ಕಳೆದ 12 ವರ್ಷಗಳಲ್ಲಿ ಸರ್ಕಾರವು ಮಹಿಳಾ ನೇತೃತ್ವದ ಅಭಿವೃದ್ಧಿಯನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಸಾಕಷ್ಟು ಕೆಲಸಗಳನ್ನು ಮಾಡುತ್ತಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಹೇಳಿದ್ದಾರೆ. ಇದು ಎಲ್ಲಾ ವಲಯಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದ್ದು, ಆರ್ಥಿಕ ಸೇರ್ಪಡೆ ಮತ್ತು ಉದ್ಯಮಶೀಲತೆಯಿಂದ ಶಿಕ್ಷಣ, ಆರೋಗ್ಯ ರಕ್ಷಣೆ, ನೈರ್ಮಲ್ಯ, ವಸತಿ, ಕ್ರೀಡೆ, ವಿಜ್ಞಾನ ಮತ್ತು ಆಡಳಿತದವರೆಗೆ, ಮಹಿಳೆಯರು ವೈವಿಧ್ಯಮಯ ಕ್ಷೇತ್ರಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು ಅವರು ಉಲ್ಲೇಖಿಸಿದ್ದಾರೆ.

ಸರ್ಕಾರದ ಪ್ರಯತ್ನಗಳು ಘನತೆ, ಅವಕಾಶ ಮತ್ತು ಸಬಲೀಕರಣದಲ್ಲಿ ಬೇರೂರಿದೆ ಎಂದು ಶ್ರೀ ನರೇಂದ್ರ ಮೋದಿ ಬಲವಾಗಿ ಪ್ರತಿಪಾದಿಸಿದ್ದಾರೆ. ಮಹಿಳೆಯರು ತಮ್ಮ ಪೂರ್ಣ ಸಾಮರ್ಥ್ಯವನ್ನು ಅರಿತುಕೊಳ್ಳುವ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಇನ್ನಷ್ಟು ಬಲವಾಗಿ ಕೊಡುಗೆ ನೀಡುವ ವಾತಾವರಣವನ್ನು ಸೃಷ್ಟಿಸಲು ಅವು ಸಹಾಯ ಮಾಡಿವೆ ಎಂದು ಅವರು ಗಮನ ಸೆಳೆದಿದ್ದಾರೆ.

ಭಾರತದ ನಾರಿ ಶಕ್ತಿ ವಿಜ್ಞಾನ, ಬಾಹ್ಯಾಕಾಶ ಮತ್ತು ನಾವೀನ್ಯತೆ ಮತ್ತಿತರ ಕ್ಷೇತ್ರಗಳಲ್ಲಿ ಛಾಪು ಮೂಡಿಸುವುದನ್ನು ನೋಡಿ ಪ್ರಧಾನಮಂತ್ರಿ ವಿಶೇಷವಾಗಿ ಸಂತೋಷ ವ್ಯಕ್ತಪಡಿಸಿದ್ದಾರೆ. ಡ್ರೋಣ್‌ ತಂತ್ರಜ್ಞಾನದಂತಹ ಉದಯೋನ್ಮುಖ ಕ್ಷೇತ್ರಗಳಲ್ಲಿ ಅವರ ಪಾಲ್ಗೊಳ್ಳುವಿಕೆ ಹೆಚ್ಚುತ್ತಿರುವುದರಿಂದ ಹೊಸ ಅವಕಾಶಗಳು ತೆರೆದುಕೊಳ್ಳುತ್ತಿವೆ ಮತ್ತು ದೇಶಾದ್ಯಂತ ಅಭಿವೃದ್ಧಿಯ ಆಯಾಮವನ್ನು ಪರಿವರ್ತಿಸುತ್ತಿದೆ ಎಂದು ಅವರು ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ.

ಮಹಿಳೆಯರನ್ನು ಆರ್ಥಿಕವಾಗಿ ಸ್ವತಂತ್ರರನ್ನಾಗಿ ಮಾಡುವಲ್ಲಿ ಬಹಳ ದೂರ ಸಾಗುತ್ತಿರುವ ಸ್ವಸಹಾಯ ಗುಂಪುಗಳನ್ನು ಸರ್ಕಾರ ಸಕ್ರಿಯವಾಗಿ ಬೆಂಬಲಿಸುತ್ತಿದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ, ಭಾರತದ ನಾರಿ ಶಕ್ತಿ ರಾಷ್ಟ್ರ ನಿರ್ಮಾಣದ ಮೂಲಾಧಾರವಾಗಿದೆ ಎಂದು ಹೇಳಿದ್ದಾರೆ. ನಮ್ಮ ತಾಯಂದಿರು, ಸಹೋದರಿಯರು ಮತ್ತು ಹೆಣ್ಣುಮಕ್ಕಳು ಇಂದು ಪ್ರತಿಯೊಂದು ವಲಯದಲ್ಲೂ ತಮ್ಮ ಅದ್ಭುತ ಪ್ರತಿಭೆ ಮತ್ತು ಕೌಶಲ್ಯದಿಂದ ಭಾರತ ಮಾತೆಯ ಹೆಮ್ಮೆಯನ್ನು ಹೆಚ್ಚಿಸುತ್ತಿದ್ದಾರೆ ಎಂದು ಅವರು ಉಲ್ಲೇಖಿಸಿದರು.

ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣ X ಸರಣಿ ಪೋಸ್ಟ್‌ಗಳಲ್ಲಿ ಹೀಗೆ ಹಂಚಿಕೊಂಡಿದ್ದಾರೆ:

”ಕಳೆದ 12 ವರ್ಷಗಳಲ್ಲಿ, ಎನ್‌ಡಿಎ ಸರ್ಕಾರವು ಮಹಿಳೆಯರ ನೇತೃತ್ವದ ಅಭಿವೃದ್ಧಿಯನ್ನು ಮತ್ತಷ್ಟು ಹೆಚ್ಚಿಸಲು ಕಾರ್ಯನಿರ್ವಹಿಸುತ್ತಿದೆ ಮತ್ತು ಇದು ಎಲ್ಲಾ ವಲಯಗಳಲ್ಲಿ ಸ್ಪಷ್ಟವಾಗಿ ಗೋಚರಿಸಲ್ಪಡುತ್ತಿದೆ.

ಆರ್ಥಿಕ ಸೇರ್ಪಡೆ ಮತ್ತು ಉದ್ಯಮಶೀಲತೆಯಿಂದ ಶಿಕ್ಷಣ, ಆರೋಗ್ಯ ರಕ್ಷಣೆ, ನೈರ್ಮಲ್ಯ, ವಸತಿ, ಕ್ರೀಡೆ, ವಿಜ್ಞಾನ ಮತ್ತು ಆಡಳಿತದವರೆಗೆ, ಮಹಿಳೆಯರು ವೈವಿಧ್ಯಮ ಕ್ಷೇತ್ರಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಎನ್‌ಡಿಎ ಸರ್ಕಾರದ ಪ್ರಯತ್ನಗಳು ಘನತೆ, ಅವಕಾಶ ಮತ್ತು ಸಬಲೀಕರಣದಲ್ಲಿ ಬೇರೂರಿದೆ. ಮಹಿಳೆಯರು ತಮ್ಮ ಪೂರ್ಣ ಸಾಮರ್ಥ್ಯವನ್ನು ಅರಿತುಕೊಳ್ಳುವ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಮತ್ತಷ್ಟು ಶಕ್ತಿಶಾಲಿ ಕೊಡುಗೆ ನೀಡುವ ವಾತಾವರಣವನ್ನು ಸೃಷ್ಟಿಸಲು ಅವು ಸಹಾಯ ಮಾಡಿವೆ.

12YearsOfNariShakti “

 

" ಭಾರತದ ನಾರಿ ಶಕ್ತಿ  ವಿಜ್ಞಾನ, ಬಾಹ್ಯಾಕಾಶ ಮತ್ತು ನಾವೀನ್ಯತೆ ಮುಂತಾದ ಕ್ಷೇತ್ರಗಳಲ್ಲಿ  ಛಾಪು ಮೂಡಿಸಿರುವುದನ್ನು ನೋಡಿ ನನಗೆ ವಿಶೇಷವಾಗಿ ಸಂತೋಷವಾಗಿದೆ. ಡ್ರೋನ್ ತಂತ್ರಜ್ಞಾನದಂತಹ ಉದಯೋನ್ಮುಖ ಕ್ಷೇತ್ರಗಳಲ್ಲಿ ಅವರ ಪಾಲ್ಗೊಳ್ಳುವಿಕೆ ಹೆಚ್ಚುತ್ತಿರುವುದರಿಂದ ದೇಶಾದ್ಯಂತ ಅವಕಾಶಗಳ ಹೊಸ ಮಾರ್ಗಗಳನ್ನು ತೆರೆದುಕೊಳ್ಳುತ್ತಿವೆ ಮತ್ತು ಅಭಿವೃದ್ಧಿಯ ಆಯಾಮವನ್ನು ಪರಿವರ್ತಿಸುತ್ತಿದೆ. ನಮ್ಮ ಸರ್ಕಾರವು ಮಹಿಳೆಯರನ್ನು ಆರ್ಥಿಕವಾಗಿ ಸ್ವತಂತ್ರರನ್ನಾಗಿ ಮಾಡುವಲ್ಲಿ ಬಹಳ ದೂರ ಸಾಗುತ್ತಿರುವ ಸ್ವಸಹಾಯ ಗುಂಪುಗಳನ್ನು ಸಕ್ರಿಯವಾಗಿ ಬೆಂಬಲಿಸುತ್ತಿದೆ.

12YearsOfNariShakti “ 

 

“ भारत की नारीशक्ति राष्ट्र निर्माण की आधारशिला है। हमारी माताएं, बहनें और बेटियां आज हर क्षेत्र में अपनी अद्भुत प्रतिभा और कौशल से मां भारती का गौरव बढ़ा रही हैं।

नारी त्रैलोक्यजननी
नारी त्रैलोक्यरूपिणी।
नारी त्रिभुवनाधारा
नारी शक्तिस्वरूपिणी॥

#12YearsOfNariShakti"

Woman is the mother of the three worlds. She is the very expression of all the three realms. She is the foundation of the entire universe, and she is the true embodiment of power.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India-New Zealand elevate ties to strategic partnership; Scripts 2030 roadmap, $20bn investment & Indo-Pacific security

Media Coverage

India-New Zealand elevate ties to strategic partnership; Scripts 2030 roadmap, $20bn investment & Indo-Pacific security
NM on the go

Nm on the go

Always be the first to hear from the PM. Get the App Now!
...
Prime Minister condoles the passing of Father Amir of State of Qatar HH Sheikh Hamad bin Khalifa Al Thani
July 12, 2026

The Prime Minister, Shri Narendra Modi, has expressed deep grief over the passing of the Father Amir of the State of Qatar, HH Sheikh Hamad bin Khalifa Al Thani.

The Prime Minister described him as a visionary leader who led Qatar to great levels of development and prosperity. Shri Modi also remembered him as a true friend whom he had the honour of meeting during his visit to Qatar in February 2024.

The Prime Minister conveyed his sincere condolences to the Amir of Qatar, HH Sheikh Tamim bin Hamad Al Thani, the entire royal family and the people of Qatar.

The Prime Minister wrote on X;

“We deeply mourn the passing of Father Amir of State of Qatar, HH Sheikh Hamad bin Khalifa Al Thani. A visionary leader who led Qatar to great levels of development and prosperity, we remember him also as a true friend whom I had the honour of meeting during my last visit to Qatar in February 2024. I convey my sincere condolences to the Amir of Qatar, HH Sheikh Tamim bin Hamad Al Thani and the entire royal family and people of Qatar. May the departed soul rest in eternal peace.

@TamimBinHamad”