ಪ್ರತಿಯೊಂದು ಹೆಣ್ಣು ಮಗುವೂ ಘನತೆ, ಅವಕಾಶ ಮತ್ತು ಭರವಸೆಯ ಜೀವನವನ್ನು ನಡೆಸುವಂತೆ ನೋಡಿಕೊಳ್ಳುವ ಸರ್ಕಾರದ ಅಚಲ ಸಂಕಲ್ಪವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪುನರುಚ್ಚರಿಸಿದ್ದಾರೆ.
"ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ"ದ ಸಂದರ್ಭದಲ್ಲಿ ನೀಡಿದ ಸಂದೇಶದಲ್ಲಿ, ಕಳೆದ ಹತ್ತು ವರ್ಷಗಳಲ್ಲಿ, ಹೆಣ್ಣು ಮಗುವಿನ ಶಿಕ್ಷಣ, ಕೌಶಲ್ಯ ಮತ್ತು ಆರೋಗ್ಯ ರಕ್ಷಣೆಯನ್ನು ಸುಧಾರಿಸುವತ್ತ ನಿರಂತರ ಗಮನ ಹರಿಸಲಾಗಿದೆ. ಈ ಪ್ರಯತ್ನಗಳು ಹೆಣ್ಣು ಮಗು ಅಭಿವೃದ್ಧಿ ಹೊಂದಲು ಅನುಕೂಲಕರ ವಾತಾವರಣವನ್ನು ಸೃಷ್ಟಿಸಲು ಸಹಾಯ ಮಾಡಿವೆ ಎಂದು ಪ್ರಧಾನಮಂತ್ರಿಯವರು ಹೇಳಿದರು.
ಪ್ರಧಾನಮಂತ್ರಿಯವರು ಎಕ್ಸ್ ತಾಣದ ಸಂದೇಶದಲ್ಲಿ ಈ ರೀತಿ ಹೇಳಿದ್ದಾರೆ;
“ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದಂದು, ಹೆಣ್ಣು ಮಗು ಘನತೆ, ಅವಕಾಶ ಮತ್ತು ಭರವಸೆಯ ಜೀವನವನ್ನು ನಡೆಸುವುದನ್ನು ಖಚಿತಪಡಿಸಿಕೊಳ್ಳಲು ನಮ್ಮ ಅಚಲ ಸಂಕಲ್ಪವನ್ನು ನಾವು ಪುನರುಚ್ಚರಿಸುತ್ತೇವೆ. ಕಳೆದ ಹತ್ತು ವರ್ಷಗಳಲ್ಲಿ, ನಾವು ಹೆಣ್ಣು ಮಗುವಿಗೆ ಉತ್ತಮ ಶಿಕ್ಷಣ, ಕೌಶಲ್ಯ ಮತ್ತು ಆರೋಗ್ಯ ರಕ್ಷಣೆಯ ಮೇಲೆ ಕೇಂದ್ರೀಕರಿಸಿದ್ದೇವೆ. ಇದು ಹೆಣ್ಣು ಮಗು ಅಭಿವೃದ್ಧಿ ಹೊಂದುವ ಮತ್ತು ವಿಕಸಿತ ಭಾರತಕ್ಕೆ ಪರಿಣಾಮಕಾರಿಯಾಗಿ ಕೊಡುಗೆ ನೀಡುವ ವಾತಾವರಣವನ್ನು ಖಚಿತಪಡಿಸಿದೆ."
On National Girl Child Day, we reaffirm our unwavering resolve to ensure that the girl child leads a life of dignity, opportunity and hope. Over the last ten years, we have focussed on better education, skilling and healthcare for the girl child. This has ensured an environment…
— Narendra Modi (@narendramodi) January 24, 2026


