ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸ್ಕೃತ ಸುಭಾಷಿತಂ ಪುಸ್ತಕವನ್ನು ಹಂಚಿಕೊಂಡಿದ್ದು, ಉತ್ಸಾಹ ಮತ್ತು ಸಕಾರಾತ್ಮಕ ಶಕ್ತಿಯು ವ್ಯಕ್ತಿಯು ತಮ್ಮ ಕಾರ್ಯಗಳಲ್ಲಿ ನಿರಂತರವಾಗಿ ಸಕ್ರಿಯವಾಗಿರಲು ಪ್ರೇರೇಪಿಸುತ್ತದೆ ಎಂದು ಹೇಳಿದ್ದಾರೆ.

ಈ ಅಚಲ ಉತ್ಸಾಹವು ಒಬ್ಬ ವ್ಯಕ್ತಿಯು ಸಾಧಿಸಲು ನಿರ್ಧರಿಸುವ ಎಲ್ಲಾ ಪ್ರಯತ್ನಗಳನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ ಎಂದು ಪ್ರಧಾನಿ ಹೇಳಿದರು.

ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ;

"कर्मशील और ऊर्जावान देशवासी ही राष्ट्र की सबसे बड़ी शक्ति हैं, जिनके परिश्रम से विकास की नई राहें तय होती हैं। इनके प्रयासों से देश समृद्धि, आत्मनिर्भरता और उन्नति के शिखर को छूता है।

अनिर्वेदो हि सततं सर्वार्थेषु प्रवर्तकः।

करोति सफलं जन्तोः कर्म यच्च करोति सः॥"

ಉತ್ಸಾಹ ಮತ್ತು ಸಕಾರಾತ್ಮಕ ಶಕ್ತಿಯು ವ್ಯಕ್ತಿಯನ್ನು ತಮ್ಮ ಕ್ರಿಯೆಗಳಲ್ಲಿ ನಿರಂತರವಾಗಿ ಸಕ್ರಿಯವಾಗಿರಲು ಪ್ರೇರೇಪಿಸುತ್ತದೆ. ಈ ಅಚಲ ಉತ್ಸಾಹವು ಒಬ್ಬ ವ್ಯಕ್ತಿಯು ಸಾಧಿಸಲು ನಿರ್ಧರಿಸುವ ಎಲ್ಲಾ ಪ್ರಯತ್ನಗಳನ್ನು ಯಶಸ್ಸಿನತ್ತ ಕರೆದೊಯ್ಯುತ್ತದೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
In Photos: PM Narendra Modi Prays At Kashi Vishwanath, Holds Trishul-Damru

Media Coverage

In Photos: PM Narendra Modi Prays At Kashi Vishwanath, Holds Trishul-Damru
NM on the go

Nm on the go

Always be the first to hear from the PM. Get the App Now!
...
ಮಧ್ಯಪ್ರದೇಶದ ಧಾರ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ
April 29, 2026
ಪಿ ಎಂ ಎನ್ ಆರ್ ಎಫ್ ನಿಂದ ಪರಿಹಾರ ಪ್ರಕಟಿಸಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಧ್ಯಪ್ರದೇಶದ ಧಾರ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಈ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಪ್ರಧಾನಿಯವರು ತಮ್ಮ ಹೃತ್ಪೂರ್ವಕ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

ಮೃತರ ಹತ್ತಿರದ ಸಂಬಂಧಿಕರಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ನಿಧಿಯಿಂದ ತಲಾ 2 ಲಕ್ಷ ರೂ.ಗಳ ಪರಿಹಾರ ಮತ್ತು ಗಾಯಾಳುಗಳಿಗೆ 50 ಸಾವಿರ ರೂಪಾಯಿಗಳ ಪರಿಹಾರ ನೀಡುವುದಾಗಿ ಶ್ರೀ ನರೇಂದ್ರ  ಮೋದಿ ಘೋಷಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:

“ಮಧ್ಯಪ್ರದೇಶದ ಧಾರ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿ ಸಂಭವಿಸಿದ ಸುದ್ದಿ ಕೇಳಿ ತೀವ್ರ ನೋವುಂಟಾಗಿದೆ. ಈ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನಾನು ಹೃದಯಪೂರ್ವಕ ಸಂತಾಪ ಸೂಚಿಸುತ್ತೇನೆ ಮತ್ತು  ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.

ಮೃತರ ಹತ್ತಿರದ ಸಂಬಂಧಿಕರಿಗೆ ಪಿಎಂಎನ್‌ಆರ್‌ಎಫ್ ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು ಮತ್ತು ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡಲಾಗುವುದು: ಪ್ರಧಾನಮಂತ್ರಿ’’