ಈ ಉಪಕ್ರಮವು ವಿಕಸಿತ ಭಾರತ @2047 ರ ದೃಷ್ಟಿಕೋನದ ಪರಿಕಲ್ಪನೆಗಳಿಗೆ ಕೊಡುಗೆ ನೀಡಲು ದೇಶದ ಯುವಕರಿಗೆ ವೇದಿಕೆ ಒದಗಿಸುವ ಗುರಿ ಹೊಂದಿದೆ
ದೇಶಾದ್ಯಂತ ರಾಜಭವನಗಳಲ್ಲಿ ಆಯೋಜಿಸಲಾಗುವ ಕಾರ್ಯಾಗಾರಗಳಲ್ಲಿ ವಿಶ್ವವಿದ್ಯಾಲಯಗಳ ಕುಲಪತಿಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ಮುಖ್ಯಸ್ಥರನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ ಮಾಡಲಿದ್ದಾರೆ

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023  ಡಿಸೆಂಬರ್ 11ರಂದು ಬೆಳಗ್ಗೆ 10.30ಕ್ಕೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ  ‘ವಿಕಸಿತ್ ಭಾರತ @2047: ಯುವಜನತೆಯ ಧ್ವನಿ’ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ದೇಶಾದ್ಯಂತ ರಾಜಭವನಗಳಲ್ಲಿ ಆಯೋಜಿಸಲಾಗುವ ಈ ಕಾರ್ಯಾಗಾರಗಳಲ್ಲಿ ವಿಶ್ವವಿದ್ಯಾಲಯಗಳ ಕುಲಪತಿಗಳು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಮತ್ತು ಅಧ್ಯಾಪಕ ವರ್ಗವನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ ಮಾಡಲಿದ್ದಾರೆ, ಇದು ಈ ಉಪಕ್ರಮದ ಆರಂಭವನ್ನು ಸೂಚಿಸುತ್ತದೆ.

ರಾಷ್ಟ್ರೀಯ ಯೋಜನೆಗಳು, ಆದ್ಯತೆಗಳು ಮತ್ತು ದೇಶದ ಗುರಿಗಳನ್ನು ರೂಪಿಸುವಲ್ಲಿ ದೇಶದ ಯುವಕರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವುದು ಪ್ರಧಾನ ಮಂತ್ರಿ ಅವರ ದೂರ ದೃಷ್ಟಿಯಾಗಿದೆ. ಈ ದೃಷ್ಟಿಕೋನಕ್ಕೆ ಅನುಗುಣವಾಗಿ, ‘‘ವಿಕಸಿತ ಭಾರತ @2047: ಯುವಜನತೆಯ ಧ್ವನಿ’ ಉಪಕ್ರಮವು ದೇಶದ ಯುವಕರಿಗೆ ‘ವಿಕಸಿತ ಭಾರತ @2047 ರ ದೃಷ್ಟಿಕೋನಕ್ಕೆ ಆಲೋಚನೆ, ಸಲಹೆ ಸೂಚನೆಗಳನ್ನು ನೀಡಲು ವೇದಿಕೆ ಒದಗಿಸುತ್ತದೆ. ‘ವಿಕಸಿತ ಭಾರತ @2047ಗಾಗಿ ತಮ್ಮ ಆಲೋಚನೆಗಳು ಮತ್ತು ಸಲಹೆಗಳನ್ನು ಹಂಚಿಕೊಳ್ಳಲು ಯುವಕರನ್ನು ತೊಡಗಿಸಿಕೊಳ್ಳುವ ಪ್ರಕ್ರಿಯೆ ಪ್ರಾರಂಭಿಸುವ ನಿಟ್ಟಿನಲ್ಲಿ ಕಾರ್ಯಾಗಾರಗಳು ಪ್ರಮುಖ ಹೆಜ್ಜೆಯಾಗಿರುತ್ತವೆ.

'ವಿಕಸಿತ ಭಾರತ @ 2047 ಭಾರತವನ್ನು ಸ್ವಾತಂತ್ರ್ಯದ 100ನೇ ವರ್ಷವಾದ 2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ದೃಷ್ಟಿಕೋನವಾಗಿದೆ. ದೃಷ್ಟಿಕೋನವು ಆರ್ಥಿಕ ಬೆಳವಣಿಗೆ, ಸಾಮಾಜಿಕ ಪ್ರಗತಿ, ಪರಿಸರ ಸುಸ್ಥಿರತೆ ಮತ್ತು ಉತ್ತಮ ಆಡಳಿತ ಸೇರಿದಂತೆ ಅಭಿವೃದ್ಧಿಯ ವಿವಿಧ ಅಂಶಗಳನ್ನು ಒಳಗೊಂಡಿರುತ್ತದೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India is reshaping strategy through diversified trade, stronger self-reliance, deeper partnerships

Media Coverage

India is reshaping strategy through diversified trade, stronger self-reliance, deeper partnerships
NM on the go

Nm on the go

Always be the first to hear from the PM. Get the App Now!
...
PM shares a Sanskrit Subhashitam highlighting the importance of complete and scientifically grounded knowledge
February 18, 2026

Prime Minister Shri Narendra Modi today shared a Sanskrit Subhashitam highlighting the importance of complete and scientifically grounded knowledge. Such a complete true wisdom leads an individual to fullness, Clarity and the supreme realisation of truth.

The PM quoted an ancient Sanskrit verse on X:

“ज्ञानं तेऽहं सविज्ञानमिदं वक्ष्याम्यशेषतः।

यज्ज्ञात्वा नेह भूयोऽन्यज्ज्ञातव्यमवशिष्यते।।”