ಪಶ್ಚಿಮ ಏಷ್ಯಾ ಪರಿಸ್ಥಿತಿ; ಅಭಿಪ್ರಾಯ ವಿನಿಮಯ ಮಾಡಿಕೊಂಡ ಉಭಯ ನಾಯಕರು
ಭಯೋತ್ಪಾದನೆ, ಹಿಂಸಾಚಾರ ಮತ್ತು ನಾಗರಿಕ ಜೀವಗಳ ನಷ್ಟದ ಬಗ್ಗೆ ಕಳವಳ ಹಂಚಿಕೊಂಡ ನಾಯಕರು
ಭದ್ರತೆ ಮತ್ತು ಮಾನವೀಯ ಪರಿಸ್ಥಿತಿಯ ಶೀಘ್ರ ಪರಿಹಾರಕ್ಕೆ ಉಭಯ ನಾಯಕರ ಕರೆ
ಸಮಗ್ರ ಕಾರ್ಯತಂತ್ರ ಪಾಲುದಾರಿಕೆ ಮತ್ತಷ್ಟು ಬಲಪಡಿಸಲು ಇರುವ ಮಾರ್ಗೋಪಾಯಗಳ ಕುರಿತು ಉಭಯ ನಾಯಕರ ಚರ್ಚೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಯುಕ್ತ ಅರಬ್ ಎಮಿರೇಟ್ಸ್( ಯುಎಇ) ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.

ಉಭಯ ನಾಯಕರು ಪಶ್ಚಿಮ ಏಷ್ಯಾ ವಲಯದ ಇತ್ತೀಚಿನ ಬೆಳವಣಿಗೆಗಳ ಕುರಿತು ಅಭಿಪ್ರಾಯ ವಿನಿಮಯ ಮಾಡಿಕೊಂಡರು.

ಭಯೋತ್ಪಾದನೆ, ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿ ಮತ್ತು ನಾಗರಿಕರ ಜೀವಹಾನಿಯ ಬಗ್ಗೆ ಇಬ್ಬರೂ ನಾಯಕರು ತೀವ್ರ ಕಳವಳ ವ್ಯಕ್ತಪಡಿಸಿದರು.

ಭದ್ರತೆ ಮತ್ತು ಮಾನವೀಯ ಪರಿಸ್ಥಿತಿಯ ಶೀಘ್ರ ಪರಿಹಾರಕ್ಕಾಗಿ ಉಭಯ ನಾಯಕರು ಕರೆ ನೀಡಿದರು. ಈ ಪ್ರದೇಶದಲ್ಲಿ ಬಾಳಿಕೆ ಬರುವ ಶಾಂತಿ, ಭದ್ರತೆ ಮತ್ತು ಸ್ಥಿರತೆಯ ಮಹತ್ವ ಅತ್ಯಗತ್ಯ ಎಂದು ಅವರು ಒತ್ತಿ ಹೇಳಿದರು.

ಭಾರತ-ಯುಎಇ ಸಮಗ್ರ ಕಾರ್ಯತಂತ್ರದ ಸಹಭಾಗಿತ್ವದ ಮಾರ್ಗಸೂಚಿಯೊಳಗೆ ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರ ಬಲಪಡಿಸುವುದನ್ನು ಮುಂದುವರಿಸಲು ಇಬ್ಬರೂ ನಾಯಕರು ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Technical textiles critical to footwear sector

Media Coverage

Technical textiles critical to footwear sector
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 29 ಎಪ್ರಿಲ್ 2026
April 29, 2026

Leadership That Plays, Builds & Delivers: PM Modi’s Vision Igniting Youth, Women & Northeast India