ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಜಾಗತಿಕ ವಿಚಾರಗಳ ಬಗ್ಗೆ ಚರ್ಚಿಸಿದ ಉಭಯ ನಾಯಕರು
ಜಿ- 20 ಶೃಂಗಸಭೆಯಲ್ಲಿ ರಷ್ಯಾ ಒಕ್ಕೂಟವನ್ನು ಪ್ರತಿನಿಧಿಸಲಿರುವ ವಿದೇಶಾಂಗ ಸಚಿವ
ಜಿ-20 ಶೃಂಗಸಭೆಯ ಅಧ್ಯಕ್ಷತೆ ವಹಿಸಿರುವ ಭಾರತಕ್ಕೆ ನಿರಂತರ ಬೆಂಬಲ ನೀಡುತ್ತಿರುವುದಕ್ಕಾಗಿ ರಷ್ಯಾಗೆ ಧನ್ಯವಾದ ಸಲ್ಲಿಸಿದ ಪ್ರಧಾನ ಮಂತ್ರಿಗಳು

ರಷ್ಯಾ ಒಕ್ಕೂಟದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ವ್ಲಾಡಿಮಿರ್‌ ಪುಟಿನ್‌ ಅವರೊಂದಿಗೆ ಇಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೂರವಾಣಿ ಸಂಭಾಷಣೆ ನಡೆಸಿದರು.

ದ್ವಿಪಕ್ಷೀಯ ಸಹಕಾರ ಸಂಬಂಧಿತ ಹಲವು ವಿಚಾರಗಳಲ್ಲಿನ ಪ್ರಗತಿ ಕುರಿತು ಪರಿಶೀಲನೆ ನಡೆಸಿದ ಉಭಯ ನಾಯಕರು, ಇತ್ತೀಚೆಗೆ ಜೋಹಾನ್ಸ್‌ಬರ್ಗ್‌ನಲ್ಲಿ ತೆರೆ ಕಂಡ "ಬ್ರಿಕ್ಸ್‌" ಶೃಂಗ ಸೇರಿದಂತೆ ಪ್ರಾದೇಶಿಕ ಹಾಗೂ ಜಾಗತಿಕ ವಿಚಾರ, ಸವಾಲುಗಳ ಕುರಿತೂ ವಿಚಾರ ವಿನಿಮಯ ನಡೆಸಿದರು.

ಸೆಪ್ಟೆಂಬರ್‌ 9-10ರಂದು ನವದೆಹಲಿಯಲ್ಲಿ ನಡೆಯಲಿರುವ ಜಿ- 20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದಿರುವುದಕ್ಕೆ ಕಾರಣವಾದ ಅಂಶಗಳ ಬಗ್ಗೆ ತಿಳಿಸಿದ ಅಧ್ಯಕ್ಷ ಪುಟಿನ್‌ ಅವರು ರಷ್ಯಾ ಒಕ್ಕೂಟವನ್ನು ವಿದೇಶಾಂಗ ಸಚಿವರಾದ ಗೌರವಾನ್ವಿತ ಶ್ರೀ ಸರ್ಗೆ ಲಾವ್ರೋವ್‌ ಅವರು ಪ್ರತಿನಿಧಿಸಲಿದ್ದಾರೆ ಎಂದು ಮಾಹಿತಿ ಹಂಚಿಕೊಂಡರು.

ರಷ್ಯಾದ ನಿಲುವನ್ನು ಅರ್ಥೈಸಿಕೊಂಡ ಪ್ರಧಾನ ಮಂತ್ರಿಗಳು ಭಾರತ ಅಧ್ಯಕ್ಷತೆ ವಹಿಸಿರುವ ಜಿ-20 ಶೃಂಗಸಭೆಯ ಎಲ್ಲ ಉಪಕ್ರಮಗಳಿಗೆ ರಷ್ಯಾ ನಿರಂತರವಾಗಿ ಬೆಂಬಲ ನೀಡುತ್ತಿರುವುದಕ್ಕಾಗಿ ಅಧ್ಯಕ್ಷ ಪುಟಿನ್‌ ಅವರಿಗೆ ಧನ್ಯವಾದ ಸಲ್ಲಿಸಿದರು. ಹಾಗೆಯೇ ಉಭಯ ನಾಯಕರು ನಿರಂತರ ಸಂಪರ್ಕದಲ್ಲಿರಲು ತೀರ್ಮಾನಿಸಿದರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
‘Modi Govt’s 12 years are transformational for industry’

Media Coverage

‘Modi Govt’s 12 years are transformational for industry’
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 12 ಜೂನ್ 2026
June 12, 2026

Breaking Barriers, Building Bharat: PM Modi’s Historic Push for Gender Equality and Inclusive Growth