತಿಯು ಭಾರತ ಮತ್ತು ಸ್ವೀಡನ್ ನಡುವಿನ ಐತಿಹಾಸಿಕ ಸಂಬಂಧಗಳು ಮತ್ತು ನಾಗರಿಕತೆಯ ಬಾಂಧವ್ಯಗಳ ಪುನರುಚ್ಛಾರಯಾಗಿದೆ ಮತ್ತು ಎರಡೂ ದೇಶಗಳ ಜನರನ್ನು ಒಗ್ಗೂಡಿಸುವ ಆತ್ಮೀಯತೆ ಮತ್ತು ವಾತ್ಸಲ್ಯಕ್ಕೆ ಸಂದ ಗೌರವವಾಗಿದೆ ಎಂದು ಪ್ರಧಾನಮಂತ್ರಿ ಉಲ್ಲೇಖಿಸಿದರು. (ಪ್ರಧಾನಮಂತ್ರಿ ನರೇಂದ್ರ ಮೋದಿ ಈ ಪ್ರಶಸ್ತಿಯನ್ನು ಪಡೆದ ಮೊದಲ ಏಷ್ಯಾದ ನಾಯಕರಾಗಿದ್ದಾರೆ).

ಈ ಪ್ರಶಸ್ತಿ ಪ್ರದಾನವು ಭಾರತ-ಸ್ವೀಡನ್ ಕಾರ್ಯತಂತ್ರದ ಸಹಭಾಗಿತ್ವದಲ್ಲಿ ಒಂದು ಮೈಲಿಗಲ್ಲನ್ನು ಗುರುತಿಸುತ್ತದೆ ಮತ್ತು ದ್ವಿಪಕ್ಷೀಯ ಸಹಕಾರವನ್ನು ಮುನ್ನಡೆಸಲು ಮತ್ತು ಜಾಗತಿಕ ಶಾಂತಿ ಮತ್ತು ಸಮೃದ್ಧಿಗೆ ಕೊಡುಗೆ ನೀಡುವಲ್ಲಿ ಎರಡೂ ದೇಶಗಳ ಹಂಚಿಕೆಯ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
'We'll provide AI skill training to 1 crore youth': PM Modi's big announcement on Independence Day 2026

Media Coverage

'We'll provide AI skill training to 1 crore youth': PM Modi's big announcement on Independence Day 2026
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 15 ಆಗಸ್ಟ್ 2026
August 15, 2026

Azadi Ka Amrit Mahotsav Continues: PM Modi’s Independence Day Vision Unites Growth, Youth Power & National Pride