ಈದ್ ಶುಭಾಶಯಗಳನ್ನು ತಿಳಿಸಿ, ಇಂಧನ ಮತ್ತು ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿಗಳನ್ನು ಖಂಡಿಸಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಹ್ರೇನ್ ದೇಶದ ಘನತೆವೆತ್ತ ದೊರೆಯಾದ ಮಹಾರಾಜ ಹಮದ್ ಬಿನ್ ಇಸಾ ಅಲ್ ಖಲೀಫಾ ಅವರೊಂದಿಗೆ ಫಲಪ್ರದವಾದ ಮಾತುಕತೆ ನಡೆಸಿ, ಈದ್ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು, ಪ್ರಾದೇಶಿಕ ಭದ್ರತಾ ವಿಚಾರಗಳ ಕುರಿತು ಚರ್ಚೆ ನಡೆಸಿದರು. 

ಪ್ರಧಾನಮಂತ್ರಿ ಅವರು ಮಹಾರಾಜ ಹಮದ್ ಬಿನ್ ಇಸಾ ಅಲ್ ಖಲೀಫಾ ಅವರೊಂದಿಗೆ ಮಾತನಾಡಿ, ಈದ್ ಉಲ್-ಫಿತರ್ ಹಬ್ಬದ ಅಂಗವಾಗಿ ಅವರಿಗೆ ಹಾಗೂ ಬಹ್ರೇನ್ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ಮಾತುಕತೆಯ ವೇಳೆ, ಉಭಯ ನಾಯಕರು ಪಶ್ಚಿಮ ಏಷ್ಯಾ ಪ್ರದೇಶದ ಪ್ರಸ್ತುತ ಪರಿಸ್ಥಿತಿಯ ಕುರಿತು ಚರ್ಚಿಸಿದರು. ಇಂಧನ ಮತ್ತು ನಾಗರಿಕ ಮೂಲಸೌಕರ್ಯಗಳ ಮೇಲೆ ನಡೆದ ದಾಳಿಗಳನ್ನು ಖಂಡಿಸಿದ ಪ್ರಧಾನ ಮಂತ್ರಿ ಶ್ರೀ ಮೋದಿಯವರು, ಅದರಿಂದ ಜಾಗತಿಕ ಆಹಾರ, ಇಂಧನ ಮತ್ತು ರಸಗೊಬ್ಬರ ಭದ್ರತೆಯ ಮೇಲೆ ಉಂಟಾಗುವ ಹಾನಿಕರ ಪರಿಣಾಮಗಳ ಬಗ್ಗೆ ಚರ್ಚೆ ನಡೆಸಿದರು. ನೌಕಾಯಾನ ಸ್ವಾತಂತ್ರ್ಯವನ್ನು ಖಚಿತಪಡಿಸಿಕೊಳ್ಳುವ ಮತ್ತು ಸಾಗಣೆ ಮಾರ್ಗಗಳನ್ನು ಮುಕ್ತವಾಗಿ ತೆರೆದು ಸುರಕ್ಷಿತವಾಗಿರಿಸುವ ಅಗತ್ಯವನ್ನು ಶ್ರೀ ಮೋದಿ ಪುನರುಚ್ಚರಿಸಿದರು.ಬಹ್ರೇನ್ ನ ಭಾರತೀಯ ಸಮುದಾಯದ ಕಲ್ಯಾಣಕ್ಕಾಗಿ ಮಹಾರಾಜರು ನೀಡುತ್ತಿರುವ ನಿರಂತರ ಬೆಂಬಲಕ್ಕಾಗಿ ಪ್ರಧಾನಮಂತ್ರಿಗಳು ಕೃತಜ್ಞತೆ ವ್ಯಕ್ತಪಡಿಸಿದರು.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದುಕೊಂಡಿದ್ದಾರೆ;

"ಬಹ್ರೇನ್ ರಾಜರಾದ ಮಹಾರಾಜ ಹಮದ್ ಬಿನ್ ಇಸಾ ಅಲ್ ಖಲೀಫಾ ಅವರೊಂದಿಗೆ ಫಲಪ್ರದವಾದ ಮಾತುಕತೆ ನಡೆಸಿದೆನು. ಈದ್ ಉಲ್-ಫಿತರ್ ಹಬ್ಬದ ಅಂಗವಾಗಿ ಅವರಿಗೆ ಹಾಗೂ ಬಹ್ರೇನ್ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದೆನು.

ಪಶ್ಚಿಮ ಏಷ್ಯಾ ಪ್ರದೇಶದ ಪ್ರಸ್ತುತ ಪರಿಸ್ಥಿತಿಯ ಕುರಿತು ಚರ್ಚಿಸಿದೆವು. ಆ ಪ್ರದೇಶದಲ್ಲಿನ ಇಂಧನ ಮತ್ತು ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿಗಳನ್ನು ಖಂಡಿಸಿದ್ದೇವೆ. ಅದರಿಂದ ಜಾಗತಿಕ ಆಹಾರ, ಇಂಧನ ಮತ್ತು ರಸಗೊಬ್ಬರ ಭದ್ರತೆಯ ಮೇಲೆ ಉಂಟಾಗುವ ಹಾನಿಕರ ಪರಿಣಾಮಗಳನ್ನು ಚರ್ಚಿಸಿದೆವು.

ನೌಕಾಯಾನ ಸ್ವಾತಂತ್ರ್ಯವನ್ನು ಖಚಿತಪಡಿಸಿಕೊಳ್ಳುವ ಮತ್ತು ಸಾಗಣೆ ಮಾರ್ಗಗಳನ್ನು ತೆರೆಯಾಗಿ ಸುರಕ್ಷಿತವಾಗಿ ಇರಿಸುವ ಅಗತ್ಯವನ್ನು ಪುನರುಚ್ಚರಿಸಿದೆವು.

ಬಹ್ರೇನ್ ನ ಭಾರತೀಯ ಸಮುದಾಯದ ಕಲ್ಯಾಣಕ್ಕಾಗಿ ಮಹಾರಾಜರು ನೀಡುತ್ತಿರುವ ನಿರಂತರ ಬೆಂಬಲಕ್ಕಾಗಿ ಧನ್ಯವಾದಗಳನ್ನು ತಿಳಿಸಿದೆನು."

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
How India’s Rs 175 crore Diving Support Craft projects strengthen Navy’s underwater capabilities

Media Coverage

How India’s Rs 175 crore Diving Support Craft projects strengthen Navy’s underwater capabilities
NM on the go

Nm on the go

Always be the first to hear from the PM. Get the App Now!
...
Governor of Jharkhand meets Prime Minister
August 03, 2026