ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಜನವರಿ 31ರಂದು ಸಂಜೆ 4:30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ 30ನೇ ರಾಷ್ಟ್ರೀಯ ಮಹಿಳಾ ಆಯೋಗ (ಎನ್ಸಿಡಬ್ಲ್ಯೂ) ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಷಣ ಮಾಡಲಿದ್ದಾರೆ. 'ಅವಳು ಬದಲಾವಣೆಯ ಸೃಷ್ಟಿಕರ್ತೆ' ಎಂಬುದು ಕಾರ್ಯಕ್ರಮದ ವಿಷಯವಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆಗಳನ್ನು ಆಚರಿಸುವುದು ಇದರ ಉದ್ದೇಶವಾಗಿದೆ.
ರಾಜ್ಯ ಮಹಿಳಾ ಆಯೋಗಗಳು, ರಾಜ್ಯ ಸರಕಾರಗಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಬೋಧಕರು ಮತ್ತು ವಿದ್ಯಾರ್ಥಿಗಳು, ಸ್ವಯಂಸೇವಾ ಸಂಸ್ಥೆಗಳು, ಮಹಿಳಾ ಉದ್ಯಮಿಗಳು ಮತ್ತು ವ್ಯಾಪಾರ ಸಂಘಗಳು ಈ ಕಾರ್ಯಕ್ರಮದ ಭಾಗವಾಗಿರುತ್ತವೆ. ಈ ಸಂದರ್ಭದಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಸಹ ಉಪಸ್ಥಿತರಿರುವರು.