ಶೇರ್
 
Comments

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಅಕ್ಟೋಬರ್ 23ರಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಪರೆನ್ಸ್ ಮೂಲಕ ಆತ್ಮನಿರ್ಭರ ಭಾರತ ಸ್ವಯಂಪೂರ್ಣ ಗೋವಾ ಕಾರ್ಯಕ್ರಮದ ಫಲಾನುಭವಿಗಳು ಮತ್ತು ಪಾಲುದಾರರೊಂದಿಗೆ ಸಂವಾದ ನಡೆಸಲಿದ್ದಾರೆ. ಸಂವಾದದ ನಂತರ ಪ್ರಧಾನಮಂತ್ರಿಯವರು ಭಾಗವಹಿಸಿದ್ದವರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಪ್ರಧಾನಮಂತ್ರಿ ಅವರ ‘ಆತ್ಮನಿರ್ಭರ ಭಾರತ’ ಕರೆಯಿಂದ ಸ್ಫೂರ್ತಿ ಪಡೆದು 2020ರ ಅಕ್ಟೋಬರ್ 1ರಂದು ಸ್ವಯಂಪೂರ್ಣ ಗೋವಾ ಉಪಕ್ರಮ ಆರಂಭಿಸಲಾಯಿತು. ಈ ಕಾರ್ಯಕ್ರಮದಡಿ ರಾಜ್ಯ ಸರ್ಕಾರಿ ಅಧಿಕಾರಿಯನ್ನು ‘ಸ್ವಯಂಪೂರ್ಣ ಮಿತ್ರ’ರನ್ನಾಗಿ ನೇಮಿಸಲಾಗುವುದು. ಈ ಮಿತ್ರರು ಗೊತ್ತುಪಡಿಸಿದ ಪಂಚಾಯ್ತಿ ಅಥವಾ ಮುನಿಸಿಪಾಲಿಟಿಗೆ ಭೇಟಿ ನೀಡಿ, ಜನರೊಂದಿಗೆ ಸಂವಾದ ನಡೆಸಲಿದ್ದಾರೆ ಮತ್ತು ಹಲವು ಸರ್ಕಾರಿ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಲಿದ್ದಾರೆ ಹಾಗು ಅರ್ಹ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಯೋಜನೆಗಳು ಮತ್ತು ಪ್ರಯೋಜನಗಳು ಲಭ್ಯವಿರುವುದನ್ನು ಖಾತ್ರಿಪಡಿಸುತ್ತಾರೆ.

ಈ ಸಂದರ್ಭದಲ್ಲಿ ಗೋವಾ ಮುಖ್ಯಮಂತ್ರಿ ಶ್ರೀ ಪ್ರಮೋದ್ ಸಾವಂತ್ ಉಪಸ್ಥಿತರಿರಲಿದ್ದಾರೆ.

 

ನಿಮ್ಮ ಸಲಹೆ ಸೂಚನೆಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೊಂದಿಗೆ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹಂಚಿಕೊಳ್ಳಿ.
'ಪರೀಕ್ಷಾ ಪೇ ಚರ್ಚಾ 2022' ರಲ್ಲಿ  ಭಾಗವಹಿಸಲು ಪ್ರಧಾನಮಂತ್ರಿ ಆಹ್ವಾನ
Explore More
ಉತ್ತರ ಪ್ರದೇಶದ ವಾರಾಣಸಿಯಲ್ಲಿ ಕಾಶಿ ವಿಶ್ವನಾಥ ಧಾಮ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಉತ್ತರ ಪ್ರದೇಶದ ವಾರಾಣಸಿಯಲ್ಲಿ ಕಾಶಿ ವಿಶ್ವನಾಥ ಧಾಮ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
India to export BrahMos missiles to Philippines, signs $374-mn deal

Media Coverage

India to export BrahMos missiles to Philippines, signs $374-mn deal
...

Nm on the go

Always be the first to hear from the PM. Get the App Now!
...