ಅಲಾಸ್ಕಾದಲ್ಲಿ ಅಧ್ಯಕ್ಷ ಟ್ರಂಪ್ ಅವರೊಂದಿಗಿನ ಭೇಟಿಯ ಬಗೆಗಿನ ತಮ್ಮ ನಿಲುವು ಹಂಚಿಕೊಂಡ ಅಧ್ಯಕ್ಷರಾದ ಪುಟಿನ್
ಸಂಘರ್ಷದ ಶಾಂತಿಯುತ ಪರಿಹಾರಕ್ಕಾಗಿ ಭಾರತದ ಸ್ಥಿರ ನಿಲುವು ಮತ್ತು ಈ ನಿಟ್ಟಿನಲ್ಲಿ ಭಾರತದ ಎಲ್ಲಾ ಸಾಧ್ಯ ಬೆಂಬಲ ಪ್ರಧಾನಮಂತ್ರಿಗಳಿಂದ ಪುನರುಚ್ಚಾರ
ಉಭಯ ನಾಯಕರಿಂದ ದ್ವಿಪಕ್ಷೀಯ ಸಹಕಾರದ ಹಲವು ವಿಷಯಗಳ ಬಗ್ಗೆಯೂ ಚರ್ಚೆ
ನಿಕಟ ಸಂಪರ್ಕದಲ್ಲಿರಲು ಎರಡೂ ದೇಶಗಳ ನಾಯಕರ ಸಮ್ಮತಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಷ್ಯಾ ಒಕ್ಕೂಟದ ಅಧ್ಯಕ್ಷರಾದ ಮಾನ್ಯ ಶ್ರೀ ವ್ಲಾಡಿಮಿರ್ ಪುಟಿನ್ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.

ಅಲಾಸ್ಕಾದಲ್ಲಿ ಕಳೆದ ವಾರ ಅಮೆರಿಕದ ಅಧ್ಯಕ್ಷರಾದ ಮಾನ್ಯ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಭೇಟಿಯ ಬಗ್ಗೆ ಅಧ್ಯಕ್ಷರಾದ ಪುಟಿನ್ ತಮ್ಮ ಅಭಿಪ್ರಾಯ ಹಂಚಿಕೊಂಡರು.

ಪ್ರಧಾನಮಂತ್ರಿಗಳು ಅಧ್ಯಕ್ಷರಾದ ಪುಟಿನ್ ಅವರಿಗೆ ಧನ್ಯವಾದ ಅರ್ಪಿಸುತ್ತಾ, ರಾಜತಾಂತ್ರಿಕತೆ ಮತ್ತು ಮಾತುಕತೆಯ ಮೂಲಕ ಸಂಘರ್ಷದ ಶಾಂತಿಯುತ ಪರಿಹಾರಕ್ಕಾಗಿ ಭಾರತದ ಸ್ಥಿರ ನಿಲುವನ್ನು ಒತ್ತಿ ಹೇಳಿದರು. ಈ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನಗಳಿಗೆ ಭಾರತದ ಬೆಂಬಲವಿರಲಿದೆ ಎಂದು ಅವರು ಪುನರುಚ್ಚರಿಸಿದರು.

ಭಾರತ ಮತ್ತು ರಷ್ಯಾ ನಡುವಿನ ವಿಶೇಷ ಮತ್ತು ಪ್ರತ್ಯೇಕ ವಿಶಿಷ್ಟ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ದ್ವಿಪಕ್ಷೀಯ ಸಹಕಾರದ ಹಲವಾರು ವಿಷಯಗಳ ಬಗ್ಗೆಯೂ ಉಭಯ ನಾಯಕರು ಚರ್ಚಿಸಿದರು.

ಎರಡೂ ನಾಯಕರು ನಿಕಟ ಸಂಪರ್ಕದಲ್ಲಿರಲು ಸಮ್ಮತಿಸಿದರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Centre releases Rs 1.09 lakh crore tax devolution; Uttar Pradesh gets biggest share to accelerate development spending

Media Coverage

Centre releases Rs 1.09 lakh crore tax devolution; Uttar Pradesh gets biggest share to accelerate development spending
NM on the go

Nm on the go

Always be the first to hear from the PM. Get the App Now!
...
Governor of Jharkhand meets Prime Minister
August 03, 2026