ಯುಎಇ ಮೇಲಿನ ದಾಳಿಗೆ ತೀವ್ರ ಖಂಡನೆ ಮತ್ತು ಆ ದಾಳಿಯಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಯುಕ್ತ ಆರಬ್ ಎಮಿರೇಟ್ಸ್ (ಯುನೈಟೆಡ್ ಅರಬ್ ಎಮಿರೇಟ್ಸ್) ಅಧ್ಯಕ್ಷರಾದ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ದೂರವಾಣಿ ಮೂಲಕ ಸಮಾಲೋಚನೆ ನಡೆಸಿದರು.

ಯುಎಇ ಮೇಲಿನ ದಾಳಿಯನ್ನು ತೀವ್ರವಾಗಿ ಖಂಡಿಸಿದ ಪ್ರಧಾನಮಂತ್ರಿ ಆ ದಾಳಿಯಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದರು. ಈ ಸಂಕಷ್ಟದ ಸಮಯದಲ್ಲಿ ಭಾರತ ಯುಎಇಯೊಂದಿಗೆ ಜತೆಗೆ ಒಗ್ಗಟ್ಟಿನಿಂದ ನಿಲ್ಲುತ್ತದೆ ಎಂದು ಅವರು ಭರವಸೆ ನೀಡಿದರು.

ಯುಎಇಯಲ್ಲಿ ವಾಸಿಸುವ ಭಾರತೀಯ ಸಮುದಾಯವನ್ನು ನೋಡಿಕೊಂಡಿದ್ದಕ್ಕಾಗಿ ಯುಎಇ ಅಧ್ಯಕ್ಷರಿಗೆ ಪ್ರಧಾನಮಂತ್ರಿ ಧನ್ಯವಾದಗಳನ್ನು ಸಲ್ಲಿಸಿದರು. ಭಾರತವು ಆ ಪ್ರದೇಶದಲ್ಲಿ ಉದ್ವಿಗ್ನತೆ ನಿವಾರಣೆ, ಪ್ರಾದೇಶಿಕ ಶಾಂತಿ, ಭದ್ರತೆ ಮತ್ತು ಸ್ಥಿರತೆಯನ್ನು ಬೆಂಬಲಿಸುತ್ತದೆ ಎಂದು ಅವರು ಬಲವಾಗಿ ಪ್ರತಿಪಾದಿಸಿದರು.

ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾನ X ಪೋಸ್ಟ್ ನಲ್ಲಿ ಹೀಗೆ ಹಂಚಿಕೊಂಡಿದ್ದಾರೆ.

“ಯುಎಇ ಅಧ್ಯಕ್ಷರಾದ ನನ್ನ ಸಹೋದರ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಸಮಾಲೋಚನೆ ನಡೆಸಿದೆ. ಯುಎಇ ಮೇಲಿನ ದಾಳಿಗಳನ್ನು ತೀವ್ರವಾಗಿ ಖಂಡಿಸಲಾಗುವುದು ಮತ್ತು ಈ ದಾಳಿಗಳಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪಗಳು. ಈ ಸಂಕಷ್ಟದ ಸಮಯದಲ್ಲಿ ಭಾರತ ಯುಎಇಯೊಂದಿಗೆ ಜತೆಗೆ ಒಗ್ಗಟ್ಟಿನಿಂದ ನಿಲ್ಲುತ್ತದೆ.

ಯುಎಇಯಲ್ಲಿ ವಾಸಿಸುವ ಭಾರತೀಯ ಸಮುದಾಯವನ್ನು ಸುರಕ್ಷಿತವಾಗಿ ನೋಡಿಕೊಂಡಿದ್ದಕ್ಕಾಗಿ ಅವರಿಗೆ ಧನ್ಯವಾದಗಳನ್ನು ಅರ್ಪಿಸಿಸುತ್ತೇನೆ. ನಾವು ಉದ್ವಿಗ್ನತೆ ನಿವಾರಣೆ, ಪ್ರಾದೇಶಿಕ ಶಾಂತಿ, ಭದ್ರತೆ ಮತ್ತು ಸ್ಥಿರತೆಯನ್ನು ಬೆಂಬಲಿಸುತ್ತೇವೆ.’’

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
PM Modi urges people to take 9 pledges on health, saving water, others

Media Coverage

PM Modi urges people to take 9 pledges on health, saving water, others
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 16 ಎಪ್ರಿಲ್ 2026
April 16, 2026

From Bullet Trains to Billion-Dollar Apple Exports: How PM Modi is Scripting India’s Golden Chapter