ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇದೇ  12 ರಂದು ಬೆಳಿಗ್ಗೆ 11:00 ಗಂಟೆಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ ಯುವಕರಿಗೆ 51,000 ಕ್ಕೂ ಅಧಿಕ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಹೊಸದಾಗಿ ನೇಮಕಗೊಂಡಿರುವವರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಪ್ರಧಾನಮಂತ್ರಿ ಅವರ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಬದ್ಧತೆಯ ಈಡೇರಿಕೆ ನಿಟ್ಟಿನಲ್ಲಿ ರೋಜ್‌ಗಾರ್ ಮೇಳ ಒಂದು ಮಹತ್ವದ ಹೆಜ್ಜೆಯಾಗಿದೆ. ದೇಶ ನಿರ್ಮಾಣದಲ್ಲಿ ಯುವಕರ ಸಬಲೀಕರಣ ಮತ್ತು ಪಾಲ್ಗೊಳ್ಳುವಿಕೆಗಾಗಿ ಅರ್ಥಪೂರ್ಣ ಅವಕಾಶಗಳನ್ನು ಒದಗಿಸುವಲ್ಲಿ ರೋಜ್‌ಗಾರ್ ಮೇಳ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ದೇಶಾದ್ಯಂತ ರೋಜ್‌ಗಾರ್ ಮೇಳಗಳ ಮೂಲಕ ಈವರೆಗೆ 10 ಲಕ್ಷಕ್ಕೂ ಅಧಿಕ ನೇಮಕಾತಿ ಪತ್ರಗಳನ್ನು ವಿತರಿಸಲಾಗಿದೆ. 

ಈ 16ನೇ ರೋಜ್‌ಗಾರ್ ಮೇಳವು ದೇಶಾದ್ಯಂತ 47 ಸ್ಥಳಗಳಲ್ಲಿ ಏಕಕಾಲದಲ್ಲಿ ನಡೆಯಲಿದೆ. ಕೇಂದ್ರ ಸರ್ಕಾರಿ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ನೇಮಕಾತಿಗಳು ಪ್ರಗತಿಯಲ್ಲಿವೆ. ಹೊಸ ನೇಮಕಾತಿಗಳು ದೇಶಾದ್ಯಂತ  ರೈಲ್ವೆ ಸಚಿವಾಲಯ, ಗೃಹ ವ್ಯವಹಾರಗಳ ಸಚಿವಾಲಯ, ಅಂಚೆ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಹಣಕಾಸು ಸೇವೆಗಳ ಇಲಾಖೆ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಸೇರಿದಂತೆ ಇತರ ಇಲಾಖೆಗಳು ಮತ್ತು ಸಚಿವಾಲಯಗಳಿಗೆ ಸೇರಿವೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
New high for India-made car exports

Media Coverage

New high for India-made car exports
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 11 ಜುಲೈ 2026
July 11, 2026

Record Exports, Record Investments, Record Pride: India’s Rise Under PM Modi is Multi-Dimensional