Deep anguish in my heart: PM Modi on Pahalgam terror attack
The blood of every Indian is on the boil after seeing the pictures of the terrorist attack: PM Modi
In the war against terrorism, the unity of the country, the solidarity of 140 crore Indians, is our biggest strength: PM Modi
The perpetrators and conspirators of Pahalgam attack will be served with the harshest response: PM Modi
Dr. K Kasturirangan Ji’s contribution in lending newer heights to science, education and India’s space programme shall always be remembered: PM
Today, India has become a global space power: PM Modi
Very proud of all those who participated in Operation Brahma: PM Modi
Whenever it comes to serving humanity, India has always been at the forefront: PM Modi
Growing attraction for science and innovation amongst youth will take India to new heights: PM Modi
More than 140 crore trees planted under #EkPedMaaKeNaam initiative: PM Modi
Champaran Satyagraha infused new confidence in the freedom movement: PM Modi

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು ನಿಮ್ಮೊಂದಿಗೆ ನಾನು 'ಮನದ ಮಾತು' ಆಡುತ್ತಿರುವಾಗ, ನನ್ನ ಹೃದಯ ನೋವಿನಿಂದ ಭಾರವಾಗಿದೆ. ಪಹಲ್ಗಾಮ್‌ನಲ್ಲಿ ಏಪ್ರಿಲ್ 22 ರಂದು ನಡೆದ ಭಯೋತ್ಪಾದಕ ಘಟನೆ ದೇಶದ ಪ್ರತಿಯೊಬ್ಬ ನಾಗರಿಕನನ್ನು ದುಃಖದ ಮಡುವಿನಲ್ಲಿ ಮುಳುಗಿಸಿದೆ. ಸಂತ್ರಸ್ತ ಕುಟುಂಬಗಳ ಬಗ್ಗೆ ಪ್ರತಿ ಭಾರತೀಯನಲ್ಲೂ ಅಪಾರ ಸಹಾನುಭೂತಿಯಿದೆ. ರಾಜ್ಯ, ಭಾಷೆಯನ್ನು ಮೀರಿ ಎಲ್ಲ ಜನರು ಈ ದಾಳಿಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ನೋವನ್ನು ಸ್ವತಃ ಅನುಭವಿಸುತ್ತಿದ್ದಾರೆ. ಭಯೋತ್ಪಾದಕ ದಾಳಿಯ ಚಿತ್ರಗಳನ್ನು ನೋಡಿದ ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ ಎಂದು ನನಗೆ ಅನಿಸುತ್ತದೆ. ಪಹಲ್ಗಾಮ್‌ನಲ್ಲಿ ನಡೆದ ಈ ದಾಳಿಯು ಭಯೋತ್ಪಾದನೆಗೆ ಉತ್ತೇಜನ ನೀಡುವವರ ಹತಾಶೆಯನ್ನು ತೋರಿಸುತ್ತದೆ ಮತ್ತು  ಅವರ ಹೇಡಿತನವನ್ನು ಪ್ರದರ್ಶಿಸುತ್ತದೆ. ಶಾಲಾ ಕಾಲೇಜುಗಳಲ್ಲಿ ಹುರುಪು ತುಂಬಿರುವಂತಹ ಕಾಲದಲ್ಲಿ, ನಿರ್ಮಾಣ ಕಾರ್ಯಗಳು ಅಭೂತಪೂರ್ವ ವೇಗವನ್ನು ಪಡೆದುಕೊಂಡಿರುವಾಗ, ಕಾಶ್ಮೀರದಲ್ಲಿ ಶಾಂತಿ ಮರುಕಳಿಸುತ್ತಿರುವ ಇಂತಹ ಸಮಯದಲ್ಲಿ, ಪ್ರಜಾಪ್ರಭುತ್ವ ಬಲಿಷ್ಠಗೊಳ್ಳುತ್ತಿರುವಾಗ, ಪ್ರವಾಸಿಗರ ಸಂಖ್ಯೆಯಲ್ಲಿ ದಾಖಲೆಯ ಏರಿಕೆ ಕಂಡುಬರುತ್ತಿರುವಾಗ, ಜನರ ಆದಾಯ ಹೆಚ್ಚುತ್ತಿರುವಾಗ, ಯುವಕರಿಗೆ ಹೊಸ ಅವಕಾಶಗಳು ಸೃಷ್ಟಿಯಾಗುತ್ತಿದ್ದಾಗ, ದೇಶದ ಶತ್ರುಗಳು, ಜಮ್ಮು ಮತ್ತು ಕಾಶ್ಮೀರದ ವೈರಿಗಳಿಗೆ ಇದನ್ನು ಸಹಿಸಲಾಗಲಿಲ್ಲ. ಭಯೋತ್ಪಾದಕರು ಮತ್ತಷ್ಟು ಭಯೋತ್ಪಾದನೆ ಹೆಚ್ಚಿಸಲು ಬಯಸುತ್ತಿದ್ದಾರೆ. ಕಾಶ್ಮೀರವನ್ನು ಮತ್ತೆ ನಾಶಮಾಡಲು ಹುನ್ನಾರದಿಂದ ಇಷ್ಟು ದೊಡ್ಡ ಘಟನೆ ನಡೆಯುವಂತೆ ಪಿತೂರಿ ನಡೆಸಿದರು. ದೇಶದ ಏಕತೆ, 140 ಕೋಟಿ ಭಾರತೀಯರ ಒಗ್ಗಟ್ಟು, ಭಯೋತ್ಪಾದನೆಯ ವಿರುದ್ಧದ ಈ ಯುದ್ಧದಲ್ಲಿ ನಮ್ಮ ದೊಡ್ಡ ಶಕ್ತಿಯಾಗಿದೆ. ಈ ಒಗ್ಗಟ್ಟೆ ಭಯೋತ್ಪಾದನೆಯ ವಿರುದ್ಧದ ನಮ್ಮ ಹೋರಾಟದಲ್ಲಿ ನಿರ್ಣಾಯಕ ಪಾತ್ರವಾಹಿಸಲಿದೆ. ದೇಶ ಎದುರಿಸುತ್ತಿರುವ ಈ ಸವಾಲನ್ನು ಎದುರಿಸಲು ನಾವು ನಮ್ಮ ಸಂಕಲ್ಪವನ್ನು ಬಲಪಡಿಸಿಕೊಳ್ಳಬೇಕು. ಒಂದು ರಾಷ್ಟ್ರ ರೂಪದಲ್ಲಿ ಬಲವಾದ ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕು. ಈ ಭಯೋತ್ಪಾದಕ ದಾಳಿಯ ನಂತರ ಸಂಪೂರ್ಣ ದೇಶ ಒಕ್ಕೊರಲಿನಿಂದ ಧ್ವನಿಯೆತ್ತಿರುವುದನ್ನು ಇಂದು ಜಗತ್ತೇ ನೋಡುತ್ತಿದೆ.

ಸ್ನೇಹಿತರೇ, ಭಾರತೀಯರಾಗಿ ನಮ್ಮಲ್ಲಿ ಹುದುಗಿದ ಈ ಆಕ್ರೋಶ ಪ್ರಪಂಚದಾದ್ಯಂತ ವ್ಯಕ್ತವಾಗುತ್ತಿದೆ. ಭಯೋತ್ಪಾದಕ ದಾಳಿಯ ನಂತರ, ಜಗತ್ತಿನ ಮೂಲೆಮೂಲೆಯಿಂದ ಸಂತಾಪ ವ್ಯಕ್ತವಾಗುತ್ತಿದೆ. ಜಾಗತಿಕ ನಾಯಕರು ನನಗೆ ಕರೆ ಮಾಡಿದ್ದಾರೆ, ಪತ್ರ ಬರೆದಿದ್ದಾರೆ ಮತ್ತು ಸಂದೇಶಗಳನ್ನು ಕಳುಹಿಸಿದ್ದಾರೆ. ಈ ಘೋರ ಭಯೋತ್ಪಾದಕ ದಾಳಿಯನ್ನು ಎಲ್ಲರೂ ಬಲವಾಗಿ ಖಂಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಅವರು ಸಂತಾಪ ಸೂಚಿಸಿದ್ದಾರೆ. ಭಯೋತ್ಪಾದನೆ ವಿರುದ್ಧದ ನಮ್ಮ ಹೋರಾಟದಲ್ಲಿ ಇಡೀ ಜಗತ್ತು 140 ಕೋಟಿ ಭಾರತೀಯರೊಂದಿಗೆ ನಿಂತಿದೆ. ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಸಿಗುತ್ತದೆ, ಖಂಡಿತವಾಗಿಯೂ ನ್ಯಾಯ ಸಿಕ್ಕೆ ತೀರುತ್ತದೆ ಎಂದು ನಾನು ಮತ್ತೊಮ್ಮೆ ಭರವಸೆ ನೀಡುತ್ತೇನೆ,. ಈ ದಾಳಿಯ ಅಪರಾಧಿಗಳು ಮತ್ತು ಸಂಚುಕೋರರಿಗೆ ಕಠಿಣ ಉತ್ತರ ನೀಡಲಾಗುವುದು.

ಸ್ನೇಹಿತರೇ, ಎರಡು ದಿನಗಳ ಹಿಂದೆ ನಮ್ಮ ದೇಶದ ಮಹಾನ್ ವಿಜ್ಞಾನಿ ಡಾ. ಕೆ. ಕಸ್ತೂರಿರಂಗನ್ ಅವರನ್ನು ನಾವು ಕಳೆದುಕೊಂಡೆವು. ಕಸ್ತೂರಿರಂಗನ್ ಅವರನ್ನು ಭೇಟಿಯಾದಾಗಲೆಲ್ಲಾ, ಭಾರತದ ಯುವಜನರ ಪ್ರತಿಭೆ, ಆಧುನಿಕ ಶಿಕ್ಷಣ, ಬಾಹ್ಯಾಕಾಶ ವಿಜ್ಞಾನ ಮುಂತಾದ ವಿಷಯಗಳ ಕುರಿತು ನಾವು ಸಾಕಷ್ಟು ಚರ್ಚಿಸುತ್ತಿದ್ದೆವು. ವಿಜ್ಞಾನ, ಶಿಕ್ಷಣ ಮತ್ತು ಭಾರತದ ಬಾಹ್ಯಾಕಾಶ ಕಾರ್ಯಕ್ರಮವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವಲ್ಲಿ ಅವರ ಕೊಡುಗೆ ಸದಾ ಸ್ಮರಣೀಯ. ಅವರ ನೇತೃತ್ವದಲ್ಲಿ ಇಸ್ರೋಗೆ  ಹೊಸ ಸ್ಥಾನಮಾನ ದೊರೆಯಿತು. ಅವರ ಮಾರ್ಗದರ್ಶನದಲ್ಲಿ ಮುಂದುವರೆದ ಬಾಹ್ಯಾಕಾಶ ಕಾರ್ಯಕ್ರಮಗಳು ಭಾರತದ ಪ್ರಯತ್ನಗಳಿಗೆ ಜಾಗತಿಕ ಮನ್ನಣೆಯನ್ನು ತಂದುಕೊಟ್ಟವು. ಭಾರತ ಇಂದು ಬಳಸುವ ಅನೇಕ ಉಪಗ್ರಹಗಳನ್ನು ಡಾ. ಕಸ್ತೂರಿರಂಗನ್ ಅವರ ಮೇಲ್ವಿಚಾರಣೆಯಲ್ಲಿ ಉಡಾವಣೆ ಮಾಡಲಾಗಿದೆ. ಅವರ ವ್ಯಕ್ತಿತ್ವದಲ್ಲಿ ಮತ್ತೊಂದು ವಿಶೇಷತೆಯಿತ್ತು, ಯುವ ಪೀಳಿಗೆ ಅವರಿಂದ ಬಹಳಷ್ಟು ಕಲಿಯಬಹುದು. ಅವರು ನಾವೀನ್ಯತೆಗೆ ಬಹಳ ಪ್ರಾಮುಖ್ಯತೆ ನೀಡುತ್ತಿದ್ದರು. ಹೊಸದನ್ನು ಕಲಿಯುವ, ತಿಳಿದುಕೊಳ್ಳುವ ಮತ್ತು ಕಾರ್ಯರೂಪಕ್ಕೆ ತರುವ ಅವರ ದೃಷ್ಟಿಕೋನವು ತುಂಬಾ ಸ್ಪೂರ್ತಿದಾಯಕ. ದೇಶದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸಿದ್ಧಪಡಿಸುವಲ್ಲಿ ಡಾ. ಕೆ. ಕಸ್ತೂರಿರಂಗನ್ ಅವರು ಬಹು ದೊಡ್ಡ ಪಾತ್ರವಹಿಸಿದ್ದರು. 21 ನೇ ಶತಮಾನದ ಆಧುನಿಕ ಅಗತ್ಯಗಳಿಗೆ ಅನುಗುಣವಾಗಿ ಭವಿಷ್ಯತ್ತನ್ನು ನೋಡುವ ಶಿಕ್ಷಣದ ಕಲ್ಪನೆಯನ್ನು ಡಾ. ಕಸ್ತೂರಿರಂಗನ್ ಮಂಡಿಸಿದರು. ದೇಶಕ್ಕೆ ಅವರ ನಿಸ್ವಾರ್ಥ ಸೇವೆ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಅವರ ಕೊಡುಗೆ ಸದಾ ಸ್ಮರಣೀಯ. ನಾನು ಡಾ. ಕೆ. ಕಸ್ತೂರಿರಂಗನ್ ಅವರಿಗೆ ವಿನಮ್ರತೆಯಿಂದ  ಗೌರವ ಸಮರ್ಪಿಸುತ್ತೇನೆ.

ನನ್ನ ಪ್ರಿಯ ದೇಶವಾಸಿಗಳೇ, ಈ ಏಪ್ರಿಲ್ ತಿಂಗಳಿಗೆ ಆರ್ಯಭಟ ಉಪಗ್ರಹ ಉಡಾವಣೆಗೊಂಡು 50 ವರ್ಷಗಳು ತುಂಬಿವೆ. ನಾವು ಇಂದು ಹಿಂತಿರುಗಿ ನೋಡಿದಾಗ, 50 ವರ್ಷಗಳ ಈ ಪ್ರಯಾಣವನ್ನು ನೆನಪಿಸಿಕೊಳ್ಳುವಾಗ, ಎಷ್ಟು ಸುದೀರ್ಘ ಮಾರ್ಗ  ಕ್ರಮಿಸಿದ್ದೇವೆಂದು ನಮಗೆ ಅರಿವಾಗುತ್ತದೆ. ಭಾರತದ ಬಾಹ್ಯಾಕಾಶ ಕನಸುಗಳ ಈ ಹಾರಾಟವು ಒಮ್ಮೆ ಕೇವಲ ಧೈರ್ಯ ಮಾತ್ರದಿಂದ ಆರಂಭಗೊಂಡಿತ್ತು. ದೇಶಕ್ಕಾಗಿ ಏನಾದರೂ ಮಾಡಬೇಕೆಂಬ ಉತ್ಸಾಹ ಹೊಂದಿದ್ದ ಕೆಲವು ಯುವ ವಿಜ್ಞಾನಿಗಳ ಸಾಧನೆ ಇದಾಗಿದೆ - ಇಂದಿನಂತೆ ಅವರ ಬಳಿ ಆಧುನಿಕ ಸಂಪನ್ಮೂಲಗಳಿರಲಿಲ್ಲ, ಜಾಗತಿಕ ತಂತ್ರಜ್ಞಾನವೂ ಕೈಗೆಟುಕುವಂತಿರಲಿಲ್ಲ - ಅವರ ಬಳಿ ಏನಾದರೂ ಇಟ್ಟು ಎಂದರೆ, ಅದು ಪ್ರತಿಭೆ, ಸಮರ್ಪಣೆ, ಕಠಿಣ ಪರಿಶ್ರಮ ಮತ್ತು ದೇಶಕ್ಕಾಗಿ ಏನಾದರೂ ಮಾಡಬೇಕೆಂಬ ಹಂಬಲ ಮಾತ್ರ. ನಮ್ಮ ವಿಜ್ಞಾನಿಗಳು ಎತ್ತಿನ ಬಂಡಿಗಳು ಮತ್ತು ಸೈಕಲ್‌ಗಳ ಮೇಲೆ ಅತ್ಯಂತ ಪ್ರಮುಖ ಉಪಕರಣಗಳನ್ನು ಹೊತ್ತೊಯ್ಯುವ ಚಿತ್ರಗಳನ್ನು ಸಹ ನೀವು ನೋಡಿರಬಹುದು. ಆ ಸಮರ್ಪಣೆ ಮತ್ತು ರಾಷ್ಟ್ರ ಸೇವಾ ಮನೋಭಾವದಿಂದಾಗಿ ಇಂದು ಬಹಳಷ್ಟು ಬದಲಾವಣೆಗಳಾಗಿವೆ. ಇಂದು ಭಾರತ ಜಾಗತಿಕ ಬಾಹ್ಯಾಕಾಶ ಶಕ್ತಿಯಾಗಿ ಬೆಳೆದಿದೆ. ನಾವು ಏಕಕಾಲದಲ್ಲಿ 104 ಉಪಗ್ರಹಗಳನ್ನು ಉಡಾವಣೆ ಮಾಡುವ ಮೂಲಕ ದಾಖಲೆಯನ್ನು ಸೃಷ್ಟಿಸಿದ್ದೇವೆ. ಚಂದ್ರನ ದಕ್ಷಿಣ ಧ್ರುವವನ್ನು ತಲುಪಿದ ಪ್ರಥಮ ರಾಷ್ಟ್ರವಾಗಿ ಹೊರಹೊಮ್ಮಿದ್ದೇವೆ. ಭಾರತವು ಮಂಗಳ ಕಕ್ಷೆಯ ಮಿಷನ್ ಅನ್ನು ಪ್ರಾರಂಭಿಸಿದೆ, ಅಲ್ಲದೆ ಆದಿತ್ಯ- L1 ಮಿಷನ್ ಮೂಲಕ ನಾವು ಸೂರ್ಯನಿಗೆ ಬಹಳ ಹತ್ತಿರ ತಲುಪಿದ್ದೇವೆ. ಇಂದು ಭಾರತವು ಇಡೀ ವಿಶ್ವದಲ್ಲೇ ಅತ್ಯಂತ ಕಾಸ್ಟ್ ಎಫೆಕ್ಕ್ಟಿವ್  ಆದರೆ ಯಶಸ್ವಿ ಬಾಹ್ಯಾಕಾಶ ಕಾರ್ಯಕ್ರಮವನ್ನು ಮುನ್ನಡೆಸುತ್ತಿದೆ. ಪ್ರಪಂಚದ ಅನೇಕ ದೇಶಗಳು ತಮ್ಮ ಉಪಗ್ರಹಗಳು ಮತ್ತು ಬಾಹ್ಯಾಕಾಶ ಯಾತ್ರೆಗಳಿಗೆ ಇಸ್ರೋದಿಂದ ಸಹಾಯ ಪಡೆಯುತ್ತಿವೆ.

ಸ್ನೇಹಿತರೇ, ಇಸ್ರೋ ಮೂಲಕ ಉಪಗ್ರಹ ಉಡಾವಣೆ ಮಾಡುವುದನ್ನು ನೋಡಿದಾಗ ನಮಗೆ ಹೆಮ್ಮೆಯಾಗುತ್ತದೆ. 2014 ರಲ್ಲಿ ಪಿಎಸ್‌ಎಲ್‌ವಿ-ಸಿ-23 ಉಡಾವಣೆಯನ್ನು ವೀಕ್ಷಿಸಿದಾಗ ನನಗೂ ಇದೇ ರೀತಿಯ ಅನುಭವವಾಯಿತು. 2019 ರಲ್ಲಿ ಚಂದ್ರಯಾನ-2 ಲ್ಯಾಂಡಿಂಗ್ ಸಮಯದಲ್ಲಿಯೂ, ನಾನು ಬೆಂಗಳೂರಿನ ಇಸ್ರೋ ಕೇಂದ್ರದಲ್ಲಿದ್ದೆ. ಆಗ ಚಂದ್ರಯಾನ ನಿರೀಕ್ಷಿತ ಯಶಸ್ಸನ್ನು ಪಡೆಯಲಿಲ್ಲ, ವಿಜ್ಞಾನಿಗಳಿಗೆ ಅದು ತುಂಬಾ ಕಠಿಣ ಘಳಿಗೆಯೆನಿಸಿತ್ತು. ಆದರೆ, ವಿಜ್ಞಾನಿಗಳ ಧೈರ್ಯ ಮತ್ತು ಏನನ್ನಾದರೂ ಸಾಧಿಸುವ ಉತ್ಸಾಹವನ್ನು ನಾನು ಸ್ವತಃ ವೀಕ್ಷಿಸುತ್ತಿದ್ದೆ. ಕೆಲವು ವರ್ಷಗಳ ನಂತರ, ಅದೇ ವಿಜ್ಞಾನಿಗಳು ಚಂದ್ರಯಾನ -3 ಅನ್ನು ಹೇಗೆ ಯಶಸ್ವಿಗೊಳಿಸಿದರು ಎಂಬುದನ್ನು ಇಡೀ ಜಗತ್ತು ನೋಡಿತು.

ಸ್ನೇಹಿತರೇ, ಈಗ ಭಾರತ ತನ್ನ ಬಾಹ್ಯಾಕಾಶ ವಲಯವನ್ನು ಖಾಸಗಿ ವಲಯಕ್ಕೂ ಮುಕ್ತಗೊಳಿಸಿದೆ. ಇಂದು ಅನೇಕ ಯುವಕರು ಸ್ಪೇಸ್ ಸ್ಟಾರ್ಟ್ಅಪ್‌ನಲ್ಲಿ ಹೊಸ ಸಾಧನೆಗೆ ಮುನ್ನುಡಿ ಬರೆಯುತ್ತಿದ್ದಾರೆ. 10 ವರ್ಷಗಳ ಹಿಂದೆ ಈ ಕ್ಷೇತ್ರದಲ್ಲಿ ಕೇವಲ ಒಂದೇ ಒಂದು ಕಂಪನಿ ಇತ್ತು, ಆದರೆ ಇಂದು ದೇಶದಲ್ಲಿ ಮುನ್ನೂರ ಇಪ್ಪತ್ತೈದಕ್ಕೂ ಹೆಚ್ಚು ಸ್ಪೇಸ್ ಸ್ಟಾರ್ಟ್ಅಪ್‌ಗಳು ಕಾರ್ಯನಿರ್ವಹಿಸುತ್ತಿವೆ. ಮುಂಬರುವ ದಿನಗಳಲ್ಲಿ ಬಾಹ್ಯಾಕಾಶ ಕ್ಷೇತ್ರ ಹೊಸ ಹೊಸ ಅವಕಾಶಗಳಿಗೆ ತೆರೆದುಕೊಳ್ಳಲಿದೆ. ಭಾರತ ಹೊಸ ಎತ್ತರಕ್ಕೆ ಏರಲಿದೆ. ದೇಶವು ಗಗನಯಾನ, ಸ್ಪಾಡೆಕ್ಸ್ ಮತ್ತು ಚಂದ್ರಯಾನ -4 ನಂತಹ ಹಲವು ಪ್ರಮುಖ ಯೋಜನೆಗಳ ಸಿದ್ಧತೆಯಲ್ಲಿ ತೊಡಗಿದೆ. ನಾವು ವೀನಸ್ ಆರ್ಬಿಟರ್ ಮಿಷನ್ ಮತ್ತು ಮಾರ್ಸ್ ಲ್ಯಾಂಡರ್ ಮಿಷನ್‌ನಲ್ಲೂ ಕೆಲಸ ಮಾಡುತ್ತಿದ್ದೇವೆ. ನಮ್ಮ ಬಾಹ್ಯಾಕಾಶ ವಿಜ್ಞಾನಿಗಳು ತಮ್ಮ ನಾವೀನ್ಯತೆಗಳಿಂದ ದೇಶವಾಸಿಗಳು ಮತ್ತಷ್ಟು ಹೆಮ್ಮೆಪಡುವಂತೆ ಮಾಡಲಿದ್ದಾರೆ.

ಸ್ನೇಹಿತರೇ, ಕಳೆದ ತಿಂಗಳು ಮ್ಯಾನ್ಮಾರ್‌ನಲ್ಲಿ ಸಂಭವಿಸಿದ ಭೂಕಂಪದ ಭಯಾನಕ ಚಿತ್ರಗಳನ್ನು ನೀವು ನೋಡಿರಬಹುದು. ಭೂಕಂಪದಿಂದಾಗಿ ಅಲ್ಲಿ ಭಾರಿ ವಿನಾಶ ಉಂಟಾಯಿತು; ಅವಶೇಷಗಳಲ್ಲಿ ಸಿಲುಕಿದ್ದ ಜನರಿಗೆ ಪ್ರತಿ ಉಸಿರು, ಪ್ರತಿ ಕ್ಷಣವೂ ಅಮೂಲ್ಯವಾಗಿತ್ತು. ಅದಕ್ಕಾಗಿಯೇ ಭಾರತವು ಮ್ಯಾನ್ಮಾರ್‌ನಲ್ಲಿರುವ ನಮ್ಮ ಸಹೋದರ ಸಹೋದರಿಯರಿಗಾಗಿ ಆಪರೇಷನ್ ಬ್ರಹ್ಮವನ್ನು ತಕ್ಷಣವೇ ಪ್ರಾರಂಭಿಸಿತು. ವಾಯುಪಡೆಯ ವಿಮಾನಗಳಿಂದ ಹಿಡಿದು ನೌಕಾಪಡೆಯ ಹಡಗುಗಳವರೆಗೆ ಎಲ್ಲವನ್ನೂ ಮ್ಯಾನ್ಮಾರ್‌ಗೆ ಸಹಾಯ ಮಾಡಲು ಕಳುಹಿಸಲಾಯಿತು. ಅಲ್ಲಿ ಭಾರತೀಯ ತಂಡವು ಒಂದು ಫೀಲ್ಡ್ ಹಾಸ್ಪಿಟಲ್ ಸಿದ್ಧಪಡಿಸಿತು. ಪ್ರಮುಖ ಕಟ್ಟಡಗಳು ಮತ್ತು ಮೂಲಸೌಕರ್ಯಗಳಿಗೆ ಆಗಿರುವ ಹಾನಿಯ ಮೌಲ್ಯಮಾಪನದಲ್ಲಿ ಎಂಜಿನಿಯರ್‌ಗಳ ತಂಡವು ಸಹಾಯ ಮಾಡಿತು. ಭಾರತೀಯ ತಂಡವು ಅಲ್ಲಿಗೆ ಕಂಬಳಿಗಳು, ಡೇರೆಗಳು, ಹಾಸಿಗೆ, ಔಷಧಿಗಳು, ಆಹಾರ ಪದಾರ್ಥಗಳು ಮತ್ತು ಇತರ ಅನೇಕ ವಸ್ತುಗಳನ್ನು ಪೂರೈಸಿತು. ಈ ಸಮಯದಲ್ಲಿ, ಭಾರತೀಯ ತಂಡಕ್ಕೆ ಅಲ್ಲಿನ ಜನರಿಂದ ಸಾಕಷ್ಟು ಪ್ರಶಂಸೆ ಲಭಿಸಿತು.

ಸ್ನೇಹಿತರೇ, ಈ ಬಿಕ್ಕಟ್ಟಿನಲ್ಲಿ, ಧೈರ್ಯ, ತಾಳ್ಮೆ ಮತ್ತು ಬುದ್ಧಿವಂತಿಕೆಯ ಅನೇಕ ಹೃದಯಸ್ಪರ್ಶಿ ಉದಾಹರಣೆಗಳು ಬೆಳಕಿಗೆ ಬಂದವು. 18 ಗಂಟೆಗಳ ಕಾಲ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 70 ವರ್ಷಕ್ಕಿಂತ ಮೇಲ್ಪಟ್ಟ ವೃದ್ಧ ಮಹಿಳೆಯನ್ನು ಭಾರತೀಯ ತಂಡ ರಕ್ಷಿಸಿತು. ಈಗ ಟಿವಿಯಲ್ಲಿ 'ಮನದ ಮಾತು' ನೋಡುತ್ತಿರುವ ವೀಕ್ಷಕರು ಆ ವೃದ್ಧ ಮಹಿಳೆಯ ಮುಖವನ್ನೂ ನೋಡುತ್ತಿರಬೇಕು. ಭಾರತದ ತಂಡವು ಅವರ ಆಮ್ಲಜನಕದ ಮಟ್ಟವನ್ನು ಸ್ಥಿರಗೊಳಿಸುವುದರಿಂದ ಹಿಡಿದು ಫ್ರಾಕ್ಚರ್ ಚಿಕಿತ್ಸೆ ಒದಗಿಸುವವರೆಗೆ ಸಾಧ್ಯವಿರುವ ಎಲ್ಲ ಚಿಕಿತ್ಸೆಯನ್ನು ಒದಗಿಸಿತು. ಈ ವೃದ್ಧ ಮಹಿಳೆ ಆಸ್ಪತ್ರೆಯಿಂದ ಬಿಡುಗಡೆಯಾದಾಗ, ಅವರು ನಮ್ಮ ತಂಡಕ್ಕೆ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಭಾರತೀಯ ರಕ್ಷಣಾ ತಂಡದಿಂದಾಗಿ ತನಗೆ ಹೊಸ ಜೀವನ ಲಭಿಸಿತು ಎಂದು ಅವರು ಹೇಳಿದರು. ಈ ತಂಡದ ಸಹಾಯದಿಂದಲೇ ಬಹಳಷ್ಟು ಜನರು ತಮ್ಮ ಸ್ನೇಹಿತರು ಮತ್ತು ಸಂಬಂಧಿಕರನ್ನು ಹುಡುಕಲು ಸಾಧ್ಯವಾಯಿತು ಎಂದು ನಮ್ಮ ತಂಡಕ್ಕೆ ಹೇಳಿದರು.

ಸ್ನೇಹಿತರೇ, ಭೂಕಂಪದ ನಂತರ, ಮ್ಯಾನ್ಮಾರ್‌ನ ಮಾಂಡಲೆಯ ಒಂದು  ಬೌದ್ಧ ವಿಹಾರದಲ್ಲಿ ಅನೇಕ ಜನರು ಸಿಲುಕಿಕೊಂಡಿರುವ ಅನುಮಾನವಿತ್ತು. ನಮ್ಮ ಸ್ನೇಹಿತರು ಇಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಂಡರು, ಇದರಿಂದಾಗಿ ಅವರಿಗೆ ಬೌದ್ಧ ಸನ್ಯಾಸಿಗಳಿಂದ ಸಾಕಷ್ಟು ಆಶೀರ್ವಾದ ಲಭಿಸಿತು. ಆಪರೇಷನ್ ಬ್ರಹ್ಮದಲ್ಲಿ ಭಾಗವಹಿಸಿದ ಪ್ರತಿಯೊಬ್ಬರ ಬಗ್ಗೆ ನಮಗೆ ತುಂಬಾ ಹೆಮ್ಮೆ ಇದೆ. ನಮಗೆ ನಮ್ಮದೇ ಆದ ಸಂಪ್ರದಾಯವಿದೆ, ನಮ್ಮದೇ ಆದ ಮೌಲ್ಯಗಳಿವೆ, 'ವಸುಧೈವ ಕುಟುಂಬಕಂ' ಅಂದರೆ ಇಡೀ ಜಗತ್ತೇ ಒಂದು ಕುಟುಂಬ ಎಂಬ ಭಾವನೆ ನಮ್ಮಲ್ಲಿದೆ. ಬಿಕ್ಕಟ್ಟಿನ ಸಮಯದಲ್ಲಿ ವಿಶ್ವ ಸ್ನೇಹಿತನಾಗಿ ಭಾರತದ ಸಿದ್ಧತೆ ಮತ್ತು ಮಾನವೀಯತೆಗೆ ಭಾರತದ ಬದ್ಧತೆ ನಮ್ಮ ಹೆಗ್ಗುರುತಾಗಿದೆ.

ಸ್ನೇಹಿತರೇ, ಆಫ್ರಿಕಾದ ಇಥಿಯೋಪಿಯಾದಲ್ಲಿ ಭಾರತೀಯ ವಲಸಿಗರ ಒಂದು ನವೀನ ಪ್ರಯತ್ನದ ಬಗ್ಗೆ ನನಗೆ ತಿಳಿದುಬಂದಿದೆ. ಇಥಿಯೋಪಿಯಾದಲ್ಲಿ ವಾಸಿಸುವ ಭಾರತೀಯರು ಜನ್ಮತಃ ಹೃದ್ರೋಗದಿಂದ ಬಳಲುತ್ತಿರುವ ಮಕ್ಕಳನ್ನು ಚಿಕಿತ್ಸೆಗಾಗಿ ಭಾರತಕ್ಕೆ ಕಳುಹಿಸಲು ಮುಂದಾಗಿದ್ದಾರೆ. ಅಂತಹ ಅನೇಕ ಮಕ್ಕಳಿಗೆ ಭಾರತೀಯ ಕುಟುಂಬಗಳು ಆರ್ಥಿಕ ಸಹಾಯವನ್ನು ನೀಡುತ್ತಿವೆ. ಒಂದು ವೇಳೆ ಮಗುವಿನ ಕುಟುಂಬವು ಹಣದ ಕೊರತೆಯಿಂದಾಗಿ ಭಾರತಕ್ಕೆ ಬರಲು ಸಾಧ್ಯವಾಗದಿದ್ದರೆ, ನಮ್ಮ ಭಾರತೀಯ ಸಹೋದರ ಸಹೋದರಿಯರು ಅದಕ್ಕೆ ವ್ಯವಸ್ಥೆ ಮಾಡುತ್ತಿದ್ದಾರೆ. ಇಥಿಯೋಪಿಯಾದಲ್ಲಿ ಗಂಭೀರ ಕಾಯಿಲೆಯಿಂದ ಬಳಲುತ್ತಿರುವ ಪ್ರತಿಯೊಂದು ನಿರ್ಗತಿಕ ಮಗುವಿಗೂ ಉತ್ತಮ ಚಿಕಿತ್ಸೆ ಸಿಗುವುದನ್ನು ಖಚಿತಪಡಿಸಿಕೊಳ್ಳುವುದು ಈ ಪ್ರಯತ್ನದ ಉದ್ದೇಶವಾಗಿದೆ. ಭಾರತೀಯ ವಲಸಿಗರ ಈ ಉದಾತ್ತ ಕಾರ್ಯವು ಇಥಿಯೋಪಿಯಾದಲ್ಲಿ ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗುತ್ತಿದೆ. ಭಾರತದಲ್ಲಿ ವೈದ್ಯಕೀಯ ಸೌಲಭ್ಯಗಳು ನಿರಂತರವಾಗಿ ಸುಧಾರಿಸುತ್ತಿವೆ ಎಂದು ನಿಮಗೆ ತಿಳಿದಿದೆ. ಇತರ ದೇಶಗಳ ನಾಗರಿಕರು ಸಹ ಇದರ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ.

ಸ್ನೇಹಿತರೇ, ಕೆಲವೇ ದಿನಗಳ ಹಿಂದೆ, ಭಾರತವು ಅಫ್ಘಾನಿಸ್ತಾನದ ಜನರಿಗಾಗಿ  ದೊಡ್ಡ ಪ್ರಮಾಣದಲ್ಲಿ ಲಸಿಕೆಯನ್ನು ಕಳುಹಿಸಿದೆ. ಈ ಲಸಿಕೆಯು Rabies, Tetanus, Hepatitis B ಮತ್ತು Influenza ದಂತಹ ಅಪಾಯಕಾರಿ ಕಾಯಿಲೆಗಳನ್ನು ತಡೆಗಟ್ಟುವಲ್ಲಿ ಉಪಯುಕ್ತವಾಗಿರುತ್ತದೆ. ಈ ವಾರ, ನೇಪಾಳದ ಕೋರಿಕೆಯ ಮೇರೆಗೆ, ಭಾರತವು ನೇಪಾಳಕ್ಕೆ ದೊಡ್ಡ ಪ್ರಮಾಣದಲ್ಲಿ ಔಷಧಗಳು ಮತ್ತು ಲಸಿಕೆಗಳನ್ನು ಸಾರಬರಾಜು ಮಾಡಿದೆ. ಇದು ಥಲಸ್ಸೆಮಿಯಾ ಮತ್ತು sickle cell ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ಉತ್ತಮ ಚಿಕಿತ್ಸೆಯನ್ನು ಖಾತರಿಪಡಿಸಲಿದೆ. ಮಾನವ ಸೇವೆಯ ಪ್ರಸಂಗ  ಬಂದಾಗಲೆಲ್ಲಾ, ಭಾರತ ಎಂದಿಗೂ ಮುಂಚೂಣಿಯಲ್ಲಿರುತ್ತದೆ ಮತ್ತು ಭವಿಷ್ಯದಲ್ಲಿಯೂ ಅಂತಹ ಪ್ರತಿಯೊಂದು ಅಗತ್ಯದಲ್ಲೂ ಮುಂಚೂಣಿಯಲ್ಲಿರಲಿದೆ

ಸ್ನೇಹಿತರೇ, ಈಗ ನಾವು ವಿಪತ್ತು ನಿರ್ವಹಣೆ ಬಗ್ಗೆ ಮಾತನಾಡುತ್ತಿದ್ದೆವು. ಯಾವುದೇ ನೈಸರ್ಗಿಕ ವಿಪತ್ತುಗಳನ್ನು ಎದುರಿಸಲು ನಿಮಗೆ ಮುಖ್ಯವಾಗಿ ಅಗತ್ಯವಿರುವುದು - ನಿಮ್ಮ ಜಾಗರೂಕತೆ.  ಈ ಜಾಗರೂಕತೆಯಲ್ಲಿ ನಿಮ್ಮ ಮೊಬೈಲ್ ನಲ್ಲಿರುವ ಒಂದು ವಿಶೇಷ APP ನಿಂದ ನಿಮಗೆ ಸಹಾಯ ದೊರೆಯಬಹುದು. ಈ APP ನಿಮಗೆ ಯಾವುದೇ ನೈಸರ್ಗಿಕ ವಿಕೋಪದಲ್ಲಿ ಸಿಲುಕಿಬೀಳದಂತೆ ರಕ್ಷಿಸಬಹುದಾಗಿದ್ದು, ಇದರ ಹೆಸರು ಕೂಡಾ ‘ಸಚೇತ್’ ಎಂಬುದಾಗಿದೆ. ‘ಸಚೇತ್ APP’, ಅನ್ನು ಭಾರತದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ - National Disaster Management Authority (NDMA) ತಯಾರಿಸಿದೆ. ಪ್ರವಾಹ, ಚಂಡಮಾರುತ, ಭೂಕುಸಿತ, ಸುನಾಮಿ, ಕಾಡ್ಗಿಚ್ಚು, ಹಿಮ-ಪಾತ, ಚಂಡಮಾರುತ, ಬಿರುಗಾಳಿ ಅಥವಾ ಸಿಡಿಲು ಬೀಳುವಂತಹ ಆಪತ್ತುಗಳ ಸಂದರ್ಭದಲ್ಲಿ ‘ಸಚೇತ್ APP’ ನಿಮಗೆ ಎಲ್ಲಾ ವಿಧದಲ್ಲೂ ಮಾಹಿತಿ ತಲುಪಿಸುವ ಮತ್ತು ನಿಮ್ಮನ್ನು ಸುರಕ್ಷಿತವಾಗಿ ಇರಿಸುವ ಪ್ರಯತ್ನ ಮಾಡುತ್ತದೆ. ವಿಶೇಷವೆಂದರೆ 'ಸಚೇತ್ APP' ಪ್ರಾದೇಶಿಕ ಭಾಷೆಗಳಲ್ಲಿಯೂ ಸಹ ಸಾಕಷ್ಟು ಮಾಹಿತಿಯನ್ನು ಒದಗಿಸುತ್ತದೆ. ನೀವು ಈ ಆನ್ವಯಿಕದ ಲಾಭ ಪಡೆದುಕೊಳ್ಳಿ ಮತ್ತು ನಿಮ್ಮ ಅನುಭವಗಳನ್ನು ನಮ್ಮೊಂದಿಗೆ ಹಂಚಿಕೊಳ್ಳಿ. 

ನನ್ನ ಪ್ರೀತಿಯ ದೇಶವಾಸಿಗಳೇ,  ಇಂದು ಇಡೀ ಪ್ರಪಂಚವೇ ಭಾರತದ ಪ್ರತಿಭೆಯನ್ನು ಪ್ರಶಂಸಿಸುತ್ತಿರುವುದನ್ನು ನೋಡುತ್ತಿದ್ದೇವೆ. ಭಾರತದ ಯುವಜನತೆ ಭಾರತದ ಬಗ್ಗೆ ವಿಶ್ವದ ದೃಷ್ಟಿಕೋನವನ್ನು ಬದಲಾಯಿಸಿದ್ದಾರೆ ಮತ್ತು ಯಾವುದೇ ದೇಶದ ಯುವಜನತೆಯ ಆಸಕ್ತಿ ಎನ್ನುವುದು ಆ ದೇಶದ ಭವಿಷ್ಯ ಹೇಗಿರುತ್ತದೆ ಎಂಬುದನ್ನು ನಿರ್ಧರಿಸುತ್ತದೆ. ಇಂದು ಭಾರತದ ಯುವಜನತೆ ವಿಜ್ಞಾನ, ತಂತ್ರಜ್ಞಾನ ಮತ್ತು ಆವಿಷ್ಕಾರದ ಹಾದಿಯಲ್ಲಿ ಮುಂದೆ ಸಾಗುತ್ತಿದ್ದಾರೆ.  ಈ ಮೊದಲು ಹಿಂದುಳಿದಿರುವಿಕೆ ಮತ್ತು ಇತರೆ ಕಾರಣಗಳಿಗಾಗಿ ಹೆಸರಾಗಿದ್ದ ಪ್ರದೇಶಗಳಲ್ಲಿ ಕೂಡಾ ಯುವಜನತೆ ನಮಗೆ ಹೊಸ ಆತ್ಮ ವಿಶ್ವಾಸ ತುಂಬುವ ಉದಾಹರಣೆಗಳನ್ನು ಪ್ರಸ್ತುತಪಡಿಸಿದ್ದಾರೆ. ಛತ್ತೀಸ್ ಗಢದ ದಂತೇವಾಡಾದ ವಿಜ್ಞಾನ ಕೇಂದ್ರವು ಇತ್ತೀಚಿನ ದಿನಗಳಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ. ಕೆಲ ಕಾಲದ ಹಿಂದೆ, ದಂತೇವಾಡಾದ ಹೆಸರು ಕೇವಲ ಹಿಂಸಾಚಾರ ಮತ್ತು ಅಶಾಂತಿಯ ಪರಿಸ್ಥಿತಿಗಾಗಿ ಕೇಳಿಬರುತ್ತಿತ್ತು, ಆದರೆ ಈಗ ಅಲ್ಲಿ, ಒಂದು ವಿಜ್ಞಾನ ಕೇಂದ್ರ, ಮಕ್ಕಳು ಮತ್ತು ಅವರ ತಾಯ್ತಂದೆಯರಿಗೆ ಭರವಸೆಯ ಹೊಸ ಕಿರಣವಾಗಿ ಮೂಡಿ ಬಂದಿದೆ. ಈ ವಿಜ್ಞಾನ ಕೇಂದ್ರಕ್ಕೆ ಹೋಗುವುದೆಂದರೆ ಮಕ್ಕಳಿಗೆ ಬಹಳ ಇಷ್ಟವಾಗುತ್ತಿದೆ. ಈಗ ಅವರು ಹೊಸ-ಹೊಸ ಯಂತ್ರಗಳನ್ನು ತಯಾರಿಸುವುದರಿಂದ ಹಿಡಿದು, ತಂತ್ರಜ್ಞಾನವನ್ನು ಉಪಯೋಗಿಸಿ, ಹೊಸ ಉತ್ಪನ್ನಗಳನ್ನು ತಯಾರಿಸಲು ಕೂಡಾ ಕಲಿಯುತ್ತಿದ್ದಾರೆ. ಅವರಿಗೆ 3D printers ಮತ್ತು robotic ಕಾರುಗಳೊಂದಿಗೆ  ಇತರೆ ಆವಿಷ್ಕಾರಕ ವಸ್ತುಗಳ ಬಗ್ಗೆ ಅರಿಯುವ ಅವಕಾಶ ಕೂಡಾ ದೊರೆಯುತ್ತಿದೆ. ಈಗ ಕೆಲವೇ ದಿನಗಳ ಹಿಂದೆ ನಾನು ಗುಜರಾತ್ ನ ಸೈನ್ಸ್ ಸಿಟಿಯಲ್ಲಿ ಕೂಡಾ ಸೈನ್ಸ್ ಗ್ಯಾಲರಿಗಳನ್ನು ಉದ್ಘಾಟಿಸಿದೆ. ಆಧುನಿಕ ವಿಜ್ಞಾನದ ಸಾಮರ್ಥ್ಯವೇನು, ವಿಜ್ಞಾನ ನಮಗೆ ಏನೆಲ್ಲಾ ಮಾಡಲು ಸಾಧ್ಯ ಎಂಬುದರ ಕುರಿತ ಒಂದು ನೋಟವನ್ನು ಈ ಗ್ಯಾಲರಿಗಳು ನಮಗೆ ನೀಡುತ್ತವೆ. ಈ ಗ್ಯಾಲರಿಗಳೆಂದರೆ ಮಕ್ಕಳಿಗೆ ಬಹಳ ಉತ್ಸಾಹ ಎಂಬ ಮಾಹಿತಿ ನನಗೆ ದೊರೆತಿದೆ. ವಿಜ್ಞಾನ ಮತ್ತು ಆವಿಷ್ಕಾರದ ಬಗ್ಗೆ ಹೆಚ್ಚಾಗುತ್ತಿರುವ ಈ ಆಕರ್ಷಣೆ, ಖಂಡಿತವಾಗಿಯೂ ಭಾರತವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತದೆ.

ನನ್ನ ಪ್ರೀತಿಯ ದೇಶವಾಸಿಗಳೇ, ನಮ್ಮ ದೇಶದ ಅತಿ ದೊಡ್ಡ ಬಲವೆಂದರೆ ಅದು ನಮ್ಮ 140 ಕೋಟಿ ನಾಗರಿಕರು, ಅವರ ಸಾಮರ್ಥ್ಯ, ಅವರ ಇಚ್ಛಾ ಶಕ್ತಿ.  ಕೋಟ್ಯಾಂತರ ಜನರು ಯಾವುದಾದರೊಂದು ಅಭಿಯಾನದಲ್ಲಿ ಒಟ್ಟಾಗಿ ಸೇರಿದಾಗ, ಅದರ ಪರಿಣಾಮ ಕೂಡಾ ಬಹಳ ದೊಡ್ಡದಾಗಿರುತ್ತದೆ. ಇದರ ಒಂದು ಉದಾಹರಣೆಯೆಂದರೆ ‘ತಾಯಿಯ ಹೆಸರಿನಲ್ಲಿ ಒಂದು ಸಸಿ’ – ಈ ಅಭಿಯಾನ ನಮಗೆ ಜನ್ಮ ನೀಡಿದ ತಾಯಿಯ ಹೆಸರಿನಲ್ಲಿ ಹಾಗೆಯೇ ನಮ್ಮನ್ನು ತನ್ನ ಮಡಿಲಿನಲ್ಲಿ ಇರಿಸಿಕೊಂಡಿರುವ ನಮ್ಮ ಭೂಮಿ ತಾಯಿಗಾಗಿ. ಸ್ನೇಹಿತರೇ, ಜೂನ್ ತಿಂಗಳ 5 ರಂದು ‘ವಿಶ್ವ ಪರಿಸರ ದಿನ’ ಈ ವರ್ಷ ಈ ದಿನದಂದು ನಮ್ಮ ಅಭಿಯಾನಕ್ಕೆ ಒಂದು ವರ್ಷ ಪೂರ್ಣವಾಗಲಿದೆ. ಈ ಒಂದು ವರ್ಷದಲ್ಲಿ ಈ ಅಭಿಯಾನದ ಅಡಿಯಲ್ಲಿ ದೇಶಾದ್ಯಂತ ತಾಯಿಯ ಹೆಸರಿನಲ್ಲಿ 140 ಕೋಟಿಗಿಂತಲೂ ಅಧಿಕ ಸಸಿಗಳನ್ನು ನೆಡಲಾಗಿದೆ. ಭಾರತದ ಈ ಉಪಕ್ರಮವನ್ನು ನೋಡಿ, ವಿದೇಶಗಳಲ್ಲಿ ಕೂಡಾ ಜನರು ತಮ್ಮ ತಾಯಂದಿರ ಹೆಸರಿನಲ್ಲಿ ಗಿಡಗಳನ್ನು ನೆಟ್ಟಿದ್ದಾರೆ. ನೀವು ಕೂಡ ಈ ಅಭಿಯಾನದ ಭಾಗವಾಗಬೇಕು, ಇದರಿಂದ ಒಂದು ವರ್ಷ ಪೂರ್ಣಗೊಂಡಾಗ,  ನಿಮ್ಮ ಭಾಗವಹಿಸುವಿಕೆಯ ಬಗ್ಗೆ ನೀವು ಹೆಮ್ಮೆಪಡಬಹುದು.

ಸ್ನೇಹಿತರೇ, ಮರಗಳಿಂದ ತಂಪು ದೊರೆಯುತ್ತದೆ, ಮರಗಳ ನೆರಳಿನಲ್ಲಿ ಬಿಸಿಲಿನಿಂದ ಉಪಶಮನ ದೊರೆಯುತ್ತದೆ ಎಂಬುದು ನಮಗೆಲ್ಲಾ ತಿಳಿದೇ ಇದೆ. ಆದರೆ ಇತ್ತೀಚೆಗೆ ಇದಕ್ಕೆ ಸಂಬಂಧಿಸಿದ ಇನ್ನೊಂದು ಸುದ್ದಿಯನ್ನು ನಾನು ನೋಡಿದೆ, ಅದು ನನ್ನ ಗಮನ ಸೆಳೆಯಿತು. ಕಳೆದ ಕೆಲವು ವರ್ಷಗಳಲ್ಲಿ ಗುಜರಾತ್‌ ನ ಅಹಮದಾಬಾದ್ ನಗರದಲ್ಲಿ 70 ಲಕ್ಷಕ್ಕೂ ಅಧಿಕ ಮರಗಳನ್ನು ನೆಡಲಾಗಿದೆ. ಈ ಮರಗಳು ಅಹಮದಾಬಾದ್‌ ನಲ್ಲಿ ಹಸಿರು ಪ್ರದೇಶವನ್ನು ಗಣನೀಯವಾಗಿ ಹೆಚ್ಚಿಸಿವೆ. ಇದರೊಂದಿಗೆ,  ಸಬರಮತಿ ನದಿಗೆ ಅಡ್ಡಲಾಗಿ ದಂಡೆಯ ನಿರ್ಮಾಣ ಮತ್ತು ಕಂಕರಿಯಾ ಸರೋವರದಂತಹ ಕೆಲವು ಸರೋವರಗಳ ಪುನರ್ನಿರ್ಮಾಣದಿಂದಾಗಿ ಇಲ್ಲಿ ಜಲಮೂಲಗಳ ಸಂಖ್ಯೆಯೂ ಹೆಚ್ಚಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ಅಹಮದಾಬಾದ್ ನಗರ ಜಾಗತಿಕ ತಾಪಮಾನ ಏರಿಕೆಯ ವಿರುದ್ಧ ಹೋರಾಡುವ ಪ್ರಮುಖ ನಗರಗಳಲ್ಲಿ ಒಂದಾಗಿದೆ ಎಂಬುದನ್ನು ಸುದ್ದಿ ವರದಿಗಳು ಹೇಳುತ್ತವೆ. ಅಲ್ಲಿನ ಜನರು ಕೂಡ ಈ ಬದಲಾವಣೆಯನ್ನು,  ವಾತಾವರಣದಲ್ಲಿನ ಈ ತಂಪನ್ನು ಅನುಭವಿಸುತ್ತಿದ್ದಾರೆ. ಅಹಮದಾಬಾದ್‌ ನಲ್ಲಿ ನೆಡಲಾದ ಮರಗಳು ಅಲ್ಲಿ ಹೊಸ ಸಮೃದ್ಧಿಗೆ ಕಾರಣವಾಗುತ್ತಿವೆ. ಭೂಮಿತಾಯಿಯ ಆರೋಗ್ಯವನ್ನು ಸರಿಯಾಗಿ ಇರಿಸಬೇಕೆಂದರೆ, ಹವಾಮಾನ ಬದಲಾವಣೆಯ ಸವಾಲುಗಳನ್ನು ಎದುರಿಸಲು ಮತ್ತು ನಿಮ್ಮ ಮಕ್ಕಳ ಭವಿಷ್ಯವನ್ನು ಸುರಕ್ಷಿತವಾಗಿಸಲು, ‘ತಾಯಿಯ ಹೆಸರಿನಲ್ಲಿ ಒಂದು ಸಸಿ‘ ಖಂಡಿತವಾಗಿಯೂ ನೆಡಿ ಎಂದು ನಾನು ನಿಮ್ಮಲ್ಲಿ ಮತ್ತೊಮ್ಮೆ ಮನವಿ ಮಾಡುತ್ತೇನೆ.

ಸ್ನೇಹಿತರೇ, ‘ಮನಸ್ಸಿದ್ದರೆ ಮಾರ್ಗ’ ಎಂಬ ಒಂದು ಹಳೆಯ ಗಾದೆ ಮಾತೊಂದಿದೆ. ನಾವು ಹೊಸದೇನಾದರೂ ಮಾಡಬೇಕೆಂದು ನಿರ್ಧಾರ ಮಾಡಿದರೆ, ಅದರ ಗುರಿ ಖಂಡಿತವಾಗಿಯೂ ತಲುಪಿಯೇ ತೀರುತ್ತೇವೆ. ಬೆಟ್ಟಗುಡ್ಡಗಳಲ್ಲಿ ಬೆಳೆಯುವ ಸೇಬು ಹಣ್ಣನ್ನು ನೀವೆಲ್ಲರೂ ಸಾಕಷ್ಟು ತಿಂದೇ ಇರುತ್ತೀರಿ. ಆದರೆ, ನೀವು ಕರ್ನಾಟಕದ ಸೇಬಿನ ರುಚಿ ಆಸ್ವಾದಿಸಿದ್ದೀರಾ ಎಂದು ಕೇಳಿದರೆ? ನೀವು ಆಶ್ಚರ್ಯಚಕಿತರಾಗುತ್ತೀರಿ. ಸಾಧಾರಣವಾಗಿ ಸೇಬಿನ ಕೃಷಿಯನ್ನು ಬೆಟ್ಟ ಗುಡ್ಡಗಳ ಮೇಲೆ ಮಾಡಲಾಗುತ್ತದೆ ಎಂದು ನಾವು ತಿಳಿದಿದ್ದೇವೆ. ಆದರೆ ಕರ್ನಾಟಕದ ಬಾಗಲಕೋಟೆಯ ನಿವಾಸಿ ಶ್ರೀ ಶೈಲ್ ತೆಲೀ ಅವರು ಬಯಲು ಪ್ರದೇಶದಲ್ಲಿ ಸೇಬು ಬೆಳೆದಿದ್ದಾರೆ. ಅವರ ಕುಲಾಲೀ ಗ್ರಾಮದಲ್ಲಿ 35 ಡಿಗ್ರಿಗಿಂತ ಅಧಿಕ ತಾಪಮಾನವಿರುತ್ತದೆ ಆದರೂ ಸೇಬಿನ ಮರಗಳು ಫಲ ನೀಡಲಾರಂಭಿಸಿವೆ. ವಾಸ್ತವದಲ್ಲಿ ಶ್ರೀ ಶೈಲ್ ತೇಲಿ ಅವರಿಗೆ ಕೃಷಿಯ ಬಗ್ಗೆ ಒಲವು ಇತ್ತು, ಆದ್ದರಿಂದ ಅವರು ಸೇಬು ಕೃಷಿಯನ್ನೂ ಪ್ರಯತ್ನಿಸಿದರು ಮತ್ತು ಅದರಲ್ಲಿ ಯಶಸ್ಸನ್ನೂ ಕಂಡರು. ಇಂದು ಅವರು ನೆಟ್ಟ ಸೇಬು ಮರಗಳಲ್ಲಿ ಹೆಚ್ಚಿನ ಸಂಖ್ಯೆಯ ಸೇಬುಗಳು ಬೆಳೆಯುತ್ತಿವೆ ಮತ್ತು ಅವುಗಳನ್ನು ಮಾರಾಟ ಮಾಡುವ ಮೂಲಕ ಅವರು ಉತ್ತಮ ಆದಾಯವನ್ನು ಗಳಿಸುತ್ತಿದ್ದಾರೆ.

ಸ್ನೇಹಿತರೇ, ಸೇಬಿನ ವಿಷಯ ಮಾತನಾಡುತ್ತಿರುವಾಗ, ನಮ್ಮ ಕಿನ್ನೌರಿ ಸೇಬಿನ ಹೆಸರನ್ನು ನೀವು ಖಂಡಿತವಾಗಿಯೇ ಕೇಳಿಯೇ ಇರುತ್ತೀರಿ. ಸೇಬುಗಳಿಗೆ ಹೆಸರಾಗಿರುವ ಕಿನ್ನೌರ್ ನಲ್ಲಿ ಕೇಸರಿಯ ಉತ್ಪಾದನೆ ಆರಂಭವಾಗಿದೆ. ಸಾಧಾರಣವಾಗಿ ಹಿಮಾಚಲ ಪ್ರದೇಶಧಲ್ಲಿ ಕೇಸರಿಯ ಕೃಷಿ ಕಡಿಮೆಯೇ ಇರುತ್ತದೆ, ಆದರೆ ಈಗ ಕಿನ್ನೌರ್ ನ ಅತಿಸುಂದರ ಸಂಗಲಾ ಕಣಿವೆಯಲ್ಲಿ ಕೂಡಾ ಕೇಸರಿಯ ಕೃಷಿ ಆರಂಭವಾಗಿದೆ. ಇಂತಹದ್ದೇ ಒಂದು ಉದಾಹರಣೆ ಕೇರಳದ ವೈನಾಡ್ ನಲ್ಲಿ ಕಂಡುಬಂದಿದೆ. ಇಲ್ಲಿ ಕೂಡಾ ಕೇಸರಿ ಕೃಷಿಯಲ್ಲಿ ಯಶಸ್ಸು ದೊರೆತಿದೆ. ವೈನಾಡಿನಲ್ಲಿ ಈ  ಕೇಸರಿ ಕೃಷಿಯು ಯಾವುದೇ ಹೊಲ ಅಥವಾ ಮಣ್ಣಿನಲ್ಲಿ ಅಲ್ಲದೇ Aeroponics ತಂತ್ರ ಉಪಯೋಗಿಸಿ ಬೆಳೆಯಲಾಗುತ್ತಿದೆ. ಇಂತಹದ್ದೇ ಅಚ್ಚರಿಯ ಸಂಗತಿ ಲಿಚಿ ಇಳುವರಿಯಲ್ಲಿ ಕೂಡಾ ನಡೆದಿದೆ. ಬಿಹಾರ, ಪಶ್ಚಿಮ ಬಂಗಾಳ ಅಥವಾ ಜಾರ್ಖಂಡ್ ನಲ್ಲಿ ಲಿಚಿ ಬೆಳೆಯುತ್ತಾರೆಂದು ನಾವು ಕೇಳಿದ್ದೇವೆ. ಆದರೆ ಈಗ ದಕ್ಷಿಣ ಭಾರತ ಹಾಗೂ ರಾಜಸ್ತಾನದಲ್ಲಿ ಕೂಡಾ ಲಿಚಿ ಬೆಳೆ ಬೆಳೆಯಲಾಗುತ್ತಿದೆ. ತಮಿಳುನಾಡಿನ ಥಿರು ವೀರಾ ಅರಸು ಅವರು ಕಾಫಿ ಕೃಷಿ ಮಾಡುತ್ತಾರೆ. ಕೊಡೈಕೆನಾಲ್ ನಲ್ಲಿ ಅವರು ಲಿಚಿ ಸಸಿಗಳನ್ನು ನೆಟ್ಟರು ಮತ್ತು ಅವರ 7 ವರ್ಷಗಳ ಪರಿಶ್ರಮದ ನಂತರ ಈಗ ಆ ಮರಗಳಲ್ಲಿ ಹಣ್ಣು ಬರಲಾರಂಭಿಸಿದೆ. ಲಿಚಿ ಕೃಷಿಯಲ್ಲಿ ದೊರೆತ ಯಶಸ್ಸು ಸುತ್ತಮುತ್ತಲಿನ ಇತರ ರೈತರಿಗೆ ಕೂಡಾ ಪ್ರೇರೇಪಣೆ ನೀಡಿತು. ರಾಜಾಸ್ತಾನದಲ್ಲಿ ಜಿತೇಂದ್ರ ಸಿಂಗ್ ರಾಣವತ್ ಅವರಿಗೆ ಲಿಚಿ ಕೃಷಿಯಲ್ಲಿ ಯಶಸ್ಸು ದೊರೆತಿದೆ. ಈ ಎಲ್ಲಾ ಉದಾಹರಣೆಗಳು ಬಹಳ ಪ್ರೇರಣಾದಾಯಕವಾಗಿವೆ. ನಾವು ಏನಾದರೂ ಹೊಸದನ್ನು ಮಾಡಬೇಕೆಂದು ಸಂಕಲ್ಪ ಮಾಡಿದರೇ, ಕಷ್ಟಗಳ ಹೊರತಾಗಿಯೂ ಎದೆಗುಂದದೇ ಇದ್ದರೆ, ಖಂಡಿತವಾಗಿಯೂ ಅಸಾಧ್ಯವಾದುದನ್ನು ಸಾಧ್ಯವಾಗಿಸಬಹುದು. 

ನನ್ನ ಪ್ರೀತಿಯ ದೇಶವಾಸಿಗಳೇ, ಇಂದು ಏಪ್ರಿಲ್ ತಿಂಗಳ ಕೊನೆಯ ಭಾನುವಾರವಾಗಿದೆ. ಕೆಲವೇ ದಿನಗಳಲ್ಲಿ ಮೇ ತಿಂಗಳು ಆರಂಭವಾಗಲಿದೆ. ನಾನು ನಿಮ್ಮನ್ನು ಇಂದು ಸುಮಾರು 108 ವರ್ಷಗಳಷ್ಟು ಹಿಂದಿನ ವರ್ಷಕ್ಕೆ ಕರೆದೊಯ್ಯುತ್ತೇನೆ. 1917ಸ ಏಪ್ರಿಲ್ ಮತ್ತು ಮೇ ಇದೇ ಎರಡು ತಿಂಗಳು – ದೇಶದಲ್ಲಿ ಸ್ವಾತಂತ್ರ್ಯದ ವಿಶಿಷ್ಠ ಯುದ್ಧ ಮಾಡಲಾಗುತ್ತಿತ್ತು. ಬ್ರಿಟಿಷರ ಅತ್ಯಾಚಾರ ಮುಗಿಲು ಮುಟ್ಟಿತ್ತು. ಬಡವರು, ವಂಚಿತರು, ಮತ್ತು ರೈತರ ಮೇಲಿನ ಶೋಷಣೆಯು ಅಮಾನವೀಯ ಹಂತವನ್ನು ಕೂಡಾ ಮೀರಿತ್ತು. ಬಿಹಾರದ ಫಲವತ್ತಾದ ಭೂಮಿಯಲ್ಲಿ ಇಂಡಿಗೋ ಬೆಳೆಯುವಂತೆ ಈ ಬ್ರಿಟಿಷರು ರೈತರನ್ನು ಒತ್ತಾಯಿಸುತ್ತಿದ್ದರು. ಇಂಡಿಗೋ ಬೆಳೆಯ ಕೃಷಿಯಿಂದಾಗಿ ರೈತರ ಹೊಲಗದ್ದೆಗಳು ಬಂಜರು ಭೂಮಿಗಳಾಗುತ್ತಿದ್ದವು. ಆದರೆ ಬ್ರಿಟಿಷ್ ಸರ್ಕಾರಕ್ಕೆ ಈ ಕುರಿತು ಯಾವುದೇ ಕಾಳಜಿ ಇರಲಿಲ್ಲ. ಇಂತಹ ಪರಿಸ್ಥಿತಿಯಲ್ಲಿ, 1917 ರಲ್ಲಿ ಗಾಂಧೀಜಿಯವರು ಬಿಹಾರದ ಚಂಪಾರಣ್ ಗೆ ತಲುಪಿದರು. ನಮ್ಮ ಭೂಮಿ ಸಾಯುತ್ತಿದೆ, ತಿನ್ನಲು ಆಹಾರ ಧಾನ್ಯ ದೊರೆಯುತ್ತಿಲ್ಲವೆಂದು ರೈತರು ಗಾಂಧೀಜಿಯವರಿಗೆ ಹೇಳಿದರು. ಲಕ್ಷಾಂತರ ರೈತರ ಈ ನೋವು ಅರಿತ ಗಾಂಧೀಜಿಯವರ ಮನಸ್ಸಿನಲ್ಲಿ ಒಂದು ಸಂಕಲ್ಪ ಮೂಡಿತು. ಅಲ್ಲಿಂದಲೇ ಚಂಪಾರಣ್ ನ ಐತಿಹಾಸಿಕ ಸತ್ಯಾಗ್ರಹ ಆರಂಭವಾಯಿತು. ‘ಚಂಪಾರಣ್ ಸತ್ಯಾಗ್ರಹ’ ಇದು ಬಾಪೂ ಅವರಿಂದ ಭಾರತದಲ್ಲಿ ಆರಂಭವಾದ ಪ್ರಥಮ ದೊಡ್ಡ ಪ್ರಮಾಣದ ಪ್ರಯೋಗವಾಗಿತ್ತು. ಬಾಪೂ ಅವರ ಸತ್ಯಾಗ್ರಹದಿಂದ ಇಡೀ ಬ್ರಿಟಿಷ್ ಸರ್ಕಾರ ನಡುಗಿ ಬಿಟ್ಟಿತು. ಇಂಡಿಗೋ ಕೃಷಿ ಮಾಡಬೇಕೆಂದು ರೈತರನ್ನು ಒತ್ತಾಯಿಸುವ ಕಾನೂನನ್ನು ಸ್ಥಗಿತಗೊಳಿಸಬೇಕಾಗಿ ಬಂದಿತು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೊಸ ವಿಶ್ವಾಸ ತುಂಬಿದಂತಹ ಒಂದು ಗೆಲುವುದು ಇದಾಗಿತ್ತು. ಇದರಲ್ಲಿ ಸ್ವಾತಂತ್ರ್ಯಾನಂತರ ದೇಶದ ಪ್ರಥಮ ರಾಷ್ಟ್ರಪತಿ ಹುದ್ದೆಗೇರಿದ ಬಿಹಾರದ ಮತ್ತೊರ್ವ ಸುಪುತ್ರನ ಕೊಡುಗೆ ಕೂಡಾ ಈ ಸತ್ಯಾಗ್ರಹಕ್ಕೆ ದೊರೆತಿತ್ತು ಎಂಬುದು ನಿಮಗೆಲ್ಲರಿಗೂ ತಿಳಿದೇ ಇದೆ. ಆ ಮಹಾನ್ ವ್ಯಕ್ತಿಯೇ – ಡಾ. ರಾಜೇಂದ್ರ ಪ್ರಸಾದ್. ಅವರು ‘ಚಂಪಾರಣ್ ಸತ್ಯಾಗ್ರಹ’ ಕುರಿತಂತೆ ‘Satyagraha in Champaran’ ಎಂಬ ಪುಸ್ತಕವನ್ನು ಕೂಡಾ ಬರೆದಿದ್ದಾರೆ, ದೇಶದ ಯುನಜನತೆ ಓದಲೇ ಬೇಕಾದ ಪುಸ್ತಕ ಇದಾಗಿದೆ. ಸೋದರ-ಸೋದರಿಯರೇ, ಏಪ್ರಿಲ್ ತಿಂಗಳಿನಲ್ಲಿಯೇ ಸ್ವಾತಂತ್ರ್ಯ ಸಂಗ್ರಾಮದ ಇನ್ನೂ ಅನೇಕ ಅದ್ಭುತ ಅಧ್ಯಾಯಗಳು ಬೆಸೆದುಕೊಂಡಿವೆ. ಏಪ್ರಿಲ್ ತಿಂಗಳ 6 ರಂದು ಗಾಂದೀಜಿಯವರ ದಂಡಿ ಯಾತ್ರೆ ಪೂರ್ಣಗೊಂಡಿತು. ಮಾರ್ಚ್ 12 ರಂದು  ಆರಂಭವಾಗಿ 24 ದಿನಗಳ ಕಾಲ ಮುಂದುವರಿದ ಈ ಯಾತ್ರೆಯು ಬ್ರಿಟಿಷರನ್ನು ಬೆಚ್ಚಿ ಬೀಳಿಸಿತು. ಏಪ್ರಿಲ್ ತಿಂಗಳಿನಲ್ಲಿಯೇ ಜಲಿಯನ್ ವಾಲಾಬಾಗ್ ನರಮೇಧ- ಹತ್ಯಾಕಾಂಡವೂ ನಡೆಯಿತು. ಪಂಜಾಬ್ ನೆಲದಲ್ಲಿ ಈ ರಕ್ತಸಿಕ್ತ ಇತಿಹಾಸದ ಗುರುತು ಇಂದಿಗೂ ಹಾಗೆಯೇ ಉಳಿದಿದೆ.

ಸ್ನೇಹಿತರೇ ಕೆಲವೇ ದಿನಗಳಲ್ಲಿ ಮೇ 10ರಂದು, ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ವಾರ್ಷಿಕೋತ್ಸವ ಕೂಡಾ ಬರಲಿದೆ. ಸ್ವಾತಂತ್ರ್ಯದ ಆ ಮೊದಲ ಯುದ್ಧದಲ್ಲಿ ಹೊತ್ತಿಕೊಂಡ ಕಿಡಿಯು, ಮುಂದೆ ಲಕ್ಷಾಂತರ ಸೈನಿಕರಿಗೆ ಜ್ಯೋತಿಯಾಯಿತು. ಇದೀಗ ಏಪ್ರಿಲ್ 26ರಂದು ನಾವು 1857 ರ ಕ್ರಾಂತಿಯ ಮಹಾನ್ ನಾಯಕ ಬಾಬೂ ವೀರ್ ಕುವರ್ ಸಿಂಹ ಅವರ ಪುಣ್ಯ ತಿಥಿಯನ್ನು ಕೂಡಾ ಆಚರಿಸಿದ್ದೇವೆ. ಬಿಹಾರದ ಮಹಾನ್ ಯೋಧನಿಂದ ಇಡೀ ದೇಶಕ್ಕೆ ಸ್ಫೂರ್ತಿ ದೊರೆಯುತ್ತದೆ. ಇಂತಹ ಲಕ್ಷಾಂತರ ಸ್ವಾತಂತ್ರ್ಯ ಯೋಧರ ಅಮರ ಪ್ರೇರೇಪಣೆಯನ್ನು ನಾವು ಜೀವಂತವಾಗಿ ಇರಿಸಬೇಕು. ನಮಗೆ ಅದರಿಂದ ದೊರೆಯುವ ಶಕ್ತಿಯು ಅಮೃತಕಾಲದ ನಮ್ಮ ಸಂಕಲ್ಪಗಳಿಗೆ ಹೊಸ ಶಕ್ತಿ, ಬಲ ತುಂಬುತ್ತದೆ.

ಸ್ನೇಹಿತರೆ, ‘ಮನದ ಮಾತಿನ’ ಈ ದೀರ್ಘ ಪ್ರಯಾಣದಲ್ಲಿ ನೀವು ಈ ಕಾರ್ಯಕ್ರಮದೊಂದಿಗೆ ಒಂದು ಆತ್ಮೀಯ ಬಾಂಧವ್ಯ ಬೆಸೆದುಕೊಂಡಿದ್ದೀರಿ. ದೇಶವಾಸಿಗಳು ಇತರರೊಂದಿಗೆ ಹಂಚಿಕೊಳ್ಳುವ ಸಾಧನೆಗಳನ್ನು ಮನದ ಮಾತಿನ ಮೂಲಕ ಜನರಿಗೆ ತಲುಪಿಸುತ್ತಾರೆ. ಮುಂದಿನ ತಿಂಗಳು ನಾವು ಪುನಃ ಭೇಟಿಯಾಗೋಣ, ದೇಶದ ವೈವಿಧ್ಯತೆ, ಗೌರವಪೂರ್ಣ ಪರಂಪರೆ ಮತ್ತು ಹೊಸ ಸಾಧನೆಗಳ ಬಗ್ಗೆ ಮಾತನಾಡೋಣ. ಸಮರ್ಪಣೆ ಮತ್ತು ಸೇವಾ ಮನೋಭಾವನೆಯಿಂದ ಸಮಾಜದಲ್ಲಿ ಬದಲಾವಣೆ ತರುತ್ತಿರುವ ಇಂತಹ ಜನರ ಕುರಿತು ಹೀಗೆಯೇ ತಿಳಿದುಕೊಳ್ಳುತ್ತಿರೋಣ. ಎಂದಿನಂತೆಯೇ ನೀವೆಲ್ಲರೂ ನಿಮ್ಮ ಚಿಂತನೆಗಳು, ಸಲಹೆ ಸೂಚನೆಗಳನ್ನು ಕಳುಹಿಸುತ್ತಿರಿ. ಧನ್ಯವಾದ, ನಮಸ್ಕಾರ.

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
MSME exports touch Rs 9.52 lakh crore in April–September FY26: Govt tells Parliament

Media Coverage

MSME exports touch Rs 9.52 lakh crore in April–September FY26: Govt tells Parliament
NM on the go

Nm on the go

Always be the first to hear from the PM. Get the App Now!
...
Assam has picked up a new momentum of development: PM Modi at the foundation stone laying of Ammonia-Urea Fertilizer Project in Namrup
December 21, 2025
Assam has picked up a new momentum of development: PM
Our government is placing farmers' welfare at the centre of all its efforts: PM
Initiatives like PM Dhan Dhanya Krishi Yojana and the Dalhan Atmanirbharta Mission are launched to promote farming and support farmers: PM
Guided by the vision of Sabka Saath, Sabka Vikas, our efforts have transformed the lives of poor: PM

उज्जनिर रायज केने आसे? आपुनालुकोलोई मुर अंतोरिक मोरोम आरु स्रद्धा जासिसु।

असम के गवर्नर लक्ष्मण प्रसाद आचार्य जी, मुख्यमंत्री हिमंता बिस्वा शर्मा जी, केंद्र में मेरे सहयोगी और यहीं के आपके प्रतिनिधि, असम के पूर्व मुख्यमंत्री, सर्बानंद सोनोवाल जी, असम सरकार के मंत्रीगण, सांसद, विधायक, अन्य महानुभाव, और विशाल संख्या में आए हुए, हम सबको आशीर्वाद देने के लिए आए हुए, मेरे सभी भाइयों और बहनों, जितने लोग पंडाल में हैं, उससे ज्यादा मुझे वहां बाहर दिखते हैं।

सौलुंग सुकाफा और महावीर लसित बोरफुकन जैसे वीरों की ये धरती, भीमबर देउरी, शहीद कुसल कुवर, मोरान राजा बोडौसा, मालती मेम, इंदिरा मिरी, स्वर्गदेव सर्वानंद सिंह और वीरांगना सती साध`नी की ये भूमि, मैं उजनी असम की इस महान मिट्टी को श्रद्धापूर्वक नमन करता हूँ।

साथियों,

मैं देख रहा हूँ, सामने दूर-दूर तक आप सब इतनी बड़ी संख्या में अपना उत्साह, अपना उमंग, अपना स्नेह बरसा रहे हैं। और खासकर, मेरी माताएँ बहनें, इतनी विशाल संख्या में आप जो प्यार और आशीर्वाद लेकर आईं हैं, ये हमारी सबसे बड़ी शक्ति है, सबसे बड़ी ऊर्जा है, एक अद्भुत अनुभूति है। मेरी बहुत सी बहनें असम के चाय बगानों की खुशबू लेकर यहां उपस्थित हैं। चाय की ये खुशबू मेरे और असम के रिश्तों में एक अलग ही ऐहसास पैदा करती है। मैं आप सभी को प्रणाम करता हूँ। इस स्नेह और प्यार के लिए मैं हृदय से आप सबका आभार करता हूँ।

साथियों,

आज असम और पूरे नॉर्थ ईस्ट के लिए बहुत बड़ा दिन है। नामरूप और डिब्रुगढ़ को लंबे समय से जिसका इंतज़ार था, वो सपना भी आज पूरा हो रहा है, आज इस पूरे इलाके में औद्योगिक प्रगति का नया अध्याय शुरू हो रहा है। अभी थोड़ी देर पहले मैंने यहां अमोनिया–यूरिया फर्टिलाइज़र प्लांट का भूमि पूजन किया है। डिब्रुगढ़ आने से पहले गुवाहाटी में एयरपोर्ट के एक टर्मिनल का उद्घाटन भी हुआ है। आज हर कोई कह रहा है, असम विकास की एक नई रफ्तार पकड़ चुका है। मैं आपको बताना चाहता हूँ, अभी आप जो देख रहे हैं, जो अनुभव कर रहे हैं, ये तो एक शुरुआत है। हमें तो असम को बहुत आगे लेकर के जाना है, आप सबको साथ लेकर के आगे बढ़ना है। असम की जो ताकत और असम की भूमिका ओहोम साम्राज्य के दौर में थी, विकसित भारत में असम वैसी ही ताकतवर भूमि बनाएंगे। नए उद्योगों की शुरुआत, आधुनिक इनफ्रास्ट्रक्चर का निर्माण, Semiconductors, उसकी manufacturing, कृषि के क्षेत्र में नए अवसर, टी-गार्डेन्स और उनके वर्कर्स की उन्नति, पर्यटन में बढ़ती संभावनाएं, असम हर क्षेत्र में आगे बढ़ रहा है। मैं आप सभी को और देश के सभी किसान भाई-बहनों को इस आधुनिक फर्टिलाइज़र प्लांट के लिए बहुत-बहुत शुभकामनाएँ देता हूँ। मैं आपको गुवाहटी एयरपोर्ट के नए टर्मिनल के लिए भी बधाई देता हूँ। बीजेपी की डबल इंजन सरकार में, उद्योग और कनेक्टिविटी की ये जुगलबंदी, असम के सपनों को पूरा कर रही है, और साथ ही हमारे युवाओं को नए सपने देखने का हौसला भी दे रही है।

साथियों,

विकसित भारत के निर्माण में देश के किसानों की, यहां के अन्नदाताओं की बहुत बड़ी भूमिका है। इसलिए हमारी सरकार किसानों के हितों को सर्वोपरि रखते हुए दिन-रात काम कर रही है। यहां आप सभी को किसान हितैषी योजनाओं का लाभ दिया जा रहा है। कृषि कल्याण की योजनाओं के बीच, ये भी जरूरी है कि हमारे किसानों को खाद की निरंतर सप्लाई मिलती रहे। आने वाले समय में ये यूरिया कारख़ाना यह सुनिश्चित करेगा। इस फर्टिलाइज़र प्रोजेक्ट पर करीब 11 हजार करोड़ रुपए खर्च किए जाएंगे। यहां हर साल 12 लाख मीट्रिक टन से ज्यादा खाद बनेगी। जब उत्पादन यहीं होगा, तो सप्लाई तेज होगी। लॉजिस्टिक खर्च घटेगा।

साथियों,

नामरूप की ये यूनिट रोजगार-स्वरोजगार के हजारों नए अवसर भी बनाएगी। प्लांट के शुरू होते ही अनेकों लोगों को यहीं पर स्थायी नौकरी भी मिलेगी। इसके अलावा जो काम प्लांट के साथ जुड़ा होता है, मरम्मत हो, सप्लाई हो, कंस्ट्रक्शन का बहुत बड़ी मात्रा में काम होगा, यानी अनेक काम होते हैं, इन सबमें भी यहां के स्थानीय लोगों को और खासकर के मेरे नौजवानों को रोजगार मिलेगा।

लेकिन भाइयों बहनों,

आप सोचिए, किसानों के कल्याण के लिए काम बीजेपी सरकार आने के बाद ही क्यों हो रहा है? हमारा नामरूप तो दशकों से खाद उत्पादन का केंद्र था। एक समय था, जब यहां बनी खाद से नॉर्थ ईस्ट के खेतों को ताकत मिलती थी। किसानों की फसलों को सहारा मिलता था। जब देश के कई हिस्सों में खाद की आपूर्ति चुनौती बनी, तब भी नामरूप किसानों के लिए उम्मीद बना रहा। लेकिन, पुराने कारखानों की टेक्नालजी समय के साथ पुरानी होती गई, और काँग्रेस की सरकारों ने कोई ध्यान नहीं दिया। नतीजा ये हुआ कि, नामरूप प्लांट की कई यूनिट्स इसी वजह से बंद होती गईं। पूरे नॉर्थ ईस्ट के किसान परेशान होते रहे, देश के किसानों को भी तकलीफ हुई, उनकी आमदनी पर चोट पड़ती रही, खेती में तकलीफ़ें बढ़ती गईं, लेकिन, काँग्रेस वालों ने इस समस्या का कोई हल ही नहीं निकाला, वो अपनी मस्ती में ही रहे। आज हमारी डबल इंजन सरकार, काँग्रेस द्वारा पैदा की गई उन समस्याओं का समाधान भी कर रही है।

साथियों,

असम की तरह ही, देश के दूसरे राज्यों में भी खाद की कितनी ही फ़ैक्टरियां बंद हो गईं थीं। आप याद करिए, तब किसानों के क्या हालात थे? यूरिया के लिए किसानों को लाइनों में लगना पड़ता था। यूरिया की दुकानों पर पुलिस लगानी पड़ती थी। पुलिस किसानों पर लाठी बरसाती थी।

भाइयों बहनों,

काँग्रेस ने जिन हालातों को बिगाड़ा था, हमारी सरकार उन्हें सुधारने के लिए एडी-चोटी की ताकत लगा रही है। और इन्होंने इतना बुरा किया,इतना बुरा किया कि, 11 साल से मेहनत करने के बाद भी, अभी मुझे और बहुत कुछ करना बाकी है। काँग्रेस के दौर में फर्टिलाइज़र्स फ़ैक्टरियां बंद होती थीं। जबकि हमारी सरकार ने गोरखपुर, सिंदरी, बरौनी, रामागुंडम जैसे अनेक प्लांट्स शुरू किए हैं। इस क्षेत्र में प्राइवेट सेक्टर को भी बढ़ावा दिया जा रहा है। आज इसी का नतीजा है, हम यूरिया के क्षेत्र में आने वाले कुछ समय में आत्मनिर्भर हो सके, उस दिशा में मजबूती से कदम रख रहे हैं।

साथियों,

2014 में देश में सिर्फ 225 लाख मीट्रिक टन यूरिया का ही उत्पादन होता था। आपको आंकड़ा याद रहेगा? आंकड़ा याद रहेगा? मैं आपने मुझे काम दिया 10-11 साल पहले, तब उत्पादन होता था 225 लाख मीट्रिक टन। ये आंकड़ा याद रखिए। पिछले 10-11 साल की मेहनत में हमने उत्पादन बढ़ाकर के करीब 306 लाख मीट्रिक टन तक पहुंच चुका है। लेकिन हमें यहां रूकना नहीं है, क्योंकि अभी भी बहुत करने की जरूरत है। जो काम उनको उस समय करना था, नहीं किया, और इसलिए मुझे थोड़ा एक्स्ट्रा मेहनत करनी पड़ रही है। और अभी हमें हर साल करीब 380 लाख मीट्रिक टन यूरिया की जरूरत पड़ती है। हम 306 पर पहुंचे हैं, 70-80 और करना है। लेकिन मैं देशवासियों को विश्वास दिलाता हूं, हम जिस प्रकार से मेहनत कर रहे हैं, जिस प्रकार से योजना बना रहे हैं और जिस प्रकार से मेरे किसान भाई-बहन हमें आशीर्वाद दे रहे हैं, हम हो सके उतना जल्दी इस गैप को भरने में कोई कमी नहीं रखेंगे।

और भाइयों और बहनों,

मैं आपको एक और बात बताना चाहता हूं, आपके हितों को लेकर हमारी सरकार बहुत ज्यादा संवेदनशील है। जो यूरिया हमें महंगे दामों पर विदेशों से मंगाना पड़ता है, हम उसकी भी चोट अपने किसानों पर नहीं पड़ने देते। बीजेपी सरकार सब्सिडी देकर वो भार सरकार खुद उठाती है। भारत के किसानों को सिर्फ 300 रुपए में यूरिया की बोरी मिलती है, उस एक बोरी के बदले भारत सरकार को दूसरे देशों को, जहां से हम बोरी लाते हैं, करीब-करीब 3 हजार रुपए देने पड़ते हैं। अब आप सोचिए, हम लाते हैं 3000 में, और देते हैं 300 में। यह सारा बोझ देश के किसानों पर हम नहीं पड़ने देते। ये सारा बोझ सरकार खुद भरती है। ताकि मेरे देश के किसान भाई बहनों पर बोझ ना आए। लेकिन मैं किसान भाई बहनों को भी कहूंगा, कि आपको भी मेरी मदद करनी होगी और वह मेरी मदद है इतना ही नहीं, मेरे किसान भाई-बहन आपकी भी मदद है, और वो है यह धरती माता को बचाना। हम धरती माता को अगर नहीं बचाएंगे तो यूरिया की कितने ही थैले डाल दें, यह धरती मां हमें कुछ नहीं देगी और इसलिए जैसे शरीर में बीमारी हो जाए, तो दवाई भी हिसाब से लेनी पड़ती है, दो गोली की जरूरत है, चार गोली खा लें, तो शरीर को फायदा नहीं नुकसान हो जाता है। वैसा ही इस धरती मां को भी अगर हम जरूरत से ज्यादा पड़ोस वाला ज्यादा बोरी डालता है, इसलिए मैं भी बोरी डाल दूं। इस प्रकार से अगर करते रहेंगे तो यह धरती मां हमसे रूठ जाएगी। यूरिया खिला खिलाकर के हमें धरती माता को मारने का कोई हक नहीं है। यह हमारी मां है, हमें उस मां को भी बचाना है।

साथियों,

आज बीज से बाजार तक भाजपा सरकार किसानों के साथ खड़ी है। खेत के काम के लिए सीधे खाते में पैसे पहुंचाए जा रहे हैं, ताकि किसान को उधार के लिए भटकना न पड़े। अब तक पीएम किसान सम्मान निधि के लगभग 4 लाख करोड़ रुपए किसानों के खाते में भेजे गए हैं। आंकड़ा याद रहेगा? भूल जाएंगे? 4 लाख करोड़ रूपया मेरे देश के किसानों के खाते में सीधे जमा किए हैं। इसी साल, किसानों की मदद के लिए 35 हजार करोड़ रुपए की दो योजनाएं नई योजनाएं शुरू की हैं 35 हजार करोड़। पीएम धन धान्य कृषि योजना और दलहन आत्मनिर्भरता मिशन, इससे खेती को बढ़ावा मिलेगा।

साथियों,

हम किसानों की हर जरूरत को ध्यान रखते हुए काम कर रहे हैं। खराब मौसम की वजह से फसल नुकसान होने पर किसान को फसल बीमा योजना का सहारा मिल रहा है। फसल का सही दाम मिले, इसके लिए खरीद की व्यवस्था सुधारी गई है। हमारी सरकार का साफ मानना है कि देश तभी आगे बढ़ेगा, जब मेरा किसान मजबूत होगा। और इसके लिए हर संभव प्रयास किए जा रहे हैं।

साथियों,

केंद्र में हमारी सरकार बनने के बाद हमने किसान क्रेडिट कार्ड की सुविधा से पशुपालकों और मछलीपालकों को भी जोड़ दिया था। किसान क्रेडिट कार्ड, KCC, ये KCC की सुविधा मिलने के बाद हमारे पशुपालक, हमारे मछली पालन करने वाले इन सबको खूब लाभ उठा रहा है। KCC से इस साल किसानों को, ये आंकड़ा भी याद रखो, KCC से इस साल किसानों को 10 लाख करोड़ रुपये से ज्यादा की मदद दी गई है। 10 लाख करोड़ रुपया। बायो-फर्टिलाइजर पर GST कम होने से भी किसानों को बहुत फायदा हुआ है। भाजपा सरकार भारत के किसानों को नैचुरल फार्मिंग के लिए भी बहुत प्रोत्साहन दे रही है। और मैं तो चाहूंगा असम के अंदर कुछ तहसील ऐसे आने चाहिए आगे, जो शत प्रतिशत नेचुरल फार्मिंग करते हैं। आप देखिए हिंदुस्तान को असम दिशा दिखा सकता है। असम का किसान देश को दिशा दिखा सकता है। हमने National Mission On Natural Farming शुरू की, आज लाखों किसान इससे जुड़ चुके हैं। बीते कुछ सालों में देश में 10 हजार किसान उत्पाद संघ- FPO’s बने हैं। नॉर्थ ईस्ट को विशेष ध्यान में रखते हुए हमारी सरकार ने खाद्य तेलों- पाम ऑयल से जुड़ा मिशन भी शुरू किया। ये मिशन भारत को खाद्य तेल के मामले में आत्मनिर्भर तो बनाएगा ही, यहां के किसानों की आय भी बढ़ाएगा।

साथियों,

यहां इस क्षेत्र में बड़ी संख्या में हमारे टी-गार्डन वर्कर्स भी हैं। ये भाजपा की ही सरकार है जिसने असम के साढ़े सात लाख टी-गार्डन वर्कर्स के जनधन बैंक खाते खुलवाए। अब बैंकिंग व्यवस्था से जुड़ने की वजह से इन वर्कर्स के बैंक खातों में सीधे पैसे भेजे जाने की सुविधा मिली है। हमारी सरकार टी-गार्डन वाले क्षेत्रों में स्कूल, रोड, बिजली, पानी, अस्पताल की सुविधाएं बढ़ा रही है।

साथियों,

हमारी सरकार सबका साथ सबका विकास के मंत्र के साथ आगे बढ़ रही है। हमारा ये विजन, देश के गरीब वर्ग के जीवन में बहुत बड़ा बदलाव लेकर आया है। पिछले 11 वर्षों में हमारे प्रयासों से, योजनाओं से, योजनाओं को धरती पर उतारने के कारण 25 करोड़ लोग, ये आंकड़ा भी याद रखना, 25 करोड़ लोग गरीबी से बाहर निकले हैं। देश में एक नियो मिडिल क्लास तैयार हुआ है। ये इसलिए हुआ है, क्योंकि बीते वर्षों में भारत के गरीब परिवारों के जीवन-स्तर में निरंतर सुधार हुआ है। कुछ ताजा आंकड़े आए हैं, जो भारत में हो रहे बदलावों के प्रतीक हैं।

साथियों,

और मैं मीडिया में ये सारी चीजें बहुत काम आती हैं, और इसलिए मैं आपसे आग्रह करता हूं मैं जो बातें बताता हूं जरा याद रख के औरों को बताना।

साथियों,

पहले गांवों के सबसे गरीब परिवारों में, 10 परिवारों में से 1 के पास बाइक तक होती नहीं थी। 10 में से 1 के पास भी नहीं होती थी। अभी जो सर्वे आए हैं, अब गांव में रहने वाले करीब–करीब आधे परिवारों के पास बाइक या कार होती है। इतना ही नहीं मोबाइल फोन तो लगभग हर घर में पहुंच चुके हैं। फ्रिज जैसी चीज़ें, जो पहले “लग्ज़री” मानी जाती थीं, अब ये हमारे नियो मिडल क्लास के घरों में भी नजर आने लगी है। आज गांवों की रसोई में भी वो जगह बना चुका है। नए आंकड़े बता रहे हैं कि स्मार्टफोन के बावजूद, गांव में टीवी रखने का चलन भी बढ़ रहा है। ये बदलाव अपने आप नहीं हुआ। ये बदलाव इसलिए हुआ है क्योंकि आज देश का गरीब सशक्त हो रहा है, दूर-दराज के क्षेत्रों में रहने वाले गरीब तक भी विकास का लाभ पहुंचने लगा है।

साथियों,

भाजपा की डबल इंजन सरकार गरीबों, आदिवासियों, युवाओं और महिलाओं की सरकार है। इसीलिए, हमारी सरकार असम और नॉर्थ ईस्ट में दशकों की हिंसा खत्म करने में जुटी है। हमारी सरकार ने हमेशा असम की पहचान और असम की संस्कृति को सर्वोपरि रखा है। भाजपा सरकार असमिया गौरव के प्रतीकों को हर मंच पर हाइलाइट करती है। इसलिए, हम गर्व से महावीर लसित बोरफुकन की 125 फीट की प्रतिमा बनाते हैं, हम असम के गौरव भूपेन हजारिका की जन्म शताब्दी का वर्ष मनाते हैं। हम असम की कला और शिल्प को, असम के गोमोशा को दुनिया में पहचान दिलाते हैं, अभी कुछ दिन पहले ही Russia के राष्ट्रपति श्रीमान पुतिन यहां आए थे, जब दिल्ली में आए, तो मैंने बड़े गर्व के साथ उनको असम की ब्लैक-टी गिफ्ट किया था। हम असम की मान-मर्यादा बढ़ाने वाले हर काम को प्राथमिकता देते हैं।

लेकिन भाइयों बहनों,

भाजपा जब ये काम करती है तो सबसे ज्यादा तकलीफ काँग्रेस को होती है। आपको याद होगा, जब हमारी सरकार ने भूपेन दा को भारत रत्न दिया था, तो काँग्रेस ने खुलकर उसका विरोध किया था। काँग्रेस के राष्ट्रीय अध्यक्ष ने कहा था कि, मोदी नाचने-गाने वालों को भारत रत्न दे रहा है। मुझे बताइए, ये भूपेन दा का अपमान है कि नहीं है? कला संस्कृति का अपमान है कि नहीं है? असम का अपमान है कि नहीं है? ये कांग्रेस दिन रात करती है, अपमान करना। हमने असम में सेमीकंडक्टर यूनिट लगवाई, तो भी कांग्रेस ने इसका विरोध किया। आप मत भूलिए, यही काँग्रेस सरकार थी, जिसने इतने दशकों तक टी कम्यूनिटी के भाई-बहनों को जमीन के अधिकार नहीं मिलने दिये! बीजेपी की सरकार ने उन्हें जमीन के अधिकार भी दिये और गरिमापूर्ण जीवन भी दिया। और मैं तो चाय वाला हूं, मैं नहीं करूंगा तो कौन करेगा? ये कांग्रेस अब भी देशविरोधी सोच को आगे बढ़ा रही है। ये लोग असम के जंगल जमीन पर उन बांग्लादेशी घुसपैठियों को बसाना चाहते हैं। जिनसे इनका वोट बैंक मजबूत होता है, आप बर्बाद हो जाए, उनको इनकी परवाह नहीं है, उनको अपनी वोट बैंक मजबूत करनी है।

भाइयों बहनों,

काँग्रेस को असम और असम के लोगों से, आप लोगों की पहचान से कोई लेना देना नहीं है। इनको केवल सत्ता,सरकार और फिर जो काम पहले करते थे, वो करने में इंटरेस्ट है। इसीलिए, इन्हें अवैध बांग्लादेशी घुसपैठिए ज्यादा अच्छे लगते हैं। अवैध घुसपैठियों को काँग्रेस ने ही बसाया, और काँग्रेस ही उन्हें बचा रही है। इसीलिए, काँग्रेस पार्टी वोटर लिस्ट के शुद्धिकरण का विरोध कर रही है। तुष्टीकरण और वोटबैंक के इस काँग्रेसी जहर से हमें असम को बचाकर रखना है। मैं आज आपको एक गारंटी देता हूं, असम की पहचान, और असम के सम्मान की रक्षा के लिए भाजपा, बीजेपी फौलाद बनकर आपके साथ खड़ी है।

साथियों,

विकसित भारत के निर्माण में, आपके ये आशीर्वाद यही मेरी ताकत है। आपका ये प्यार यही मेरी पूंजी है। और इसीलिए पल-पल आपके लिए जीने का मुझे आनंद आता है। विकसित भारत के निर्माण में पूर्वी भारत की, हमारे नॉर्थ ईस्ट की भूमिका लगातार बढ़ रही है। मैंने पहले भी कहा है कि पूर्वी भारत, भारत के विकास का ग्रोथ इंजन बनेगा। नामरूप की ये नई यूनिट इसी बदलाव की मिसाल है। यहां जो खाद बनेगी, वो सिर्फ असम के खेतों तक नहीं रुकेगी। ये बिहार, झारखंड, पश्चिम बंगाल और पूर्वी उत्तर प्रदेश तक पहुंचेगी। ये कोई छोटी बात नहीं है। ये देश की खाद जरूरत में नॉर्थ ईस्ट की भागीदारी है। नामरूप जैसे प्रोजेक्ट, ये दिखाते हैं कि, आने वाले समय में नॉर्थ ईस्ट, आत्मनिर्भर भारत का बहुत बड़ा केंद्र बनकर उभरेगा। सच्चे अर्थ में अष्टलक्ष्मी बन के रहेगा। मैं एक बार फिर आप सभी को नए फर्टिलाइजर प्लांट की बधाई देता हूं। मेरे साथ बोलिए-

भारत माता की जय।

भारत माता की जय।

और इस वर्ष तो वंदे मातरम के 150 साल हमारे गौरवपूर्ण पल, आइए हम सब बोलें-

वंदे मातरम्।

वंदे मातरम्।

वंदे मातरम्।

वंदे मातरम्।

वंदे मातरम्।

वंदे मातरम्।

वंदे मातरम्।

वंदे मातरम्।

वंदे मातरम्।