ಪೂರ್ವಭಾವಿಯಾಗಿ ಈದ್ ಶುಭಾಶಯಗಳನ್ನು ತಿಳಿಸಿ, ಪಶ್ಚಿಮ ಏಷ್ಯಾದಲ್ಲಿ ಸಂವಾದ ಮತ್ತು ರಾಜತಾಂತ್ರಿಕತೆಯ ಅಗತ್ಯತೆಯನ್ನು ಒತ್ತಿ ಹೇಳಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಜೋರ್ಡಾನ್ ದೊರೆ ಎರಡನೇ ಅಬ್ದುಲ್ಲಾ ಅವರೊಂದಿಗೆ ದೂರವಾಣಿ ಮೂಲಕ ಸಂಭಾಷಣೆ ನಡೆಸಿ, ಈದ್ ಹಬ್ಬದ ಶುಭಾಶಯಗಳನ್ನು ವಿನಿಮಯ ತಿಳಿಸಿ, ಆ ಪ್ರದೇಶದಲ್ಲಿನ ಭದ್ರತಾ ಪರಿಸ್ಥಿತಿಯ ಬಗ್ಗೆ ಚರ್ಚಿಸಿದರು.

ಪ್ರಧಾನಮಂತ್ರಿಯವರು ಎರಡನೇ ಅಬ್ದುಲ್ಲಾ ಅವರೊಂದಿಗೆ ಮಾತನಾಡಿ, ಈದ್ ಹಬ್ಬದ ಶುಭಾಶಯಗಳನ್ನು ಪೂರ್ವಭಾವಿಯಾಗಿ ತಿಳಿಸಿದರು. ಈ ಚರ್ಚೆಯ ಸಮಯದಲ್ಲಿ, ಉಭಯ ನಾಯಕರು ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿ, ಈ ಪ್ರದೇಶದಲ್ಲಿ ಶಾಂತಿ, ಭದ್ರತೆ ಮತ್ತು ಸ್ಥಿರತೆಯನ್ನು ಶೀಘ್ರವಾಗಿ ಪುನಃಸ್ಥಾಪಿಸಲು ಸಂವಾದ ಮತ್ತು ರಾಜತಾಂತ್ರಿಕತೆಯ ಅಗತ್ಯತೆಯನ್ನು ವಿವರಿಸಿದರು.

ಪಶ್ಚಿಮ ಏಷ್ಯಾದಲ್ಲಿ ಇಂಧನ ಮೂಲಸೌಕರ್ಯದ ಮೇಲಿನ ದಾಳಿಗಳು ಖಂಡನೀಯ ಮತ್ತು ಅವು ಅನಿಶ್ಚಿತ ಉಲ್ಬಣಕ್ಕೆ ಕಾರಣವಾಗಬಹುದು ಎಂದು ಪ್ರಧಾನಮಂತ್ರಿಯವರು ಹೇಳಿದರು. ಸರಕು ಮತ್ತು ಇಂಧನದ ನಿರಂತರ ಸಾಗಣೆಗೆ ಭಾರತ ಮತ್ತು ಜೋರ್ಡಾನ್ ಬೆಂಬಲ ನೀಡುತ್ತವೆ ಎಂದು ಶ್ರೀ ಮೋದಿಯವರು ದೃಢಪಡಿಸಿದರು. ಈ ಪ್ರದೇಶದಲ್ಲಿ ಸಿಲುಕಿರುವ ಭಾರತೀಯರ ಸುರಕ್ಷಿತ ವಾಪಸಾತಿಗೆ ಅನುಕೂಲ ಮಾಡಿಕೊಡುವಲ್ಲಿ ಜೋರ್ಡಾನ್ ಪ್ರಯತ್ನಗಳಿಗೆ ಪ್ರಧಾನಿಯವರು ಆಳವಾದ ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಧಾನಮಂತ್ರಿಯವ್ರು X ನಲ್ಲಿ:

"ನನ್ನ ಸಹೋದರ, ಜೋರ್ಡಾನ್ ರಾಜ ಅಬ್ದುಲ್ಲಾ II ಅವರಿಗೆ ದೂರವಾಣಿ ಮೂಲಕ ಈದ್ ಶುಭಾಶಯಗಳನ್ನು ತಿಳಿಸಲಾಗಿದೆ. ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಪರಿಸ್ಥಿತಿಯ ಬಗ್ಗೆ ನಾವು ಕಳವಳ ವ್ಯಕ್ತಪಡಿಸಿ, ಈ ಪ್ರದೇಶದಲ್ಲಿ ಶಾಂತಿ, ಭದ್ರತೆ ಮತ್ತು ಸ್ಥಿರತೆಯನ್ನು ಶೀಘ್ರವಾಗಿ ಪುನಃಸ್ಥಾಪಿಸಲು ಸಂವಾದ ಮತ್ತು ರಾಜತಾಂತ್ರಿಕತೆಯ ಅಗತ್ಯವನ್ನು ಉಲ್ಲೇಖಿಸಿದ್ದೇವೆ. ಪಶ್ಚಿಮ ಏಷ್ಯಾದಲ್ಲಿ ಇಂಧನ ಮೂಲಸೌಕರ್ಯದ ಮೇಲಿನ ದಾಳಿಗಳು ಖಂಡನೀಯ ಮತ್ತು ಅನಿಶ್ಚಿತ ಉಲ್ಬಣಕ್ಕೆ ಕಾರಣವಾಗಬಹುದು. ಸರಕು ಮತ್ತು ಇಂಧನದ ನಿರಂತರ ಸಾಗಣೆಗೆ ಭಾರತ ಮತ್ತು ಜೋರ್ಡಾನ್ ಬೆಂಬಲವಾಗಿ ನಿಂತಿವೆ. ಈ ಪ್ರದೇಶದಲ್ಲಿ ಸಿಲುಕಿರುವ ಭಾರತೀಯರ ಸುರಕ್ಷಿತ ವಾಪಸಾತಿಗೆ ಅನುಕೂಲ ಮಾಡಿಕೊಡುವಲ್ಲಿ ಜೋರ್ಡಾನ್ ಪ್ರಯತ್ನಗಳನ್ನು ಹೃತ್ಪೂರ್ವಕವಾಗಿ ಶ್ಲಾಘಿಸುತ್ತೇವೆ." 

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Safran’s Hyderabad engine MRO starts operations, targets 300 LEAP engines annually

Media Coverage

Safran’s Hyderabad engine MRO starts operations, targets 300 LEAP engines annually
NM on the go

Nm on the go

Always be the first to hear from the PM. Get the App Now!
...
Prime Minister congratulates Unnati Sharma on winning Bronze in Women’s 63 kg Judo
August 02, 2026

The Prime Minister, Shri Narendra Modi, has congratulated Unnati Sharma on winning the Bronze medal in the Women’s 63 kg Judo category at the Commonwealth Games 2026.

The Prime Minister said that Unnati Sharma’s commitment and determination were clearly visible throughout the competition.

Shri Modi wished her continued success in all her future endeavours.

The Prime Minister wrote on X;

“More glory for India in Judo!

Congratulations to Unnati Sharma for winning the Bronze Medal in the Women's 63 kg category at the Commonwealth Games 2026. Her commitment and determination were clearly visible during the games. May she keep excelling in all her forthcoming endeavours.

#CWG2026”