ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್ 28 ರಂದು ಬೆಳಿಗ್ಗೆ 11 ಗಂಟೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ಆಚಾರ್ಯ ವಿದ್ಯಾನಂದ ಜಿ ಮಹಾರಾಜ್ ಅವರ ಶತಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಈ ಕಾರ್ಯಕ್ರಮವು ಜೈನ ಧರ್ಮದ ಪೂಜ್ಯ ಆಧ್ಯಾತ್ಮಿಕ ನಾಯಕ ಮತ್ತು ಸಾಮಾಜಿಕ ಸುಧಾರಕ ಆಚಾರ್ಯ ವಿದ್ಯಾನಂದ ಜಿ ಮಹಾರಾಜ್ ಅವರ 100ನೇ ಜನ್ಮ ದಿನಾಚರಣೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಭಗವಾನ್ ಮಹಾವೀರ್ ಅಹಿಂಸಾ ಭಾರತಿ ಟ್ರಸ್ಟ್ ಸಹಯೋಗದೊಂದಿಗೆ ವಿಶೇಷ ಕಾರ್ಯಕ್ರಮಗಳನ್ನು ಇಡೀ ವರ್ಷ ಆಯೋಜಿಸಲಾಗುತ್ತಿದೆ. ವರ್ಷಪೂರ್ತಿ ನಡೆಯುವ ಆಚರಣೆಯು ದೇಶಾದ್ಯಂತ ಸಾಂಸ್ಕೃತಿಕ, ಸಾಹಿತ್ಯಿಕ, ಶೈಕ್ಷಣಿಕ ಮತ್ತು ಆಧ್ಯಾತ್ಮಿಕ ಉಪಕ್ರಮಗಳನ್ನು ಒಳಗೊಂಡಿರುತ್ತದೆ, ಇದು ಅವರ ಜೀವನ ಮತ್ತು ಪರಂಪರೆಯನ್ನು ಆಚರಿಸುವ ಮತ್ತು ಅವರ ಸಂದೇಶವನ್ನು ಹರಡುವ ಗುರಿಯನ್ನು ಹೊಂದಿದೆ.

ಆಚಾರ್ಯ ವಿದ್ಯಾನಂದ ಜಿ ಮಹಾರಾಜ್ ಜೈನ ತತ್ವಶಾಸ್ತ್ರ ಮತ್ತು ನೀತಿಶಾಸ್ತ್ರದ ಕುರಿತು 50ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಭಾರತದಾದ್ಯಂತ ಪ್ರಾಚೀನ ಜೈನ ದೇವಾಲಯಗಳ ಪುನಃಸ್ಥಾಪನೆ ಮತ್ತು ಪುನರುಜ್ಜೀವನದಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು ಮತ್ತು ವಿಶೇಷವಾಗಿ ಪ್ರಾಕೃತ, ಜೈನ ತತ್ವಶಾಸ್ತ್ರ ಮತ್ತು ಶಾಸ್ತ್ರೀಯ ಭಾಷೆಗಳಲ್ಲಿ ಶಿಕ್ಷಣಕ್ಕಾಗಿ ಕೆಲಸ ಮಾಡಿದ್ದರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
EPFO settles 8.3 crore claims in FY26; cheque leaf upload reform benefits 7 crore members, says govt

Media Coverage

EPFO settles 8.3 crore claims in FY26; cheque leaf upload reform benefits 7 crore members, says govt
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 08 ಆಗಸ್ಟ್ 2026
August 08, 2026

Infrastructure + Inclusion + Innovation: How PM Modi’s Agenda is Rewiring India’s Growth Engine