ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಪೂರೈಸುವ ನಿಟ್ಟಿನಲ್ಲಿ ಉದ್ಯೋಗ ಮೇಳವು ಒಂದು ಮಹತ್ವದ ಹೆಜ್ಜೆಯಾಗಿದೆ
ಪ್ರಧಾನಮಂತ್ರಿಯವರ ʻವಿಕಸಿತ ಭಾರತʼ ಆಶಯಕ್ಕೆ ಕೊಡುಗೆ ನೀಡಲಿರುವ ಹೊಸ ನೇಮಕಾತಿಗಳು
ಹೊಸದಾಗಿ ನೇಮಕಗೊಂಡವರು ಆನ್‌ಲೈನ್ ಕಲಿಕಾ ಮಾಡ್ಯೂಲ್ ʻಕರ್ಮಯೋಗಿ ಪ್ರರಂಭʼ ಮೂಲಕ ಸ್ವಯಂ ತರಬೇತಿ ಪಡೆಯಲಿದ್ದಾರೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ನವೆಂಬರ್ 30ರಂದು ಸಂಜೆ 4ಗಂಟೆಗೆ ಹೊಸದಾಗಿ ಸೇರ್ಪಡೆಗೊಂಡ 51,000ಕ್ಕೂ ಉದ್ಯೋಗಿಗಳಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ಹೊಸದಾಗಿ ನೇಮಕಗೊಂಡವರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

 

ದೇಶಾದ್ಯಂತ 37 ಸ್ಥಳಗಳಲ್ಲಿ ʻಉದ್ಯೋಗ ಮೇಳʼ ನಡೆಯಲಿದೆ. ಈ ಉಪಕ್ರಮವನ್ನು ಬೆಂಬಲಿಸುವ ಕೇಂದ್ರ ಸರ್ಕಾರಿ ಇಲಾಖೆಗಳು ಮತ್ತು ರಾಜ್ಯ ಸರ್ಕಾರಗಳು / ಕೇಂದ್ರಾಡಳಿತ ಪ್ರದೇಶಗಳಲ್ಲಿ ನೇಮಕಾತಿಗಳು ನಡೆಯುತ್ತಿವೆ. ದೇಶಾದ್ಯಂತ ಆಯ್ಕೆಯಾದ ಅಭ್ಯರ್ಥಿಗಳು ಕಂದಾಯ ಇಲಾಖೆ, ಗೃಹ ವ್ಯವಹಾರಗಳ ಸಚಿವಾಲಯ, ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಹಣಕಾಸು ಸೇವೆಗಳ ಇಲಾಖೆ, ರಕ್ಷಣಾ ಸಚಿವಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಸೇರಿದಂತೆ ವಿವಿಧ ಸಚಿವಾಲಯಗಳು / ಇಲಾಖೆಗಳಲ್ಲಿ ಸರ್ಕಾರಿ ಸೇವೆಗೆ ಸೇರ್ಪಡೆಗೊಳ್ಳಲಿದ್ದಾರೆ.

ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ಉದ್ಯೋಗ ಮೇಳವು ಮಹತ್ವದ ಹೆಜ್ಜೆಯಾಗಿದೆ. ಉದ್ಯೋಗ ಮೇಳವು ಮತ್ತಷ್ಟು ಉದ್ಯೋಗ ಸೃಷ್ಟಿಯಲ್ಲಿ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ ಯುವಕರ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ಅವರ ಭಾಗವಹಿಸುವಿಕೆಗೆ ಅರ್ಥಪೂರ್ಣ ಅವಕಾಶಗಳನ್ನು ಒದಗಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.

ಹೊಸದಾಗಿ ನೇಮಕಗೊಂಡವರು ತಮ್ಮ ನವೀನ ಆಲೋಚನೆಗಳು ಮತ್ತು ಪಾತ್ರ ಸಂಬಂಧಿತ ಸಾಮರ್ಥ್ಯಗಳೊಂದಿಗೆ, ರಾಷ್ಟ್ರದ ಕೈಗಾರಿಕಾ, ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಯನ್ನು ಬಲಪಡಿಸುವ ಕಾರ್ಯದಲ್ಲಿ ಕೊಡುಗೆ ನೀಡಲಿದ್ದಾರೆ, ಆ ಮೂಲಕ ಪ್ರಧಾನ ಮಂತ್ರಿಯವರ ʻವಿಕಸಿತ ಭಾರತʼ ಆಶಯವನ್ನು ಸಾಕಾರಗೊಳಿಸಲು ಸಹಾಯ ಮಾಡುತ್ತಾರೆ.

ಹೊಸದಾಗಿ ನೇಮಕಗೊಂಡ ಉದ್ಯೋಗಿಗಳು ʻಐಜಿಒಟಿ ಕರ್ಮಯೋಗಿʼ ಪೋರ್ಟಲ್‌ನಲ್ಲಿ ಆನ್ಲೈನ್ ಕಲಿಕಾ ಮಾಡ್ಯೂಲ್ ʻಕರ್ಮಯೋಗಿ ಪ್ರರಂಭʼ ಮೂಲಕ ಸ್ವಯಂ ತರಬೇತಿ ಪಡೆಯಲು ಅವಕಾಶ ಪಡೆಯುತ್ತಿದ್ದಾರೆ. ಅಲ್ಲಿ 800ಕ್ಕೂ ಹೆಚ್ಚು ಇ-ಲರ್ನಿಂಗ್ ಕೋರ್ಸ್‌ಗಳನ್ನು 'ಎಲ್ಲಿಂದ ಬೇಕಾದರೂ, ಯಾವುದೇ ಸಾಧನದ ಮೂಲಕ' ಕಲಿಯಲು ಲಭ್ಯವಾಗುವ ರೀತಿಯಲ್ಲಿ ವ್ಯವಸ್ಥೆ ಮಾಡಲಾಗಿದೆ.

 

Explore More
77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯ ಕೊತ್ತಲದಿಂದ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಪಠ್ಯಾಂತರ

ಜನಪ್ರಿಯ ಭಾಷಣಗಳು

77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯ ಕೊತ್ತಲದಿಂದ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಪಠ್ಯಾಂತರ

Media Coverage

"India of 21st century does not think small...": PM Modi
NM on the go

Nm on the go

Always be the first to hear from the PM. Get the App Now!
...
PM offers prayers at Madurai Meenakshi Amman Temple
February 27, 2024

The Prime Minister, Shri Narendra Modi today offers prayers at Madurai Meenakshi Amman Temple.

PM Modi posted on X :

"Feeling blessed to pray at the Madurai Meenakshi Amman Temple."