ಉಕ್ರೇನ್‌ಗೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳ ಕುರಿತು ತಮ್ಮ ನಿಲುವು ಹಂಚಿಕೊಂಡಿರುವ ಅಧ್ಯಕ್ಷ ಝೆಲೆನ್ಸ್ಕಿ
ಸಂಘರ್ಷದ ಶಾಂತಿಯುತ ಇತ್ಯರ್ಥಕ್ಕೆ ಮತ್ತು ಶೀಘ್ರದಲ್ಲಿ ಶಾಂತಿ ಪುನಃಸ್ಥಾಪಿಸುವ ಗುರಿಯನ್ನು ಹೊಂದಿರುವ ಪ್ರಯತ್ನಗಳಿಗೆ ಬೆಂಬಲ ನೀಡುವ ಭಾರತದ ಸ್ಥಿರ ನಿಲುವು ಪ್ರಧಾನಮಂತ್ರಿಗಳಿಂದ ಪುನರುಚ್ಚಾರ
ಉಭಯ ನಾಯಕರಿಂದ ಭಾರತ-ಉಕ್ರೇನ್ ದ್ವಿಪಕ್ಷೀಯ ಪಾಲುದಾರಿಕೆಯಲ್ಲಿನ ಪ್ರಗತಿ‌ ಪರಾಮರ್ಶೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉಕ್ರೇನ್ ಅಧ್ಯಕ್ಷರಾದ ಮಾನ್ಯ ಶ್ರೀ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು. 

ಉಕ್ರೇನ್‌ಗೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳ ಕುರಿತು ಅಧ್ಯಕ್ಷ ಝೆಲೆನ್ಸ್ಕಿ ಅವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. 

ಸಂಘರ್ಷದ ಶಾಂತಿಯುತ ಇತ್ಯರ್ಥಕ್ಕೆ ಭಾರತದ ದೃಢ ಮತ್ತು ಸ್ಥಿರವಾದ ನಿಲುವು ಹಾಗೂ ಶೀಘ್ರವಾಗಿ ಶಾಂತಿ ಪುನಃಸ್ಥಾಪಿಸುವ ಗುರಿಯನ್ನು ಹೊಂದಿರುವ ಪ್ರಯತ್ನಗಳಿಗೆ ಭಾರತದ ಬೆಂಬಲವಿರಲಿದೆ ಎಂದು ಒತ್ತಿ ಹೇಳುತ್ತಾ ಪ್ರಧಾನಮಂತ್ರಿಯವರು ಅಧ್ಯಕ್ಷ ಝೆಲೆನ್ಸ್ಕಿ ಅವರಿಗೆ ಧನ್ಯವಾದ ಅರ್ಪಿಸಿದರು. ಈ ನಿಟ್ಟಿನಲ್ಲಿ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುವ ಭಾರತದ ಬದ್ಧತೆಯನ್ನು ಪ್ರಧಾನಮಂತ್ರಿ ಪುನರುಚ್ಚರಿಸಿದರು.

ಉಭಯ ನಾಯಕರು ಭಾರತ-ಉಕ್ರೇನ್ ದ್ವಿಪಕ್ಷೀಯ ಪಾಲುದಾರಿಕೆಯಲ್ಲಿನ ಪ್ರಗತಿ ಪರಾಮರ್ಶೆ ನಡೆಸಿದರು ಮತ್ತು ಪರಸ್ಪರ ಹಿತಾಸಕ್ತಿಯ ಕ್ಷೇತ್ರಗಳಲ್ಲಿ ಸಹಕಾರವನ್ನು ಇನ್ನಷ್ಟು ವೃದ್ಧಿಸುವ ಮಾರ್ಗಗಳ ಬಗ್ಗೆ ಚರ್ಚಿಸಿದರು.

ಪರಸ್ಪರ ಸಂಪರ್ಕದಲ್ಲಿರಲು ಎರಡೂ ದೇಶಗಳ ನಾಯಕರು ಸಮ್ಮತಿಸಿದರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Jo khelega woh khilega, always cheer for Bharat: PM Modi meets India's CWG medallists

Media Coverage

Jo khelega woh khilega, always cheer for Bharat: PM Modi meets India's CWG medallists
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 10 ಆಗಸ್ಟ್ 2026
August 10, 2026

History, Heritage & High Growth: Why India’s Youth Feel Unstoppable Under PM Modi’s Leadership