ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2019 ರಲ್ಲಿ ಈ ದಿನದಂದು ಪುಲ್ವಾಮಾದಲ್ಲಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ವೀರರನ್ನು ಸ್ಮರಿಸಿದ್ದಾರೆ. ಅವರ ಭಕ್ತಿ, ಸಂಕಲ್ಪ ಮತ್ತು ರಾಷ್ಟ್ರಕ್ಕೆ ಸಲ್ಲಿಸುವ ಸೇವೆಯು ನಮ್ಮ ಸಾಮೂಹಿಕ ಪ್ರಜ್ಞೆಯಲ್ಲಿ ಶಾಶ್ವತವಾಗಿ ಉಳಿದಿದೆ ಮತ್ತು ಪ್ರತಿಯೊಬ್ಬ ಭಾರತೀಯನೂ ಅವರ ನಿರಂತರ ಧೈರ್ಯದಿಂದ ಶಕ್ತಿಯನ್ನು ಪಡೆಯುತ್ತಾನೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.
ಈ ಸಂಬಂಧ ಶ್ರೀ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:
"2019 ರಲ್ಲಿ ಈ ದಿನದಂದು ಪುಲ್ವಾಮಾದಲ್ಲಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ವೀರರನ್ನು ಸ್ಮರಿಸುತ್ತೇನೆ. ಅವರ ಭಕ್ತಿ, ಸಂಕಲ್ಪ ಮತ್ತು ರಾಷ್ಟ್ರದ ಸೇವೆಯು ನಮ್ಮ ಸಾಮೂಹಿಕ ಪ್ರಜ್ಞೆಯಲ್ಲಿ ಶಾಶ್ವತವಾಗಿ ಉಳಿಯುತ್ತದೆ. ಪ್ರತಿಯೊಬ್ಬ ಭಾರತೀಯನೂ ಅವರ ನಿರಂತರ ಧೈರ್ಯದಿಂದ ಶಕ್ತಿಯನ್ನು ಪಡೆಯುತ್ತಾನೆ," ಎಂದಿದ್ದಾರೆ.
Remembering the brave heroes who laid down their lives in Pulwama on this day in 2019. Their devotion, resolve and service to the nation remain forever etched in our collective consciousness. Every Indian draws strength from their enduring courage.
— Narendra Modi (@narendramodi) February 14, 2026


