ಪ್ರಧಾನಮಂತ್ರಿಗಳಿಂದ ಈದ್ ಶುಭಾಶಯ ಮತ್ತು ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಬಗ್ಗೆ ಚರ್ಚೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕುವೈತ್ ಯುವರಾಜ ಶೇಖ್ ಸಬಾಹ್ ಅಲ್-ಖಲೀದ್ ಅಲ್-ಹಮಾದ್ ಅಲ್-ಮುಬಾರಕ್ ಅಲ್-ಸಬಾಹ್ ಅವರಿಗೆ ಹಬ್ಬದ ಶುಭ ಕೋರುತ್ತಾ ಪ್ರಾದೇಶಿಕ ಭದ್ರತಾ ಬೆಳವಣಿಗೆಗಳ ಪರಾಮರ್ಶೆ ಕುರಿತು ಮಾತನಾಡಿದರು.

ಪ್ರಧಾನಮಂತ್ರಿಯವರು ಕುವೈತ್ ನ ಯುವರಾಜ ಮಾನ್ಯ ಶೇಖ್ ಸಬಾಹ್ ಅಲ್-ಖಲೀದ್ ಅಲ್-ಹಮಾದ್ ಅಲ್-ಮುಬಾರಕ್ ಅಲ್-ಸಬಾಹ್ ಅವರೊಂದಿಗೆ ಮಾತನಾಡಿ, ಮುಂಬರುವ ಈದ್ ಹಬ್ಬಕ್ಕೆ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಉಭಯ ನಾಯಕರು ಪಶ್ಚಿಮ ಏಷ್ಯಾದಲ್ಲಿನ ಬೆಳವಣಿಗೆಗಳ ಬಗ್ಗೆ ಅಭಿಪ್ರಾಯ ವಿನಿಮಯ ಮಾಡಿಕೊಂಡರು ಮತ್ತು ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಕುವೈತ್ ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯ ಮೇಲಿನ ದಾಳಿಗಳನ್ನು ಭಾರತ ಖಂಡಿಸುತ್ತದೆ ಎಂದು ಪುನರುಚ್ಚರಿಸಿದ ಪ್ರಧಾನಮಂತ್ರಿಗಳು, ಹಾರ್ಮುಜ್ ಜಲಸಂಧಿಯ ಮೂಲಕ ಸುರಕ್ಷಿತ ಮತ್ತು ಮುಕ್ತ ಸಂಚಾರ ಖಾತರಿಪಡಿಸಿಕೊಳ್ಳುವುದು ಪ್ರಮುಖ ಆದ್ಯತೆಯಾಗಿದೆ ಎಂದು ಒತ್ತಿ ಹೇಳಿದರು. ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಗೆ ನಿರಂತರ ರಾಜತಾಂತ್ರಿಕ ತೊಡಗಿಕೊಳ್ಳುವಿಕೆ ಅತ್ಯಗತ್ಯ ಎಂದು ಇಬ್ಬರೂ ನಾಯಕರು ಒಪ್ಪಿಕೊಂಡರು. ಕುವೈತ್ ನಲ್ಲಿರುವ ಭಾರತೀಯ ಸಮುದಾಯದವರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನೀಡುತ್ತಿರುವ ನಿರಂತರ ಬೆಂಬಲಕ್ಕೆ ಪ್ರಧಾನಮಂತ್ರಿಯವರು ಯುವರಾಜರಿಗೆ ಧನ್ಯವಾದ ಅರ್ಪಿಸಿದರು.

ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಬರೆದಿದ್ದಾರೆ:

"ಕುವೈತ್ ನ ಯುವರಾಜ ಮಾನ್ಯ ಶೇಖ್ ಸಬಾಹ್ ಅಲ್-ಖಲೀದ್ ಅಲ್-ಹಮಾದ್ ಅಲ್-ಮುಬಾರಕ್ ಅಲ್-ಸಬಾಹ್ ಅವರೊಂದಿಗೆ ಮಾತನಾಡಿ, ಮುಂಬರುವ ಈದ್ ಹಬ್ಬಕ್ಕೆ ಶುಭ ಕೋರಿದೆ.

ಪಶ್ಚಿಮ ಏಷ್ಯಾದಲ್ಲಿನ ಬೆಳವಣಿಗೆಗಳ ಬಗ್ಗೆ ನಾವು ಅಭಿಪ್ರಾಯ ವಿನಿಮಯ ಮಾಡಿಕೊಂಡೆವು ಮತ್ತು ಇತ್ತೀಚಿನ ಬೆಳವಣಿಗೆಗಳ ಕುರಿತು ಕಳವಳ ಹಂಚಿಕೊಂಡೆವು. ಕುವೈತ್ ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯ ಮೇಲಿನ ದಾಳಿಗಳನ್ನು ಭಾರತ ಖಂಡಿಸುತ್ತದೆ ಎಂಬುದನ್ನು ಪುನರುಚ್ಚರಿಸಿದೆ. ಹಾರ್ಮುಜ್ ಜಲಸಂಧಿಯ ಮೂಲಕ ಸುರಕ್ಷಿತ ಮತ್ತು ಮುಕ್ತ ಸಂಚಾರ ಖಾತರಿಪಡಿಸಿಕೊಳ್ಳುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ.

ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಗೆ ನಿರಂತರ ರಾಜತಾಂತ್ರಿಕ ತೊಡಗಿಸಿಕೊಳ್ಳುವಿಕೆ ಅತ್ಯಗತ್ಯ ಎಂದು ನಾವು ಒಪ್ಪಿಕೊಂಡಿದ್ದೇವೆ.

ಕುವೈತ್ ನಲ್ಲಿರುವ ಭಾರತೀಯ ಸಮುದಾಯದವರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ನಿರಂತರ ಬೆಂಬಲ ನೀಡಿದ್ದಕ್ಕಾಗಿ ನಾನು ಅವರಿಗೆ ಕೃತಜ್ಞತೆ ಸಲ್ಲಿಸಿದೆ."

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
IndiaAI Mission-backed startup Avataar launches indigenous video AI model

Media Coverage

IndiaAI Mission-backed startup Avataar launches indigenous video AI model
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 13 ಜೂನ್ 2026
June 13, 2026

Viksit Bharat Accelerating: Tech, Defense, Infra & Exports Power India's Global Leap Under the Leadership of PM Modi