ಉತ್ತರ ಪ್ರದೇಶದ ರಕ್ಷಣಾ ಕೈಗಾರಿಕಾ ಕಾರಿಡಾರ್ ಮತ್ತು ರಾಜ ಮಹೇಂದ್ರ ಪ್ರತಾಪ್ ಸಿಂಗ್ ರಾಜ್ಯ ವಿಶ್ವವಿದ್ಯಾಲಯದ ಆಲಿಘಡ್ ವಿಭಾಗದ ಪ್ರದರ್ಶನ ಮಾದರಿಗಳಿಗೆ ಭೇಟಿ ನೀಡಲಿರುವ ಪ್ರಧಾನಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಸೆಪ್ಟಂಬರ್ 14ರಂದು ಮಧ್ಯಾಹ್ನ 12 ಗಂಟೆಗೆ ಉತ್ತರ ಪ್ರದೇಶದ ಆಲಿಘಡ್ ನಲ್ಲಿ ರಾಜ ಮಹೇಂದ್ರ ಪ್ರತಾಪ್ ಸಿಂಗ್ ರಾಜ್ಯ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮತ್ತು ಆನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲದೆ, ಪ್ರಧಾನಮಂತ್ರಿ ಅವರು ಉತ್ತರ ಪ್ರದೇಶದ ರಕ್ಷಣಾ ಕೈಗಾರಿಕಾ ಕಾರಿಡಾರ್ ಮತ್ತು ರಾಜ ಮಹೇಂದ್ರ ಪ್ರತಾಪ್ ಸಿಂಗ್ ರಾಜ್ಯ ವಿಶ್ವವಿದ್ಯಾಲಯದ ಆಲಿಘಡ್ ವಿಭಾಗದ ಪ್ರದರ್ಶನ ಮಾದರಿಗಳಿಗೆ ಭೇಟಿ ನೀಡಲಿದ್ದಾರೆ.

ರಾಜ ಮಹೇಂದ್ರ ಪ್ರತಾಪ್ ಸಿಂಗ್ ರಾಜ್ಯ ವಿಶ್ವವಿದ್ಯಾಲಯದ ಕುರಿತು

ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರ, ಶಿಕ್ಷಣ ತಜ್ಞ ಮತ್ತು ಸಮಾಜ ಸುಧಾರಕ ರಾಜ ಮಹೇಂದ್ರ ಪ್ರತಾಪ್ ಸಿಂಗ್ ಅವರ ಗೌರವಾರ್ಥ ಮತ್ತು ಅವರ ಸ್ಮರಣೆಗಾಗಿ ರಾಜ್ಯ ಸರ್ಕಾರ ಈ ವಿಶ್ವವಿದ್ಯಾಲಯವನ್ನು ಸ್ಥಾಪನೆ ಮಾಡಿದೆ.  ಆಲಿಘಡದ ಕೋಲ್ ತೆಹಸಿಲ್ ನ ಮೂಸೆಪುರ್ ಕರೀಂ ಜರೌಲಿ ಗ್ರಾಮ ಮತ್ತು ಲೋಧಾ ಗ್ರಾಮಗಳ ಒಟ್ಟು 92 ಎಕರೆ ಪ್ರದೇಶದಲ್ಲಿ ವಿಶ್ವವಿದ್ಯಾಲಯ ಸ್ಥಾಪನೆಯಾಗಿದೆ. ಇದು ಆಲಿಘಡ್ ವಿಭಾಗದ 395 ಕಾಲೇಜುಗಳಿಗೆ ಮಾನ್ಯತೆಯನ್ನು ಒದಗಿಸಿದೆ.

ಉತ್ತರ ಪ್ರದೇಶದ ರಕ್ಷಣಾ ಕೈಗಾರಿಕಾ ಕಾರಿಡಾರ್

2018ರ ಫೆಬ್ರವರಿ 21ರಂದು ಲಕ್ನೋದಲ್ಲಿ ನಡೆದ ಯುಪಿ ಹೂಡಿಕೆದಾರರ ಶೃಂಗಸಭೆಯ ಉದ್ಘಾಟನೆ ವೇಳೆ ಪ್ರಧಾನಮಂತ್ರಿ ಅವರು ಉತ್ತರಪ್ರದೇಶದಲ್ಲಿ ರಕ್ಷಣಾ ಕೈಗಾರಿಕಾ ಕಾರಿಡಾರ್ ಸ್ಥಾಪನೆ ಮಾಡುವುದಾಗಿ ಪ್ರಕಟಿಸಿದ್ದರು. ಒಟ್ಟು ಆರು ವಿಭಾಗಗಳಲ್ಲಿ- ಆಲಿಘಡ್, ಆಗ್ರಾ, ಕಾನ್ಪುರ್, ಚಿತ್ರಕೂಟ್, ಝಾನ್ಸಿ ಮತ್ತು ಲಕ್ನೋ ಗಳಲ್ಲಿ ರಕ್ಷಣಾ ಕೈಗಾರಿಕಾ ಕಾರಿಡಾರ್ ಸ್ಥಾಪಿಸಲು ಯೋಜಿಸಲಾಗಿತ್ತು. ಆಲಿಘಡ್ ವಿಭಾಗದಲ್ಲಿ, ಭೂ ಹಂಚಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ ಮತ್ತು 19 ಕಂಪನಿಗಳಿಗೆ ಭೂಮಿ ಹಂಚಿಕೆ ಮಾಡಲಾಗಿದ್ದು, ಆ ಕಂಪನಿಗಳು 1245 ಕೋಟಿ ರೂ. ಹೂಡಿಕೆ ಮಾಡಲಿವೆ.

ಉತ್ತರ ಪ್ರದೇಶದ ಈ ರಕ್ಷಣಾ ಕೈಗಾರಿಕಾ ಕಾರಿಡಾರ್, ರಕ್ಷಣಾ ಉತ್ಪಾದನಾ ವಲಯದಲ್ಲಿ ಸ್ವಾವಲಂಬನೆ ಸಾಧಿಸಲು ಸಹಕಾರಿಯಾಗುವುದು ಮಾತ್ರವಲ್ಲ, ಜೊತೆ ‘ಮೇಕ್ ಇನ್ ಇಂಡಿಯಾ’ಗೂ ಉತ್ತೇಜನ ನೀಡಲಿದೆ.

ಕಾರ್ಯಕ್ರಮದಲ್ಲಿ ಉತ್ತರಪ್ರದೇಶದ ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಭಾಗವಹಿಸಲಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
ISRO Successfully Tests CE20 Cryogenic Engine At Uprated 220 KN Thrust For C32 Stage Of Upcoming LVM3 Mission

Media Coverage

ISRO Successfully Tests CE20 Cryogenic Engine At Uprated 220 KN Thrust For C32 Stage Of Upcoming LVM3 Mission
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 11 ಸೆಪ್ಟೆಂಬರ್ 2026
September 11, 2026

Seva Pakhwada to Superpower Status: Why Citizens Are Hailing PM Modi’s Relentless Push