ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಸ್ರೇಲ್ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಬೆಂಜಮಿನ್ ನೆತನ್ಯಾಹು ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.
ಇಸ್ರೇಲ್ ಮತ್ತು ಇರಾನ್ ನಡುವಿನ ಇತ್ತೀಚಿನ ಬೆಳವಣಿಗೆಗಳು ಮತ್ತು ವಿಕಸನಗೊಳ್ಳುತ್ತಿರುವ ಪರಿಸ್ಥಿತಿಯ ಬಗ್ಗೆ ಪ್ರಧಾನಿ ನೆತನ್ಯಾಹು ಅವರು ಪ್ರಧಾನಮಂತ್ರಿಯವರಿಗೆ ವಿವರಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಭಾರತದ ಕಾಳಜಿಯನ್ನು ಹಂಚಿಕೊಂಡರು ಮತ್ತು ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಶೀಘ್ರವಾಗಿ ಪುನಃಸ್ಥಾಪಿಸುವ ಅಗತ್ಯವನ್ನು ಒತ್ತಿ ಹೇಳಿದರು.
ಬಳಿಕ ಇಬ್ಬರೂ ನಾಯಕರು ಸಂಪರ್ಕದಲ್ಲಿರಲು ಒಪ್ಪಿಕೊಂಡರು.
Received a phone call from PM @netanyahu of Israel. He briefed me on the evolving situation. I shared India's concerns and emphasized the need for early restoration of peace and stability in the region.
— Narendra Modi (@narendramodi) June 13, 2025


